ಮಂಡ್ಯ: ಇದಕ್ಕಿದ್ದಂತೆ ಒಂದು ಊರಿನ 50 ಜನರಿಗೆ ಜ್ವರ ಹಾಗೂ ಕೆಮ್ಮು ಕಾಣಿಸಿಕೊಂಡಿದ್ದು, ಇದರಿಂದ ಗ್ರಾಮದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ದೊಡ್ಡಹಾರನಹಳ್ಳಿಯಲ್ಲಿ 50 ಮಂದಿ ಜನರಿಗೆ ಕಳೆದ ಹಲವು ದಿನಗಳಿಂದ ಜ್ವರ ಹಾಗೂ ಕೆಮ್ಮು ಕಾಣಿಸಿಕೊಂಡಿದೆ. ಗ್ರಾಮದಲ್ಲಿ 100 ಕುಟುಂಬಗಳಿದ್ದು, ಇದರಲ್ಲಿ ಬಹುತೇಕ ಕುಟುಂಬದ ಸದಸ್ಯರಿಗೆ ಜ್ವರ ಕಾಣಿಸಿಕೊಂಡಿದೆ. ಇದರದ ಇಡೀ ಗ್ರಾಮ ಹಾಗೂ ಅಕ್ಕ-ಪಕ್ಕದ ಜನರು ಗಾಬರಿಗೊಂಡಿದ್ದಾರೆ. ಈ ಗ್ರಾಮಕ್ಕೆ ಮುಂಬೈ, …
Read More »ಹೋಮ್ ಕ್ವಾರಂಟೈನ್ ಆದ ಹುಬ್ಬಳ್ಳಿಯ ಅಯೋಧ್ಯಾ ಹೋಟೆಲ್
ಧಾರವಾಡ/ಹುಬ್ಬಳ್ಳಿ: ಕೊರೊನಾ ವೈರಸ್ ನಿಯಂತ್ರಿಸುವ ಸದುದ್ದೇಶದಿಂದ ಹಾಗೂ ಜಿಲ್ಲೆಯಲ್ಲಿ ಕ್ವಾರಂಟೈನ್ ವ್ಯವಸ್ಥೆ ಹೆಚ್ಚು ಮಾಡುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾಡಳಿತ ಹುಬ್ಬಳ್ಳಿಯ ಅಯೋಧ್ಯಾ ಹೋಟೆಲ್‍ನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ತೆಗೆದುಕೊಂಡಿದೆ. ದೆಹಲಿಯ ನಿಜಾಮುದ್ದೀನ್ ತಬ್ಲಿಘ್ ಜಮಾತ್ ಪ್ರಾರ್ಥನಾ ಮಂದಿರದಲ್ಲಿ ಸಭೆ ನಡೆಸಿ ಮರಳಿ ಬಂದ 30 ಜನರು ಸೇರಿ ಒಟ್ಟು 50 ಜನರನ್ನು ಹೋಟೆಲ್ ಗೆ ಶಿಫ್ಟ್ ಮಾಡಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಅಯೋಧ್ಯೆ ಹೊಟೇಲ್ ವಶಕ್ಕೆ ತೆಗೆದುಕೊಂಡಿದೆ. …
Read More »ಲಾಕ್‍ಡೌನ್ ಎಫೆಕ್ಟ್- ಎಲ್‍ಪಿಜಿ ಗ್ರಾಹಕರ ಹೊರೆ ಕಡಿಮೆಗೊಳಿಸಿದ ಸರ್ಕಾರ
ನವದೆಹಲಿ: ಕೊರೊನಾ ವೈರಸ್‍ನಿಂದಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಇಳಿಕೆಯ ಲಾಭವನ್ನು ಸಾಮಾನ್ಯ ಜನರು ಈಗ ಪಡೆಯುತ್ತಿದ್ದಾರೆ. ನೈಸರ್ಗಿಕ ಅನಿಲದ ಬೆನ್ನಲ್ಲೇ ಅಡಿಗೆ (ಎಲ್‍ಪಿಜಿ) ಅನಿಲದ ಬೆಲೆಯನ್ನು ಕಡಿಮೆ ಮಾಡಲಾಗಿದೆ. ದೇಶದ ಅತಿದೊಡ್ಡ ಸರ್ಕಾರಿ ತೈಲ ಕಂಪನಿಯಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್, ರಾಜಧಾನಿಯಲ್ಲಿ ಸಬ್ಸಿಡಿ ರಹಿತ 14.2 ಕೆಜಿ ಎಲ್‍ಪಿಜಿ ಸಿಲಿಂಡರ್ ಬೆಲೆಯನ್ನು ಸಿಲಿಂಡರ್‌ಗೆ 61 ರೂ. ಈ ಕಡಿತಗೊಳಿಸಿದೆ. ಮಾರ್ಚ್ ನಲ್ಲಿ ಒಂದು ಸಿಲೆಂಟರ್ ಬೆಲೆ 805.50 …
Read More »ನೀಡಸೊಸಿ ಗ್ರಾಮದ ದುರದುಂಡೇಶ್ವರ ಮಠದ ಸ್ವಾಮಿಜಿ ರಸ್ತೆಗಿಳಿಯದಂತೆ ಜಾಗೃತಿ ಕಾರ್ಯ ಮಾಡಿದ್ದಾರೆ.
ಚಿಕ್ಕೋಡಿ(ಬೆಳಗಾವಿ): ಕೊರೊನಾ ಸೋಂಕು ಹರಡದಂತೆ ದೇಶಾದ್ಯಂತ ಲಾಕ್ ಡೌನ್ ಆದೇಶ ಹೇರಲಾಗಿದೆ. ಲಾಕ್‍ಡೌನ್ ಆದೇಶ ಉಲ್ಲಂಘಿಸಿ ರಸ್ತೆಗಿಳಿಯುತ್ತಿರುವ ಜನರಿಗೆ ಪೊಲೀಸರು ಲಾಠಿ ರುಚಿ ಕೂಡ ತೋರಿಸಿದ್ದಾರೆ. ಪೋಲಿಸರ ಲಾಠಿ ಏಟಿಗೂ ಲಾಕ್ ಡೌನ್ ಪಾಲಿಸದ ಜನರಿಗೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನೀಡಸೊಸಿ ಗ್ರಾಮದ ದುರದುಂಡೇಶ್ವರ ಮಠದ ಸ್ವಾಮಿಜಿ ರಸ್ತೆಗಿಳಿಯದಂತೆ ಜಾಗೃತಿ ಕಾರ್ಯ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನೀಡಸೊಸಿ ಗ್ರಾಮದ ದುರದುಂಡೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮಿಜಿ …
Read More »ಮನಕಲುಕುತ್ತೆ ಮಂಗಳೂರಿನ ಹಸುಗೂಸಿನ ಕಥೆ”……10 ತಿಂಗಳ ಮಗುವಿಗೆ ಕೊರೊನಾ ಚಿಕಿತ್ಸೆ
ಮಂಗಳೂರು: 10 ತಿಂಗಳ ಮಗುವಿಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಂದನಿಗಾಗಿ ಅಮ್ಮನ ತ್ಯಾಗದ ಕಥೆ ಮನಕಲಕುತ್ತದೆ. ಮಗುವಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದ್ದರೂ, ಕಂದಮ್ಮನಿಗೆ ಎದೆ ಹಾಲು ನೀಡುವುದನ್ನ ತಾಯಿ ನಿಲ್ಲಿಸಿಲ್ಲ. ಕೇರಳಕ್ಕೆ ಹೋದಾಗ ಮಗುವಿಗೆ ಕೊರೊನಾ ಸೋಂಕು ತಗುಲಿತ್ತು. ಐಸೋಲೇಷನ್ ವಾರ್ಡ್ ನಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಮ್ಮನ ಎದೆ ಹಾಲು ಕುಡಿದ್ರೆ ಮಾತ್ರ ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಮಗುವಿಗೆ ಕೊರೊನಾ ಸೋಂಕು ತಗುಲಿದ್ದರೂ ತಾಯಿ …
Read More »ತಾವು ಬೆಳೆದ ಫಸಲನ್ನು ನಾಶಪಡಿಸಬೇಡಿ : ರೈತರಲ್ಲಿ ಬಿ.ಸಿ.ಪಾಟೀಲ್ ಮನವಿ
ಬೆಂಗಳೂರು,ಏ 1-ರೈತರು ತಾವು ಬೆಳೆದ ಫಸಲನ್ನು ರಸ್ತೆಗೆ ಚೆಲ್ಲುವುದಾಗಲೀ, ನಾಶ ಮಾಡುವುದಾಗಲೀ ಮಾಡಬಾರದು. ಕೊರೋನಾ ರೋಗ ಜಗತ್ತಿಗೆ ಎದುರಾದ ಸಮಸ್ಯೆ. ಇದನ್ನು ಯಾರೂ ನಿರೀಕ್ಷಿಸಿರಲಿಲ್ಲ.ಹೀಗಾಗಿ ರೈತರು ಆತುರಕ್ಕೊಳಗಾಗದೇ ತಾಳ್ಮೆಯಿಂದ ಕೃಷಿ ಇಲಾಖೆ ನೀಡುವ ಸಲಹೆಗಳನ್ನು ಅನುಸರಿಸಿ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ರೈತರಿಗೆ ಮನವಿ ಮಾಡಿದ್ದಾರೆ. ರಾಯಚೂರು ಸೇರಿದಂತೆ ಬೇರೆ ಯಾವುದೇ ಭಾಗದಲ್ಲಿ ರೈತರ ಬೆಳೆ ಸಮೀಕ್ಷೆಯಾಗದೇ ಇದ್ದದ್ದು ಕಂಡುಬಂದಲ್ಲಿ ತಕ್ಷಣವೇ ಸಮೀಕ್ಷೆ ಕೈಗೊಳ್ಳಬೇಕು ಎಂದು ಕೃಷಿ ಅಧಿಕಾರಿಗಳಿಗೆ ಕೃಷಿ …
Read More »ಹುದಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕ್ರಮಗಳನ್ನು ಇಂದು ಶಾಸಕ ಸತೀಶ ಜಾರಕಿಹೊಳಿ ಪರೀಶಿಲನೆ
ಯಮಕನಮರಡಿ: ಲಾಕ್‌ಡೌನ್ ನಿಮಿತ್ಯ ಯಮಕನಮರಡಿ ಕ್ಷೇತ್ರದ ಹುದಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕ್ರಮಗಳನ್ನು ಇಂದು ಶಾಸಕ ಸತೀಶ ಜಾರಕಿಹೊಳಿ ಪರೀಶಿಲನೆ ನಡೆಸಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಸಿದರು. ಕೋರೊನಾ ರೋಗ ಹರಡದಂತೆ ಹುದಲಿ ಗ್ರಾಮ ಪಂಚಾಯತಿ ಜನರಲ್ಲಿ ಯಾವ ರೀತಿ ಜಾಗ್ರತೆ ಮೂಡಿಸುತ್ತಿದೆ ಎಂದು ಮಾಹಿತಿ ಪಡೆದುಕೊಂಡ ಶಾಸಕರು ಗ್ರಾಮಸ್ಥರಲ್ಲಿ ಮನೆಯಿಂದ ಯಾರೂ ವಿನಾಕಾರಣ ಹೊರಗಡೆ ಬಾರದಂತೆ ಮನವಿ ಮಾಡಿಕೊಂಡರು. ಹುದಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಹುದಲಿ, …
Read More »ಕೊರೋನಾ ಎಫೆಕ್ಟ್ : ಮಧ್ಯಂತರ ಜಾಮೀನಿನ ಮೇಲೆ 11 ಕೈದಿಗಳಿಗೆ ಬಿಡುಗಡೆ ಭಾಗ್ಯ..!
ಹುಬ್ಬಳ್ಳಿ: ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಗೆ ಒಳಗಾದವರು ಮತ್ತು ಇಷ್ಟೇ ಅವಧಿಗೆ ಶಿಕ್ಷೆಗೆ ಒಳಗಾಗುವ ಅಪರಾಧ ಪ್ರಕರಣ ಹೊಂದಿದ್ದವರ 11 ಜನ ಕೈದಿಗಳನ್ನು ಇಲ್ಲಿನ ಉಪ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ. ಕೊರೊನೊ ಸೋಂಕು ವ್ಯಾಪಕವಾಗಿ ಹರಡುವ ಆತಂಕವಿರುವ ಕಾರಣ ಕಾರಾಗೃಹದಲ್ಲಿರುವ ಕೈದಿಗಳ ಸಂಖ್ಯೆ ಕಡಿಮೆ ಮಾಡುವ ಉದ್ದೇಶದಿಂದ ಏಳು ವರ್ಷಗಳಿಗಿಂತ ಕಡಿಮೆ ಶಿಕ್ಷೆ ಎದುರಿಸುತ್ತಿರುವ ಕೈದಿಗಳ ಪಟ್ಟಿ ಸಿದ್ಧಪಡಿಸುವಂತೆ ಎಲ್ಲ ಜೈಲುಗಳ ಮುಖ್ಯಸ್ಥರಿಗೆ ಮೇಲಧಿಕಾರಿಗಳು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಇಲ್ಲಿನ …
Read More »ಕೊರೋನಾ ಪರಿಹಾರಕ್ಕೆ 100ಕೋಟಿ ರೂ. ದೇಣಿಗೆ ನೀಡಿದ ಇನ್ಫೋಸಿಸ್ ಫೌಂಡೇಷನ್
ಬೆಂಗಳೂರು, 31 ಮಾರ್ಚ್ 2020: ಇನ್ಫೋಸಿಸ್‌ನ ಸಿಎಸ್‌ಆರ್ ಮತ್ತು ಜನೋಪಕಾರಿ ಸಂಸ್ಥೆಯಾಗಿರುವ ಇನ್ಫೋಸಿಸ್ ಫೌಂಡೇಷನ್ ದೇಶದಲ್ಲಿ ಕೋವಿಡ್-19 ವಿರುದ್ಧ ಹೋರಾಟಕ್ಕೆ ಒಟ್ಟು 100 ಕೋಟಿ ರೂಪಾಯಿಗಳ ದೇಣಿಗೆಯನ್ನು ನೀಡುವುದಾಗಿ ಘೋಷಿಸಿದೆ. ಈ ಹಣದಲ್ಲಿ ಪಿಎಂ ಕೇರ್‍ಸ್ ನಿಧಿಗೆ 50 ಕೋಟಿ ರೂಪಾಯಿಗಳನ್ನು ನೀಡಲಿದೆ. ದೇಶಾದ್ಯಂತ ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡಲು ನೆರವಾಗಲು ಮತ್ತು ಈ ಚಿಕಿತ್ಸೆಗಾಗಿಯೇ ಆಸ್ಪತ್ರೆಗಳ ಸಾಮರ್ಥ್ಯವನ್ನು ವಿಸ್ತರಣೆ ಮಾಡಲು ಬಳಸಿಕೊಳ್ಳಲಾಗುತ್ತದೆ. ವಿಶೇಷವಾಗಿ ಸಮಾಜದಲ್ಲಿ ಆರ್ಥಿಕವಾಗಿ ದುರ್ಬಲ ವರ್ಗದ …
Read More »ಲಾಕ್‌ಡೌನ್‌ನಿಂದ ಉಂಟಾದ ಸಮಸ್ಯೆಗೆ ಎಚ್‌ಡಿಕೆ ಜನತಾ ದಾಸೋಹ’ ಆರಂಭಿಸಿದ್ದಾರೆ.
ಬೆಂಗಳೂರು, ಏ.1-ಲಾಕ್‌ಡೌನ್‌ನಿಂದ ಉಂಟಾದ ಸಮಸ್ಯೆಗೆ ಸಿಲುಕಿದವರಿಗೆ ಆಹಾರ ಪೂರೈಸಲು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ’ಎಚ್‌ಡಿಕೆ ಜನತಾ ದಾಸೋಹ’ ಆರಂಭಿಸಿದ್ದಾರೆ. ಬಡವರು, ವಲಸೆ ಕಾರ್ಮಿಕರು, ನಿರ್ಗತಿಕರು, ದುರ್ಬಲರಿಗೆ ಲಾಕ್‌ಡೌನ್ ಅವಧಿಯಲ್ಲಿ ನಿತ್ಯ ಆಹಾರ ಪೂರೈಸುವುದು ‘ಎಚ್‌ಡಿಕೆ ಜನತಾ ದಾಸೋಹ’ದ ಗುರಿಯಾಗಿದೆ. ಇದರ ಅಡಿಯಲ್ಲಿ ಬೆಳಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ಪ್ರತಿ ಅವಧಿಯಲ್ಲೂ ಸಾವಿರ ಮಂದಿಗೆ ಭೋಜನೆ ನೀಡಲಾಗುತ್ತದೆ. ಸದ್ಯ ರಾಮನಗರ, ಚನ್ನಪಟ್ಟಣ ತಾಲೂಕಿನಲ್ಲಿ ದಾಸೋಹವನ್ನು ಆರಂಭಿಸಲಾಗಿದ್ದು, ತಮ್ಮ ಈ …
Read More »