Breaking News

ಬೆಂಗಳೂರಲ್ಲಿ ಎಸಿಪಿ-ಇನ್ಸ್‌ಪೆಕ್ಟರ್‌ ಹೆಗಲೇರಿದೆ ಕೊರೋನಾ………..

ಬೆಂಗಳೂರು,ಜು.1- ನಗರದ ಪಶ್ಚಿಮ ವಿಭಾಗದ ಒಬ್ಬರು ಎಸಿಪಿ ಮತ್ತು ಇನ್‍ಸ್ಪೆಕ್ಟರ್ ಒಬ್ಬರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.  ಎಸಿಪಿ ಮತ್ತು ಇನ್‍ಸ್ಪೆಕ್ಟರ್ ಅವರು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ರಮೇಶ್.ಬಿ ಈ ಸಂಜೆಗೆ ತಿಳಿಸಿದ್ದಾರೆ. ಇದುವರೆಗೂ ಪಶ್ಚಿಮ ವಿಭಾಗದಲ್ಲಿ 43 ಸಿಬ್ಬಂದಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇವರಲ್ಲಿ ಕೆಲವರು ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ಹಿಂದಿರುಗಿದ್ದಾರೆ.ಈಗಾಗಲೇ ಕಾನ್‍ಸ್ಟೆಬಲ್, ಹೆಡ್‍ಕಾನ್‍ಸ್ಟೆಬಲ್, ಎಎಸ್‍ಐಗಳಲ್ಲಿ ಕಾಣಿಸಿಕೊಂಡಿದ್ದ ಮಹಾಮಾರಿ ಕೊರೊನಾ ಇದೀಗ …

Read More »

ಬೆಂಗಳೂರಲ್ಲಿ ಕೊರೊನಾ ನಿಯಂತ್ರಿಸಲು ಮತ್ತೊಂದು ತಿಂಗಳು ನಿಷೇಧಾಜ್ಞೆ…….

ಬೆಂಗಳೂರು,ಜು.1-ಕೊರೊನಾ ಮಹಾಮಾರಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ನಿಷೇಧಾಜ್ಞೆಯನ್ನು ಮತ್ತೆ ಒಂದು ತಿಂಗಳ ಕಾಲ ಮುಂದುವರೆಸಲಾಗಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು, ಜೂ.26ರ ಮಧ್ಯರಾತ್ರಿ 12 ಗಂಟೆಗೆ ಅಂತ್ಯವಾಗಿರುವ ದಂಡ ಪ್ರಕ್ರಿಯೆ ಸಂಹಿತೆಯ ಕಲಂ 144/1 ನಿಷೇಧಾಜ್ಞೆಯನ್ನು ಜು.26ರ ಮಧ್ಯರಾತ್ರಿವರೆಗೂ 30 ದಿನಗಳ ಕಾಲ ಮುಂದುವರೆಸಲಾಗಿದೆ ಎಂದು ಹೇಳಿದ್ದಾರೆ.ನಿಷೇಧಾಜ್ಞೆ ವೇಳೆ ಒಳಾಂಗಣ ಕಾರ್ಯಕ್ರಮದಲ್ಲಿ 20 ಜನಕ್ಕೂ ಹೆಚ್ಚು ಜನ ಸೇರುವಂತಿಲ್ಲ. ಸಾರ್ವಜನಿಕ …

Read More »

ಅಥಣಿ ಪೊಲೀಸ್ ಠಾಣೆ ಸೀಲ್ ಡೌನ್……………..

ಅಥಣಿ:  ಮೃತ ಕೊರೊನಾ ಸೋಂಕಿತ ವ್ಯಕ್ತಿ ಕಳೆದ ಕೆಲವು ದಿನಗಳ ಹಿಂದೆ ಅಥಣಿ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದ ಎಂಬ  ಆಘಾತಕಾರಿ ಮಾಹಿತಿ ಹೊರ ಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಥಣಿ ಪೊಲೀಸ್ ಠಾಣೆ ಸೀಲ್ ಡೌನ್ ಮಾಡಲಾಗಿದೆ. ಐವರು ಪೊಲೀಸರಿಗೆ ಕ್ವಾರಂಟೈನ್ ಒಳಪಡಿಸಲಾಗಿದೆ. ಸಂಕೋನಟ್ಟಿ ಮೂಲಕ  32 ವರ್ಷದ ವ್ಯಕ್ತಿ.  ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಆತನ ಟ್ರಾವೆಲ್ ಹಿಸ್ಟರಿ ಕೆದಕಿದಾಗ ಆತ ಪೊಲೀಸ್ ಠಾಣೆಗೆ ಭೇಟಿ ನೀಡಿರುವುದು …

Read More »

ಪ್ರತಾಪಗೌಡ ಪಾಟೀಲ ಅವರನ್ನು ಚುನಾವಣೆಯಲ್ಲಿ ಆಯ್ಕೆಗೊಳಿಸುವುದಾಗಿ ಮಾತುಕೊಟ್ಟರೆ, 5- ಎ ಕಾಲುವೆ ಕಾಮಗಾರಿಯನ್ನು ಮಾಡಿಕೊಡುತ್ತೇನೆ’

ರಾಯಚೂರು: ‘ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಪ್ರತಾಪಗೌಡ ಕೂಡಾ ಕಾರಣಿಕರ್ತರು. ‘ಮಸ್ಕಿ ಕ್ಷೇತ್ರದ ರೈತರು ಪ್ರತಾಪಗೌಡ ಪಾಟೀಲ ಅವರನ್ನು ಚುನಾವಣೆಯಲ್ಲಿ ಆಯ್ಕೆಗೊಳಿಸುವುದಾಗಿ ಮಾತುಕೊಟ್ಟರೆ, 5- ಎ ಕಾಲುವೆ ಕಾಮಗಾರಿಯನ್ನು ಮಾಡಿಕೊಡುತ್ತೇನೆ’ ಎಂದು ಜಲಸಂಪನ್ಮೂಲ‌ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಜಿಲ್ಲೆಯ ಮಸ್ಕಿ ತಾಲ್ಲೂಕು ಬುದ್ದಿನ್ನಿ ಗ್ರಾಮದಲ್ಲಿ ಬುಧವಾರ ಕೃಷ್ಣಾ ಜಲಭಾಗ್ಯ ನಿಗಮ ನಿಯಮಿತದ ನಂದವಾಡಗಿ ಏತ ನೀರಾವರಿ ಯೋಜನೆಯ ಹನಿ ನೀರಾವರಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.  5-ಎ ಕಾಲುವೆಯು …

Read More »

ಲೋಕಾಯುಕ್ತ ಕಚೇರಿಗೂ ಕೊರೊನಾ ಎಂಟ್ರಿ …………

ಬೆಂಗಳೂರು,ಜು.1- ಭ್ರಷ್ಟರಿಗೆ ಸಿಂಹಸ್ವಪ್ನವಾಗಿದ್ದ ಲೋಕಾಯುಕ್ತ ಕಚೇರಿಗೂ ಕೊರೊನಾ ಎಂಟ್ರಿ ಕೊಟ್ಟಿದೆ. ವಿಕಾಸಸೌಧದ ಭದ್ರತೆಗೆ ನಿಯೋಜಿಸಿದ್ದ ಪೆÇಲೀಸ್ ಕಾನ್‍ಸ್ಟೆಬಲ್‍ಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಸೋಂಕಿತ ಕಾನ್‍ಸ್ಟೆಬಲ್ ಲೋಕಾಯುಕ್ತ ಕಚೇರಿಗೂ ಎಂಟ್ರಿ ಕೊಟ್ಟಿದ್ದ. ಹೀಗಾಗಿ ಇಡೀ ಲೋಕಾಯುಕ್ತ ಕಚೇರಿಯನ್ನು ಸ್ಯಾನಿಟೈಸರ್ ಮಾಡಲಾಗುತ್ತಿದೆ.ಕಚೇರಿ ಸಿಬ್ಬಂದಿಗೆ ಒಂದು ದಿನ ರಜೆ ಕೊಟ್ಟು ಕಳುಹಿಸಲಾಗಿದೆ. ಸೋಂಕಿತ ಕಾನ್‍ಸ್ಟೆಬಲ್ ಜೊತೆ ಸಂಪರ್ಕವಿರಿಸಿಕೊಂಡಿದ್ದ ಲೋಕಾಯುಕ್ತ ಸಿಬ್ಬಂದಿಯಲ್ಲಿ ಆತಂಕ ಎದುರಾಗಿದೆ.

Read More »

ಬೆಚ್ಚಿಬಿದ್ದ ಬೆಂಗಳೂರಿಗರು, 4197 ಮಂದಿಗೆ ಕೊರೊನಾ ಪಾಸಿಟಿವ್….!

ಬೆಂಗಳೂರು, ಜು.1- ಸಿಲಿಕಾನ್ ಸಿಟಿ ಜನರೇ ಎಚ್ಚರ..! ಮನೆ ಬಿಡುವ ಮುನ್ನ ಸ್ವಲ್ಪ ಯೋಚಿಸಿ. ಇಲ್ಲದಿದ್ದರೆ ಮಾರಿಯನ್ನು ನೀವೇ ಮನೆಗೆ ಆಹ್ವಾನಿಸಿದಂತಾಗುತ್ತದೆ. ಏಕೆಂದರೆ ಕಳೆದ ಒಂದು ತಿಂಗಳಿನಲ್ಲಿ ಬರೋಬ್ಬರಿ 4197 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜುಲೈನಲ್ಲಿ ಸೋಂಕಿತರ ಸಂಖ್ಯೆ 15 ಸಾವಿರ ದಾಟುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ನೀವು ಉದಾಸೀನವಾಗಿ ಓಡಾಡುವುದು, ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದರೆ ಕಾದಿದೆ ಗ್ರಹಚಾರ… ಕಳೆದ ಮಾರ್ಚ್‍ನಿಂದ …

Read More »

ಮಾಸ್ಕ್ ಹಾಕಲ್ಲ ಏನ್ ಮಾಡ್ತೀರಾ ಮಾಡಿ’ ಎಂದವ್ರನ್ನ ಬಸ್ಸಿನಿಂದ ಹೊರದಬ್ಬಿದ ಪ್ರಯಾಣಿಕರು

ಉಡುಪಿ: ಮಾಸ್ಕ್ ಧರಿಸದ ಇಬ್ಬರು ಪ್ರಯಾಣಿಕರನ್ನು ಜಗಳ ಮಾಡಿ ಸಹ ಪ್ರಯಾಣಿಕರು ಬಸ್ಸಿನಿಂದ ಇಳಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ-ಕುಂದಾಪುರ ಬಸ್ಸಿನಲ್ಲಿ ಈ ಘಟನೆ ನಡೆದಿದೆ. ಇಬ್ಬರು ಪ್ರಯಾಣಿಕರು ಮಾಸ್ಕ್ ಇಲ್ಲದೆ ಬಸ್ ಒಳಗೆ ಬಂದು ಕುಳಿತಿದ್ದಾರೆ. ಇದನ್ನು ಕಂಡ ಸಹ ಪ್ರಯಾಣಿಕರು ನಿರ್ವಾಹಕನಿಗೆ ಈ ಬಗ್ಗೆ ದೂರು ನೀಡಿದ್ದಾರೆ. ನಿರ್ವಾಹಕ ಹೇಳಿದರೂ ಇಬ್ಬರು ಪ್ರಯಾಣಿಕರು ಕೆಳಗಿಳಿದಿಲ್ಲ. ಈ ವೇಳೆ ಪ್ರಯಾಣಿಕರು, ಮಾಸ್ಕ್ ಹಾಕಲ್ಲ ಏನ್ ಮಾಡುತ್ತೀರಾ ಮಾಡಿ ಎಂದು …

Read More »

ಏತ ನೀರಾವರಿ ಯೋಜನೆಯ ಹನಿ ನೀರಾವರಿ ಕಾಮಗಾರಿಗಳ ಚಾಲನೆ: ರಮೇಶ ಜಾರಕಿಹೊಳಿ

ರಾಯಚೂರು: ಕೃಷ್ಣಭಾಗ್ಯ ಜಲನಿಗಮದ ನಂದವಾಡಗಿ ಏತ ನೀರಾವರಿ ಯೋಜನೆಯ ಹನಿ ನೀರಾವರಿ ಕಾಮಗಾರಿಗಳ ಚಾಲನೆಗಾಗಿ ಭೂಮಿ ಪೂಜೆ ಕಾರ್ಯಕ್ರಮವನ್ನು  ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಬುಧವಾರದಂದು ಮಸ್ಕಿ ತಾಲೂಕಿನ ಬುದ್ದಿಮೆಯಲ್ಲಿ ನೇರವೇರಿಸಿದರು. ಈ ಸಂದರ್ಭದಲ್ಲಿ ಸಂಸದ ರಾಜಾ ಅಮರೇಶ್ವರ ನಾಯಕ, ಸಂಗಣ್ಣ ಕರಡಿ, ಶಾಸಕ ರಾಜುಗೌಡ, ಡಾ.ಶಿವರಾಜ್ ಪಾಟೀಲ್, ಪ್ರತಾಪ್ ಗೌಡ ಪಾಟೀಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Read More »

ಗೋವಾದ ಬಿಜೆಪಿ ಶಾಸಕರೊಬ್ಬರಿಗೆ ಕೋವಿಡ್-19 ಸೋಂಕು ತಗಲಿದೆ

ಪಣಜಿ: ಗೋವಾದ ಬಿಜೆಪಿ ಶಾಸಕರೊಬ್ಬರಿಗೆ ಕೋವಿಡ್-19 ಸೋಂಕು ತಗಲಿದೆ ಎಂದು ರಾಜ್ಯದ ಹಿರಿಯ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಶಾಸಕರನ್ನು ಮಾರ್ಗೊವಾದಲ್ಲಿರುವ ಇಎಸ್‌ಐ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊರೋನ ವೈರಸ್ ಸೋಂಕು ತಗಲಿರುವುದು ಮಂಗಳವಾರ ನಡೆಸಲಾಗಿರುವ ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿತ್ತು. ಕಳೆದ ತಿಂಗಳು ಮಾಜಿ ಆರೋಗ್ಯ ಸಚಿವರಿಗೆ ಕೋವಿಡ್-19ರೋಗ ತಗಲಿದ್ದು, ಇಎಸ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಧಿಕೃತ ಮಾಹಿತಿಯ ಪ್ರಕಾರ, ಮಂಗಳವಾರ ತನಕ ಗೋವಾದಲ್ಲಿ 1,315   ಪ್ರಕರಣಗಳು ಪತ್ತೆಯಾಗಿದ್ದು ಮತ್ತು ಮೂರು ಸಾವುಗಳು …

Read More »

ನಾಳೆ ಪ್ರತಿಜ್ಞಾ ವಿಧಿ ಸ್ವೀಕರಿಸಲಿದ್ದಾರೆ.ಡಿ.ಕೆ. ಶಿವಕುಮಾರ್

ಬೆಂಗಳೂರು: ಮೂರು ಬಾರಿ ಮುಂದೂಡಲಾಗಿದ್ದ ಕೆಪಿಸಿಸಿ ಅಧ್ಯಕ್ಷ, ಕಾರ್ಯಾಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು,  ಅಧಿಕೃತವಾಗಿ ನಾಳೆ ಪ್ರತಿಜ್ಞಾ ವಿಧಿ ಸ್ವೀಕರಿಸಲಿದ್ದಾರೆ. ವಿನೂತನ ಕಾರ್ಯಕ್ರಮಕ್ಕೆ ಕೆಪಿಸಿಸಿ ಹೊಸ ಕಚೇರಿಯಲ್ಲಿ ಸಕಲ ಸಿದ್ಧತೆ ನಡೆದಿದೆ. ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕಾರ ಮಾಡುವ ಸಮಾರಂಭ ರಾಜ್ಯದ 7,800 ಗ್ರಾಮ ಪಂಚಾಯ್ತಿಗಳಲ್ಲಿ ನೇರಪ್ರಸಾರವಾಗಲಿದೆ. ನೇರ ಪ್ರಸಾರಕ್ಕೆ ಕಾಂಗ್ರೆಸ್ ಮುಖಂಡರು ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಕೊರೊನಾದಿಂದಾಗಿ ಕಾರ್ಯಕ್ರಮ ಸರಳವಾಗಿ ನಡೆಯಲಿದೆ. ಕೆಪಿಸಿಸಿ ಕಚೇರಿಯಲ್ಲಿ …

Read More »