Breaking News

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ರಹಸ್ಯ ಬಯಲು

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಕುರಿತಾದ ಫಾರೆನ್ಸಿಕ್ ಲ್ಯಾಬ್ ರಿಪೋರ್ಟ್ ಬಂದಿದೆ. ಅಂಗಾಂಗಗಳ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದ್ದು, ಸುಶಾಂತ್ ಮೃತದೇಹದ ಮೇಲೆ ಯಾವುದೇ ಬಲ ಪ್ರಯೋಗವಾಗಿಲ್ಲ. ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎನ್ನುವುದು ದೃಢಪಟ್ಟಿದೆ. ಸುಶಾಂತ್ ಸಿಂಗ್ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ ಅವರ ಸಾವಿನ ಕುರಿತಂತೆ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ವಿವಿಧ ಆಯಾಮಗಳಿಂದ ಪೊಲೀಸರು ತನಿಖೆ ಕೈಗೊಂಡಿದ್ದರು. ನೇಣು‌ ಬಿಗಿದ ಕಾರಣ ಉಸಿರುಗಟ್ಟಿ ಅವರು ಸಾವನ್ನಪ್ಪಿದ್ದಾರೆ. …

Read More »

ನೀರಿನ ಟ್ಯಾಂಕ್ ಗೆ ಬಿದ್ದು ಮಹಿಳೆ ಆತ್ಮಹತ್ಯೆ : ಮೂರು ದಿನದಿಂದ ಇದೇ ಟ್ಯಾಂಕ್‌ ನ ನೀರನ್ನು ನಿವಾಸಿಗಳು ಇದೇ ನೀರನ್ನು ಸೇವಿಸಿದ್ದಾರೆ.

ಬೆಂಗಳೂರು: ನೀರಿನ ಟ್ಯಾಂಕ್ ಗೆ ಬಿದ್ದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಯಲಹಂಕನ್ಯೂ ಟೌನ್ ನ ನಾಲ್ಕನೆ ಹಂತದಲ್ಲಿ ಘಟನೆ ನಡೆದಿದೆ. ಶುಕ್ರವಾರದಿಂದ ಕಾಣೆಯಾಗಿದ್ದ ಮಹಿಳೆ ಅಪಾರ್ಟ್ಮೆಂಟ್ ನ ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಪತ್ತೆಯಾಗಿದ್ದಾರೆ. ಶುಕ್ರವಾರ ಕಾಣೆಯಾದ ನಂತರ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು. ಹಣಕಾಸಿನ‌ ವಿಚಾರವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಭಾನುವಾರ ಮಹಿಳೆಯ ಶವ ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಪತ್ತೆಯಾಗಿದೆ. ಆದರೆ ಕಳೆದ ಮೂರು …

Read More »

ಕರ್ನಾಟಕದಲ್ಲಿ ಒಟ್ಟು ಕೊವಿಡ್ ಸೋಂಕಿತರ ಸಂಖ್ಯೆ 1 ಲಕ್ಷ ಗಡಿ ದಾಟಿದೆ

ಬೆಂಗಳೂರು: ಕರ್ನಾಟಕದಲ್ಲಿ ಇಂದು 5324 ಜನರಿಗೆ ಕೊರೊನಾ ವೈರಸ್ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 101465ಕ್ಕೆ ಏರಿಕೆಯಾಗಿದೆ.ಬೆಂಗಳೂರಿನಲ್ಲಿ ಇಂದು 1470 ಜನರಿಗೆ ಕೊವಿಡ್ ದೃಢಪಟ್ಟಿರುವುದು ಖಚಿತವಾಗಿದೆ. ಇಂದಿನ ವರದಿ ಬಳಿಕ ಸಿಲಿಕಾನ್ ಸಿಟಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 46923ಕ್ಕೆ ಏರಿಕೆಯಾಗಿದೆ. ನಗರದಲ್ಲಿಂದು 784 ಜನರು ಗುಣಮುಖರಾಗಿದ್ದು, 26 ಜನ ಮೃತಪಟ್ಟಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 917. ರಾಜ್ಯದಲ್ಲಿಂದು 75 ಮಂದಿ ಕೊರೊನಾಗೆ …

Read More »

ಬೆಳಗಾವಿ ಜಿಲ್ಲೆಯಲ್ಲಿ ಸೋಮವಾರದ ಕೊರೋನಾ ಸೋಂಕಿತರ ಮಾಹಿತಿ

ಬೆಳಗಾವಿ ಜಿಲ್ಲೆಯಲ್ಲಿ ಕಿಲ್ಲರ್ ವೈರಸ್ ಕ್ರೌರ್ಯ ಮುಂದುವರೆದಿದೆ ಇಂದು ಬೆಳಗಾವಿ ಜಿಲ್ಲೆಯಲ್ಲಿ ಒಂದೇ ದಿನ 155 ಸೊಂಕಿತರು ಪತ್ತೆಯಾಗಿದ್ದಾರೆ.ಆದರೆ ಇವತ್ತು ಒಂದೇ ದಿನ 38 ಜನ ಡಿಸ್ಚಾರ್ಜ್. ಇಂದು ಮಹಾಮಾರಿ ವೈರಸ್ ಗೆ 6 ಜನ ಬಲಿಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಪ್ರತಿದಿನ ನೂರುಗಟ್ಟಲೇ ಸೊಂಕಿತರು ಪತ್ತೆಯಾಗುತ್ತಿದ್ದಾರೆ.ಸಿಂಗಲ್ ,ಡಬಲ್,ತ್ರಿಬಲ್ ಸೆಂಚ್ಯುರಿ ಬಾರಿಸಿರುವ ಈ ಒಂದೇ ದಿನ 155 ಜನರಿಗೆ ವಕ್ಕರಿಸಿದೆ. ಬೆಳಗಾವಿ ಜಿಲ್ಲೆಯಲ್ಲಿ ಇವತ್ತಿಗೆ ಸೊಂಕಿತರ ಸಂಖ್ಯೆ 2304, ಮರಣದ ಸಂಖ್ಯೆ …

Read More »

ಬೆಳಗಾವಿ | ಆರ್‌ಟಿಇ; ಶೇ 50ಕ್ಕಿಂತಲೂ ಕಡಿಮೆ ಅರ್ಜಿ ಸಲ್ಲಿಕೆ!…

ಬೆಳಗಾವಿ: ಶಿಕ್ಷಣ ಹಕ್ಕು ಕಾಯ್ದೆಗೆ (ಆರ್‌ಟಿಇ) ತಿದ್ದುಪಡಿ ತಂದ ನಂತರ ಜಿಲ್ಲೆಯಲ್ಲಿರುವ ‌ಅನುದಾನಿತ ಹಾಗೂ ಅನುದಾನ ರಹಿತ (ಖಾಸಗಿ) ಶಾಲೆಗಳಲ್ಲಿರುವ ಸೀಟುಗಳ ಬೇಡಿಕೆ ತೀವ್ರ ಕುಸಿತ ಕಂಡುಬಂದಿದೆ. ಪ್ರಸಕ್ತ ಸಾಲಿನಲ್ಲಿ ಶೇ 50ಕ್ಕಿಂತಲೂ ಕಡಿಮೆ ಬೇಡಿಕೆ ಕಂಡುಬಂದಿದೆ. ಒಟ್ಟು 1966 ಸೀಟುಗಳ ಪೈಕಿ ಕೇವಲ 883 ಸೀಟುಗಳಿಗೆ ಮಾತ್ರ ಅರ್ಜಿ ಸಲ್ಲಿಕೆಯಾಗಿರುವುದೇ ಇದಕ್ಕೆ ಸಾಕ್ಷಿ. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 40 ಅನುದಾನಿತ ಹಾಗೂ 5 ಅನುದಾನ ರಹಿತ ಶಾಲೆಗಳು ಆರ್‌ಟಿಇ ವ್ಯಾಪ್ತಿ …

Read More »

ಹೈಕಮಾಂಡ್ ನಾಯಕರಿಗೆ ಶಾಕ್ ಕೊಟ್ಟ B.S.Y……….

ಬೆಂಗಳೂರು: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಏರಿಕೆ ಒಂದು ವರ್ಷದ ಸಂಭ್ರಮದಲ್ಲಿರುವಾಗಲೇ ಹೈಕಮಾಂಡ್‌ ನಾಯಕರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಶಾಕ್‌ ನೀಡಿದ್ದಾರೆ. ಬಿಜೆಪಿ ಹೈಕಮಾಂಡ್, ರಾಜ್ಯ ಬಿಜೆಪಿ ಘಟಕಕ್ಕೆ ಗೊತ್ತಿಲ್ಲದೆ ನಿಗಮ ಮಂಡಳಿಗೆ ಶಾಸಕರನ್ನು ಯಡಿಯೂರಪ್ಪ ನೇಮಕ ಮಾಡಿದ್ದಾರೆ. ಈಗ ಪಕ್ಷ, ಸಂಘದ ನಿಷ್ಠಾವಂತ ಕಾರ್ಯಕರ್ತರಿಗೂ ಮಣೆ ಹಾಕದೇ ನೇಮಿಸಿದ್ದು ಸರಿಯಲ್ಲ ಎಂದು ಬಿಜೆಪಿ ರಾಜ್ಯ ಘಟಕ ಅಸಮಾಧಾನ ವ್ಯಕ್ತಪಡಿಸಿದೆ. ಪಕ್ಷಕ್ಕೆ ಸಂಬಂಧಿಸಿದ ಯಾವುದೇ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಮುನ್ನ ಪಕ್ಷದ ನಾಯಕರ …

Read More »

ಲಾಕ್‍ಡೌನ್ ಎಫೆಕ್ಟ್: ಅಕ್ಷಯ್ ಜೊತೆ ನಟಿಸಿದ್ದ ಬಾಲಿವುಡ್ ನಟನಿಂದ ತರಕಾರಿ ಮಾರಾಟ!

ಮುಂಬೈ: ಮಹಾಮಾರಿ ಕೊರೊನಾ ಘಟಾನುಘಟಿಗಳಿಂದ ಹಿಡಿದು ಸಾಮಾನ್ಯ ಜನರವರೆಗೂ ಸಂಕಷ್ಟಕ್ಕೀಡು ಮಾಡಿದೆ. ಹಲವು ಮಂದಿ ಬಡವರ ಬದುಕನ್ನೇ ಕಸಿದುಕೊಂಡಿದೆ. ಅಂತೆಯೇ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ನಟಿಸಿದ್ದ ನಟನೊಬ್ಬ ತನ್ನ ಬದುಕಿನ ಬಂಡಿ ದೂಡಲು ತರಕಾರಿ ಮಾರಾಟದತ್ತ ಮುಖಮಾಡಿದ್ದಾರೆ. ಹೌದು. ಅಕ್ಷಯ್ ಕುಮಾರ್ ನಟನೆಯ ಸೂರ್ಯವಂಶಿಯಲ್ಲಿ ನಟಿಸಿದ್ದ ಕಾರ್ತಿಕ ಸಾಹೋ ಅವರೇ ತರಕಾರಿ ಮಾರುತ್ತಾ ಜೀವನ ನಡೆಸುವ ನಟರಾಗಿದ್ದಾರೆ. ಮೂಲತಃ ಒಡಿಶಾದ ಕೇಂದ್ರಪದ ಜಿಲ್ಲೆಯ ಗರದ್ಪುರ ಬ್ಲಾಕ್ ನಿವಾಸಿಯಾಗಿರುವ …

Read More »

ಸಂತೆ ವ್ಯಾಪಾರಿಗಳಿಗೆ ಪೊಲೀಸರಿಂದ ಲಾಠಿ ಏಟು……..

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದೆ. ಹೀಗಾಗಿ ಕೊಡಗು ಜಿಲ್ಲೆಯಲ್ಲಿ ಸಂತೆಗಳನ್ನು ನಡೆಸದಂತೆ ನಿರ್ಬಂಧ ಹೇರಲಾಗಿದೆ. ಆದರೂ ನಿಯಮ ಉಲ್ಲಂಘಿಸಿ ಸೋಮವಾರಪೇಟೆಯಲ್ಲಿ ಇಂದು ವ್ಯಾಪಾರಿಗಳು ಸಂತೆಯಲ್ಲಿ ಅಂಗಡಿ ಹಾಕಿದ್ದರು. ವಿಷಯ ತಿಳಿದ ಪೊಲೀಸರು ಅಂಗಡಿಗಳನ್ನು ತೆರವು ಮಾಡುವಂತೆ ಖಡಕ್ಕಾಗಿ ಹೇಳಿದರೂ, ಕ್ಯಾರೆ ಎನ್ನಲಿಲ್ಲ. ಆಗ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಎಷ್ಟೇ ಎಚ್ಚರಿಕೆ ನೀಡಿದರೂ ಕೇಳದ ಹಿನ್ನೆಲೆ ಪೊಲೀಸರಿಗೆ ಬೇರೆ ದಾರಿಯಿಲ್ಲದೆ ಲಾಠಿ ರುಚಿ ತೋರಿಸಿದರು. …

Read More »

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮತ್ತೆ ಲಾಕ್‍ಡೌನ್ ಜಾರಿ ಇಲ್ಲ : ಸಿಎಂ

ಬೆಂಗಳೂರು,ಜು.27-ರಾಜ್ಯದಲ್ಲಿ ಇನ್ನು ಮುಂದೆ ಯಾವುದೇ ಕಾರಣಕ್ಕೂ ಲಾಕ್‍ಡೌನ್ ಜಾರಿ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮತ್ತೆ ಪುನರುಚ್ಚರಿಸಿದ್ದಾರೆ. ಇನ್ನು ಮುಂದೆ ಲಾಕ್‍ಡೌನ್ ಕುರಿತಂತೆ ನಾನು ಚರ್ಚೆಯನ್ನೇ ಮಾಡುವುದಿಲ್ಲ. ಈಗಾಗಲೇ 45 ದಿನ ರಾಜ್ಯದಲ್ಲಿ ಲಾಕ್‍ಡೌನ್ ಜಾರಿ ಮಾಡಲಾಗಿದೆ. ಪುನಃ ಅದರ ಬಗ್ಗೆ ಚರ್ಚೆಯೇ ಅಪ್ರಸ್ತುತ ಎಂದರು. ರಾಜ್ಯ ಸರ್ಕಾರ ಒಂದು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಕಾರ್ಯಕ್ರಮದಲ್ಲಿ ಹಮ್ಮಿಕೊಂಡಿದ್ದ ಸವಾಲುಗಳ ವರ್ಷ, ಪರಿಹಾರದ …

Read More »

ಐಶ್ವರ್ಯಾ ರೈ, ಪುತ್ರಿಗೆ ಕೊರೊನಾ ನೆಗೆಟಿವ್- ಆಸ್ಪತ್ರೆಯಿಂದ ಡಿಸ್ಚಾರ್ಜ್

ಮುಂಬೈ: ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಪುತ್ರಿ ಆರಾಧ್ಯ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇತ್ತೀಚೆಗಷ್ಟೆ ನಟಿ ಐಶ್ವರ್ಯಾ ರೈ ಮತ್ತು ಆರಾಧ್ಯ ಇಬ್ಬರಿಗೂ ಕೊರೊನಾ ಪಾಸಿಟಿವ್ ಬಂದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇದೀಗ ಅವರು ಕೋವಿಡ್ ಡೆಸ್ಟ್ ಮಾಡಿಸಿದ್ದು, ವರದಿಯಲ್ಲಿ ನೆಗೆಟಿವ್ ಬಂದಿದೆ. ಅಲ್ಲದೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಕೂಡ ಆಗಿದ್ದಾರೆ. ಈ ಬಗ್ಗೆ ಅಭಿಷೇಕ್ ಬಚ್ಚನ್ ಟ್ವಿಟ್ಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ. ನಿಮ್ಮ ನಿರಂತರ ಪ್ರಾರ್ಥನೆ …

Read More »