ಚಿಕ್ಕಮಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಆರೋಪದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ಪೊಲೀಸರು ಬಂಧಿಸಿದ್ದು, ಕೋರ್ಟ್ಗೆ ಹಾಜರುಪಡಿಸಿದ್ದಾರೆ. ಈ ಮಧ್ಯೆ ಬಂಧನ ಅವರ ತವರು ಜಿಲ್ಲೆ ಚಿಕ್ಕಮಗಳೂರಿನಲ್ಲಿಂದು ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಿನ್ನೆ ಸಂಜೆಯಿಂದಲೂ ಪ್ರತಿಭಟನೆಯ ಕಾವು ಜೋರಾಗಿದ್ದು, ಇಂದು ಚಿಕ್ಕಮಗಳೂರು ನಗರ ಸಂಪೂರ್ಣ ಬಂದ್ ಮಾಡಲಾಗಿದೆ. ನಿನ್ನೆ ರಾತ್ರಿ ಚಿಕ್ಕಮಗಳೂರು ನಗರದಲ್ಲಿ …
Read More »ಸಿ.ಟಿ.ರವಿ ಬಂಧನ ಖಂಡಿಸಿ ಬಿಜೆಪಿ ನಾಯಕರ ಪ್ರತಿಭಟನೆ
ಬೆಂಗಳೂರು: ವಿಧಾನಪರಿಷತ್ ಕಲಾಪದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಸಿ ನಿಂದಿಸಿದ ಆರೋಪದಡಿ ಬಿಜೆಪಿ ನಾಯಕ ಸಿ.ಟಿ. ರವಿ ಅವರ ಬಂಧನ ಖಂಡಿಸಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು. ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ಭೈರತಿ ಬಸವರಾಜ್, ಅಶ್ವತ್ಥನಾರಾಯಣ, ಹರೀಶ್ ಪೂಂಜಾ, ಧೀರಜ್ ಮುನಿರಾಜ್, ಮಾಜಿ ಉಪ ಮೇಯರ್ ಹರೀಶ್ ಸೇರಿದಂತೆ ಹಲವು ಬಿಜೆಪಿ ಶಾಸಕರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಈ …
Read More »ಸದನದಲ್ಲಿ ಅವಾಚ್ಯ ಪದ ಬಳಕೆ ವಿಚಾರ ಯಾರೂ ಖಂಡಿಸದೇ ಇರುವುದು ನೆನೆದು ಗದ್ಗದಿತರಾದ ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ: ನಿನ್ನೆ ವಿಧಾನಪರಿಷತ್ನಲ್ಲಿ ನಡೆದ ಘಟನೆ ಸಂಬಂಧ ಇಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗೋಷ್ಠಿ ನಡೆಸಿದರು. ಸದನದಲ್ಲಿ ಈ ವಿಚಾರ ಯಾರೂ ಖಂಡಿಸದೇ ಇರುವುದನ್ನು ನೆನೆದು ಗದ್ಗದಿತರಾದರು. ಬಿಜೆಪಿ ಸದಸ್ಯ ಸಿ.ಟಿ. ರವಿ ಅಶ್ಲೀಲ ಪದ ಪ್ರಯೋಗದ ಹಿನ್ನೆಲೆ ಇಂದು ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಲಕ್ಷ್ಮಿ ಹೆಬ್ಬಾಳ್ಕರ್ ಅವರು, “ಡಾ.ಬಿ. ಆರ್. ಅಂಬೇಡ್ಕರ್ ಅವರಿಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ನಾವು ಸದನದಲ್ಲಿ ಪ್ರತಿಭಟನೆ ಮಾಡುತ್ತಿದ್ದೆವು. ಧರಣಿ ಮಾಡಿ ಮುಗಿದು ನಾವು …
Read More »ಸಿ.ಟಿ. ರವಿ ಬೆಳಗಾವಿಯ ಜೆಎಂಎಫ್ಸಿ ನ್ಯಾಯಾಲಯದ ಮುಂದೆ ಹಾಜರ
ಬೆಳಗಾವಿ: ಬೆಳಗಾವಿಯ 5ನೇ ಹೆಚ್ಚುವರಿ ಜೆಎಂಎಫ್ಸಿ ನ್ಯಾಯಾಲಯದ ಮುಂದೆ ಹಾಜರಾದ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ, “ನನ್ನನ್ನು ಯಾವ ಕಾರಣಕ್ಕೆ ಬಂಧಿಸಿದ್ದಾರೆ ಅಂತಾ ತಿಳಿಸಿಲ್ಲ. ಇದುವರೆಗೆ ನನ್ನ ಪ್ರಶ್ನೆಗೆ ಯಾರೂ ಉತ್ತರಿಸಿಲ್ಲ” ಎಂದು ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದರು. ವಿಚಾರಣೆ ನಡೆಸಿರುವ ನ್ಯಾಯಾಲಯ ಮಧ್ಯಾಹ್ನಕ್ಕೆ ತೀರ್ಪು ಕಾಯ್ದಿರಿಸಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಸಿ ನಿಂದಿಸಿದ ಆರೋಪದ ಮೇಲೆ ಬಂಧಿತರಾದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಶುಕ್ರವಾರ …
Read More »ಅವಾಚ್ಯ ಪದ ಬಳಕೆ ಮಾಡಿದ ಯಾವುದೇ ರೆಕಾರ್ಡ್ ಲಭ್ಯವಾಗಿಲ್ಲ: ಸಭಾಪತಿ ಹೊರಟ್ಟಿ
ಹುಬ್ಬಳ್ಳಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಅವರು ಮಾತನಾಡಿದ್ದಾರೆ ಎನ್ನಲಾದ ಯಾವುದೇ ಅವಾಚ್ಯ ಪದ ಬಳಕೆ ರೆಕಾರ್ಡ್ ಇಲ್ಲ. ಆದರೆ, ಆಕ್ಷೇಪಾರ್ಹ ಪದ ಬಳಸಿದ್ದಾರೆಂದು ನಾಲ್ವರು ಸಾಕ್ಷಿ ಹೇಳಿದ್ದಾರೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು. ನಗರದಲ್ಲಿಂದು ತಮ್ಮ ನಿವಾಸದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಆಡಿಯೋ ರೆಕಾರ್ಡ್ ಆಗಿಲ್ಲ. ಸಾಕ್ಷಿಗಳು ಮಾತ್ರ ಇವೆ. ರೆಕಾರ್ಡ್ …
Read More »ಪ್ರಜಾತಂತ್ರ ವ್ಯವಸ್ಥೆಯಲ್ಲಿ ರಾಜ್ಯದ ಶಾಸಕರಿಗೆ ರಕ್ಷಣೆ ಇಲ್ಲ”
ಪ್ರಜಾತಂತ್ರ ವ್ಯವಸ್ಥೆಯಲ್ಲಿ ರಾಜ್ಯದ ಶಾಸಕರಿಗೆ ರಕ್ಷಣೆ ಇಲ್ಲ” ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಜನ ಹಿತ ಸಂಪೂರ್ಣ ಮರೆತು ತನ್ನ ದರ್ಪದ ಆಡಳಿತ ನಡೆಸುತ್ತಿದೆ. ಹೆಜ್ಜೆ ಹೆಜ್ಜೆಗೂ ದ್ವೇಷದ ರಾಜಕಾರಣ ತನ್ನ ಆಡಳಿತದಲ್ಲಿ ಅಳವಡಿಸಿಕೊಂಡಿದೆ. ಕಳೆದ 18 ತಿಂಗಳ ಆಡಳಿತ ಅವಧಿಯಲ್ಲಿ ನಡೆದಿರುವ ಅಪಾರ ಭ್ರಷ್ಟಾಚಾರ ಜೊತೆಗೆ ಸ್ವತಃ ಮುಖ್ಯಮಂತ್ರಿಗಳು ಮೂಡಾ ಹಗರಣದಲ್ಲಿ ಸಿಲುಕಿ ನನ್ನದೇನು ತಪ್ಪಿಲ್ಲ ಎಂದು ಬಂಡತನ ಪ್ರದರ್ಶಿಸುತ್ತಾ ಅದರಿಂದ ಆಚೆ ಬರಲು …
Read More »ಲಾರಿ ಹಿಂಬದಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು
ರಾಯಚೂರು: ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದುಗಲ್ ಹೊರವಲಯದ ಜನತಾ ಕಾಲೋನಿ ಬಳಿ ಇಂದು ಸಂಭವಿಸಿದೆ. ಉಮಲೂಟಿ ಗ್ರಾಮದ ಕನಕಪ್ಪ ಮತ್ತು ಕುಷ್ಟಗಿ ತಾಲೂಕಿನ ವಿಠ್ಠಲಾಪುರದ ಜಗದೀಶ್ ಮೃತ ದುರ್ದೈವಿಗಳು. ಮುದುಗಲ್ ಕಡೆಯಿಂದ ತಾವರಗೆರೆ ಕಡೆ ರಸ್ತೆ ಮಾರ್ಗವಾಗಿ ತೆರಳುವ ವೇಳೆ ಈ ದುರ್ಘಟನೆ ಜರುಗಿದೆ. ಮುದುಗಲ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಜನತಾ ಕಾಲೋನಿ ಬಳಿ ಸಂಭವಿಸಿದ ರಸ್ತೆ …
Read More »ಮಲ್ಪೆ ಬೀಚ್ನಲ್ಲಿ ಜನವೋ ಜನ
ಉಡುಪಿ: ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ಇತ್ತೀಚೆಗೆ ನಾಲ್ವರು ವಿದ್ಯಾರ್ಥಿನಿಯರು ಬಲಿಯಾದ ಬಳಿಕ ಬೀಚ್ಗೆ ಪ್ರವೇಶ ನಿರ್ಬಂಧಿಸಲಾಗಿದೆ. ಹಾಗಾಗಿ ಶಾಲಾ ಪ್ರವಾಸಕ್ಕೆಂದು ಬರುವವರು ಮಲ್ಪೆ ಬೀಚ್ ಅನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಬೀಚ್ನಲ್ಲಿ ಆಟ ಆಡುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ನೀರಿಗಿಳಿಯುವ ಮಕ್ಕಳನ್ನು ತಡೆಯುವುದೇ ಒಂದು ಸವಾಲಾಗಿದೆ. ಮಲ್ಪೆ ಬೀಚ್ನಲ್ಲಿ ಶಾಲಾ ಮಕ್ಕಳ ಮೇಲೆ ಶಿಕ್ಷಕರು ನಿಗಾ ವಹಿಸುವ ಜೊತೆಗೆ ಜಿಲ್ಲಾಡಳಿತ ಮತ್ತಷ್ಟು ಎಚ್ಚರ ವಹಿಸಬೇಕಿದೆ. ಮಾತು ಕೇಳದ ವಿದ್ಯಾರ್ಥಿಗಳು, ಪ್ರವಾಸಿಗರು: “ಸಮುದ್ರ ಅಲೆಗಳನ್ನು …
Read More »ಬೆಳಗಾವಿಯ ಅಧಿವೇಶನಕ್ಕೆ ಇಂದು ತೆರೆ ಬಿತ್ತು. ಸುಮಾರು 64 ಗಂಟೆ ಕಲಾಪ ನಡೆಸಲಾಯಿತು ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು.
ಬೆಳಗಾವಿ: ಎಂಟು ದಿನಗಳ ಕಾಲ ನಡೆದ ಬೆಳಗಾವಿ ಅಧಿವೇಶನದಲ್ಲಿ ಸುಮಾರು 64 ಗಂಟೆಗಳ ಕಾಲ ಕಾರ್ಯಕಲಾಪ ನಡೆಸಲಾಯಿತು ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ. ಅಧಿವೇಶನದಲ್ಲಿ ಧನವಿನಿಯೋಗ ವಿಧೇಯಕವೂ ಸೇರಿದಂತೆ ಒಟ್ಟು 16 ವಿಧೇಯಕಗಳನ್ನು ಮಂಡಿಸಿ, ಪರ್ಯಾಲೋಚಿಸಿ ಅಂಗೀಕರಿಸಲಾಗಿದೆ. 2024ನೇ ಸಾಲಿನ ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣೆ) (ತಿದ್ದುಪಡಿ) ವಿಧೇಯಕ ಮತ್ತು 2024ನೇ ಸಾಲಿನ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ವಿಧೇಯಕಗಳನ್ನು ಹಿಂಪಡೆಯಲಾಗಿದೆ ಎಂದರು. ಭಾರತದ ಲೆಕ್ಕನಿಯಂತ್ರಕರು ಮತ್ತು …
Read More »ಬಿಜೆಪಿ ಮತ್ತು ಅವರ ನಾಯಕರಿಗೆ ಮಾನ, ಮರ್ಯಾದೆ ಇಲ್ಲ. ಬಿಜೆಪಿಯಿಂದ ಇಡೀ ದೇಶಕ್ಕೆ ಅವಮಾನ”
ಬೆಳಗಾವಿ: “ಬಿಜೆಪಿ ಮತ್ತು ಅವರ ನಾಯಕರಿಗೆ ಮಾನ, ಮರ್ಯಾದೆ ಇಲ್ಲ. ಬಿಜೆಪಿಯಿಂದ ಇಡೀ ದೇಶಕ್ಕೆ ಅವಮಾನ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ ವಾಗ್ದಾಳಿ ನಡೆಸಿದರು. ಸುವರ್ಣ ವಿಧಾನಸೌಧದಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನು ಅವರು ಕಟುವಾದ ಪದಗಳಲ್ಲಿ ಟೀಕಿಸಿದರು. “ಬಿಜೆಪಿ ನಾಯಕರು ಸದನದಲ್ಲಿ ನಡೆದುಕೊಂಡ ರೀತಿಗೆ ನಾಚಿಕೆಯಾಗಬೇಕು. ಯಾವಾಗಲೂ ಧರ್ಮ, ಸಂಸ್ಕೃತಿ ಬಗ್ಗೆ ಮಾತನಾಡುವ …
Read More »