ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿದ್ದು, ಇಂದು ಕೂಡ ಮೋಡ ಕವಿದ ವಾತಾವರಣ ಇರಲಿದೆ. ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಕವಿದ ವಾತಾವರಣ ಮುಂದುವರಿದಿದ್ದು, ಮಳೆಯಾಗುವ ಸಾಧ್ಯತೆ ಇದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ …
Read More »ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣ ಹೊಸ ತಿರುವು
ಮುಂಬೈ: 34 ವರ್ಷದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇದೀಗ ಸುಶಾಂತ್ ಮಾಜಿ ಗೆಳತಿ ನಟಿ ಅಂಕಿತಾ ಲೋಖಂಡೆ, ನನ್ನನ್ನು ಯಾರೂ ಖರೀದಿಸಲು ಸಾಧ್ಯವಿಲ್ಲ ಎಂದು ಇನ್‍ಸ್ಟಾಗ್ರಾಂನಲ್ಲಿ ಫೋಟೋ ಪೋಸ್ಟ್ ಮಾಡಿಕೊಂಡಿದ್ದಾರೆ. ಸುಶಾಂತ್ ನಿಧನದ ಒಂದು ತಿಂಗಳ ಬಳಿಕ ಅಂಕಿತಾ ತಮ್ಮ ಅಭಿಪ್ರಾಯಗಳನ್ನು ಮಾಧ್ಯಮಗಳ ಮುಂದೆ ಹಂಚಿಕೊಳ್ಳುತ್ತಿದ್ದಾರೆ. ಸುಶಾಂತ್ ಜೊತೆಗಿನ ಸ್ನೇಹ, ಒಡನಾಟ, ನಿಗೂಢ ಸಾವಿನ ಬಗ್ಗೆ ಹಲವು ವಿಷಯಗಳನ್ನು ಅಂಕಿತಾ ಶೇರ್ …
Read More »ದುರ್ಗಾಪರಮೇಶ್ವರಿಗೆ ನದಿ ನೀರ ಅಭಿಷೇಕ- ಕಮಲಶಿಲೆ ದೇಗುಲದೊಳಕ್ಕೆ ಹರಿದ ಕುಬ್ಜಾ ನದಿ
ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕು ಕಮಲಶಿಲೆಯ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕುಬ್ಜಾ ನದಿಯ ನೀರು ಹರಿದಿದೆ. ಕುಬ್ಜಾ ನದಿ ತೀರದಲ್ಲಿರುವ ಈ ಕ್ಷೇತ್ರದಲ್ಲಿ ವರ್ಷಕ್ಕೊಮ್ಮೆ ಕುಬ್ಜೆ ದುರ್ಗಾ ದೇವಿಯ ಪಾದ ತೊಳೆಯಲು ಗರ್ಭಗುಡಿಗೆ ಬರುತ್ತಾಳೆ ಎಂಬ ನಂಬಿಕೆ ಇದೆ. ಈ ಬಾರಿಯೂ ಸಂಪ್ರದಾಯ ಮುಂದುವರಿದಿದೆ. ಈ ರೀತಿ ಪ್ರವಾಹದ ನೀರು ಉಕ್ಕಿ ಗರ್ಭಗುಡಿಗೆ ಪ್ರವೇಶ ಮಾಡಿದಾಗ ದೇವರಿಗೆ ವಿಶೇಷ ಮಂಗಳಾರತಿ ನಡೆಯುತ್ತದೆ. ಪ್ರತಿವರ್ಷ ಈ ರೀತಿ ನದಿಯ ನೀರು ಗರ್ಭಗುಡಿ …
Read More »ಚೀನಾ ಪ್ರಾಯೋಜಕತ್ವಕ್ಕೆ ಐಪಿಎಲ್‍ನಿಂದ ಗೇಟ್ ಪಾಸ್ ಸಾಧ್ಯತೆ
ನವದೆಹಲಿ: ಈ ಬಾರಿಯ ಐಪಿಎಲ್-13ರಿಂದ ಚೀನಾ ಪ್ರಾಯೋಜಕತ್ವಕ್ಕೆ ಗೇಟ್ ಪಾಸ್ ನೀಡಲು ಬಿಸಿಸಿಐ ನಿರ್ಧರಿಸಿದ್ದು, ಈ ಕುರಿತು ಆಗಸ್ಟ್ 6ರಂದು ಅಧಿಕೃತ ಪ್ರಕಟನೆ ಹೊರಡಿಸುವ ಸಾಧ್ಯತೆಗಳಿವೆ. ಐಪಿಎಲ್ ಲೀಗ್ 19ನೇ ಆವೃತ್ತಿಯ ಪಂದ್ಯಗಳು ಸೆಪ್ಟೆಂಬರ್ 19ರಿಂದ ಆರಂಭಗೊಳ್ಳಲಿವೆ. ಚೀನಾದ ವಿವೋ ಸ್ಮಾರ್ಟ್ ಕಂಪನಿ ಐಪಿಎಲ್-13ರ ಪ್ರಾಯೋಜಕತ್ವ ಹೊಂದಿರೋದಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆ ಎಚ್ಚೆತ್ತಿರುವ ಪ್ರಾಯೋಜಕತ್ವದ ಚೀನಾದ ವಿವೋ ಕಂಪನಿಯನ್ನು ಕೈ ಬಿಡಲು ತೀರ್ಮಾನಿಸಿದೆ ಎಂದು …
Read More »366 ಸ್ತಂಭಗಳ ಆಧಾರ, 24 ಅಮೃತಶಿಲೆಯ ಬಾಗಿಲುಗಳು – ವಿಶ್ವದ ಮೂರನೇ ಅತೀದೊಡ್ಡ ಹಿಂದೂ ದೇಗುಲ
ಲಕ್ನೋ: ಇಂದು ದೇಶದ ರಾಜಕೀಯ, ಸಾಮಾಜಿಕ ಚರಿತ್ರೆಯಲ್ಲಿ ಒಂದು ಅಪೂರ್ವ ದಿನ. ಶತಮಾನಗಳ ಕನಸು ನನಸಾಗುವ ಸಂದರ್ಭ ಬಂದಿದೆ. ಸರಿಯಾಗಿ ವರ್ಷದ ಹಿಂದೆ ಜಮ್ಮು ಕಾಶ್ಮೀರದಲ್ಲಿ 370ನೇ ಆರ್ಟಿಕಲ್ ರದ್ದು ಮಾಡಿದಾಗ ಅದನ್ನು ಐತಿಹಾಸಿಕ ಘಟ್ಟ ಎಂದು ಬಣ್ಣಿಸಲಾಗಿತ್ತು. ಇದು ದಶಕಗಳ ವಿವಾದವಷ್ಟೇ ಆಗಿತ್ತು. ಆದರೆ ಭರತ ಖಂಡದ ಅಸ್ತಿತ್ವದ ಚಿನ್ಹೆಯಾದ ರಾಮಜನ್ಮ ಭೂಮಿಯಲ್ಲಿ ಒಂದು ಮಸೀದಿ ನಿರ್ಮಾಣ ಆಗಿ ಶತಮಾನಗಳು ಕಳೆದು ಹೋಗಿದ್ವು. ಪುರಾತತ್ವ ಇಲಾಖೆಯಲ್ಲಿ ಮಾತ್ರವಲ್ಲ, ಮೊಗಲ್ …
Read More »ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸುತ್ತಮುತ್ತ ಭಾರೀ ಮಳೆ
ಶಿವಮೊಗ್ಗ/ಮಡಿಕೇರಿ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸುತ್ತಮುತ್ತ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಭಾರೀ ಗಾಳಿ ಮಳೆಗೆ ಬೃಹತ್ ಗಾತ್ರದ ಮರವೊಂದು ಮನೆಯ ಮೇಲೆ ಬಿದ್ದ ಪರಿಣಾಮ ಮನೆ ಜಖಂಗೊಂಡಿರುವ ಘಟನೆ ನಗರ ಹೋಬಳಿಯ ಮಾಸ್ತಿಕಟ್ಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಇಂದ್ರಮನೆಯಲ್ಲಿ ನಡೆದಿದೆ. ಘಟನೆಯಲ್ಲಿ ಮನೆಯಲ್ಲಿದ್ದ ಮಗು ಹಾಗೂ ನಾಲ್ವರು ಅಪಾಯದಿಂದ ಪಾರಾಗಿದ್ದು, ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ. ಗಾಯಾಳು ಮಹಿಳೆಯರಿಗೆ ಮಾಸ್ತಿಕಟ್ಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಗಾಳಿ …
Read More »ಬೆರೂತ್ ನಲ್ಲಿ ಭಯಾನಕ ಸ್ಫೋಟ……….
ಬೆರೂತ್: ಲೆಬನಾನ್ ರಾಜಧಾನಿ ಬೆರೂತ್ ನಲ್ಲಿ ಭಯಾನಕ ಸ್ಫೋಟವಾಗಿದ್ದು, ಜನತೆ ಬೆಚ್ಚಿ ಬಿದ್ದಿದ್ದಾರೆ. ಸ್ಫೋಟಕ್ಕೂ ಮೊದಲು ಶ್ವೇತ ಬಣ್ಣದ ಬಲೂನ್ ರೀತಿಯಲ್ಲಿ ದೊಡ್ಡ ಗುಳ್ಳೆ ಕಾಣಿಸಿಕೊಂಡ ಕ್ಷಣ ಗಳಿಗೆಯಲ್ಲಿ ಸ್ಫೋಟವಾಗಿದೆ. ಸ್ಫೋಟದ ಬಳಿಕ ಬೆರೂತ್ ನಲ್ಲಿ ಹೊಗೆ ಆವರಿಸಿದೆ. ಸ್ಫೋಟಗೊಂಡ ಸ್ಥಳದಲ್ಲಿನ ಬಹುತೇಕ ಮನೆಗಳು ಹಾನಿಗೊಳಗಾಗಿವೆ ಎಂದು ವರದಿಯಾಗಿದ್ದು, ಸ್ಥಳೀಯ ನಿವಾಸಿಗಳು ತಮ್ಮ ಮನೆಯ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.15 ನಿಮಿಷದೊಳಗೆ ಬಂದರು ಮತ್ತು ಬೆರೂತ್ ನಗರದೊಳಗೆ ಸ್ಫೋಟಕ ವಸ್ತು …
Read More »ದೃಷ್ಟಿ ಸಮಸ್ಯೆಯುಳ್ಳ ಮೇಘನಾ, ಬಾಲನಟಿ ಕೀರ್ತನಾ ಯುಪಿಎಸ್ಸಿ ಪರೀಕ್ಷೆ ಪಾಸ್; ಡಾ.ರಾಜ್ಕುಮಾರ್ ಅಕಾಡೆಮಿಯಿಂದ 19 ಮಂದಿ ತೇರ್ಗಡೆ
ಬೆಂಗಳೂರು; ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ದೇಶದ ಅತ್ಯುನ್ನತ ನಾಗರಿಕ ಸೇವೆಗಳ ನೇಮಕಕ್ಕೆ ನಡೆಸಿದ 2019ನೇ ಸಾಲಿನ ಪರೀಕ್ಷೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಈ ಪರೀಕ್ಷೆಯಲ್ಲಿ ಕರ್ನಾಟಕದಿಂದ ಒಟ್ಟು 37 ಮಂದಿ ತೇರ್ಗಡೆಯಾಗಿದ್ದಾರೆ. ವಿಶೇಷ ಅಂದರೆ ಈ 37 ಮಂದಿಯಲ್ಲಿ 19 ಮಂದಿ ಡಾ.ರಾಜ್ಕುಮಾರ್ ಸಿವಿಲ್ ಸರ್ವಿಸ್ ಅಕಾಡೆಮಿಯಲ್ಲಿ ತರಬೇತಿ ಇನ್ನು ವಿಶೇಷ ಅಂದರೆ ಇದೇ ಅಕಾಡೆಮಿಯಿಂದ ತೇರ್ಗಡೆಯಾದ ಯುಪಿಎಸ್ಸಿ ಪರೀಕ್ಷೆಯಲ್ಲಿ 465ನೇ ರ್ಯಾಂಕ್ ಪಡೆದಿರುವ ಮೇಘನಾ ಎಂಬುವವರಿಗೆ ಪೂರ್ಣಪ್ರಮಾಣದಲ್ಲಿ ಕಣ್ಣು ಕಾಣುವುದಿಲ್ಲ. …
Read More »ರಾಮ ಮಂದಿರ ಶಿಲಾನ್ಯಾಸ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಹೈ ಅಲರ್ಟ್..!
ಬೆಂಗಳೂರು:ಅಯೋಧ್ಯೆಯಲ್ಲಿ ನಾಳೆ ಶ್ರೀರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮ ನಡೆಯುತ್ತಿರುವ ಹಿನ್ನಲೆಯಲ್ಲಿ ರಾಜ್ಯದ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಭಾರೀ ಭದ್ರತೆ ಕೈಗೊಳ್ಳಲಾಗಿದೆ. ರಾಜಧಾನಿ ಬೆಂಗಳೂರು,ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮೈಸೂರು, ಮಡಿಕೇರಿ, ಶಿವಮೊಗ್ಗ, ದಾವಣಗೆರೆ, ಬೆಳಗಾವಿ, ಹುಬ್ಬಳ್ಳಿ- ಧಾರವಾಡ, ಬಳ್ಳಾರಿ, ರಾಯಚೂರು, ಬಾಗಲಕೋಟೆ, ಕಲಬುರಗಿ, ಸೇರಿದಂತೆ ರಾಜ್ಯಾದ್ಯಂತ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜನೆ ಮಾಡಬೇಕೆಂದು ಸೂಚನೆ ನೀಡಲಾಗಿದೆ. ಈ ಸಂಬಂಧ …
Read More »ಕೊರೊನಾ ಅನಾರೋಗ್ಯದ ನಡುವೆಯೂ ಕರ್ತವ್ಯ ನಿಷ್ಠೆ ಮೆರೆದ ಸಿಎಂ ಯಡಿಯೂರಪ್ಪ – ವರ್ಕ್ ಫ್ರಮ್ ಹಾಸ್ಪಿಟಲ್
ಬೆಂಗಳೂರು: ಕೊರೊನಾ ಸೋಂಕು ತಗುಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅನಾರೋಗ್ಯದ ನಡುವೆಯೂ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ. ಇವತ್ತು ಕೆಲವು ಮಹತ್ವದ ಕಡತಗಳ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಆಸ್ಪತ್ರೆಯಿಂದಲೇ ಕೆಲಸ ನಿರ್ವಹಿಸುತ್ತಿದ್ದು ಈ ಮೂಲಕ ಕೊರೊನಾ ಸೋಂಕಿತರಾಗಿ ಚಿಕಿತ್ಸೆ ಪಡೆಯುತ್ತಿದ್ದರೂ ಕರ್ತವ್ಯನಿಷ್ಠೆ ಮೆರೆಯುವ ಮೂಲಕ ರಾಜ್ಯದ ಜನತೆಗೆ ಸಂದೇಶ ರವಾನಿಸಿದ್ದಾರೆ. ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವ ಸಿಎಂ ಸರ್ಕಾರಿ ಕಚೇರಿ ಕೆಲಸ ಕಾರ್ಯಗಳಿಗೆ ಯಾವುದೇ …
Read More »