ಚಿಕ್ಕಮಗಳೂರು: ಮೀಸಲು ಅರಣ್ಯದಲ್ಲಿ ಎನ್‍ಜಿಓ ಹೆಸರಲ್ಲಿ ಖಾಸಗಿ ವ್ಯಕ್ತಿಗಳು ಅರಣ್ಯ ಇಲಾಖೆಯ ಅನುಮತಿ ಪಡೆಯದೇ ಕಾಡಿನ ಮಧ್ಯೆ ಟ್ರ್ಯಾಪಿಂಗ್ ಕ್ಯಾಮೆರಾ ಅಳವಡಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ವ್ಯಾಪ್ತಿಯ ಚುರ್ಚೆಗುಡ್ಡ ಮೀಸಲು ಅರಣ್ಯದಲ್ಲಿ ಈ ಕ್ಯಾಮರಾಗಳು ಪತ್ತೆಯಾಗಿದ್ದು, ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಕಳೆದೊಂದು ವಾರದಿಂದ ಚುರ್ಚೆಗುಡ್ಡದ ಶ್ರೀಗಂಧದ ರಸ್ತೆ ಮಾರ್ಗದ ಒಂದೆರಡು ಕಿ.ಮೀ. ದೂರದಲ್ಲಿ ಕಾಡು ಪ್ರಾಣಿಗಳು ಬಾಯಾರಿಕೆ ನೀಗಿಸಿಕೊಳ್ಳಲು ಬರುವ ನೀರುಗುಂಡಿಯ ಬಳಿಯ ಮರಕ್ಕೆ ಕ್ಯಾಮರಾಗಳನ್ನು …
Read More »ಬೈಕ್ ಕದ್ದು ಹುಚ್ಚನಂತೆ ನಟಿಸಿ ತಪ್ಪಿಸಿಕೊಳ್ಳುತ್ತಿದ್ದಕುಖ್ಯಾತ ಬೈಕ್ ಕಳ್ಳ
ರಾಯಚೂರು: ಬೈಕ್ ಕದ್ದು ಹುಚ್ಚನಂತೆ ನಟಿಸಿ ತಪ್ಪಿಸಿಕೊಳ್ಳುತ್ತಿದ್ದ ವಿಲಕ್ಷಣ ವರ್ತನೆಯ ಕುಖ್ಯಾತ ಬೈಕ್ ಕಳ್ಳನನ್ನು ನಗರದ ನೇತಾಜಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 3.40 ಲಕ್ಷ ರೂ. ಬೆಲೆ ಬಾಳುವ 15 ಬೈಕ್‍ಗಳನ್ನು ಜಪ್ತಿ ಮಾಡಲಾಗಿದೆ. ಮಾನ್ವಿ ತಾಲೂಕಿನ ಹರವಿ ಗ್ರಾಮದ ತಾಯಪ್ಪ ಬಂಧಿತ ಆರೋಪಿ. ನೇತಾಜಿ ನಗರ ಸೇರಿದಂತೆ ವಿವಿಧ ಠಾಣೆಗಳಲ್ಲಿ ಆರೋಪಿ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು. ಬೈಕ್ ಕದಿಯುವ ವೇಳೆ ಹುಚ್ಚನ ರೀತಿಯಲ್ಲಿ ವರ್ತನೆ …
Read More »ನಾನು ಬಾಯ್ಸ್ ರೀತಿಯ ಹೇರ್ ಕಟ್ ಮಾಡಿಸಿದ್ದೇನೆ ಹೊರತು ಖಿನ್ನತೆ ಒಳಗಾಗಿ ಕೂದಲನ್ನು ಕತ್ತರಿಸಿಕೊಂಡಿಲ್ಲ :ಸಿಂಧು ಲೋಕನಾಥ್
ಬೆಂಗಳೂರು: ನಾನು ಬಾಯ್ಸ್ ರೀತಿಯ ಹೇರ್ ಕಟ್ ಮಾಡಿಸಿದ್ದೇನೆ ಹೊರತು ಖಿನ್ನತೆ ಒಳಗಾಗಿ ಕೂದಲನ್ನು ಕತ್ತರಿಸಿಕೊಂಡಿಲ್ಲ ಎಂದು ನಟಿ ಸಿಂಧು ಲೋಕನಾಥ್ ಅವರು ಹೇಳಿದ್ದಾರೆ. ಇತ್ತೀಚೆಗೆ ಸಿಂಧು ಲೋಕನಾಥ್ ಅವರು ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಬಾಯ್ ಹೇರ್ ಕಟ್ ಮಾಡಿಸಿಕೊಂಡಿರುವ ಫೋಟೋ ಹಾಕಿ ಕೆಲ ಭಾವನಾತ್ಮಕ ಸಾಲುಗಳನ್ನು ಬರೆದುಕೊಂಡಿದ್ದರು. ಇದನ್ನು ನೋಡಿದ ಕೆಲವರು ಸಿಂಧು ಖಿನ್ನತೆಗೆ ಒಳಗಾಗಿದ್ದಾರೆ. ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದರು. ಈಗ ಈ ವಿಚಾರವಾಗಿ …
Read More »ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಬಿಟ್ಟು ಬಿಡದೆ ಸುರಿಯುತ್ತಿರೋ ಮಳೆ
ಬೀದರ್: ಕಲಬುರಗಿ, ದಕ್ಷಿಣ ಕನ್ನಡ ಮತ್ತು ಗಡಿ ಜಿಲ್ಲೆ ಬೀದರ್ ಸೇರಿದಂತೆ ಅನೇಕ ಕಡೆ ಬೆಳಗ್ಗೆಯಿಂದ ಬಿಟ್ಟು ಬಿಡದೆ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಶನಿವಾರ ತಡರಾತ್ರಿ ಕೂಡ ಜಿಲ್ಲೆಯ ಹಲವು ಕಡೆ ಮಳೆಯಾಗಿದ್ದು, ಇಂದು ಜಿಲ್ಲೆಯಲ್ಲಿ ವರುಣದೇವ ಅಬ್ಬರಿಸುವ ಸಾಧ್ಯತೆ ಇದೆ. ರೈತರು ಬಿತ್ತನೆಗಾಗಿ ಬೀಜಗಳನ್ನು ಸಿದ್ಧ ಮಾಡಿಕೊಂಡು ಮಳೆಯಾಗಿ ಕಾದುಕುಳಿತ್ತಿದ್ದರು. ಹೀಗಾಗಿ ಇಂದು ವರುಣ ದೇವ ಕೃಪೆ ತೋರಿದ್ದಾನೆ. ಜಿಲ್ಲೆಯಲ್ಲಿ ಬೆಳಗ್ಗೆಯಿಂದ ಮಳೆ ಸುರಿಯುತ್ತಿರುವ ಕಾರಣ ರೈತರ …
Read More »ಕೊರೊನಾಗೆ ಹೆದರಿ ಪರೀಕ್ಷೆಗೆ ಹಾಜರಾಗದೆ ಮನೆಯಲ್ಲಿ ಕುಳಿತಿದ್ದ ವಿದ್ಯಾರ್ಥಿನಿ
ಧಾರವಾಡ: ಕೊರೊನಾಗೆ ಹೆದರಿ ಪರೀಕ್ಷೆಗೆ ಹಾಜರಾಗದೆ ಮನೆಯಲ್ಲಿ ಕುಳಿತಿದ್ದ ವಿದ್ಯಾರ್ಥಿನಿಯನ್ನು ಶಿಕ್ಷಕರು ಹಾಗೂ ಅಧಿಕಾರಿಗಳು ಮನವೊಲಿಸಿ, ಪರೀಕ್ಷೆ ಬರೆಸಿದ್ದಾರೆ. ಧಾರವಾಡದ ಅಳ್ನಾವರ ತಾಲೂಕಿನ ವಿದ್ಯಾರ್ಥಿನಿ ನಿರೀಕ್ಷಾ(ಹೆಸರು ಬದಲಿಸಲಾಗಿದೆ) ಕೊರೊನಾ ಭಯದಿಂದ ದ್ವಿತೀಯ ಭಾಷೆ ಪರೀಕ್ಷೆಗೆ ಗೈರಾಗಿದ್ದಳು. ಪಾಲಕರು ಸಹ ಏನೂ ಮಾತನಾಡಿರಲಿಲ್ಲ. ಆದರೆ ಪರೀಕ್ಷೆಗೆ ಗೈರಾಗಿದ್ದನ್ನು ಗಮನಿಸಿದ ಶಿಕ್ಷಕರು ಹಾಗೂ ಅಧಿಕಾರಿಗಳು, ಇಂದು ಬಾಲಕಿ ಮನೆಗೆ ತೆರಳಿ ವಿದ್ಯಾರ್ಥಿನಿ ಹಾಗೂ ಪೋಷಕರನ್ನು ಮನವೊಲಿಸಿದ್ದಾರೆ. ಅಧಿಕಾರಿಗಳ ಮನವೊಲಿಕೆ ಬಳಿಕ ಅಳ್ನಾವರದ ಕಸ್ತೂರಬಾ …
Read More »ಶಿವಮೊಗ್ಗದಲ್ಲಿ ಬೆಳಗ್ಗೆ 8ರಿಂದ ಮಧ್ಯಾಹ್ನ 3ರ ವರೆಗೆ ಮಾತ್ರ ವ್ಯಾಪಾರ, ವಹಿವಾಟು
ಶಿವಮೊಗ್ಗ: ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹಬ್ಬುತ್ತಿದ್ದು, ಸಮುದಾಯಕ್ಕೂ ಹರಡುತ್ತಿದೆಯಾ ಎಂಬ ಅನುಮಾನ ಶುರುವಾಗಿದೆ. ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗದ ದಿನಸಿ ವರ್ತಕರು ಸೋಮವಾರದಿಂದ ಬೆಳಗ್ಗೆ 8ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಮಾತ್ರ ವ್ಯಾಪಾರ ವಹಿವಾಟು ನಡೆಸಿ, ಮಧ್ಯಾಹ್ನದ ನಂತರ ಸ್ವಯಂ ಪ್ರೇರಿತರಾಗಿ ಲಾಕ್‍ಡೌನ್ ಮಾಡಲು ನಿರ್ಧರಿಸಿದ್ದಾರೆ. ವ್ಯಾಪಾರಿಗಳು, ಅಂಗಡಿಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರು ಹಾಗೂ ಗ್ರಾಹಕರ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದಾರೆ. …
Read More »ದಟ್ಟ ಕಾನನನದ ನಡುವೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಫ್ಯಾಂಟನ್ ನಿರ್ಮಾಣ
ಬೆಂಗಳೂರು: ದಟ್ಟ ಕಾನನನದ ನಡುವೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಫ್ಯಾಂಟನ್ ನಿರ್ಮಾಣವಾಗುತ್ತಿದೆ. ಈ ದಟ್ಟ ಕಾನನಕ್ಕಾಗಿ ಫ್ಯಾಂಟಮ್ ಅಖಾಡದಲ್ಲಿ ರಾಜಮಂಡ್ರಿಯಿಂದ ಗಿಡ-ಮರಗಳನ್ನು ತುಂಬಿಕೊಂಡ 22 ಲಾರಿಗಳು ಆಗಮಿಸಿವೆ. ಫ್ಯಾಂಟಮ್ ನಿರ್ಮಾಪಕರು ಸುಮಾರು 30 ರಿಂದ 40 ಲಕ್ಷ ಬಂಡವಾಳ ಹಾಕಿ ಈ ಗಿಡಮರಗಳನ್ನು ಖರೀದಿಸಿದ್ದಾರಂತೆ. ಲಾಕ್‍ಡೌನ್ ಮುನ್ನ ಈ ಗಿಡಗಳನ್ನು ತರಿಸಲಾಗಿತ್ತು. ಶೇಕಡ 70ರಷ್ಟು ಸೆಟ್ ವರ್ಕ್ ಕೂಡ ನಡೆದಿತ್ತು. ಈ ನಡುವೆ ಲಾಕ್‍ಡೌನ್ ಆಗಿದ್ರಿಂದ ಶೂಟಿಂಗ್ ಕ್ಯಾನ್ಸಲ್ …
Read More »ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ದಿನೇ ದಿನೇ ಸ್ಫೋಟ,ಶನಿವಾರ ಬರೋಬ್ಬರಿ 596 ಪ್ರಕರಣ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ದಿನೇ ದಿನೇ ಸ್ಫೋಟವಾಗಿದೆ. ಇಷ್ಟು ದಿನ 100 ರಿಂದ 150 ಹೊಸ ಪ್ರಕರಣಗಳು ದಾಖಲಾಗುತ್ತಿದ್ದವು. ಆದರೆ ಶನಿವಾರ ಬರೋಬ್ಬರಿ 596 ಪ್ರಕರಣ ದಾಖಲಾಗಿವೆ. ಈ ಮೂಲಕ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 2,592ಕ್ಕೆ ಏರಿಕೆ ಆಗಿದೆ. ಜೂನ್ 6 ರವರೆಗೂ ನಿಯಂತ್ರಣದಲ್ಲಿದ್ದ ಕೊರೊನಾ ಜೂನ್ 6 ನಂತರ ಬೆಂಗಳೂರಿನಲ್ಲಿ ಸ್ಫೋಟವಾಗುತ್ತಿದೆ. ವಯಸ್ಸಾದವರಲ್ಲಿ, ಉಸಿರಾಟದ ಸಮಸ್ಯೆ ಇದ್ದವರಲ್ಲಿ, ನಾನಾ ಕಾಯಿಲೆಗಳಿಂದ ಬಳಲುತ್ತಾ ಇದ್ದವರಲ್ಲಿ ಸೋಂಕು ಪತ್ತೆಯಾಗುತ್ತಿದೆ. …
Read More »ಸೋಮವಾರದಿಂದ ಕರ್ನಾಟಕದಲ್ಲಿ ನೈಟ್ ಕರ್ಫ್ಯೂ ಜಾರಿ………….
ಬೆಂಗಳೂರು: ಸೋಮವಾರದಿಂದ ಕರ್ನಾಟಕದಲ್ಲಿ ನೈಟ್ ಕರ್ಫ್ಯೂ ಜಾರಿಯಾಗಲಿದ್ದು, ರಾತ್ರಿ 8 ರಿಂದ ಬೆಳಗ್ಗೆ 5 ಗಂಟೆಯವರೆಗೆ ಬಂದ್ ಆಗಲಿದೆ. ಶನಿವಾರ ಒಂದೇ ದಿನ ಕೊರೊನಾ ಮಹಾಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಮತ್ತೆ ಜಾರಿಯಾಗಿದೆ. ಇವತ್ತು ಒಂದೇ ದಿನ ಮಾತ್ರ ರಾತ್ರಿ 9 ಗಂಟೆ ತನಕ ವ್ಯವಹಾರ ನಡೆಸಬಹುದಾಗಿದ್ದು ನಾಳೆಯಿಂದ ರಾತ್ರಿ 8 ಗಂಟೆಯಿಂದ 5 ರ ತನಕ ಕರ್ಫ್ಯೂ ಇರಲಿದೆ. ಏನು ಇರುತ್ತೆ? – ಆಸ್ಪತ್ರೆ ಸೇವೆಗಳು, ಮೆಡಿಕಲ್ …
Read More »ಸೀರಿಯಲ್ ಚಿತ್ರೀಕರಣಕ್ಕೆ ಕುತ್ತು ತಂದ ಕೊರೊನಾ.!
ಕೊರೊನಾ ಮಹಾಮಾರಿ ಯಾವ ವಲಯವನ್ನೂ ಬಿಡದೆ ಕಾಡುತ್ತಿದೆ. ಸ್ವಲ್ಪ ಯಾಮಾರಿದರೂ ಎಲ್ಲಿ ಸೋಂಕು ತಗುಲುತ್ತದೆಯೋ ಎಂಬ ಭಯ ಆವರಿಸಿಕೊಂಡಿದೆ. ಲಾಕ್‌ಡೌನ್ ಸಡಿಲದ ನಂತರ ಕೊರೊನಾ ಸೋಂಕು ತನ್ನ ಆರ್ಭಟವನ್ನು ಹೆಚ್ಚು ಮಾಡಿದೆ. ಲಾಕ್‌ಡೌನ್‌ನಿಂದಾಗಿ ಸೀರಿಯಲ್ ಹಾಗು ಸಿನಿಮಾ ಶೂಟಿಂಗ್ ಸ್ಥಗಿತಗೊಳಿಸಲಾಗಿತ್ತು. ಆದರೆ ಲಾಕ್‌ಡೌನ್ ಸಡಿಲಿಕೆಯ ನಂತರ ಮತ್ತೆ ಶೂಟಿಂಗ್‌ಗೆ ಅನುಮತಿ ನೀಡಲಾಗಿತ್ತು. ಇದೀಗ ಶೂಟಿಂಗ್ ಸ್ಥಳಕ್ಕೂ ಕೊರೊನಾ ದಾಂಗುಡಿ ಇಟ್ಟಿದೆ. ಹೌದು, ಇದು ಹೈದರಾಬಾದ್‌ನಲ್ಲಿ ನಡೆದಿರುವ ಘಟನೆ. ಇಲ್ಲಿನ ಸೀರಿಯಲ್ …
Read More »