ಸಮಾಜದ ಸಮಸ್ಯೆ ಸರ್ಕಾರದ ಗಮನಕ್ಕೆ ತರುವಂತಾಗಲಿ/ತನ್ನದೆ ಆದ ಕಾರ್ಯಗಳ ಮೂಲಕ ಎಲ್ಲರ ವಿಶ್ವಾಸ ಗಳಿಸಲಿ/ಲಕ್ಷ್ಮೀ ನ್ಯೂಸ್ ಗೆ ಶುಭ ಹಾರೈಸಿದ ಶಾಸಕ ಸತೀಶ ಜಾರಕಿಹೊಳಿ. ಜನೇವರಿ 1,2020 ರಿಂದ ನೂತನವಾಗಿ ಪ್ರಾರಂಭವಾದ ಲಕ್ಷ್ಮೀ ನ್ಯೂಸ್ ( ವೆಬ್ ಪೇಜ್ ) ಗೆ ಯಮಕನಮರ್ಡಿ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಶುಭ ಹಾರೈಸಿ ಜನರ ಸಮಸ್ಯೆಗಳ ಬಗ್ಗೆ ಸರ್ಕಾರದ ಕಣ್ತೆರೆಯುವ ಕೆಲಸ ಮಾಡಲಿ ಎಂದರು. ಶನಿವಾರ …
Read More ». ಚಿದಾನಂದ ಮೂರ್ತಿ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ.
ಗೋಕಾಕ: ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ನೀಡುವಲ್ಲಿ ಶ್ರಮಿಸಿದ ನಾಡಿನ ಹಿರಿಯ ಸಂಶೋಧಕ, ಇತಿಹಾಸಕಾರ ಮತ್ತು ಕನ್ನಡಪರ ಹೋರಾಟಗಾರರಾಗಿದ್ದ ಡಾ. ಚಿದಾನಂದ ಮೂರ್ತಿ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ. ಸಂಶೋಧನಾ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿ ಮಹತ್ತರ ಸಾಧನೆ ಮಾಡಿದ ಡಾ.ಚಿದಾನಂದ ಮೂರ್ತಿ ಅವರು ಬಸವಣ್ಣನವರ ಬಗ್ಗೆ ಹಲವು ಕೃತಿಗಳನ್ನು ರಚನೆ ಮಾಡಿದ್ದಾರೆ. ಜೊತೆಗೆ ಕನ್ನಡ ಶಾಸನಗಳ …
Read More »ಹುಟ್ಟು ಹಬ್ಬದ ಹಿನ್ನಲ್ಲೆಯಲ್ಲಿಗಾನ ಗಂಧರ್ವ ಕೆ.ಜೆ ಯೇಸುದಾಸ್ ಮೂಕಾಂಬಿಕಾ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ
ಗಾನ ಗಂಧರ್ವ ಕೆ.ಜೆ ಯೇಸುದಾಸ್ ಅವರು ತಮ್ಮ ಹುಟ್ಟು ಹಬ್ಬದ ಹಿನ್ನಲ್ಲೆಯಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ತಮ್ಮ 80ನೇ ವರ್ಷದ ಹುಟ್ಟುಹಬ್ಬವನ್ನು ಯೇಸುದಾಸ್ ಅವರು ಧಾರ್ಮಿಕವಾಗಿ ಆಚರಿಸಿಕೊಂಡಿದ್ದಾರೆ. ಪ್ರತಿ ವರ್ಷ ಯೇಸುದಾಸ್ ಅವರು ತನ್ನ ಹುಟ್ಟುಹಬ್ಬದ ದಿನದಂದು ಉಡುಪಿ ಜಿಲ್ಲೆಯ ಕೊಲ್ಲೂರಿಗೆ ಆಗಮಿಸುತ್ತಾರೆ. ಅಂತಯೇ ಈ ವರ್ಷ ಕೂಡ ತಾಯಿ ಮೂಕಾಂಬಿಕೆಯ ದರ್ಶನ ಮಾಡಿದ ಅವರು, ಕುಟುಂಬ ಸಮೇತರಾಗಿ ಚಂಡಿಕಾ ಹೋಮ ಹಾಗೂ ವಿಶೇಷ …
Read More »ನಾಳೆ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ
ಸಾಹಿತಿ ಡಾ.ಎಂ.ಚಿದಾನಂದಮೂರ್ತಿ ನಿಧನ ಹಿನ್ನಲೆಯಲ್ಲಿ ನಾಳೆ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಸರ್ಕಾರಿ ಗೌರವಗಳೊಂದಿಗೆ ನಾಳೆ ಅಂತ್ಯಕ್ರಿಯೆ ನೆರವೇರಿಸುತ್ತೇವೆ. ಚಿದಾನಂದಮೂರ್ತಿಯವರ ಸಾವು ನೋವುಂಟು ಮಾಡಿದೆ. ಕನ್ನಡ ನಾಡು, ನುಡಿ ಅಸ್ಮಿತೆಗಾಗಿ ಹೋರಾಟ ಮಾಡುತ್ತಿದ್ದವರು. ಅವರ ನಿಧನದಿಂದ ಕನ್ನಡ ಸ್ವಾರಸ್ವತಲೋಕಕ್ಕೆ ತುಂಬಾ ನಷ್ಟವಾಗಿದೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದಿದ್ದಾರೆ. ನಾನು ಹಿಂದೆ ಸಿಎಂ ಆಗಿದ್ದಾಗಲೇ ಚಿದಾಮೂರ್ತಿಯವರಿಗೆ …
Read More »ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ತಾಯಿ ವಿಧಿವಶರಾಗಿದ್ದಾರೆ.
ಹುಬ್ಬಳ್ಳಿ ಮಾಜಿ ಮುಖ್ಯಮಂತ್ರಿ ಹಾಗೂ ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ತಾಯಿ ವಿಧಿವಶರಾಗಿದ್ದಾರೆ. ಬಸವಣ್ಣೆಮ್ಮ ಶಿವಪ್ಪ ಶೆಟ್ಟರ್ (87 ) ಇಂದು ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಹಲವಾರು ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಅಕ್ಕನಬಳಗದಲ್ಲಿ ಸಕ್ರಿಯರಾಗಿದ್ದರು. ಕೇಶ್ವಾಪುರದ ಶಬರಿ ನಗರದಲ್ಲಿ ತಮ್ನ ಇನ್ನೊಬ್ಬ ಪುತ್ರ ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ನಿವಾಸದಲ್ಲಿ ಇದ್ದಾಗ ಏಕಾಏಕಿ ಎದೆನೋವು ಕಾಣಿಸಿಕೊಂಡು ವಿಧಿವಶರಾಗಿದ್ದಾರೆ. ಬಸವಣ್ಣೆಮ್ಮ ಶಿವಪ್ಪ ಶೆಟ್ಟರ್ ನಿಧನಕ್ಕೆ …
Read More »ಹಿರಿಯ ಸಂಶೋಧಕ, ಸಾಹಿತಿ, ಕನ್ನಡ ತಜ್ಞ ಡಾ.ಎಂ.ಚಿದಾನಂದ ಮೂರ್ತಿ ಇಂದು ಬೆಳಗಿನಜಾವ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಹಿರಿಯ ಸಂಶೋಧಕ, ಸಾಹಿತಿ, ಕನ್ನಡ ತಜ್ಞ ಡಾ.ಎಂ.ಚಿದಾನಂದ ಮೂರ್ತಿ ಇಂದು ಬೆಳಗಿನಜಾವ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ನೇರ ಮಾತಿನಿಂದ ಪ್ರಸಿದ್ಧರಾಗಿದ್ದ ಚಿದಾನಂದಮೂರ್ತಿ ಕನ್ನಡ ಭಾಷೆ, ಕನ್ನಡ ನಾಡಿನ ಉಳಿವಿಗಾಗಿ ದೊಡ್ಡ ಕೊಡುಗೆ ನೀಡಿದ್ದರು. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನ ಸಿಗಲು ದೊಡ್ಡ ಕೊಡುಗೆ ನೀಡಿದ್ದರು. ಇತಿಹಾಸ, ಸಾಹಿತ್ಯ ಕ್ಷೇತ್ರದಲ್ಲಿ ಮೌಲಿಕ ಕೊಡುಗೆ ನೀಡಿದ್ದರು. ಕರ್ನಾಟಕದ ಮೂಲೆ ಮೂಲೆಯ ಇತಿಹಾಸವನ್ನು ಅಧ್ಯಯನ ಮಾಡಿದ್ದರು. ಒಂದರ್ಥದಲ್ಲಿ ನಡೆದಾಡುವ ಜ್ಞಾನಕೋಶದಂತಿದ್ದರು. ಮುಖ್ಯಮಂತ್ರಿ …
Read More »ಮಣಿಪಾಲದ ಜಿ.ಪಂ.ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ
ಮಣಿಪಾಲ ಉಡುಪಿ ಜಿಲ್ಲೆ ಮಣಿಪಾಲದ ಜಿ.ಪಂ.ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆಹಾರ, ನಾಗರಿಕರ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖಾ ಪ್ರಗತಿ ಪರಿಶೀಲನಾ ಸಭೆಯನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ ನಡೆಸಿ, ಸಭೆಯನ್ನುದ್ದೇಶಿಸಿ ಮಾತನಾಡಿದರು. ಸ್ವಸಹಾಯ ಸಂಘಗಳಿಗೆ …
Read More »: ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಬ್ರಿಟಿಷರ ಕಾಲದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮೇಲೆ ಇಷ್ಟೊಂದು ದಬ್ಬಾಳಿಕೆ ಆಗಿರಲಿಕ್ಕಿಲ್ಲ
ಬೆಂಗಳೂರು, ಜ. 10: ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಬ್ರಿಟಿಷರ ಕಾಲದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮೇಲೆ ಇಷ್ಟೊಂದು ದಬ್ಬಾಳಿಕೆ ಆಗಿರಲಿಕ್ಕಿಲ್ಲ. ಅದಕ್ಕಿಂತ ಹೆಚ್ಚಿನ ದಬ್ಬಾಳಿಕೆ ಸಿಎಎ ವಿರೋಧಿ ಹೋರಾಟಗಾರರನ್ನು ಹತ್ತಿಕ್ಕಲು ರಾಜ್ಯ ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಜೊತೆಗೆ ಸಿಎಎ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಸಂದರ್ಭದಲ್ಲಿ ವಿವಿಧ ಕಡೆಗಳಲ್ಲಿ ಚಿತ್ರೀಕರಿಸಲಾಗಿದ್ದ 26 ನಿಮಿಷ 6 ಸೆಕೆಂಡುಗಳ ಸ್ಪೋಟಕ ವಿಡಿಯೊವನ್ನು ಅವರು …
Read More »ಇಂದಿನಿಂದ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಪ್ರಿ-ಪೇಯ್ಡ್ ಆಟೋ ಸೇವೆ ಪ್ರಾರಂಭ.
ಇಂದಿನಿಂದ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಪ್ರಿ-ಪೇಯ್ಡ್ ಆಟೋ ಸೇವೆ ಪ್ರಾರಂಭ. ಬೆಂಗಳೂರು ಮೂಲದ ಪ್ರಿ-ಪೇಯ್ಡ್ ಆಟೋ ಮತ್ತು ಟ್ಯಾಕ್ಸಿ ಸರ್ವಿಸ್ ಈ ಸೌಲಭ್ಯವನ್ನು ಸ್ಥಾಪಿಸಿದೆ (ಪಿಎಎಟಿಎಸ್), ಪೊಲೀಸ್ ಮಾರ್ಗದರ್ಶನದಲ್ಲಿ ಈ ವ್ಯವಸ್ಥೆಯನ್ನು ಮೇಲ್ವಿಚಾರಣೆ ಮಾಡುವರು. ಈಗ ಆರಂಭದಲ್ಲಿ ಮೊದಲು ಬೆಳಿಗ್ಗೆ 5 ರಿಂದ ರಾತ್ರಿ 10 ರವರೆಗೆ ಸೇವೆ ಲಭ್ಯವಿರುತ್ತದೆ. ಮತ್ತು 1.6 ಕಿ.ಮೀ.ಗೆ 28 ರೂಪಾಯಿ ಚಾರ್ಜ್ ಮಾಡುವರು. ನಗರದೊಳಗಿನ ಎಲ್ಲಾ ಸ್ಥಳಗಳಿಗೆ ಮತ್ತು ಧಾರವಾಡ ಎಸ್‌ಡಿಎಂ ವೈದ್ಯಕೀಯ …
Read More »ಬನದ ಹುಣ್ಣಿಮೆಗೆ ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ತೆರಳಿದ್ದ ಭಕ್ತರಿಬ್ಬರು ಅಪಘಾತಕ್ಕೆ ಬಲಿಯಾಗಿದ್ದಾರೆ.
ಬೆಳಗಾವಿ.. ಬನದ ಹುಣ್ಣಿಮೆಗೆ ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ತೆರಳಿದ್ದ ಭಕ್ತರಿಬ್ಬರು ಅಪಘಾತಕ್ಕೆ ಬಲಿಯಾಗಿದ್ದಾರೆ. ಯಲ್ಲಮ್ಮ ದೇವಿ ಭಕ್ತಾಧಿಗಳ ಮೇಲೆ ರಾಜ್ಯ ಸಾರಿಗೆ ಬಸ್ ಹರಿದು ಇಬ್ಬರು ಮೃತಪಟ್ಟಿದ್ದಾರೆ. ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ಬಸ್ಸಿನ ಬ್ರೇಕ್ ಫೇಲ್ ಆಗಿದ್ದರಿಂದ ನಡೆದುಕೊಂಡು ಹೋಗುತ್ತಿದ್ದ ಇವರ ಮೇಲೆ ಸವದತ್ತಿ ತಾಲೂಕಿನ ಯಲ್ಲಮ್ಮನಗುಡ್ಡ ಜೋಗುಳಭಾವಿ ಬಳಿ ಶುಕ್ರವಾರ ಈ ಘಟನೆ ನಡೆದಿದೆ. ಬೆಳಗಾವಿ ಶಹಾಪುರ ನಿವಾಸಿ ನಿಕಿತಾ ರಮೇಶ್ ಹದಗಲ್(25), ಚಿಂಚಕಂಡಿ ನಿವಾಸಿ ಬಸಪ್ಪ …
Read More »