Breaking News

ಕೋವಿಡ್-19 ಸೋಂಕು ಆರ್ಭಟ ಮುಂದುವರಿದಿದ್ದು,

ರಾಯಚೂರು ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಆರ್ಭಟ ಮುಂದುವರಿದಿದ್ದು, ಶುಕ್ರವಾರ ಓರ್ವ ವೃದ್ಧ ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ಲಿಂಗಸಗೂರು ಮೂಲದ ವೃದ್ಧನಿಗೆ ಕೋವಿಡ್-19 ಸೋಂಕು ಪಾಸಿಟಿವ್ ಎಂದು ದೃಡಪಟ್ಟಿತ್ತು. ಗುರುವಾರ ಬೆಳಗ್ಗೆ ಓಪೆಕ್ ಆಸ್ಪತ್ರೆಯ ಐಸೊಲೇಶನ್ ವಾರ್ಡ್ ಗೆ ದಾಖಲಿಸಲಾಗಿತ್ತು. ಈತ ಹೈಪರ್ ಟೆನ್ಶನ್, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಇಂದು ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. ಕೋವಿಡ್-19 ನಿಯಮಾನುಸಾರ ಅಂತ್ಯಕ್ರಿಯೆ …

Read More »

ಮಹಾರಾಷ್ಟ್ರದಿಂದ ಕೃಷ್ಣಾಗೆ ಬರುತ್ತಿರುವ ನೀರಿನ ಹರಿವಿನಲ್ಲಿ ಏರಿಕೆಯಾಗಿದ್ದು, ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲ್ಲೂಕಿನ 7 ಬ್ರಿಡ್ಜ್‌ ಕಮ್‌ ಬ್ಯಾರೇಜ್‌ಗಳು ಈಗಲೂ ಜಲಾವೃತವಾಗಿವೆ.

ಬೆಳಗಾವಿ ಜಿಲ್ಲೆಯಲ್ಲಿ ಶುಕ್ರವಾರ ಮಳೆಯ ರಭಸ ತಗ್ಗಿದ್ದು, ಬೆಳಗಾವಿ, ಖಾನಾಪುರದಲ್ಲಿ ಕೆಲಕಾಲ ತುಂತುರು ಮಳೆಯಾಗಿದೆ. ನೆರೆಯ ಮಹಾರಾಷ್ಟ್ರದಿಂದ ಕೃಷ್ಣಾಗೆ ಬರುತ್ತಿರುವ ನೀರಿನ ಹರಿವಿನಲ್ಲಿ ಏರಿಕೆಯಾಗಿದ್ದು, ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲ್ಲೂಕಿನ 7 ಬ್ರಿಡ್ಜ್‌ ಕಮ್‌ ಬ್ಯಾರೇಜ್‌ಗಳು ಈಗಲೂ ಜಲಾವೃತವಾಗಿವೆ. ದೂಧ್‌ ಗಂಗಾ ನದಿಯಿಂದ 17,952 ಕ್ಯುಸೆಕ್ ಹಾಗೂ ರಾಜಾಪುರದಿಂದ 53,500 ಕ್ಯುಸೆಕ್‌ ನೀರು ಸೇರಿ ಒಟ್ಟು 71,452 ಕ್ಯುಸೆಕ್‌ ನೀರು ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಸೇರುತ್ತಿದೆ. …

Read More »

ಜೆಡಿಎಸ್‌ ನಾಯಕ ಎಚ್. ಡಿ. ದೇವೇಗೌಡರ ಶುಭಾಶಯ ಕನ್ನಡಿಗರ ಗಮನ ಸೆಳೆದಿದೆ.

ನವದೆಹಲಿ(ಜು.10): ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ಗೆ ಇಂದು 69ನೇ ಹುಟ್ಟುಹಬ್ಬ. ಹೀಗಿರುವಾಗ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕರ ಗಣ್ಯರು ರಾಜನಾಥ್‌ ಸಿಂಗ್‌ಗೆ ಶುಭ ಕೋರಿದ್ದಾರೆ. ಆದರೆ ಈ ಎಲ್ಲಾ ಶುಭಾಶಯಗಳ ನಡುವೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ನಾಯಕ ಎಚ್. ಡಿ. ದೇವೇಗೌಡರ ಶುಭಾಶಯ ಕನ್ನಡಿಗರ ಗಮನ ಸೆಳೆದಿದೆ. ಹೌದು ಮಾಜಿ ಪ್ರಧಾನಿ ದೇವೇಗೌಡರು ರಕ್ಷಣಾ ಸಚಿವರಿಗೆ ಕನ್ನಡದಲ್ಲೇ ಹುಟ್ಟುಹಬ್ಬದಶುಭಾಶಯ ಕೋರಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ …

Read More »

ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ ಹತ್ಯೆ ಪ್ರಕರಣ, ಆರ್.ಎಲ್ ಜಾಲಪ್ಪ ಆಸ್ಪತ್ರೆಗೆ ಕೇಂದ್ರ

ಕೋಲಾರ: ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ ಹತ್ಯೆ ಪ್ರಕರಣ, ಆರ್.ಎಲ್ ಜಾಲಪ್ಪ ಆಸ್ಪತ್ರೆಗೆ ಕೇಂದ್ರ ವಲಯ ಐಜಿಪಿ ಸೀಮಂತ್ ಕುಮಾರ್ ಸಿಂಗ್ ಭೇಟಿ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿ, ಇಂತಹ ಪ್ರಕರಣ ನಾನು ನನ್ನ ಸರ್ವಿಸ್ ನಲ್ಲಿ ನೋಡಿಲ್ಲ, ಕೆಜಿಎಫ್ ಹಾಗೂ ಕೋಲಾರ ಎಸ್ಪಿ ಸೇರಿ ಚಾರ್ಚ್ ಶೀಟ್ ರೆಡಿ ಮಾಡಿದ್ದಾರೆ, ಇವತ್ತು ಅಲ್ಲಿ ನಡೆದ ಸಂಪೂರ್ಣ ಮಾಹಿತಿ ಕಲೆ ಹಾಕಿದ್ದೇನೆ, ಜಿಲ್ಲಾಧಿಕಾರಿ ಹಾಗೂ ಸರ್ವೇ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇನೆ, ಘಟನೆ …

Read More »

ಜಿಲ್ಲೆಯಲ್ಲಿ ಹೊಸದಾಗಿ 36 ಕೋವಿಡ್ ಪ್ರಕರಣಗಳು ದೃಡ ಪಟ್ಟಿದ್ದು, ಸೋಂಕಿತರ ಸಂಖ್ಯೆ 349 ಕ್ಕೆ ಏರಿಕೆಯಾಗಿದೆ.

ಬಾಗಲಕೋಟೆ: ಜಿಲ್ಲೆಯಲ್ಲಿ ಹೊಸದಾಗಿ 36 ಕೋವಿಡ್ ಪ್ರಕರಣಗಳು ದೃಡ ಪಟ್ಟಿದ್ದು, ಸೋಂಕಿತರ ಸಂಖ್ಯೆ 349 ಕ್ಕೆ ಏರಿಕೆಯಾಗಿದೆ. ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ ಮಾದ್ಯಮಗಳ ಜೊತೆ ಮಾತನಾಡಿ, ಬಾಗಲಕೋಟೆಯಲ್ಲಿ 27, ಜಮಖಂಡಿ 2, ಮುಧೋಳ 5, ಬೇರೆ ಜಿಲ್ಲೆಯಾದ ಹುಬ್ಬಳ್ಳಿಯ 2 ಪ್ರಕರಣಗಳು ದೃಡಪಟ್ಟಿವೆ ಎಂದರು. ಬಳ್ಳಾರಿಯ ಪಿ-10769 ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕ ಹೊಂದಿದ ಹುಬ್ಬಳ್ಳಿಯ 31 ವರ್ಷದ ಪುರುಷ ಪಿ-28945 (ಬಿಜಿಕೆ-314), 42 ವರ್ಷದ ಪುರುಷ ಪಿ-28946 …

Read More »

ಆ.11ರಿಂದ ಮುರುಗೇಶ್ ನಿರಾಣಿ ಮಾಲೀಕತ್ವದ ಪಾಂಡವಪುರ ಸಕ್ಕರೆ ಕಾರ್ಖಾನೆ ಕಾರ್ಯಾರಂಭ

ಬೆಂಗಳೂರು,ಜು.10- ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಕಬ್ಬು ಅರೆಯುವಿಕೆ ಸ್ಥಗಿತಗೊಳಿಸಿದ್ದ ಸಹಕಾರಿ ಕ್ಷೇತ್ರದ ರಾಜ್ಯದ ಏಕೈಕ ಸಕ್ಕರೆ ಕಾರ್ಖಾನೆ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆ (ಪಿಎಸ್‍ಎಸ್‍ಕೆ) ಪುನರಾರಂಭಗೊಳ್ಳುವ ಕಾಲ ಸನ್ನಿಹಿತವಾಗಿದ್ದು, ಆ.11ರಂದು ವಿದ್ಯುಕ್ತವಾಗಿ ಕಬ್ಬು ಅರೆಯುವ ಕೆಲಸಕ್ಕೆ ಚಾಲನೆ ಸಿಗಲಿದೆ. ಕಾರ್ಖಾನೆಯನ್ನು 40 ವರ್ಷಗಳ ಕಾಲ ಗುತ್ತಿಗೆಗೆ ಪಡೆದಿರುವ ಮುರುಗೇಶ್ ನಿರಾಣಿ ಮಾಲೀಕತ್ವದ ನಿರಾಣಿ ಶುಗರ್ಸ್ ಕಂಪನಿಯು ಪಿಎಸ್‍ಎಸ್‍ಕೆ ಆರಂಭಕ್ಕೆ ಸಿದ್ಧತೆ ನಡೆಸಿದೆ. ಎಲ್ಲವೂ ನಿರೀಕ್ಷೆಯಂತೆ ನಡೆದರೆ ಆ.11ರಿಂದ ಕಾರ್ಖಾನೆಯಲ್ಲಿ ಕಬ್ಬು …

Read More »

ದೇಶದಲ್ಲಿ ಇನ್ನೂ 3 ತಿಂಗಳು ಕೊರೊನಾ ಆರ್ಭಟ………

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಹಳ್ಳಿಯಿಂದ ದಿಲ್ಲಿಗೆ ವ್ಯಾಪಿಸಿಕೊಂಡಿದೆ. ಪ್ರತಿನಿತ್ಯ 25 ಸಾವಿರ ಮಂದಿಯಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದು ಮುಂದಿನ ಮೂರು ತಿಂಗಳು ಕೊರೊನಾ ಆರ್ಭಟಿಸಲಿದಯಂತೆ. ಈ ಆತಂಕ ನಡುವೆ ತಜ್ಞರು ಅಕ್ಟೋಬರ್ ಮಧ್ಯ ಭಾಗದಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗಬಹುದು ಎಂದು ಹೇಳಿದ್ದಾರೆ. ಇಡೀ ವಿಶ್ವವನ್ನೇ ಇನ್ನಿಲ್ಲದಂತೆ ಕಾಡ್ತಿರುವ ಕೊರೊನಾ ದಿನೇ ದಿನೇ ತನ್ನ ಕಬಂಧಬಾಹುವಿನ ಉದ್ದಗಲವನ್ನು ಹೆಚ್ಚಿಸುತ್ತಿದೆ. ಈ ಕೊರೊನಾ ನಿಯಂತ್ರಣ ಮಾಡಲು ಪ್ರತಿದಿನ ಹತ್ತು ಹಲವು ಸಂಶೋಧನೆಗಳು ನಡೆಯುತ್ತಲೇ …

Read More »

ಮೂರು ದಿನ ಮೈಸೂರು ಅರಮನೆ ಪ್ರವಾಸಿಗರಿಗೆ ಬಂದ್

ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಉಲ್ಬಣವಾಗುತ್ತಿದ್ದು, ಮೈಸೂರು ಅರಮನೆಗೂ ಕೊರೊನಾ ಭೀತಿ ಕಾಡುತ್ತಿದೆ. ಮೂರು ದಿನ ಅರಮನೆಯನ್ನು ಪ್ರವಾಸಿಗರಿಗೆ ಬಂದ್ ಮಾಡಲಾಗಿದೆ. ಅರಮನೆಯಲ್ಲಿ ಒಂಟೆ ನೋಡಿಕೊಳ್ಳುವ ವ್ಯಕ್ತಿಯ ಮಗನಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಮೂರು ದಿನ ಅರಮನೆಯನ್ನು ಬಂದ್ ಮಾಡಲಾಗಿದೆ. ಇಂದು ಅರಮನೆ ಆವರಣದಲ್ಲಿ ಸ್ಯಾನಿಟೈಸ್ ಮಾಡಲು ಸಿದ್ಧತೆ ಮಾಡಲಾಗಿದೆ. ಶನಿವಾರ ಮತ್ತು ಭಾನುವಾರ ಪ್ರವಾಸಿಗರಿಗೆ ನಿರ್ಬಂಧ ಮಾಡಲಾಗಿದೆ. ಇವತ್ತು ಒಂದು ದಿನ ಅರಮನೆ ಆವರಣ ಸ್ಯಾನಿಟೈಸ್‍ಗಾಗಿ ನಿರ್ಬಂಧ …

Read More »

ರಾಜ್ಯದಲ್ಲಿ ಡೆಡ್ಲಿ ಕೊರೊನಾ ನಡುವೆಯೇ ಮಳೆರಾಯನ ಆರ್ಭಟ ಜೋರಾಗಿ ಇದೆ.

ಬೆಂಗಳೂರು: ರಾಜ್ಯದಲ್ಲಿ ಡೆಡ್ಲಿ ಕೊರೊನಾ ನಡುವೆಯೇ ಮಳೆರಾಯನ ಆರ್ಭಟ ಜೋರಾಗಿ ಇದೆ. ಕಾರವಾರದಲ್ಲಿ ಭಾರೀ ಮಳೆಗೆ ಅಮದಳ್ಳಿ ಗ್ರಾಮ ಸಂಪೂರ್ಣ ಜಲಾವೃತವಾಗಿದ್ದು, ಮನೆಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಯ್ತು. ಜಿಲ್ಲೆಯ ಬೆಳಗಾವಿಯ ಚಿಕ್ಕೋಡಿ ಉಪ ವಿಭಾಗದ ಕೃಷ್ಣಾ ನದಿ ತೀರದಲ್ಲಿ ಈಗ ಪ್ರವಾಹ ಭೀತಿ ಎದುರಾಗಿದೆ. ಮಹಾರಾಷ್ಟ್ರದ ಕೋಂಕಣ ಪ್ರದೇಶಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಪರಿಣಾಮ ಕರ್ನಾಟಕದ ವೇದಗಂಗಾ, ದೂಧಗಂಗಾ, ಕೃಷ್ಣಾ ನದಿಗೆ ಭಾರೀ ಪ್ರಮಾಣದ …

Read More »

ಈ ಕೊರೊನಾದಿಂದ ಸಾವು ಮಾತ್ರ ಬರೋದು ಬೇಡ. ಬೇರೆ ಯಾವುದೇ ರೀತಿಯಾದರೂ ಸಾವು ಬರಲಿ ಅನ್ನೋ ಸ್ಥಿತಿ ನಿರ್ಮಾಣವಾಗಿದೆ.

ಕೊಪ್ಪಳ: ರಾಜ್ಯದಲ್ಲಿ ಕೊರೊನಾ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈ ಕೊರೊನಾದಿಂದ ಸಾವು ಮಾತ್ರ ಬರೋದು ಬೇಡ. ಬೇರೆ ಯಾವುದೇ ರೀತಿಯಾದರೂ ಸಾವು ಬರಲಿ ಅನ್ನೋ ಸ್ಥಿತಿ ನಿರ್ಮಾಣವಾಗಿದೆ. ಕೊಪ್ಪಳದಲ್ಲಿ ಒಂದೇ ದಿನ ಕೊರೊನಾ ಮಹಾಮಾರಿಗೆ ಇಬ್ಬರು ಬಲಿಯಾಗಿದ್ದಾರೆ. ಗಂಗಾವತಿ ತಾಲೂಕಿನ ಹಿರೇಜಂತಕಲ್ ಗ್ರಾಮದ ನಿವಾಸಿ 51 ವರ್ಷದ ವ್ಯಕ್ತಿ ಮತ್ತು ಕೊಪ್ಪಳ ತಾಲೂಕಿನ ಮುನಿರಾಬಾದನ 65 ವರ್ಷದ ವ್ಯಕ್ತಿ ಕೊರೊನಾದಿಂದ ಮೃತಪಟ್ಟಿದ್ದರು. 51 ವರ್ಷದ ವ್ಯಕ್ತಿಯ …

Read More »