ಶಿವಮೊಗ್ಗ : ಕೊರೊನಾ ಸಂಕಷ್ಟದ ಸಮಯದಲ್ಲಿಯೂ ಕೂಡ ಈ ವಾರಿಯರ್ಸ್ ಗಳು ಜನ ಮೆಚ್ಚುವಂತಹ ಕೆಲಸ ಮಾಡಿ ತೋರಿಸಿದ್ದಾರೆ. ಕೊರೊನಾ ವಾರಿಯರ್ಸ್ ಗಳಾದ ಪೊಲೀಸರು ಸುಂದರವಾದ ಕೆರೆ ಪುನರ್ ನಿರ್ಮಾಣಕ್ಕೆ ಕೈ ಜೋಡಿಸಿ, ಎಲ್ಲರ ಮನೆ ಮಾತಾಗಿದ್ದಾರೆ. ಸ್ವಗ್ರಾಮ ಸಮಿತಿಯ ಸದಸ್ಯರೊಂದಿಗೆ ಕೈ ಜೋಡಿಸಿ ಒತ್ತುವಾರಿಯಾಗಿದ್ದ ಇಡೀ ಕೆರೆಯನ್ನು ಬಿಡಿಸಿಕೊಂಡು, ಕೆರೆಯಲ್ಲಿ ತುಂಬಿದ್ದ ಹೂಳು ತೆಗೆದು ಇದೀಗ ಜೀವ ಕಳೆ ನೀಡಿದ್ದಾರೆ. ಕೇವಲ 80 ಲಕ್ಷ ಲೀ. ನೀರು ತುಂಬುತ್ತಿದ್ದ …
Read More »ಕಾಲುವೆ ಕಾಮಗಾರಿ ಬಗ್ಗೆ ರೈತರಲ್ಲಿ ಆತಂಕ,ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ರೈತರು ಹೋರಾಟ……
ರಾಯಚೂರು: ಜಿಲ್ಲೆಯ ಸಾವಿರಾರು ರೈತರ ಜೀವನಾಡಿ ನಾರಾಯಣಪುರ ಬಲದಂಡೆ ಕಾಲುವೆ ಆಧುನೀಕರಣ ಕಾಮಗಾರಿ ಭರದಿಂದ ಸಾಗಿದೆ. ಆದರೆ ಕಾಲುವೆ ಕಾಮಗಾರಿ ಬಗ್ಗೆ ರೈತರಲ್ಲಿ ಆತಂಕ ಎದುರಾಗಿದೆ. ನೂರಾರು ಕೋಟಿ ರೂಪಾಯಿ ಖರ್ಚುಮಾಡಿ ಅಧುನೀಕರಣ ಮಾಡಲಾಗುತ್ತಿದೆ. ಆದರೆ ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ರೈತರು ಹೋರಾಟಕ್ಕೆ ಮುಂದಾಗಿದ್ದಾರೆ. ರಾಯಚೂರಿನ ದೇವದುರ್ಗ, ಲಿಂಗಸುಗೂರು ತಾಲೂಕುಗಳ ರೈತರ ಬದುಕಿನ ಚಿತ್ರಣವನ್ನೇ ಬದಲಿಸಿದ ನೀರಾವರಿಯ ಜೀವನಾಡಿಯಾದ ಕಾಲುವೆ ಇದಾಗಿದ್ದು, ಆಧುನೀಕರಣ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಲೂಟಿಯಾಗುತ್ತಿದೆ. …
Read More »ಇಡೀ ಬೆಂಗ್ಳೂರು ಮತ್ತೆ ಸೀಲ್‍ಡೌನ್ ಆಗುತ್ತಾ……………?-
ಬೆಂಗಳೂರು: ಸಿಲಿಕಾನ್ ಸಿಟಿ ಸೀಲ್‍ಡೌನ್ ಆಗುವುದು ಬಹುತೇಕ ಪಕ್ಕಾ ಆಗಿದೆ. ನಗರದಲ್ಲಿ ನಿತ್ಯ 150ಕ್ಕೂ ಪಾಸಿಟಿವ್ ಕೊರೊನಾ ಪ್ರಕರಣಗಳು ದಾಖಲಾಗುತ್ತಿದೆ. ಪೊಲೀಸ್, ಸಾರಿಗೆ ನೌಕರರು ಹಾಗೂ ವೈದ್ಯರಿಗೂ ಎಲ್ಲ ವಿಭಾಗದ ಜನರಿಗೂ ಕೊರೊನಾ ಬಂದಿದೆ. ಹೀಗಾಗಿ ಕೊರೊನಾ ಪ್ರತಿದಿನ ಹೆಚ್ಚುತ್ತಿದ್ದು, ಸರ್ಕಾರಕ್ಕೆ ಹೊಸ ಸವಾಲು ಎದುರಾಗಿದೆ. ಬೆಂಗಳೂರನ್ನ ಮತ್ತೆ 15 ದಿನ ಲಾಕ್‍ಡೌನ್ ಮಾಡಿಬಿಡಿ ಎಂದು ಸಿಎಂ ಯಡಿಯೂರಪ್ಪ ಅವರಿಗೆ ಕೆಲ ಸಚಿವರು ಲಾಕ್‍ಡೌನ್ ಮಾಡುವ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. …
Read More »ಪತಂಜಲಿ ಕೊರೊನಾ ಔಷಧಿ ಜಾಹೀರಾತಿಗೆ ಆಯುಷ್ ಸಚಿವಾಲಯದ ಬ್ರೇಕ್…………
ನವದೆಹಲಿ: ಕೋವಿಡ್-19 ಸೋಂಕಿಗೆ ಯೋಗಗುರು ಬಾಬಾ ರಾಮ್‍ದೇವ್ ಅವರ ಪತಂಜಲಿ ಸಂಸ್ಥೆ ಆಯುರ್ವೇದ ಔಷಧಿಯನ್ನು ಬಿಡುಗಡೆ ಮಾಡಿದ ಕೆಲವೇ ಗಂಟೆಗಳಲ್ಲಿ ಕೇಂದ್ರ ಆಯುಷ್ ಸಚಿವಾಲಯ ಬ್ರೇಕ್ ಹಾಕಿದ್ದು, ಈ ಕುರಿತು ಜಾಹೀರಾತು ಪ್ರಸಾರ ನಿಲ್ಲಿಸುವಂತೆ ಹೇಳಿದೆ. ಅಲ್ಲದೇ ಔಷಧಿಯ ಕುರಿತ ಸಂಪೂರ್ಣ ಮಾಹಿತಿಯನ್ನು ನೀಡುವಂತೆ ಪತಂಜಲಿ ಸಂಸ್ಥೆಗೆ ಸೂಚನೆ ನೀಡಿದೆ. ಪತಂಜಲಿ ಸಂಸ್ಥೆಯ ಔಷಧಿಯ ವಿವರಗಳು ಅಥವಾ ಹಕ್ಕುಗಳ ಕುರಿತ ಬಗ್ಗೆ ಯಾವುದೇ ಮಾಹಿತಿ ತಿಳಿದಿಲ್ಲ ಎಂದು ಆಯುಷ್ ಸಚಿವಾಲಯ …
Read More »ಮಲೆನಾಡು ಭಾಗದಲ್ಲಿಇಂತಹ ಮಳೆ ಸುರಿದಿದ್ದು ಇದೇ ಮೊದಲು,ಜನ ಭಯಗೊಂಡಿದ್ದಾರೆ.
ಚಿಕ್ಕಮಗಳೂರು: ದಿನದಿಂದ ದಿನಕ್ಕೆ ಹೆಚ್ಚುತ್ತಿರೋ ಕೊರೊನಾ ಪ್ರಕರಣಗಳು ಜನರನ್ನು ಕಂಗೆಡಿಸಿದೆ. ಆದರೆ ಈ ಮಧ್ಯೆ ಬೆಂಗಳೂರು, ಚಿಕ್ಕೋಡಿ, ಯಾದಗಿರಿ, ಮಲೆನಾಡು ಭಾಗ ಸೇರಿದಂತೆ ರಾಜ್ಯದ ಅನೇಕ ಕಡೆಗಳಲ್ಲಿ ಮಂಗಳವಾರ ಭಾರೀ ಮಳೆಯಾಗಿದೆ. ಯಾದಗಿರಿ ಜಿಲ್ಲೆಯಾದ್ಯಂತ ತಡರಾತ್ರಿ ಅಧಿಕವಾಗಿ ಉತ್ತಮ ಮಳೆಯಾಗಿದ್ದು, ಜಿಲ್ಲೆಯ ರೈತರ ಮುಖದಲ್ಲಿ ಸಂತಸ ಮೂಡಿಸಿದೆ. ಮುಂಗಾರು ಆರಂಭದಿಂದಲೂ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತಾಪಿ ವರ್ಗದಲ್ಲಿ ಬಿತ್ತನೆಯ ಕಾರ್ಯ ಜೋರಾಗಿ ನಡೆಯುತ್ತಿದೆ. ಜಿಲ್ಲೆಯ ಶಹಪುರ, ಸುರಪುರ, ಗುರುಮಿಠಕಲ್ ತಾಲೂಕಿನಲ್ಲಿ …
Read More »ಕೊರೊನಾ ಸೋಂಕು ಭೀತಿಯಲ್ಲಿ ರಾಮನಗರ ಪಟ್ಟಣ ಇಂದಿನಿಂದ ಲಾಕ್‍ಡೌನ್
ರಾಮನಗರ: ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಕೊರೊನಾ ಸೋಂಕು ಭೀತಿಯಲ್ಲಿ ರಾಮನಗರ ಪಟ್ಟಣ ಇಂದಿನಿಂದ ಲಾಕ್‍ಡೌನ್ ಆಗಿದೆ. ಜಿಲ್ಲೆಯಲ್ಲಿ ಸ್ವಯಂ ಪ್ರೇರಿತವಾಗಿ ಲಾಕ್‍ಡೌನ್ ಘೋಷಣೆ ಮಾಡಲಾಗಿದ್ದು, ಈಗಾಗಲೇ ಜಿಲ್ಲೆಯ ಮಾಗಡಿ ಪಟ್ಟಣ ಮತ್ತು ಕನಕಪುರ ಲಾಕ್‍ಡೌನ್ ಮಾಡಲಾಗಿದೆ. ಇಂದಿನಿಂದ ರಾಮನಗರ ಪಟ್ಟಣ ಕೂಡ ಲಾಕ್‍ಡೌನ್ ಆಗಿದೆ. ಕಳೆದ ದಿನವೇ ಅಂಗಡಿ, ಮುಂಗಟ್ಟುಗಳನ್ನು ವರ್ತಕರು ಬಂದ್ ಮಾಡುವ ಮೂಲಕ ಲಾಕ್‍ಡೌನ್‍ಗೆ ಸ್ವಯಂ ಪ್ರೇರಿತರಾಗಿ ಬೆಂಬಲ ಸೂಚಿಸಿದ್ದಾರೆ. ಸ್ವಯಂ …
Read More »ನೇಪಾಳದ ಕೃಷಿ ಸಚಿವಾಲಯದ ಸರ್ವೇ ಇಲಾಖೆ ಒಟ್ಟು 11 ಸ್ಥಳಗಳನ್ನು ಪಟ್ಟಿ ಮಾಡಿದ್ದು, ಇದರಲ್ಲಿ 10 ಪ್ರದೇಶಗಳನ್ನು ಚೀನಾ ವಶಪಡಿಸಿಕೊಂಡಿದೆ.
ಕಠ್ಮಂಡು: ಚೀನಾ ತನ್ನ ನೆರೆಯ ಎಲ್ಲ ದೇಶಗಳ ಗಡಿಯನ್ನು ಅತಿಕ್ರಮಣ ಮಾಡಿಕೊಳ್ಳುತ್ತಿರುವುದು ತಿಳಿದ ವಿಚಾರ. ಇತ್ತೀಚೆಗೆ ಭಾರತದೊಂದಿಗೆ ತಂಟೆ ತೆಗೆದಿದೆ. ಇದೀಗ ಇನ್ನೊಂದು ಭಯಾನಕ ಅಂಶವನ್ನು ನೇಪಾಳ ಸರ್ಕಾರ ಬಹಿರಂಗಪಡಿಸಿದೆ. ನೇಪಾಳದ ಬರೋಬ್ಬರಿ 10 ಪ್ರದೇಶಗಳನ್ನು ಚೀನಾ ಈಗಾಗಲೇ ಆಕ್ರಮಿಸಿಕೊಂಡಿದೆ ಎಂದು ನೇಪಾಳ ಸರ್ಕಾರ ತನ್ನ ವರದಿಯಲ್ಲಿ ತಿಳಿಸಿದೆ. ಲಡಾಖ್‍ನ ಗಲ್ವಾನ್ ವ್ಯಾಲಿಯಲ್ಲಿ ಭಾರತದ-ಚೀನಾದ ಗಡಿ ತಂಟೆ ನಡೆದ ಕೆಲವೇ ದಿನಗಳ ನಂತರ ನೇಪಾಳ ಈ ಕುರಿತು ಸರ್ವೇ ವರದಿಯನ್ನು …
Read More »ಜೂನಿಯರ್ ಎನ್‍ಟಿಆರ್ ಲಾಕ್‍ಡೌನ್ ನಡುವೆಯೂ ಸಾಲು ಸಾಲು ಸಿನಿಮಾಗಳಿಗೆ ಸಹಿ
ಹೈದರಾಬಾದ್: ಟಾಲಿವುಡ್ ತಾರಕ್ ಜೂನಿಯರ್ ಎನ್‍ಟಿಆರ್ ಲಾಕ್‍ಡೌನ್ ನಡುವೆಯೂ ಸಾಲು ಸಾಲು ಸಿನಿಮಾಗಳಿಗೆ ಸಹಿ ಹಾಕುತ್ತಿದ್ದು, ತೆಲುಗು ಚಿತ್ರರಂಗದಲ್ಲಿ ಸದ್ಯದ ಬ್ಯಸಿಯೆಸ್ಟ್ ನಟರಾಗಿದ್ದಾರೆ. ಇದೀಗ ಮತ್ತೊಂದು ಸಿನಿಮಾದದಲ್ಲಿ ಯಂಗ್ ಟೈಗರ್ ನಟಿಸುವುದು ಖಚಿತವಾಗಿದ್ದು, ಈ ಸಿನಿಮಾದಲ್ಲಿ ಕನ್ನಡದ ನಟಿ ಸಹ ಸ್ಥಾನ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜೂನಿಯರ್ ಎನ್‍ಟಿಆರ್ ಲಾಕ್‍ಡೌನ್ ನಡುವೆಯೂ ಹಲವು ಸಿನಿಮಾಗಳಿಗೆ ಸಹಿ ಹಾಕುತ್ತಿದ್ದು, ಒಂದೆಡೆ ಸ್ಯಾಂಡಲ್‍ವುಡ್ ನಿರ್ದೇಶಕ ಪ್ರಶಾಂತ್ ನೀಲ್ ಜೂನಿಯರ್ ಎನ್‍ಟಿಆರ್ ಸಿನಿಮಾಗೆ …
Read More »ಯುವರತ್ನ ಚಿತ್ರ ತಂಡದಿಂದ ಸುದ್ದಿಯೊಂದು ಹೊರ ಬಂದಿದ್ದು, ಪವರ್ ಸ್ಟಾರ್ ಅಭಿಮಾನಿಗಳಿಗೆ ಬೇಸರ ತರಿಸಿದೆ.
ಬೆಂಗಳೂರು: ಲಾಕ್‍ಡೌನ್ ನಿಂದಾಗಿ ಸ್ಥಗಿತಗೊಂಡಿದ್ದ ಸಿನಿಮಾ ಚಿತ್ರೀಕರಣಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಆದ್ರೆ ಚಿತ್ರದ ಕಲಾವಿದರು, ತಂತ್ರಜ್ಞರು ಬೇರೆ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದರಿಂದ ಸಿನಿಮಾ ಕೆಲಸಗಳು ಕುಂಟುತ್ತಾ ಸಾಗುತ್ತಿವೆ. ಚಂದನವನದ ಬಹು ನಿರೀಕ್ಷಿತ ಯುವರತ್ನ ಚಿತ್ರ ತಂಡದಿಂದ ಸುದ್ದಿಯೊಂದು ಹೊರ ಬಂದಿದ್ದು, ಪವರ್ ಸ್ಟಾರ್ ಅಭಿಮಾನಿಗಳಿಗೆ ಬೇಸರ ತರಿಸಿದೆ. ಯುವರತ್ನ ಚಿತ್ರದ ನಿರ್ದೇಶಕ ಸಂತೋಷ್ ಆನಂದ್ ರಾಮ್ ಟ್ವೀಟ್ ಮಾಡಿದ್ದು, ಚೆನ್ನೈ, ಹೈದರಾಬಾದ್ ಹಾಗೂ ಮುಂಬೈನಲ್ಲಿ ಕೆಲಸಗಳು ನೆಡೆಯುತ್ತಿಲ್ಲ. ಚೆನ್ನೈ …
Read More »ತಾಯಿಯಾದ ಸಂತಸದಲ್ಲಿ ಬಿಗ್‍ಬಾಸ್ ಸ್ಪರ್ಧಿ ನೇಹಾ ಗೌಡ
ವಾಷಿಂಗ್ಟನ್: ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 3’ರ ಸ್ಪರ್ಧಿ ನೇಹಾ ಗೌಡ ತಾಯಿಯಾದ ಸಂತಸದಲ್ಲಿದ್ದು, ಇತ್ತೀಚೆಗಷ್ಟೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಾವು ತಾಯಿಯಾಗಿರುವ ವಿಚಾರವನ್ನ ನೇಹಗೌಡ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಾಕುವ ಮೂಲಕ ಶೇರ್ ಮಾಡಿಕೊಂಡಿದ್ದಾರೆ. ನೇಹಾ ಗೌಡ ಪತಿಯೊಂದಿಗೆ ಅಮೆರಿಕಾದ ನಾರ್ತ್ ಕ್ಯಾಲಿಫೋರ್ನಿಯಾದಲ್ಲಿ ನೆಲೆಸಿದ್ದಾರೆ. ಪತಿ ಸೇರಿದಂತೆ ಕುಟುಂಬದವರು ತಮ್ಮ ಮನೆಗೆ ಹೊಸ ಸದಸ್ಯೆಯನ್ನು ಬರಮಾಡಿಕೊಂಡಿದ್ದಾರೆ. ನೇಹಾ ಗೌಡ ಸೀಮಂತ ಕಾರ್ಯಕ್ರಮ ಸರಳವಾಗಿ ನಡೆದಿದ್ದು, ಆಪ್ತರು, ಸ್ನೇಹಿತರು …
Read More »