ಕಾರವಾರ: ಬಿಎಸ್‍ಎನ್‍ಎಲ್ ಸಂಸ್ಥೆಯಲ್ಲಿರುವವರು ದೇಶದ್ರೋಹಿಗಳು, ದೇಶದ್ರೋಹಿಗಳೇ ಆ ಸಂಸ್ಥೆಯಲ್ಲಿ ತುಂಬಿಕೊಂಡಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಅನಂತಕುಮಾರ್ ಹೆಗಡೆ ಕಿಡಿ ಕಾರುವ ಮೂಲಕ ವಿವಾದಿತ ಹೇಳಿಕೆ ನೀಡಿದ್ದಾರೆ. ಜಿಲ್ಲೆಯ ಕುಮಟಾದಲ್ಲಿ ಇಂದು ಸಂಸದರ ಹಾಗೂ ಕೇಂದ್ರ ಸರ್ಕಾರದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಸ್‍ಎನ್‍ಎಲ್ ಸರಿಪಡಿಸಲು ನಮ್ಮ ಸರ್ಕಾರದಿಂದಲೂ ಸಾಧ್ಯವಾಗಿಲ್ಲ. ಸಮರ್ಪಕ ಸೇವೆ ನೀಡಲು ಬಿಎಸ್‍ಎನ್‍ಎಲ್ ಸಂಸ್ಥೆಯ ನೌಕರರಿಂದ ಸಾಧ್ಯವಾಗೋದಿಲ್ಲ. ಈಗಾಗಲೇ 85 …
Read More »ಜಿಲ್ಲೆಯಲ್ಲಿ ಇಂದು 54 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಮೂವರು ಬಲಿ
ಬೆಳಗಾವಿ: ಜಿಲ್ಲೆಯಲ್ಲಿ ಇಂದು 54 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಮೂವರು ಬಲಿಯಾಗಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಸಂಜೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ ಮಾಹಿತಿ ನೀಡಿದ್ದು, ಇಂದು ಒಂದೇ ದಿನ 90 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಳಗಾವಿಯ ಇಬ್ಬರು ಹಾಗೂ ಸವದತ್ತಿ ತಾಲೂಕಿನ ಒಬ್ಬ ಒಟ್ಟು ಮೂವರು ಸಾವನ್ನಪ್ಪಿದ್ದು, ಇದವರೆಗೆ ಜಿಲ್ಲೆಯಲ್ಲಿ ಬೆಳಗಾವಿ ತಾಲೂಕಿನಲ್ಲಿ 20, ಗೋಕಾಕನಲ್ಲಿ 10, …
Read More »ಜಲಪಾತದಲ್ಲಿ ಮಂಜಿನೊಂದಿಗೆ ಶರಾವತಿ ಕಣ್ಣ ಮುಚ್ಚಾಲೆ
ಶಿವಮೊಗ್ಗ: ಕಳೆದ ಒಂದು ವಾರದಿಂದ ಮಲೆನಾಡಿನ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ವಿಶ್ವ ವಿಖ್ಯಾತ ಜೋಗ ಜಲಪಾತ ಮೈದುಂಬಿಕೊಂಡಿದೆ. ಜೋಗ ಜಲಪಾತಕ್ಕೆ ಸಾಕಷ್ಟು ಪ್ರಮಾಣದಲ್ಲಿ ಮಳೆ ನೀರು ಹರಿದು ಬರುತ್ತಿದ್ದು, ಪ್ರಕೃತಿಯ ಸುಂದರ ಮಡಿಲಲ್ಲಿ ಜೋಗ ಜಲಪಾತದಲ್ಲಿ ಶರಾವತಿ ಧುಮ್ಮಿಕ್ಕಿ ಹರಿಯುತ್ತಿದ್ದಾಳೆ. ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದ್ದಾಳೆ. ಮಲೆನಾಡಿನ ಬೆಟ್ಟ, ಗುಡ್ಡ ಹಸಿರು ಕಾನನದ ನಡುವೆ ಬಳುಕುತ್ತಾ ಹರಿಯುವ ಶರಾವತಿ ನದಿ ಜೋಗದಲ್ಲಿ ಸುಮಾರು 950 …
Read More »ಮತ್ತೆ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಮಾದರಿಯಾದ ಕಿಚ್ಚ ಸುದೀಪ್
ಬೆಂಗಳೂರು,ಆ.10- ಇತ್ತೀಚೆಗಷ್ಟೆ ಚಿತ್ರದುರ್ಗ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದ ನಟ ಕಿಚ್ಚ ಸುದೀಪ್ ಅವರು ಇದೀಗ ಮತ್ತೆ ನಾಲ್ಕು ಶಾಲೆಗಳನ್ನು ದತ್ತು ಪಡೆಯುವ ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಿದ್ದಾರೆ. ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ಶಾಲೆಗಾಗಿ ನಾವು-ನೀವು ಯೋಜನೆಯಡಿ ಈ ಬಾರಿ ಶಿವಮೊಗ್ಗ ಜಿಲ್ಲೆಯ ನಾಲ್ಕು ಶಾಲೆಗಳನ್ನು ದತ್ತು ಪಡೆದುಕೊಂಡಿದೆ. ಸಾಗರ ತಾಲೂಕಿನ ಆವಿಗೆ ಗ್ರಾಮ, ಹಾಳಸಸಿ ಗ್ರಾಮ, ಎಂ.ಎಲ್.ಹಳ್ಳಿ ಹಾಗೂ ಎಸ್.ಎನ್.ನಗರದ ನಾಲ್ಕು ಸರ್ಕಾರಿ ಶಾಲೆಗಳನ್ನು …
Read More »ಉಡುಪಿಯಲ್ಲಿ ನಾಳೆ ಕೃಷ್ಣಜನ್ಮಾಷ್ಟಮಿ ಆಚರಣೆ ಇಲ್ಲ
ಉಡುಪಿ: ಶ್ರೀಕೃಷ್ಣ ಮಠದಲ್ಲಿ ನಾಳೆ ಅಷ್ಟಮಿ ಆಚರಣೆ ನಡೆಯುತ್ತಿಲ್ಲ. ಸೆಪ್ಟೆಂಬರ್ 11ಕ್ಕೆ ಶ್ರೀಕೃಷ್ಣಜನ್ಮಾಷ್ಟಮಿ ಆಚರಿಸಲು ಉಡುಪಿ ಕೃಷ್ಣಮಠ ತೀರ್ಮಾನಿಸಿದೆ. ಚಾಂದ್ರಮಾನ ಪದ್ಧತಿಯ ಪ್ರಕಾರ ನಾಳೆ ಅಷ್ಟಮಿ ನಾಡಿನಾದ್ಯಂತ ನಡೆಯುತ್ತಿದೆ. ಉಡುಪಿ ಶ್ರೀಕೃಷ್ಣಮಠ ಸೌರಮಾನ ಪದ್ಧತಿಯನ್ನು ಅನುಸರಿಸುವ ಧಾರ್ಮಿಕ ಕೇಂದ್ರ. ಅಗಸ್ಟ್ 11ಕ್ಕೆ ನಾಡಿನಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ನಡೆಯುತ್ತಿದ್ದು, ಕೃಷ್ಣನ ನಾಡು ಉಡುಪಿಯಲ್ಲಿ ಒಂದು ತಿಂಗಳು ನಂತರ ಆಚರಣೆ ನಡೆಯಲಿದೆ. ಶ್ರೀಕೃಷ್ಣ ಹುಟ್ಟಿದ್ದು, ಸಿಂಹಮಾಸ ಕೃಷ್ಣ ಪಕ್ಷ ರೋಹಿಣಿ ನಕ್ಷತ್ರ …
Read More »ಕೃಷ್ಣ ಜನ್ಮಾಷ್ಟಮಿ ಭಾರತದಲ್ಲಿ ಆಚರಿಸಲ್ಪಡುವ ಒಂದು ಪ್ರಮುಖವಾದ ಹಬ್ಬ.
ಕೃಷ್ಣ ಜನ್ಮಾಷ್ಟಮಿ ಭಾರತದಲ್ಲಿ ಆಚರಿಸಲ್ಪಡುವ ಒಂದು ಪ್ರಮುಖವಾದ ಹಬ್ಬ. ಕೃಷ್ಣ ಹುಟ್ಟಿದ ದಿನವನ್ನು ಕೃಷ್ಣ ಜನ್ಮಾಷ್ಟಮಿ ಅಥವಾ ಗೋಕುಲಾಷ್ಟಮಿ ಎಂದು ವೈಭವದಿಂದ ಆಚರಿಸಲಾಗುತ್ತದೆ. ಶ್ರೀಕೃಷ್ಣನ ಜನ್ಮದಿನವನ್ನು ಚಾಂದ್ರಮಾನ ರೀತಿಯಲ್ಲಿ ಶ್ರಾವಣ ಕೃಷ್ಣ ಅಷ್ಟಮಿಯಂದು, ಸೌರಮಾನ ರೀತಿಯಲ್ಲಿ ಸಿಂಹಮಾಸದ ರೋಹಿಣಿ ನಕ್ಷತ್ರದ ದಿನ ಆಚರಿಸುತ್ತಾರೆ. ಶ್ರಾವಣ ಮಾಸದಲ್ಲಿ ಬರುವ ಕೃಷ್ಣ ಪಕ್ಷದ ಅಷ್ಟಮಿ ಕೃಷ್ಣನು ಹುಟ್ಟಿದ ದಿನ. ಅಷ್ಟಮಿಯ ಮಧ್ಯರಾತ್ರಿ, ಕಾರಾಗೃಹದಲ್ಲಿ ಕೃಷ್ಣನ ಜನನವಾಯಿತೆಂದು ಪುರಾಣಗಳಲ್ಲಿ ಉಲ್ಲೇಖಿಸಲ್ಪಟ್ಟಿದೆ.[೧] ಮಥುರಾ ಕೃಷ್ಣನ ಜನ್ಮಸ್ಥಳ. …
Read More »ಪ್ರಣಬ್ ಮುಖರ್ಜಿ ಅವರಿಗೆ ಮಾರಕ ಕೊರೊನಾ ವೈರಸ್ ಸೋಂಕು
ಹೊಸದಿಲ್ಲಿ: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಹಾಗೂ ಭಾರತ ರತ್ನ ಪುರಸ್ಕೃತ ಪ್ರಣಬ್ ಮುಖರ್ಜಿ ಅವರಿಗೆ ಮಾರಕ ಕೊರೊನಾ ವೈರಸ್ ಸೋಂಕು ತಗುಲಿದೆ. ಈ ಕುರಿತು ಖುದ್ದು ಮಾಹಿತಿ ನೀಡಿರುವ ಪ್ರಣಬ್ ಮುಖರ್ಜಿ, ನಿಯಮಿತ ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ಭೇಟಿ ನೀಡಿದಾಗ ತಮಗೆ ಕೊರೊನಾ ಸೋಂಕು ತಗುಲಿದೆ ಎಂಬುದು ದೃಢಪಟ್ಟಿದೆ ಎಂದು ಟ್ವೀಟ್ ಮಾಡಿದ್ದಾರೆ. ತಮಗೆ ಕೊರೊನಾ ವೈರಸ್ ಸೋಂಕು ತಗುಲಿರುವುದನ್ನು ವೈದ್ಯರು ದೃಢಪಡಿಸಿದ್ದು, ನನ್ನ ಸಂಪರ್ಕಕ್ಕೆ ಬಂದ …
Read More »ಯಡಿಯೂರಪ್ಪ ಮತ್ತು ಸಿದ್ಧರಾಮಯ್ಯ ಅವರು ರಾಜಕೀಯವಾಗಿ ಒಗ್ಗಟ್ಟಾಗುತ್ತಿದ್ದಾರೆ……..?:ಸತೀಶ ಜಾರಕಿಹೊಳಿ
ಬೆಳಗಾವಿ: ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಸಿದ್ಧರಾಮಯ್ಯ ಅವರು ರಾಜಕೀಯವಾಗಿ ಒಗ್ಗಟ್ಟಾಗುತ್ತಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗಳಿಗೆ ಸ್ಪಷ್ಟನೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಅದು ಅಸಾಧ್ಯದ ಮಾತು ಎಂದು ಹೇಳಿದ್ದಾರೆ. ರಾಜಕೀಯವಾಗಿ ಅವರ ಸಿದ್ಧಾಂತಗಳು, ವಿಚಾರ, ಹೋರಾಟವೇ ಬೇರೆಯಾಗಿದೆ.ಅವ್ರು ಹಾಸ್ಪಿಟಲ್ ನಲ್ಲಿ ಒಂದಾಗಬಹದು ಆದ್ರೆ ರಾಜಕೀಯವಾಗಿ ಅದು ಅಸಾಧ್ಯದ ಮಾತು ಎಂದು ವ್ಯಂಗ್ಯವಾಡಿದ ಅವರು ರಾಜಕೀಯವಾಗಿ ಯಾವಾಗಲೂ ಕೂಡಲು ಆಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದರು. ರಾಜಕೀಯವಾಗಿ 24 …
Read More »ರೌಡಿಗಳ ಚಳಿ ಬಿಡಿಸಿದ ರವಿ ಚೆನ್ನಣ್ಣನವರ್
ಬೆಂಗಳೂರು: ಹವಾ ಮಾಡ್ತೀವಿ, ರೌಡಿಸಂ ಮಾಡ್ತೀವಿ, ಹೆಸರು ಮಾಡ್ತೀವಿ, ನಂದೆ ಹವಾ ಇರ್ಬೇಕು ಎಂದು ಓಡಾಡುತ್ತಿದ್ದವರಿಗೆ ಆನೇಕಲ್ ಉಪ ವಿಭಾಗದ ಪೊಲೀಸರು ಚಳಿ ಬಿಡಿಸಿದ್ದು, ಖಡಕ್ ವಾರ್ನಿಂಗ್ ನೀಡಿದ್ದಾರೆ. ಆನೇಕಲ್ ಉಪವಿಭಾಗದ ಏಳು ಠಾಣೆಯ ಪೋಲಿಸರು ಭಾನುವಾರ ಸ್ಪೆಷಲ್ ಡ್ರೈವ್ ಮಾಡಿ ರೌಡಿ ಶೀಟರ್ಸ್ ಗಳ ಮನೆಗಳಿಗೆ ತೆರಳಿ ರೈಡ್ ಮಾಡಿ ಸುಮಾರು ನೂರಕ್ಕು ಹೆಚ್ಚು ರೌಡಿ ಶೀಟರ್ ಗಳನ್ನು ಠಾಣೆಗೆ ಕರೆಸಿದ್ದಾರೆ. ಇಂದು ಎಸ್‍ಪಿ ರವಿ.ಡಿ.ಚೆನ್ನಣ್ಣನವರ್ ನೇತೃತ್ವದಲ್ಲಿ ಎಲ್ಲ …
Read More »ಅತಿವೃಷ್ಟಿಯಿಂದ ಬಾಧಿತವಾಗಿರುವ ರಾಜ್ಯಕ್ಕೆ 4 ಸಾವಿರ ಕೋಟಿ ರೂ ಪ್ಯಾಕೇಜ್: ಪ್ರಧಾನಿ ಮೋದಿ
ಬೆಂಗಳೂರು: ಅತಿವೃಷ್ಟಿಯಿಂದ ಬಾಧಿತವಾಗಿರುವ ರಾಜ್ಯಕ್ಕೆ 4 ಸಾವಿರ ಕೋಟಿ ರೂ ಪ್ಯಾಕೇಜ್ ಘೋಷಿಸಬೇಕೆಂದು ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿಕೊಂಡಿದೆ. ಇಂದು ಪ್ರಧಾನಿ ಮೋದಿ ಜೊತೆ ನಡೆದ 15 ನಿಮಿಷಗಳ ವಿಡಿಯೋ ಕಾನ್ಫೆರೆನ್ಸ್ನಲ್ಲಿ ರಾಜ್ಯ ಸರ್ಕಾರ ತನ್ನ ರಾಜ್ಯದ 12 ಜಿಲ್ಲೆಗಳಲ್ಲಿನ ಅತಿವೃಷ್ಟಿ ಪರಿಸ್ಥಿತಿಯನ್ನು ವಿವರಿಸಿತು. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ವಿವಿಧ ಅಧಿಕಾರಿಗಳು ರಾಜ್ಯದ ಪರವಾಗಿ ಪಾಲ್ಗೊಂಡಿದ್ದ ಈ ಕಾನ್ಫೆರೆನ್ಸ್ನಲ್ಲಿ ಕೇಂದ್ರ ಸರ್ಕಾರಕ್ಕೆ ವಿವಿಧ ಬೇಡಿಕೆಗಳನ್ನ ಮುಂದಿಟ್ಟರು. …
Read More »