ಖ್ಯಾತ ನಟ ಮೋಹನ್ ಬಾಬು ಅವರ ಕುಟುಂಬದಲ್ಲಿ ಬಿರುಕು ಮೂಡಿದ್ದು, ಆ ಕುರಿತು ವರದಿ ಮಾಡಲು ತೆರಳಿದ್ದ ಪತ್ರಕರ್ತರ ಮೇಲೆ ಅವರು ಕೋಪಗೊಂಡಿದ್ದರು. ವಿವಾದದ ಕುರಿತು ಪ್ರಶ್ನೆ ಕೇಳಿದ ಟಿವಿ9 ವರದಿಗಾರ ರಂಜಿತ್ ಕುಮಾರ್ ಮೇಲೆ ಮೋಹನ್ ಬಾಬು ಅವರು ಹಲ್ಲೆ ಮಾಡಿದ್ದರು. ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಸದ್ಯಕ್ಕೆ ರಂಜಿತ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ತೆರಳಿ ರಂಜಿತ್ ಕುಮಾರ್ ಅವರ ಆರೋಗ್ಯವನ್ನು ಮೋಹನ್ ಬಾಬು ವಿಚಾರಿಸಿದ್ದಾರೆ. ಅಲ್ಲದೇ, ಅವರ …
Read More »ದೇವಸ್ಥಾನಗಳಿಗೆ ಪ್ರವಾಸ ಹೋಗುತ್ತಿದ್ದ ಖಾಸಗಿ ಬಸ್ ಪಲ್ಟಿ
ಮಂಗಳೂರಿನಿಂದ ಸಾಗರ ತಾಲೂಕಿನ ದೇವಸ್ಥಾನಗಳಿಗೆ ಪ್ರವಾಸ ಹೋಗುತ್ತಿದ್ದ ಖಾಸಗಿ ಬಸ್ ಅರಳಗೊಡು ಬಳಿ ಪಲ್ಟಿಯಾಗಿದೆ. 60 ಪ್ರಯಾಣಿಕರಲ್ಲಿ 21 ಜನ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಸಕ ಗೋಪಾಲಕೃಷ್ಣ ಬೇಳೂರು ಗಾಯಾಳುಗಳಿಗೆ ಚಿಕಿತ್ಸೆ ಒದಗಿಸಲು ಸಹಾಯ ಮಾಡಿದ್ದಾರೆ. ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Read More »ವಿಶ್ವವಿಖ್ಯಾತ ತಬಲಾ ಮಾಂತ್ರಿಕ ಜಾಕಿರ್ ಹುಸೇನ್ (Zakir Hussain) ನಿಧನರಾಗಿದ್ದಾರೆ.
ಡಿಸೆಂಬರ್ : ವಿಶ್ವವಿಖ್ಯಾತ ತಬಲಾ ಮಾಂತ್ರಿಕ (73) ಜಾಕಿರ್ ಹುಸೇನ್ (Zakir Hussain) ನಿಧನರಾಗಿದ್ದಾರೆ. 73 ವಯಸ್ಸಿನ ಜಾಕಿರ್ ಅವರಿಗೆ ಕಳೆದ ಎರಡು ವಾರಗಳಿಂದ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡಿದ್ದು, ಹೀಗಾಗಿ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಆದರೆ ಭಾನುವಾರ ತಮ್ಮ ಕೊನೆಯುಸಿರೆಳೆದಿದ್ದಾರೆ. ಜಾಕಿರ್ ಹುಸೇನ್ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.ಭಾರತದ ಅತ್ಯಂತ ಪ್ರಸಿದ್ಧ ಶಾಸ್ತ್ರೀಯ ಸಂಗೀತಗಾರರಲ್ಲಿ ಒಬ್ಬರಾಗಿರುವ ಜಾಕಿರ್ ಹುಸೇನ್, ಪ್ರಸಿದ್ಧ ತಬಲಾ ವಾದಕ ಅಲ್ಲಾ ರಖಾರವರ ಹಿರಿಯ …
Read More »ಸೊಸೆಯನ್ನ ಮಂಚಕ್ಕೆ ಕರೆದ ಮಾವ : ಬರಲೊಪ್ಪದಕ್ಕೆ ಆಕೆಯ ಜೀವವನ್ನೇ ತೆಗೆದ!
ರಾಯಚೂರು, (ಡಿಸೆಂಬರ್ 15) : ಅತ್ಯಾಚಾರಕ್ಕೆ ಯತ್ನಸಿದ ವೇಳೆ ನಿರಾಕರಿಸಿದ್ದಕ್ಕೆ ಮಾವನೇ ತನ್ನ ಸೊಸೆಯನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ರಾಯಚೂರಿನ (Raichuru) ಜುಲಮಗೇರಾ ಗ್ರಾಮದಲ್ಲಿ ನಡೆದಿದೆ. ದುಳ್ಳಮ್ಮ (27) ಮೃತ ಮಹಿಳೆ. ರಾಮಲಿಂಗಯ್ಯ ಎನ್ನುವಾತ ಇದಕ್ಕೂ ಮುಂಚೆ ಎರಡ್ಮೂರು ಬಾರಿ ಸೊಸೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಬಳಿಕ ಗ್ರಾಮದ ಹಿರಿಯರು, ಕುಟುಂಬಸ್ಥರು ರಾಮಲಿಂಗಯ್ಯಗೆ ಬೈದು ಬುದ್ಧಿ ಹೇಳಿದ್ದರು. ಆದರೂ ಬುದ್ಧಿ ಕಲಿಯದ ಕಾಮುಕ ಮಾವ ರಾಮಲಿಂಗಯ್ಯ, ಮನೆಯಲ್ಲಿ ಯಾರು ಇಲ್ಲದ ವೇಳೆ …
Read More »ನನಗೆ ಸರ್ಕಾರಿ ನೌಕರಿನೇ ಬೇಡ ಎನ್ನವಂತಾಗಿದೆ. ಪಾನಿಪುರಿ, ಗೋಬಿ ಮಂಚೂರಿ ಅಂಗಡಿ ಇಟ್ಟುಕೊಂಡಿರುವವರು ಸುಖವಾಗಿ ಜೀವನ ಮಾಡುತ್ತಾರೆ.
ಹಾಸನ, (ಡಿಸೆಂಬರ್ 15): ನನಗೆ ಸರ್ಕಾರಿ ನೌಕರಿನೇ ಬೇಡ ಎನ್ನುವಂತಾಗಿದೆ ಎಂದು ಸರ್ಕಾರಿ ನೌಕರರ ಕೆಲಸದ ಒತ್ತಡದ ಬಗ್ಗೆ ಹೊಳೆನರಸೀಪುರ ತಹಶೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ಅವರು ಹೊರಹಾಕಿದ್ದಾರೆ. . ಸರ್ಕಾರಿ ನೌಕರರ ಸಂಘದ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ಒಬ್ಬ ತಹಶೀಲ್ದಾರ್, ಒಂದು ತಾಲ್ಲೂಕಿನ ಆಡಳಿತದ ಮುಖ್ಯಸ್ಥನಾಗಿದ್ದೇನೆ. ಈಗ ನನಗೆ ಸರ್ಕಾರಿ ನೌಕರಿನೇ ಬೇಡ ಎನ್ನವಂತಾಗಿದೆ. ಪಾನಿಪುರಿ, ಗೋಬಿ ಮಂಚೂರಿ ಅಂಗಡಿ ಇಟ್ಟುಕೊಂಡಿರುವವರು ಸುಖವಾಗಿ ಜೀವನ ಮಾಡುತ್ತಾರೆ. …
Read More »ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಗೆ ಏಕಕಾಲಕ್ಕೆ 52 ಟನ್ ಕಬ್ಬು ತಂದ ರೈತರು ; ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಂದ ಚಾಲನೆ.
ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಗೆ ಏಕಕಾಲಕ್ಕೆ 52 ಟನ್ ಕಬ್ಬು ತಂದ ರೈತರು ; ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಂದ ಚಾಲನೆ. ಗೋಕಾಕ : ರೈತರೊಬ್ಬರು ಏಕಕಾಲಕ್ಕೆ 52.070 ಟನ್ ಕಬ್ಬು ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಗೆ ತಂದಿದ್ದು ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ವಾಹನಕ್ಕೆ ಚಾಲನೆ ನೀಡಿ, ಹರ್ಷ ವ್ಯಕ್ತಪಡಿಸಿದರು. ಹಿರೇನಂದಿ ಗ್ರಾಮದಲ್ಲಿರುವ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಗೆ ರೈತರೊಬ್ಬರು ಏಕಕಾಲಕ್ಕೆ 52 ಟನ್ ಕಬ್ಬು ತಂದಿದ್ದು ಖುಷಿ …
Read More »ಎರಡು ತಿಂಗಳ ಹೆಣ್ಣು ಹಸುಗೂಸನ್ನು ತಾಯಿ ಕೆರೆಗೆ ಎಸೆದಿರುವಂತಹ ಮತ್ತೊಂದು ಅಮಾನವೀಯ ಘಟನೆ ಬೆಳಗಾವಿ ತಾಲೂಕಿನ ಕಣಬರಗಿ ಗ್ರಾಮದಲ್ಲಿ ನಡೆದಿದೆ.
ಬೆಳಗಾವಿ, ಡಿಸೆಂಬರ್ 15: ಮಗುವಿಗೆ ಪಿಡ್ಸ್ ಬರುತ್ತೆ ಅಂತಾ ಹೆತ್ತ ಎರಡು ತಿಂಗಳ ಹೆಣ್ಣು ಹಸುಗೂಸನ್ನು ತಾಯಿ (Mother) ಕೆರೆಗೆ ಎಸೆದಿರುವಂತಹ ಮತ್ತೊಂದು ಅಮಾನವೀಯ ಘಟನೆ ಬೆಳಗಾವಿ ತಾಲೂಕಿನ ಕಣಬರಗಿ ಗ್ರಾಮದಲ್ಲಿ ನಡೆದಿದೆ. ತಾಯಿ ಮಗುವನ್ನು ಕೆರೆಗೆ ಎಸೆಯುವುದನ್ನ ನೋಡಿದ ದನ, ಕರು ತೊಳೆಯುತ್ತಿದ್ದ ಯುವಕರು ತಕ್ಷಣವೇ ಕೆರೆಗೆ ಹಾರಿ ಮಗು ರಕ್ಷಣೆ ಮಾಡಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಣಬರಗಿ ಗ್ರಾಮದ ನಿವಾಸಿ ಶಾಂತಿ ಕರವಿನಕೊಪ್ಪ ಎಂಬುವವರು ಈ ಕೃತ್ಯವೆಸಗಿದ್ದಾರೆ. …
Read More »ಸಿಬಿಐ ತನಿಖೆಗೆ ಸಹಕರಿಸಿ; ಸಿಎಂ ಸಿದ್ದರಾಮಯ್ಯಗೆ ವಿಜಯೇಂದ್ರ ಸವಾಲು
ಬೆಂಗಳೂರು: ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿ.ವೈ. ವಿಜಯೇಂದ್ರ ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ. ಪ್ರಧಾನಮಂತ್ರಿ ಮೋದಿ ಈ ಆರೋಪವನ್ನು ಗಂಭೀರವಾಗಿ ಸ್ವೀಕರಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಆಗ್ರಹಿಸುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಮಾಡಿರುವ ಟ್ವೀಟ್ ಭಾರೀ ಸದ್ದು ಮಾಡುತ್ತಿದೆ. ಈ …
Read More »ಪತ್ರಿಕಾ ವಿತರಕರ ವಯಸ್ಸಿನ ಮಿತಿ 70 ವರ್ಷಕ್ಕೆ ಹೆಚ್ಚಳ
ಡಿಸೆಂಬರ್ 14: ಪತ್ರಿಕಾ ವಿತರಕರಿಗಾಗಿ ರೂಪಿಸಲಾಗಿರುವ ಯೋಜನೆಯ ವಯಸ್ಸಿನ ಮಿತಿಯನ್ನು ಹೆಚ್ಚಳ ಮಾಡಿದ್ದಕ್ಕಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ (kv prabhakar) ಅವರನ್ನು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಅವರು ಅಭಿನಂದಿಸಿದರು. ಅಸಂಘಟಿತ ವಲಯದಲ್ಲಿರುವ ಪತ್ರಿಕಾ ವಿತರಕ ಕಾರ್ಮಿಕರಿಗಾಗಿ ಕಾರ್ಮಿಕ ಇಲಾಖೆಯು ರೂಪಿಸಿರುವ ಯೋಜನೆಯ ವಯಸ್ಸಿನ ಮಿತಿಯನ್ನು ಈ ಮೊದಲು 16 …
Read More »ಗೃಹಲಕ್ಷ್ಮಿ ಹಣದಿಂದ ಬೋರ್ವೆಲ್ ಕೊರೆಸಿದ ಅತ್ತೆ-ಸೊಸೆ ಸಂತೋಷ ವ್ಯಕ್ತಪಡಿಸಿದ ;ಡಿ.ಕೆ .ಶಿ.
ಬೆಂಗಳೂರು, ಡಿಸೆಂಬರ್ 14: ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಿಂದ (Gruha Lakshmi Scheme) ಸಹಕಾರಿಯಾಗಿದೆ ಎಂದು ಕರ್ನಾಟಕದ ಸಾಕಷ್ಟು ಮಹಿಳೆಯರು ಈ ಹಿಂದೆ ಹೇಳಿಕೊಂಡಿದ್ದಾರೆ. ಗೃಹಲಕ್ಷ್ಮಿಯಿಂದ ಬಂದ ಹಣದಲ್ಲಿ ಮಹಿಳೆಯರು ಒಳ್ಳೆಯ ಕೆಲಸಗಳನ್ನು ಮಾಡಿದ ಉದಾಹರಣೆಗಳಿವೆ. ಇತ್ತೀಚೆಗೆ ಬೆಳಗಾವಿಯ ವೃದ್ಧೆಯೊಬ್ಬರು ಗೃಹಲಕ್ಷ್ಮಿ ಹಣದಿಂದ ಇಡೀ ಊರಿಗೆ ಹೋಳಿಗೆ ಊಟ ಹಾಕಿಸಿದ್ದರು. ಅದೇ ರೀತಿಯಾಗಿ ಇದೀಗ ಗದಗಿನ ಅತ್ತೆ-ಸೊಸೆ ಅದೇ ಹಣದಿಂದ ಬೋರ್ವೆಲ್ ಕೊರೆಸಿದ್ದಾರೆ. ಈ ಬಗ್ಗೆ ಸುದ್ದಿ ಮಾಡಿತ್ತು. ಅದನ್ನು ಉಲ್ಲೇಖಿಸಿ ಡಿಸಿಎಂ …
Read More »