Breaking News

ಬೆಣ್ಣೆ ನಗರಿಯಲ್ಲಿ ಇತ್ತೀಚಿಗೆ ನಡೆದಿದ್ದ ರೌಡಿಶೀಟರ್​ ಕಣುಮಾ ಕೊಲೆ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಪೊಲೀಸರ ಮೇಲೆ ದಾಳಿ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಈ ಘಟನೆ ನಡೆದಿದೆ.

ದಾವಣಗೆರೆ: ರೌಡಿಶೀಟರ್ ಸಂತೋಷ್ ಕುಮಾರ್ ಅಲಿಯಾಸ್ ಕಣುಮಾ ಹತ್ಯೆಯ ಪ್ರಮುಖ ಆರೋಪಿ ಚಾವಳಿ ಸಂತೋಷ್ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಬುಧವಾರ ಸ್ಥಳ ಮಹಜರ್ ವೇಳೆ ಬಾಲ ಬಿಚ್ಚಿದ್ದ ಚಾವಳಿ ಸಂತೋಷ್ ಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ನಗರದ ಆವರಗೆರೆ ಹೈಸ್ಕೂಲ್ ಬಳಿ ಈ ಘಟನೆ ನಡೆದಿದೆ. ಕಣುಮಾ ಸಂತೋಷ್ ನ ಮರ್ಡರ್ ಮಾಡಲು ಉಪಯೋಗಿಸಿದ್ದ ಮೊಬೈಲ್ ನ್ನು ಆವರಗೆರೆ ಬಳಿಯ ಪ್ರದೇಶವೊಂದರ ಬಳಿ ಆರೋಪಿಗಳು ಎಸೆದು ಪರಾರಿ ಆಗಿದ್ದರು. ಸಿಟಿ …

Read More »

ಆಪ್’ರೇಷನ್ ಸಿಂಧೂರ್ ಮೂಲಕ ಪಾಕ್’ಗೆ ತಕ್ಕ ಶಾಸ್ತಿ… ಬೆಳಗಾವಿಯ ಶ್ರೀ ಗಣೇಶನ ಮಂದಿರದಲ್ಲಿ ಹಿಂದೂಪರ ಸಂಘಟನೆಗಳಿಂದ ವಿಶೇಷ ಪೂಜೆ

ಆಪ್’ರೇಷನ್ ಸಿಂಧೂರ್ ಮೂಲಕ ಪಾಕ್’ಗೆ ತಕ್ಕ ಶಾಸ್ತಿ… ಬೆಳಗಾವಿಯ ಶ್ರೀ ಗಣೇಶನ ಮಂದಿರದಲ್ಲಿ ಹಿಂದೂಪರ ಸಂಘಟನೆಗಳಿಂದ ವಿಶೇಷ ಪೂಜೆ ಆಪ್’ರೇಷನ್ ಸಿಂಧೂರ್ ಮೂಲಕ ಪಾಕ್’ಗೆ ತಕ್ಕ ಶಾಸ್ತಿ… ಬೆಳಗಾವಿಯ ಶ್ರೀ ಗಣೇಶನ ಮಂದಿರದಲ್ಲಿ ವಿಶೇಷ ಪೂಜೆ ಹಿಂದೂಪರ ಸಂಘಟನೆಗಳಿಂದ ವಿಶೇಷ ಪೂಜೆ ಭಾರತೀಯ ಸೇನೆ ಮತ್ತು ಮೋದಿ ಕಾರ್ಯಕ್ಕೆ ಕೃತಜ್ಞತೆ ಪಾಕ್ ಉಗ್ರರ ಅಡಗುತಾಣಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಿದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ರಾಣಿ …

Read More »

ರಾಜ್ಯದಲ್ಲೇ ಮೊದಲ “ಕೃತಕ ಹೃದಯ ಕಸಿ” ಯಶಸ್ವಿ ಶಸ್ತ್ರಚಿಕಿತ್ಸೆ* • ಸ್ಪರ್ಶ್‌ ಆಸ್ಪತ್ರೆಯಲ್ಲಿ ಇಬ್ಬರು ಉತ್ತರ ಕರ್ನಾಟಕ ರೋಗಿಗಳಿಗೆ ಕೃತಕ ಹೃದಯ ಕಸಿ*

ರಾಜ್ಯದಲ್ಲೇ ಮೊದಲ “ಕೃತಕ ಹೃದಯ ಕಸಿ” ಯಶಸ್ವಿ ಶಸ್ತ್ರಚಿಕಿತ್ಸೆ* • ಸ್ಪರ್ಶ್‌ ಆಸ್ಪತ್ರೆಯಲ್ಲಿ ಇಬ್ಬರು ಉತ್ತರ ಕರ್ನಾಟಕ ರೋಗಿಗಳಿಗೆ ಕೃತಕ ಹೃದಯ ಕಸಿ* ಬೆಂಗಳೂರು: ಹೃದಯ ವೈಫಲ್ಯಕ್ಕೆ ಒಳಗಾಗಿದ್ದ ಇಬ್ಬರು ರೋಗಿಗಳಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ “ಕೃತಕ ಹೃದಯ ಕಸಿ” ನೆರವೇರಿಸಿದ್ದು, ಇದು ರಾಜ್ಯದಲ್ಲೇ ಮೊದಲ ಯಶಸ್ವಿ ಪ್ರಯತ್ನವಾಗಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್‌ಆರ್‌ ನಗರ ಸ್ಪರ್ಶ್‌ ಆಸ್ಪತ್ರೆಯ ಹಿರಿಯ ಹೃದಯ ಶಸ್ತ್ರಚಿಕಿತ್ಸಕ ಡಾ.ಅಶ್ವಿನ್‌, ಹೃದಯದ ಎಡ ಹೃತ್ಕರ್ಣದ ಹಾರ್ಟ್‌ಮೇಟ್‌ …

Read More »

ವೈದ್ಯ ಕ್ಷೇತ್ರದ ಪದವೀಧರರು ಸಮಾಜದ ಸ್ವಾಸ್ಥ್ಯ ಕಾಪಾಡುವ ಆರೋಗ್ಯದೂತರು: ಶರಣ ಪ್ರಕಾಶ ಪಾಟೀಲ್‌* *ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಘಟಿಕೋತ್ಸವದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರ ಭಾಷಣ*

ವೈದ್ಯ ಕ್ಷೇತ್ರದ ಪದವೀಧರರು ಸಮಾಜದ ಸ್ವಾಸ್ಥ್ಯ ಕಾಪಾಡುವ ಆರೋಗ್ಯದೂತರು: ಶರಣ ಪ್ರಕಾಶ ಪಾಟೀಲ್‌* *ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಘಟಿಕೋತ್ಸವದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರ ಭಾಷಣ* ಬೆಂಗಳೂರು : ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಪದವಿ ಪಡೆಯುವ ಪ್ರತಿಯೊಬ್ಬರಿಗೂ ಸೇವೆಯೇ ಮುಖ್ಯ ಧ್ಯೇಯವಾಗಿರಬೇಕು. ರೋಗಿಗಳನ್ನು ಅತ್ಯಂತ ಶ್ರದ್ಧೆಯಿಂದ ಹಾಗೂ ಹೆಚ್ಚು ಕಾಳಜಿ ವಹಿಸಿ ಆರೈಕೆ ಮಾಡಬೇಕು. ನಿಮ್ಮ ಸೇವೆಯಿಂದ ಸ್ವಸ್ಥ ಸಮಾಜ ನಿರ್ಮಾಣವಾಗಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ …

Read More »

ಜಮ್ಮು ಕಾಶ್ಮೀರದ ಪಹಲ್ಗಾಮ್ ದ ದಾಳಿಯನ್ನು ಖಂಡಿಸುವುದು, ಮಂಡಿಸುವುದು ಆಗುವುದು ಬೇಡ ದಂಡಿಸುವ ಕೆಲಸವಾಗಬೇಕೆಂದು ಹೇಳಿದ್ದೆ.

ಬೆಳಗಾವಿ :ಜಮ್ಮು ಕಾಶ್ಮೀರದ ಪಹಲ್ಗಾಮ್ ದ ದಾಳಿಯನ್ನು ಖಂಡಿಸುವುದು, ಮಂಡಿಸುವುದು ಆಗುವುದು ಬೇಡ ದಂಡಿಸುವ ಕೆಲಸವಾಗಬೇಕೆಂದು ಹೇಳಿದ್ದೆ. ಈಗ ನಮ್ಮ‌ ಹೆಮ್ಮೆಯ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದೆ ಎಂದು ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ. ಬಹುಶಃ ಇವತ್ತು ನನ್ನ ಹೆಮ್ಮೆಯ ಭಾರತದ ಸೇನೆ ಪಾಕಿಸ್ತಾನಕ್ಕೆ ಸರಿಯಾದ ಪಾಠ ಕಲಿಸಿದೆ. ಭಯೋತ್ಪಾದಕರನ್ನು ಬೆಂಬಲಿಸುವ ಪಾಕಿಸ್ತಾನದ ಅಲ್ಲಿಯ ಸೇನೆಯು ಅರ್ಥೈಸಿಕೊಳ್ಳಬೇಕು. …

Read More »

ಉಗ್ರರ ನೆಲೆಗಳ ಮೇಲೆ ನಡೆಸಿದ ಸೇನಾ ದಾಳಿ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಶ್ರೀರಾಮ ಸೇನೆ ವಿಜಯೋತ್ಸವ

ಜಮ್ಮು ಕಾಶ್ಮೀರದ ಪೆಹಲ್ಗಾಮ್’ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಮಾಡಿದ ಉಗ್ರರ ದಾಳಿಯ ಪ್ರತಿಕಾರವಾಗಿ, ಭಾರತ ಆಪರೇಷನ್ ಸಿಂಧೂರ ಹೆಸರಿನಲ್ಲಿ ಉಗ್ರರ ನೆಲೆಗಳ ಮೇಲೆ ನಡೆಸಿದ ಸೇನಾ ದಾಳಿ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಶ್ರೀರಾಮ ಸೇನೆ ವಿಜಯೋತ್ಸವ ಆಚರಿಸಿ, ಪಾಕಿಸ್ತಾನಕ್ಕೆ ತಕ್ಕಪಾಠ ಕಲಿಸಲು ಆಗ್ರಹಿಸಿದರು. ಈ ವೇಳೆ ಪಾಕಿಸ್ತಾನ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಮಾತನಾಡಿ, ನರೇಂದ್ರ ಮೋದಿ ನೇತೃತ್ವದಲ್ಲಿ ಆಪರೇಷನ್ ಸಿಂಧೂರ ಮೂಲಕ …

Read More »

ಪೆಹಲ್’ಗಾಮ್’ನಲ್ಲಿ ಭಾರತೀಯರನ್ನು ಹತ್ಯೆ ಮಾಡಿದ ಉಗ್ರರ ವಿರುದ್ಧ ಆಪರೇಷನ್ ಸಿಂಧೂರನ ಮೂಲಕ ಭಾರತೀಯ ಸೇನೆಯೂ ಮಧ್ಯರಾತ್ರಿ ದಾಳಿಯನ್ನು ನಡೆಸಿ 9 ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ.

ಪೆಹಲ್’ಗಾಮ್’ನಲ್ಲಿ ಭಾರತೀಯರನ್ನು ಹತ್ಯೆ ಮಾಡಿದ ಉಗ್ರರ ವಿರುದ್ಧ ಆಪರೇಷನ್ ಸಿಂಧೂರನ ಮೂಲಕ ಭಾರತೀಯ ಸೇನೆಯೂ ಮಧ್ಯರಾತ್ರಿ ದಾಳಿಯನ್ನು ನಡೆಸಿ 9 ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ. ಇಂದು ಮಧ್ಯರಾತ್ರಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ದಾಳಿ ಮಾಡಿದೆ. ಭಾರತೀಯ ಸೇನೆ, ಭಾರತೀಯ ವಾಯುಪಡೆ ಜಂಟಿಯಾಗಿ ‘ಆಪರೇಷನ್ ಸಿಂಧೂರ’ ಆರಂಭಿಸಿವೆ. ಈ ಆಪರೇಷನ್ ಸಿಂಧೂರಗೆ ಭಾರತೀಯ ಸೇನೆ, ಭಾರತೀಯ ವಾಯುಪಡೆ ಜಂಟಿಯಾಗಿ ಕೇವಲ 23 …

Read More »

ದಿಢೀರನೆ ಇಳಿದ ಈರುಳ್ಳಿ ಬೆಳೆ, ಕಂಗಾಲಾಗಿರುವ ರೈತರು…

ಬೆಳಗಾವಿ : ದಿಢೀರನೆ ಇಳಿದ ಈರುಳ್ಳಿ ಬೆಳೆ, ಕಂಗಾಲಾಗಿರುವ ರೈತರು… ಇಷ್ಟು ದಿನ ಬೆಲೆ ಏರಿಕೆಯಾಗಿ ಗ್ರಾಹಕರ ಕಣ್ಣಲ್ಲಿ ನೀರುತರಿಸಿದ್ದ ಈರುಳ್ಳಿ ಈಗ ಉತ್ಪಾದಕರ ಕಣ್ಣಲ್ಲಿ ನೀರುತರಿಸುತ್ತಿದೆ. ಹಠಾತ್ತನೆ ಬೆಲೆ ಇಳಿಕೆಯಾಗಿದ್ದರಿಂದ ಈರುಳ್ಳಿ ಬೆಳೆಗಾರರು ಆತಂಕಕ್ಕೆ ಒಳಗಾಗಿದ್ದಾರೆ. ಹೌದು, ಇಷ್ಟು ದಿನ ಬೆಲೆ ಏರಿಕೆಯಾಗಿ ಗ್ರಾಹಕರ ಕಣ್ಣಲ್ಲಿ ನೀರುತರಿಸಿದ್ದ ಈರುಳ್ಳಿ ಈಗ ಉತ್ಪಾದಕರ ಕಣ್ಣಲ್ಲಿ ನೀರುಸುರಿಸುತ್ತಿದೆ. ಈರುಳ್ಳಿ ಬೆಲೆಯಲ್ಲಿ ಭಾರಿ ಪ್ರಮಾಣದ ಇಳಿಕೆ ಕಂಡು ಬಂದಿದ್ದು, ಈರುಳ್ಳಿ ಬೆಳೆಗಾರರಿಗೆ ಆತಂಕ …

Read More »

ಸವಸುದ್ಧಿ ಗ್ರಾಮಕ್ಕೆ ಸಮರ್ಪಕ ನೀರು ಪೂರೈಸಿ… ಗ್ರಾ.ಪಂ. ನಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಸವಸುದ್ಧಿ ಗ್ರಾಮಕ್ಕೆ ಸಮರ್ಪಕ ನೀರು ಪೂರೈಸಿ… ಗ್ರಾ.ಪಂ. ನಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಅನುಕೂಲ ಮಾಡುವಂತೆ ರಾಯಬಾಗ ತಾಲೂಕಿನ ಸವಸುದ್ದಿ ಗ್ರಾಮ ಪಂಚಾಯಿತಿಯೂ ಆಗ್ರಹಿಸಿದೆ. ರಾಯಬಾಗ ತಾಲೂಕಿನ ಸವಸುದ್ದಿಯ ಗ್ರಾಮದಲ್ಲಿ ಸುಮಾರು 2 ವರ್ಷಗಳಿಂದ ವಾಡಿಕೆಗಿಂತ ಮಳೆ ಕಡಿಮೆಯಾಗಿದ್ದು, ಗ್ರಾಮದಲ್ಲಿರುವ ಎರಡು ದೊಡ್ಡ ಕೆರೆಗಳು ನೀರು ಇಲ್ಲದೆ ಸಂಪೂರ್ಣ ಬತ್ತಿ ಹೋಗಿವೆ. ಇದರಿಂದಾಗಿ ಗ್ರಾಮದಲ್ಲಿರುವ ಎಲ್ಲಾ ಕೊಳವೆ ಭಾವಿಗಳು ಬತ್ತಿ ಹೋಗಿರುತ್ತವೆ. ಅಲ್ಲದೇ ಗ್ರಾಮದಲ್ಲಿ ಬಹುಗ್ರಾಮ ಕುಡಿಯುವ …

Read More »

ಇದು ಪ್ರಾರಂಭವಷ್ಟೇ. ಉಗ್ರ ಪೋಷಕ ಪಾಕಿಸ್ತಾನಕ್ಕೆ ಭಾರತ ತಕ್ಕ ಪಾಠ ಕಲಿಸುತ್ತದೆ: ಶಾಸಕ ಯತ್ನಾಳ

ಇದು ಪ್ರಾರಂಭವಷ್ಟೇ. ಉಗ್ರ ಪೋಷಕ ಪಾಕಿಸ್ತಾನಕ್ಕೆ ಭಾರತ ತಕ್ಕ ಪಾಠ ಕಲಿಸುತ್ತದೆ: ಶಾಸಕ ಯತ್ನಾಳ ಭಾರತದಿಂದ ಆಪರೇಷನ್ ಸಿಂಧೂರಕ್ಕೆ ಸಂಬಂಧಿಸಿದಂತೆ ಭಾರತದ ಸೇನೆಯಿಂದ ನಡೆದ ಏರ್ ಸ್ಟ್ರೈಕ್ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸ್ವಾಗತಿಸಿದ್ದಾರೆ. ಟ್ವೀಟ್ ಮೂಲಕ ಪ್ರತಿಕಾರದ ದಾಳಿಗೆ ಸ್ವಾಗತಿಸಿದ್ದು ಪ್ರಧಾನಿ ನರೇಂದ್ರ ಮೋದಿ ಜಿ ಅವರ ನೇತೃತ್ವದಲ್ಲಿ ಭಾರತದ ಸೇನೆ, ನೌಕಾ ಪಡೆ ಹಾಗೂ ವಾಯು ಪಡೆ ಉಗ್ರರ ನೆಲೆಯ ಮೇಲೆ ದಾಳಿ ಮಾಡಿ …

Read More »