ಬೆಂಗಳೂರು: ಆರ್.ಆರ್.ನಗರ ಉಪಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜಕೀಯ ನಾಯಕರ ಮಾತಿನ ಸಮರಕ್ಕೆ ಕಾರಣವಾಗಿದೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ಯಾವತ್ತಿದ್ದರೂ ಬಿಜೆಪಿಗೆ ಮುಳ್ಳು. ಮುಂದಿನ ದಿನಗಳಲ್ಲಿ ಬಿಜೆಪಿಗೆ ಅನುಭವಕ್ಕೆ ಬರಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ನಾವು ಯಾವುದೇ ಆಮಿಷಗಳನ್ನು ಒಡ್ಡಿ ಮತ ಕೇಳುತ್ತಿಲ್ಲ. ವಿಶ್ವಾಸದಿಂದ ಕೇಳುತ್ತಿದ್ದೇವೆ. ಆದರೆ ಬಿಜೆಪಿಯವರು ಆರ್.ಆರ್. ನಗರ ಹಾಗೂ ಶಿರಾ ಎರಡೂ ಕ್ಷೇತ್ರಗಳಲ್ಲೂ ಕಂತೆ …
Read More »ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಎಸ್ ನಾರಾಯಣ್ ಗೆ ಸಿನಿಮಾ ಮಾಡೋಣ ಎಂಬುದಾಗಿ ನಂಬಿಸಿ 1.6 ಕೋಟಿಗೆ ಟೋಫಿ ಹಾಕಿ ಪರಾರಿ
ಬೆಂಗಳೂರು : ತಾವು ಸಿನಿಮಾವೊಂದನ್ನು ಮಾಡುತ್ತಿದ್ದೇವೆ. ನೀವೇ ನಿರ್ದೇಶನ ಮಾಡಿ ಎಂಬುದಾಗಿ ಖ್ಯಾತ ನಿರ್ದೇಶಕ ಎಸ್ ನಾರಾಯಣ್ ಅವರನ್ನು ಐವರು ನಂಬಿಸಿದ್ದಾರೆ. ಅದರಂತೆಯೇ ಶೂಟಿಂಗ್ ಕೂಡ ಐದು ದಿನ ನಡೆಸಿದ್ದಾರೆ. ಕೊನೆಗೆ ಇದ್ದಕ್ಕಿದ್ದಂತೆ ಹಣದ ಅಡಚಣೆಯ ನೆಪವೊಡ್ಡಿ ಸಿನಿಮಾ ಶೂಟಿಂಗ್ ನಿಲ್ಲಿಸಿದ್ದಾರೆ. ಸಿನಿಮಾ ಶೂಟಿಂಗ್ ನಿಂತರ ನಂತ್ರ, ಹೊಸ ಆಟ ಶುರುಮಾಡಿದಂತ ಐವರು ಖದೀಮರು, ತಮ್ಮ ಸೈಟ್ ಮಾರಾಟ ಮಾಡಿಯಾದರೂ ಬೇಗ ಶೂಟಿಂಗ್ ಶುರು ಮಾಡೋಣ ಅಂತ ನಾರಾಯಣ್ ನಂಬಿಸಿದ್ದಾರೆ. …
Read More »ಅನೈತಿಕ ಸಂಬಂಧ ಹೊಂದಿದ್ದ ಸೊಸೆಯನ್ನು ಮತ್ತು ಆಕೆಯ ಪ್ರಿಯಕರನ ತಲೆ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಬರ್ಬರವಾಗಿ ಹತ್ಯೆ
ಮುಂಬೈ: ಅನೈತಿಕ ಸಂಬಂಧ ಹೊಂದಿದ್ದ ಸೊಸೆಯನ್ನು ಮತ್ತು ಆಕೆಯ ಪ್ರಿಯಕರನ ತಲೆ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. 32 ವರ್ಷದ ಮಾರಿಯಾ ಮತ್ತು 27 ವರ್ಷದ ಅರ್ಬಕ್ ಭಾಗ್ವತ್ ರನ್ನು ಟ್ರ್ಯಾಕ್ಟರ್ ಹತ್ತಿಸಿ ಕೊಲೆ ಮಾಡಲಾಗಿದೆ. ಈ ಸಂಬಂಧ ಮಾವ ಬತ್ವೆಲ್ ಲಾಲ್ಜಾರೆ ಮತ್ತು ಲಾಲ್ಜಾರೆ ಮಗ ವಿಕಾಸ್ ನನ್ನು ಪೊಲೀಸರು ಬಂಧಿಸಿದ್ದಾರೆ. ಮಾರಿಯಾ ಲಾಲ್ಜಾರೆ ಪತಿ 10 ವರ್ಷದ …
Read More »ಕೊರೋನಾ ವೈರಸ್ ಸೋಂಕಿನಿಂದ ಸಚಿವರ ಪರಿಸ್ಥಿತಿ ಚಿಂತಾಜನಕ
ಚೆನ್ನೈ: ಕೊರೋನಾ ವೈರಸ್ ತಗುಲಿರುವುದರಿಂದ ಗೆ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಕೃಷಿ ಸಚಿವ ಆರ್ ದೊರೈಕಣ್ಣಾ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಜೀವ ರಕ್ಷಕ ಅಳವಡಿಸಲಾಗಿದೆ ಎಂದು ಕಾವೇರಿ ಆಸ್ಪತ್ರೆ ಶನಿವಾರ ತಿಳಿಸಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 72 ವರ್ಷದ ದೊರೈಕಣ್ಣಾ ಅವರು ಅಕ್ಟೋಬರ್ 13ರಂದು ಕೋವಿಡ್-19 ಪರೀಕ್ಷೆ ಮಾಡಿಸಿದ್ದರು. ವರದಿ ಪಾಸಿಟಿವ್ ಬಂದಿದ್ದರಿಂದ ಚಿಕಿತ್ಸೆಗಾಗಿ ನಗರದ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದರು. ಗರಿಷ್ಠ ಜೀವ ರಕ್ಷಕದ ಹೊರತಾಗಿಯೂ ಸಚಿವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, …
Read More »ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಬಗ್ಗೆ ಮಾಹಿತಿ : ಸವದಿ
ಬೆಳಗಾವಿ : ಬೆಳಗಾವಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ, ಸಚಿವ ರಮೇಶ ಜಾರಕಿಹೊಳಿ ಜಂಟಿ ಸುದ್ದಿಗೋಷ್ಠಿ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಬಗ್ಗೆ ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಮಾತನಾಡಿ, ಕಳೆದ ಒಂದು ವಾರದಿಂದ ಬ್ಯಾಂಕ್ ಚುನಾವಣೆ ಅವಿರೋಧ ಆಯ್ಕೆ ಮಾಡಲು ಕಸರತ್ತು ನಡೆಸಿದ್ದೇವು. ವೈಮನಸ್ಸು ತಪ್ಪಿಸಲು ಅವಿರೋಧ ಆಯ್ಕೆ ಒತ್ತು ಕೊಟ್ಟಿದ್ದೇವು. ಪಕ್ಷದ ಮುಖಂಡರು ಇದೇ ಸೂಚನೆಯನ್ನು ನೀಡಿದ್ದರು. ಜಾರಕಿಹೊಳಿ, ಸವದಿ ಹಾಗೂ ಕತ್ತಿ ಕುಟುಂಬ ಒಟ್ಟಿಗೆ …
Read More »ರಾಜಕೀಯ ಬದ್ಧ ವೈರಿಗಳ ಮುಖಾಮುಖಿ
ಬೆಳಗಾವಿ : ಬೆಳಗಾವಿ ರಾಜಕೀಯ ಬದ್ಧ ವೈರಿಗಳ ಮುಖಾಮುಖಿ ಆಗಿದ್ದಾರೆ.ಬೆಳಗಾವಿ ಡಿಸಿಸಿ ಬ್ಯಾಂಕ್ ಕಚೇರಿಯಲ್ಲಿ ಇಬ್ಬರು ಮುಖಾಮುಖಿ ಆಗುವ ಮೂಲಕ ಮೂರು ವರ್ಷಗಳ ವೈರತ್ವಕ್ಕೆ ಅಂತ್ಯ ಹಾಡಿದ್ದಾರೆ. ಕಳೆದ ಮೂರು ವರ್ಷಗಳಿಂದ ಹಾವು- ಮುಂಗುಸಿಯಂತೆ ಕಿತ್ತಾಡಿಕೊಂಡಿದ್ದ ಈ ಇಬ್ಬರು ನಾಯಕರು ಒಂದೇ ವೇದಿಕೆಗೆ ಬರಬೇಕೆನ್ನುವದು ಬಿಜೆಪಿ ಕಾರ್ಯಕರ್ತರ ಅಪೇಕ್ಷೆಯಾಗಿತ್ತು ,ಡಿಸಿಸಿ ಬ್ಯಾಂಕ್ ಚುನಾವಣೆ ಈ ಅವಕಾಶವನ್ನು ಕಲ್ಪಿಸಿ ಕೊಟ್ಟಿದೆ. ಡಿಸಿಸಿ ಬ್ಯಾಂಕಿನಲ್ಲಿ ಮುಖಾಮುಖಿಯಾದ ಇಬ್ಬರು ನಾಯಕರಾದ ಡಿಸಿಎಂ ಲಕ್ಷ್ಮಣ ಸವದಿ, …
Read More »ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಶುಭಾಶಯ : ರಮೇಶ ಜಾರಕಿಹೊಳಿ
ಗೋಕಾಕ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು, ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಶುಭಾಶಯ ಕೋರಿದ್ದಾರೆ. ನಗರದ ತಮ್ಮ ಕಚೇರಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷ ಅತೀ ವಿಜ್ರಂಭನೆಯಿಂದ ವಾಲ್ಮೀಕಿ ಜಯಂತಿ ಆಚರಿಸಲಾಗುತ್ತಿತ್ತು. ಆದ್ರೆ ಈ ಭಾರಿ ಕೋವಿಡ್ ಮಾರ್ಗಸೂಚಿ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮ ಆಚರಿಸಲಾಗುತ್ತಿದೆ ಎಂದು ಹೇಳಿದರು.
Read More »ವಾಲ್ಮೀಕಿ ಸಮುದಾಯ ಮೀಸಲಾತಿಗಾಗಿ ಮತ್ತೊಮ್ಮೆ ಸರ್ಕಾರದ ಗಮನ ಸೆಳೆದಿದೆ
ಬೆಂಗಳೂರು: ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಅವರ ಎದುರೇ ವಾಲ್ಮೀಕಿ ಸಮುದಾಯ ಮೀಸಲಾತಿಗಾಗಿ ಮತ್ತೊಮ್ಮೆ ಸರ್ಕಾರದ ಗಮನ ಸೆಳೆದಿದೆ. ಬೆಂಗಳೂರಿನ ಶಾಸಕರ ಭವನದ ವಾಲ್ಮೀಕಿ ತಪೋವನದಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಸಚಿವ ಶ್ರೀರಾಮುಲು ಹಾಗೂ ಪ್ರಸನ್ನಾನಂದಪುರಿ ಸ್ವಾಮೀಜಿ ಅವರು ಪುಷ್ಪಾರ್ಚನೆ ಮೂಲಕ ಗೌರವ ಸಮರ್ಪಿಸಿದರು. ಇದೇ ಸಂದರ್ಭದಲ್ಲಿ ವಾಲ್ಮೀಕಿ ಪ್ರತಿಮೆಯ ಎದುರು ಪ್ರಸನ್ನಾನಂದಪುರಿ ಸ್ವಾಮೀಜಿ ಅವರು ವಾಲ್ಮೀಕಿ ಜ್ಯೋತಿಯನ್ನು ಸಚಿವ ಶ್ರೀರಾಮುಲು ಅವರಿಗೆ ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿ ಶ್ರೀರಾಮುಲು ಸಮ್ಮುಖದಲ್ಲೇ …
Read More »ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಣೆಗೆ ಹೊಸ ಸೂಚನೆ
ಬೆಂಗಳೂರು- ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ 100 ಜನಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ ಹಾಗೂ ಯಾವುದೇ ಮೆರವಣಿಗೆ ನಡೆಸುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೊರೊನಾ ಮಾರ್ಗ ಸೂಚಿ ಅನ್ವಯ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ರಾಜ್ಯೋತ್ಸವ ಆಚರಣೆಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವಿಕೆಯನ್ನು ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿದೆ. ಹಾಗಾಗಿ ನವೆಂಬರ್ 1 ರಂದು ರಾಜ್ಯೋತ್ಸವ ಕಾರ್ಯಕ್ರಮವನ್ನು …
Read More »ಸವದತ್ತಿಯ ಸುಕ್ಷೇತ್ರ ಸೇರಿ 3 ದೇವಸ್ಥಾನ ಮತ್ತೊಂದು ತಿಂಗಳು ಬಂದ್
ಬೆಳಗಾವಿ: ಜಿಲ್ಲೆಯ ಸವದತ್ತಿಯ ಸುಕ್ಷೇತ್ರ ರೇಣುಕಾ ಯಲ್ಲಮ್ಮದೇವಿ, ಜೋಗುಳಬಾವಿ ಸತ್ತೆಮ್ಮದೇವಿ ಮತ್ತು ರಾಯಬಾಗ ತಾಲ್ಲೂಕಿನ ಚಿಂಚಲಿ ಮಾಯಕ್ಕದೇವಿ ದೇವಸ್ಥಾನಗಳಲ್ಲಿ ಸಾರ್ವಜನಿಕ ದರ್ಶನವನ್ನು ನ.30ರವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ. ‘ಈ ದೇವಸ್ಥಾನಗಳಿಗೆ ನೆರೆಯ ಮಹಾರಾಷ್ಟ್ರ ಮೊದಲಾದ ಕಡೆಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ. ಇದನ್ನು ತಡೆಯಲು, ಕೊರೊನಾ ಸೋಂಕು ಹರಡದಂತೆ ನಿಯಂತ್ರಿಸಲು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಈ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಈ ದೇವಸ್ಥಾನಗಳ ಆಡಳಿತ ಮಂಡಳಿಯವರು ನಿತ್ಯದ …
Read More »
Laxmi News 24×7