Breaking News

ರೈಲಿನಲ್ಲಿ ಮಹಿಳೆಯ ಅರೆಬೆತ್ತಲೆ ಶವ ಪತ್ತೆ – ಅತ್ಯಾಚಾರ ಎಸಗಿ ಕೊಲೆ ಶಂಕೆ

ಧಾರವಾಡ: ಸೋಲ್ಲಾಪುರದಿಂದ ಧಾರವಾಡಕ್ಕೆ  ಬಂದಿದ್ದ ರೈಲಿನಲ್ಲಿ ಅರೆಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಕಳೆದ ರಾತ್ರಿ ಮಹಾರಾಷ್ಟ್ರದ ಸೊಲ್ಲಾಪೂರದಿಂದ ಹೊರಟಿದ್ದ ರೈಲು ಬೆಳಗ್ಗೆ ಧಾರವಾಡ ತಲುಪಿತ್ತು. ಈ ರೈಲಿನಲ್ಲಿ ರಾತ್ರಿ ಸಮಯದಲ್ಲಿ ಮಹಿಳೆಯ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬೆಳಗ್ಗೆ ರೈಲ್ವೆ ಸಿಬ್ಬಂದಿ ಬೋಗಿ ಸ್ವಚ್ಛ ಮಾಡಲು ಬಂದಾಗ ಶವ ಸಿಬ್ಬಂದಿ ಕಣ್ಣಿಗೆ ಬಿದ್ದಿದೆ. ಬಳಿಕ ಸಿಬ್ಬಂದಿ ರೇಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತ ಮಹಿಳೆ ಯಾರು …

Read More »

ದೀರ್ಘಾವಧಿಯ ಯುರೇನಿಯಂ ಒಪ್ಪಂದಕ್ಕೆ ಭಾರತ-ಉಜ್ಬೇಕಿಸ್ತಾನ್ ಸಹಿ

ತಾಷ್ಕೆಂಟ್: ಪ್ರಧಾನಿ ನರೇಂದ್ರ ಮೋದಿ  ಅವರ ಪ್ರಮುಖ ಭೇಟಿ ಯಶಕಂಡಿದೆ. ಭಾರತ ಮತ್ತು ಉಜ್ಬೇಕಿಸ್ತಾನ್  ದೀರ್ಘಾವಧಿಯ ಯುರೇನಿಯಂ ಒಪ್ಪಂದಕ್ಕೆ ಸಹಿ ಹಾಕಿವೆ. ಭಾರತವು ವರ್ಷಗಳಲ್ಲಿ ತನ್ನ ಅತ್ಯಂತ ಪ್ರಮುಖ ಪರಮಾಣು ಇಂಧನ ವಿಜಯಗಳಲ್ಲಿ ಒಂದಾಗಬಹುದಾದದನ್ನು ಪಡೆದುಕೊಂಡಿದೆ. ಭಾರತ ಮತ್ತು ಉಜ್ಬೇಕಿಸ್ತಾನ್ ದೀರ್ಘಾವಧಿಯ ಯುರೇನಿಯಂ ಪೂರೈಕೆ ವ್ಯವಸ್ಥೆಯನ್ನು ಸ್ಥಾಪಿಸುವುದಾಗಿ ಪ್ರಧಾನಿ ಮೋದಿ ಭಾನುವಾರ ದೃಢಪಡಿಸಿದ್ದಾರೆ. ಇದು ಭಾರತದ ಪರಮಾಣು ವಿದ್ಯುತ್ ಯೋಜನೆಗಳನ್ನು ದೀರ್ಘಾವಧಿಯವರೆಗೆ ಟ್ರ್ಯಾಕ್‌ನಲ್ಲಿಡಲು ಸಹಾಯ ಮಾಡುವ ನಿರೀಕ್ಷೆಯಿದೆ. ಪ್ರಧಾನಿ ಮೋದಿ …

Read More »

ಈ ಬಾರಿಯ ಬಿಗ್‌ ಬಾಸ್ ನನಗೆ ತುಂಬಾ ವಿಶೇಷ: ಶೂಟಿಂಗ್‌ ಗುಟ್ಟು ಬಿಚ್ಚಿಟ್ಟ ಕಿಚ್ಚ ಸುದೀಪ್

ಬೆಂಗಳೂರು: ಬಹುನಿರೀಕ್ಷಿತ ಬಿಗ್ ಬಾಸ್ ಕನ್ನಡದ  ಹೊಸ ಸೀಸನ್ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿಯ ಬಿಗ್ ಬಾಸ್ ಹಲವು ಕಾರಣಗಳಿಂದ ತಮಗೆ ಬಹಳ ವಿಶೇಷ ಎಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್  ಹೇಳಿದ್ದಾರೆ. ಸೆಪ್ಟೆಂಬರ್ 6 ರಿಂದ ಬಿಗ್ ಬಾಸ್ ಶುರುವಾಗಲಿರುವ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿನಿಮಾ ಚಿತ್ರೀಕರಣ ಮತ್ತು ಬಿಗ್ ಬಾಸ್ ಶೋ ನಡುವಿನ ಸಮಯ ಹೊಂದಾಣಿಕೆಯ ಬಗ್ಗೆ ಸ್ವಾರಸ್ಯಕರ ಮಾಹಿತಿ ಹಂಚಿಕೊಂಡರು. ಹಿಂದಿನ …

Read More »

ನೇಪಾಳದಲ್ಲಿ ಭೀಕರ ಪ್ರವಾಹ; ಉತ್ತರಪ್ರದೇಶದ ಗಂಡಕ್ ನದಿಗೆ ತೇಲಿಬಂದ 7 ಶವಗಳು

ಲಕ್ನೋ: ನೇಪಾಳದಲ್ಲಿ ಭೀಕರ ಪ್ರವಾಹ ಉಂಟಾಗಿ ನದಿಯ ನೀರಿನ ಹರಿವು ತೀವ್ರವಾಗಿ ಏರಿಕೆಯಾಗಿದ್ದು, ಉತ್ತರ ಪ್ರದೇಶದ  ಮಹಾರಾಜಗಂಜ್ ಮತ್ತು ಕುಶಿನಗರ ಜಿಲ್ಲೆಗಳ ಗಂಡಕ್ (ನಾರಾಯಣಿ) ನದಿಯಿಂದ ಕನಿಷ್ಠ ಏಳು ಅಪರಿಚಿತ ಶವಗಳು ಪತ್ತೆಯಾಗಿವೆ. ಮೃತರನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಹಾರಾಜ್‌ಗಂಜ್ ಜಿಲ್ಲೆಯ ತೆಲ್ಫಾಲ್ ಪ್ರದೇಶದಲ್ಲಿ ಮೂವರು ಮಹಿಳೆಯರು ಮತ್ತು ಒಬ್ಬ ಪುರುಷನ ಶವಗಳು ಪತ್ತೆಯಾಗಿವೆ. ನದಿಯ ಉದ್ದಕ್ಕೂ ಕಣ್ಗಾವಲು ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದ ಸಶಸ್ತ್ರ …

Read More »

ನಿಜವಾದ ಶತ್ರುಗಳನ್ನು ಗುರುತಿಸಿ – ಮುಸ್ಲಿಂ ರಾಷ್ಟ್ರಗಳಿಗೆ ಮೊಜ್ತಬಾ ಖಮೇನಿ ಕರೆ

ಟೆಹ್ರಾನ್‌: ನಿಜವಾದ ಶತ್ರುಗಳನ್ನು ಗುರುತಿಸಿ ಎಂದು ಮುಸ್ಲಿಂ ರಾಷ್ಟ್ರಗಳಿಗೆ  ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಕರೆ ನೀಡಿದ್ದಾರೆ. ಇರಾನ್‌, ಅಮೆರಿಕ, ಇಸ್ರೇಲ್‌ ನಡುವಿನ ಯುದ್ಧ ಪ್ರಾರಂಭದ ಆರು ತಿಂಗಳ ನಂತರ ಅವರು ಈ ಲಿಖಿತ ಸಂದೇಶ ಹಂಚಿಕೊಂಡಿದ್ದಾರೆ. ಈ ಪ್ರದೇಶದ ಮುಸ್ಲಿಂ ರಾಷ್ಟ್ರಗಳು ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ಒಗ್ಗೂಡುವಂತೆ ಕರೆ ನೀಡಿದ್ದಾರೆ. ಏಕತೆ, ಸ್ನೇಹ ಮತ್ತು ಸಹಕಾರ ಇಸ್ಲಾಮಿಕ್ ರಾಷ್ಟ್ರಗಳ ಸಮಸ್ಯೆಗಳಿಗೆ ಪರಿಹಾರವಾಗಿದೆ. ಯಾರಾದರೂ, ಯಾವುದೇ ಸ್ಥಾನದಲ್ಲಿದ್ದರೂ, …

Read More »

₹2 ಕೋಟಿ ವೆಚ್ಚದಲ್ಲಿ ನೂತನ ದೇವಸ್ಥಾನ, ಸಭಾಮಂಟಪ ನಿರ್ಮಾಣ: ಚೆಕ್ ಹಸ್ತಾಂತರಿಸಿದ ಮೃಣಾಲ್‌ ಹೆಬ್ಬಾಳಕರ್

ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಮಂಜೂರಾಗಿರುವ 2 ಕೋಟಿ ರೂ. ಅನುದಾನದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಂಗರಗಾ ಗ್ರಾಮದಲ್ಲಿ ನೂತನ ಶ್ರೀ ಕಲ್ಮೇಶ್ವರ ದೇವಸ್ಥಾನ ಹಾಗೂ ಸಭಾಮಂಟಪ ನಿರ್ಮಾಣವಾಗಲಿದೆ. ಕಾಮಗಾರಿಯ ಮೊದಲ ಹಂತವಾಗಿ ₹19.81 ಲಕ್ಷ ಮೊತ್ತದ ಅನುದಾನದ ಚೆಕ್‌ನ್ನು ದೇವಸ್ಥಾನ ಕಮಿಟಿ ಸದಸ್ಯರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಹಸ್ತಾಂತರಿಸಿದರು. ಗ್ರಾಮದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಅನುಕೂಲವಾಗುವಂತೆ …

Read More »

ಈರುಳ್ಳಿ ಬೆಳೆಗಾರರಿಗೆ ಬಂಪರ್ – ಬೆಳಗಾವಿ ಎಪಿಎಂಸಿಯಲ್ಲಿ ದರ ದಿಢೀರ್ ಏರಿಕೆ

ಬೆಳಗಾವಿ: ಕಳೆದ ಎರಡು-ಮೂರು ವರ್ಷಗಳಿಂದ ನಿರಂತರ ನಷ್ಟ ಅನುಭವಿಸುತ್ತಿದ್ದ ಈರುಳ್ಳಿ ಬೆಳೆಗಾರರಿಗೆ ಈ ಬಾರಿ ಬಂಪರ್ ಬೆಲೆ ಸಿಕ್ಕಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಬೆಳಗಾವಿ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಈರುಳ್ಳಿ ದರ ಗಣನೀಯವಾಗಿ ಏರಿಕೆಯಾಗಿದೆ. ಕಳೆದ 15 ದಿನಗಳ ಹಿಂದೆ ಪ್ರತಿ ಕ್ವಿಂಟಾಲ್‌ಗೆ 2,000 ದಿಂದ 2,500 ರೂಪಾಯಿ ಇದ್ದ ದರ, ಸದ್ಯ ಕ್ವಿಂಟಾಲ್‌ಗೆ 3,500 ರಿಂದ 4,500 ರೂಪಾಯಿವರೆಗೆ ಜಿಗಿದಿದೆ. ಇದರೊಂದಿಗೆ ಸಗಟು ಮಾರುಕಟ್ಟೆಯಲ್ಲಿ ಪ್ರತಿ ಕೆಜಿ …

Read More »

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ – ಅನಾಥವಾದ ಕಂದಮ್ಮ

ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ  ಜಿಲ್ಲೆಯ ಚಿಂಚಿನಾಡ ವಸಿಷ್ಠ ಸೇತುವೆಯ ಬಳಿ ಸಂಭವಿಸಿದ ದುರಂತವೊಂದು ಸಂಭವಿಸಿದೆ. ಮೂರು ವರ್ಷದ ಮಗುವನ್ನು ಬಿಟ್ಟು ದಂಪತಿ ಬ್ರಿಡ್ಜ್ ಮೇಲಿಂದ ನದಿಗೆ ಹಾರಿದ್ದು, ಕಂದಮ್ಮ ಅನಾಥವಾಗಿದೆ. ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ವೆಲ್ಪುರು ಗ್ರಾಮದ ನಿವಾಸಿಗಳಾದ ಪತಿ ದೊಡ್ಡ ಸಾಯಿ (29) ಮತ್ತು ಅವರ ಪತ್ನಿ ಶಿರೀಷಾ (28) ನದಿಗೆ ಹಾರಿದ ದಂಪತಿ ಎಂದು ಗುರುತಿಸಲಾಗಿದೆ.  ಪೊಲೀಸರ ಮಾಹಿತಿ ಪ್ರಕಾರ, ಘಟನೆ ನಡೆದ ರಾತ್ರಿ …

Read More »

ಮರಕ್ಕೆ ಕಟ್ಟಿ ಹಲ್ಲೆ, ಬೆಂಕಿ ಹಚ್ಚಿ ಚಿತ್ರಹಿಂಸೆ – ಎರಡು ತಿಂಗಳು ನರಳಿ ಇನ್ಸ್ಟಾ ಇನ್‌ಫ್ಲ್ಯೂಯೆನ್ಸರ್‌ ಸಾವು

ಚಂಡೀಗಢ: ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ ಪಂಜಾಬ್‌ನ  ಇನ್ಸ್ಟಾ ಇನ್‌ಫ್ಲ್ಯೂಯೆನ್ಸರ್‌ ಒಬ್ಬರು ಎರಡು ತಿಂಗಳ ಬಳಿಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. 28 ವರ್ಷದ ಮಂಜೀತ್ ಕೌರ್ ಮೃತ ಮಹಿಳೆ. ಅವರನ್ನು ಅಪಹರಿಸಿ, ಹಲ್ಲೆ ಮಾಡಿ ಬೆಂಕಿ ಹಚ್ಚಲಾಗಿತ್ತು ಎಂದು ಹೇಳಲಾಗಿತ್ತು. ಇದಾದ ಸುಮಾರು ಎರಡು ತಿಂಗಳ ನಂತರ ಅವರು ಸಾವನ್ನಪ್ಪಿದ್ದಾರೆ. ಕೌರ್ ವಿಚ್ಛೇದನ ಪಡೆದಿದ್ದು, ಅವರ ಏಳು ವರ್ಷದ ಮಗ ಬಚಾವ್‌ ಆಗಿದ್ದಾರೆ ಎಂದು ವರದಿಯಾಗಿದೆ. ಜುಲೈ 3 ರಂದು ಚಂಡೀಗಢದ ಸೆಕ್ಟರ್ …

Read More »

ಬೈಕ್ ಬೆನ್ನಟ್ಟಿ ಬಂದು ಗುಂಡಿನ ದಾಳಿ – ಆಪ್ ನಾಯಕನ ಬರ್ಬರ ಹತ್ಯೆ

ಚಂಡೀಗಢ: ಆಮ್ ಆದ್ಮಿ ಪಕ್ಷದ ನಾಯಕರೊಬ್ಬರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಂಜಾಬ್‌ನ ಫಿರೋಜ್‌ಪುರ ಜಿಲ್ಲೆಯ ಮಮ್ದೋಟ್ ಪಟ್ಟಣದಲ್ಲಿ ನಡೆದಿದೆ. ಗುರುಪ್ರೀತ್ ಸಿಂಗ್ ಗೋಪಿ ಹತ್ಯೆಯದ ಆಪ್ ನಾಯಕ. ಗುರುಪ್ರೀತ್ ಮತ್ತು ಹರ್‌ಪ್ರೀತ್ ಎಂಬ ವ್ಯಕ್ತಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ಕಾರಿನಲ್ಲಿ ಬಂದ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಅವರನ್ನು ಬೆನ್ನಟ್ಟಿದ್ದಾರೆ. ಬಳಿಕ ಬೈಕ್‌ಗೆ ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಗುರುಪ್ರೀತ್ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ …

Read More »