Breaking News

ಕೇಂದ್ರ ಸರ್ಕಾರದ  ರಾಜ್ಯ ರೈಲ್ವೆ ಸಚಿವ  ಸುರೇಶ್ ಅಂಗಡಿ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ,ಆನ್ ರೋಲ್ ಆಫ್ ರೈಲು ಸೇವೆಗೆ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಅವರು ಚಾಲನೆ ನೀಡಿದರು.

ಬೆಂಗಳೂರು: ಬೆಂಗಳೂರಿನ ನೆಲಮಂಗಲ ರೈಲ್ವೇ ನಿಲ್ದಾಣದಿಂದ ಸೋಲಾಪುರದ ಬಾಲೆ ರೈಲ್ವೆ ನಿಲ್ದಾಣದ  ನಡುವೆ ಸಂಚರಿಸುವ ರೋಲ್ ಆನ್ ರೋಲ್ ಆಫ್ ರೈಲು ಸೇವೆಗೆ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ  ರಾಜ್ಯ ರೈಲ್ವೆ ಸಚಿವ  ಸುರೇಶ್ ಅಂಗಡಿ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಕಂದಾಯ ಸಚಿವ ಆರ್.ಅಶೋಕ್, ಸಿಎಂ ರಾಜಕೀಯ ಕಾರ್ಯದರ್ಶಿ  ಶಂಕರ್ ಗೌಡ ಪಾಟೀಲ್, ಶಾಸಕ ನಾರಾಯಣಸ್ವಾಮಿ ಇತರರು ಇದ್ದರು.

Read More »

ಇದೀಗ ಪ್ರವಾಸಿಸಗರಿಗೆ ಷರತ್ತು ಬದ್ಧ ಅನುಮತಿ ನೀಡಿ, ಜಿಲ್ಲಾಡಳಿತ ನಿರ್ಬಂಧವನ್ನು ತೆರವುಗೊಳಿಸಿದೆ.

ಚಿಕ್ಕಮಗಳೂರು: ಕೊರೊನಾ ಹರಡುವಿಕೆ ಹಿನ್ನೆಲೆ ಜಿಲ್ಲೆಯ ಎಲ್ಲ ಪ್ರವಾಸಿ ತಾಣಗಳಿಗೆ ಜಿಲ್ಲಾಡಳಿತ ನಿಷೇಧ ಹೇರಿತ್ತು. ಇದೀಗ ಪ್ರವಾಸಿಸಗರಿಗೆ ಷರತ್ತು ಬದ್ಧ ಅನುಮತಿ ನೀಡಿ, ಜಿಲ್ಲಾಡಳಿತ ನಿರ್ಬಂಧವನ್ನು ತೆರವುಗೊಳಿಸಿದೆ. ಪ್ರವಾಸಿಗರು ಕಾರು, ಬೈಕ್, ಜೀಪ್‍ನಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡಬಹುದಾಗಿದ್ದು, ದೊಡ್ಡ ವಾಹನಗಳು, ಖಾಸಗಿ ಬಸ್‍ಗಳಲ್ಲಿ ಬರುವುದನ್ನು ನಿರ್ಬಂಧಿಸಲಾಗಿದೆ. ಜಿಲ್ಲೆಯ ಪ್ರವಾಸಿ ತಾಣಗಳಿಗೆ ಬರುವ ಪ್ರವಾಸಿಗರು ಕಡ್ಡಾಯವಾಗಿ ಮುಖಕ್ಕೆ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪ್ರವಾಸಿ ತಾಣಗಳಲ್ಲಿ ಗುಂಪಾಗಿ …

Read More »

ಕೋವಿಡ್ ಸೋಂಕಿತರೊಂದಿಗೆ ಕಾಲ ಕಳೆದು ಬರುತ್ತೇನೆ. ನನಗೆ ಕೋವಿಡ್ ಸೋಂಕು ಬರುತ್ತಾ ನೋಡುತ್ತೇನೆ: ಮಠದ ಕಲ್ಯಾಣ ಸ್ವಾಮೀಜಿ ಚಾಲೆಂಜ್

ಬಳ್ಳಾರಿ: ಬಿಸಿ ನೀರಿನಿಂದ ಸಾಯೋ ಕೊರೊನಾ ರೋಗಕ್ಕೆ ಕೋಟ್ಯಂತರ ರೂ.ಗಳನ್ನು ವ್ಯಯಿಸಿ ಇಷ್ಟೊಂದು ಪ್ರಚಾರ ನೀಡಲಾಗುತ್ತೆ. ನಾನು ಬೇಕಾದರೆ ಚಾಲೆಂಜ್ ಮಾಡುತ್ತೇನೆ. ಕೋವಿಡ್ ಸೋಂಕಿತರೊಂದಿಗೆ ಕಾಲ ಕಳೆದು ಬರುತ್ತೇನೆ. ನನಗೆ ಕೋವಿಡ್ ಸೋಂಕು ಬರುತ್ತಾ ನೋಡುತ್ತೇನೆ ಎಂದು ಕಮ್ಮರಚೇಡು ಮಠದ ಕಲ್ಯಾಣ ಸ್ವಾಮೀಜಿ ಸವಾಲೆಸೆದಿದ್ದಾರೆ. ಬಳ್ಳಾರಿ ನಗರದ ಸ್ನೇಹ ಸಂಪುಟದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಸೋಂಕಿನ ಭಯದಿಂದ ಸಾಯುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಜಿಲ್ಲಾಡಳಿತವಾಗಲಿ, ಕೇಂದ್ರ ಮತ್ತು …

Read More »

ಹುಬ್ಬಳ್ಳಿಯ ಹುಡುಗನ ಜೊತೆಗೆ ಶಾಸಕಿ ಲಕ್ಷ್ಮೀ ಹಬ್ಬಾಳ್ಕರ್ ಪುತ್ರಿಯ ನಿಶ್ಚಿತಾರ್ಥ

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಜತ ಉಳ್ಳಾಗಡ್ಡಿಮಠ ಅವರಿಗೊಂದಿಗೆ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರಿಯ ವಿವಾಹ ನಿಶ್ಚಿತಾರ್ಥ ನೆರವೇರಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಕಾಂಗ್ರೆಸ್ ಮುಖಂಡ ದಿವಂಗತ ವಿಶ್ವಪ್ರಕಾಶ್ ಉಳ್ಳಾಗಡ್ಡಿಮಠದ ಪುತ್ರ, ಹುಬ್ಬಳ್ಳಿ-ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಜತ ಉಳ್ಳಾಗಡ್ಡಿಮಠ ಅವರೊಂದಿಗೆ ನನ್ನ ಪುತ್ರಿಯ ಮದುವೆ ನಿಶ್ಚಿತಾರ್ಥ ನೆರವೇರಿಸಲಾಗಿದೆ. ರಜತ ನನ್ನ ಅಳಿಯನಲ್ಲ, …

Read More »

ರಾಯಚೂರಿನ ಮುದಗಲ್ ಮೊಹರಂ ಆಚರಣೆಯನ್ನ ರದ್ದು ಮಾಡಿದ್ದರೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದರ್ಗಾಕ್ಕೆ

ರಾಯಚೂರು: ಕೊರೊನಾ ಹಿನ್ನೆಲೆ ಐತಿಹಾಸಿಕ ಪ್ರಸಿದ್ಧ ರಾಯಚೂರಿನ ಮುದಗಲ್ ಮೊಹರಂ ಆಚರಣೆಯನ್ನ ರದ್ದು ಮಾಡಿದ್ದರೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದರ್ಗಾಕ್ಕೆ ಬರುತ್ತಲೇ ಇದ್ದಾರೆ. ಇಂದು ಮೊಹರಂ ಒಂಬತ್ತನೆಯ ದಿನವಾದ್ದರಿಂದ ಸಾವಿರಾರು ಭಕ್ತರು ಆಗಮಿಸುತ್ತಲೇ ಇದ್ದಾರೆ. ರಾಜ್ಯದ ವಿವಿಧೆಡೆಯಿಂದ ಬಂದ ಭಕ್ತರು ದೀರ್ಘದಂಡ ನಮಸ್ಕಾರ ಹಾಕಿ ಹರಕೆ ಸಲ್ಲಿಸುತ್ತಿದ್ದಾರೆ. ಕೋವಿಡ್ ಭೀತಿಯನ್ನ ಮರೆತು ಭಕ್ತರು ತ್ಯಾಗಬಲಿದಾನದ ಸಂಕೇತವಾದ ಮೊಹರಂನ್ನ ಆಚರಿಸುತ್ತಿದ್ದಾರೆ. ಪ್ರತಿ ವರ್ಷ ಮುದಗಲ್ ಮೊಹರಂಗೆ ದಕ್ಷಿಣ ಭಾರತದ ಹಲವು ಕಡೆಯಿಂದ …

Read More »

ಬೆಂಗ್ಳೂರಿಂದ ಸೊಲ್ಲಾಪುರಕ್ಕೆ ಇಂದಿನಿಂದ ರೋ ರೋ ರೈಲು

ಬೆಂಗಳೂರು : ನೈಋುತ್ಯ ರೈಲ್ವೆಯು ಬೆಂಗಳೂರು ಸಮೀಪದ ನೆಲಮಂಗಲದಿಂದ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಬಾಳೆಗೆ ಆರಂಭಿಸಿರುವ ‘ರೋಲ್‌ ಆನ್‌ ರೋಲ್‌ ಆಫ್‌’ (ರೋ ರೋ) ಎಂಬ ಸರಕು ತುಂಬಿದ ಟ್ರಕ್‌ ಅಥವಾ ಲಾರಿಗಳ ಸಾಗಣೆಯ ರೈಲು ಸೇವೆಯ ಪ್ರಾಯೋಗಿಕ ಸಂಚಾರಕ್ಕೆ ಇಂದು(ಭಾನುವಾರ) ಚಾಲನೆ ನೀಡಲಾಗುತ್ತಿದೆ. ಈ ಮೂಲಕ ನೈಋುತ್ಯ ರೈಲ್ವೆ ವಲಯ ಪ್ರಥಮ ಬಾರಿಗೆ ಈ ಸೇವೆ ಆರಂಭಿಸುತ್ತಿದೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಬೆಳಗ್ಗೆ 9.15ಕ್ಕೆ ವೀಡಿಯೋ ಲಿಂಕ್‌ ಮೂಲಕ …

Read More »

ವ್ಹೀಲಿಂಗ್ ಮಾಡಿ, ವಿಡಿಯೋಗಳನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಾಕುತ್ತಿದ್ದ ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಬೆಂಗಳೂರು: ವ್ಹೀಲಿಂಗ್ ಮಾಡಿ, ವಿಡಿಯೋಗಳನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಾಕುತ್ತಿದ್ದ ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಹಗಲು, ರಾತ್ರಿ ಎನ್ನದೆ ವ್ಹೀಲಿಂಗ್ ಮಾಡುತ್ತಿದ್ದ ಆರೋಪಿಯನ್ನು ಹೆಬ್ಬಾಳ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮತ್ತಿಕೆರೆ ನಿವಾಸಿ ಶೇಖ್ ಸಮೀರ್ ಬಂಧಿತ ಆರೋಪಿ, ಕೊಡಿಗೇಹಳ್ಳಿ ಜಂಕ್ಷನ್ ಹತ್ತಿರ ವ್ಹೀಲಿಂಗ್ ಮಾಡುತ್ತಿದ್ದಾಗ ಆರೋಪಿಯನ್ನು ಬಂಧಿಸಲಾಗಿದೆ. ಘಟನೆ ಸಂಬಂಧ ಹೆಬ್ಬಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಹೆಬ್ಬಾಳ ಸಂಚಾರಿ ಠಾಣಾ ಇನ್ಸ್‍ಪೆಕ್ಟರ್ ಫೈರೋಜ್ ನೇತೃತ್ವದ ತಂಡ ಆರೋಪಿಯನ್ನು …

Read More »

ಕೋಲಾರದ ಚಿನ್ನದ ಗಣಿಯಲ್ಲಿ ಇಂಡಸ್ಟ್ರಿಯಲ್ ಪಾರ್ಕ್ ಸ್ಥಾಪಿಸಲು ನಿರ್ಧಾರ; ಸಚಿವ ಜಗದೀಶ್ ಶೆಟ್ಟರ್ ಮಾಹಿತಿ

ಕೋಲಾರ  : ಕೋಲಾರ ಜಿಲ್ಲೆಯ ಕೆಜಿಎಫ್​ನ ಬಿಜಿಎಂಎಲ್​ನ ಕೋಲಾರ ಗೋಲ್ಡ್ ಫೀಲ್ಡ್ಸ್ ಒಡೆತನದ ಬಳಕೆಯಾಗದ ಪ್ರದೇಶದಲ್ಲಿ ಕೈಗಾರಿಕಾ ಪ್ರದೇಶವನ್ನು ಸ್ಥಾಪಿಸಲು ಮುಂದಾಗಿದೆ. ಚಿನ್ನದ ಗಣಿಯು 12 ಸಾವಿರ ಎಕರೆ ವಿಶಾಲವಾದ ಪ್ರದೇಶದಲ್ಲಿದ್ದು, ಇಲ್ಲಿ ಇದುವರೆಗೂ ಬಳಸದ 3,200 ಎಕರೆ ಜಾಗದಲ್ಲಿ ಇಂಡಸ್ಟ್ರಿಯಲ್ ಪಾರ್ಕ್ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಆದರೆ, ಈ ಸ್ಥಳ ಕೇಂದ್ರ ಸರ್ಕಾರದ ಸ್ವಾಮ್ಯದಲ್ಲಿ ಇರುವುದರಿಂದ ಕೇಂದ್ರದ ಸಮ್ಮತಿ ಅತ್ಯಗತ್ಯವಾಗಿದೆ. ಶನಿವಾರ ಬೃಹತ್ ಕೈಗಾರಿಕಾ ಸಚಿವ ಜಗದೀಶ್ …

Read More »

ಮಳೆಯನ್ನ ಲೆಕ್ಕಿಸದೇ ಕೆಲಸ ನಿರ್ವಹಿಸಿದ ಟ್ರಾಫಿಕ್ ಪೊಲೀಸ್

ಹುಬ್ಬಳ್ಳಿ: ಮಳೆಯನ್ನ ಲೆಕ್ಕಿಸದೇ ಕೆಲಸ ನಿರ್ವಹಿಸಿದ ಟ್ರಾಫಿಕ್ ಪೊಲೀಸ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.ಶಂಬು ರೆಡ್ಡಿ ಮಳೆಯ ನಡುವೆ ಕರ್ತವ್ಯ ಪಾಲನೆ ಮಾಡಿದ ಟ್ರಾಫಿಕ್ ಪೊಲೀಸ್. ಹುಬ್ಬಳ್ಳಿ ನಗರದ ಚಿಟಗುಪ್ಪಿ ಆಸ್ಪತ್ರೆಯ ಸರ್ಕಲ್ ನಲ್ಲಿ ಕಾರ್ ಮತ್ತು ಟಿಪ್ಪರ್ ನಡುವೆ ಅಪಘಾತ ಉಂಟಾಗಿದ್ದರಿಂದ ಸ್ಥಳದಲ್ಲಿ ಟ್ರಾಫಿಕ್ ಆಗಿತ್ತು. ಜೋರು ಮಳೆ ಸುರಿಯುತ್ತಿದ್ದರೂ ಶಂಬು ರೆಡ್ಡಿ ಟ್ರಾಫಿಕ್ ಕ್ಲಿಯರ್ ಮಾಡುವ ಮೂಲಕ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ.  

Read More »

ಅಂಗನವಾಡಿ- ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 13 ಅಂಗನವಾಡಿ ಕಾರ್ಯಕರ್ತೆ ಹಾಗೂ 50 ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಹತೆ, ವಯೋಮಿತಿಯನ್ನು ಹೊಂದಿರುವ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕಡೆ ದಿನ 05.09.2020 ಆಗಿದ್ದು, ಹೆಚ್ಚಿನ ಮಾಹಿತಿಗೆ anganwadirecruit.kar.nic.inಗೆ ಸಂಪರ್ಕಿಸಬಹುದು.  

Read More »