Breaking News

ಇದು ಪವರ್‌ಫುಲ್ ಫ್ಯಾಮಿಲಿ ಪ್ಯಾಕ್ ಮೋಷನ್ ಪೋಸ್ಟರ್!………….

ಈ ವರ್ಷದ ಆರಂಭದಲ್ಲಿಯೇ ಒಂದಷ್ಟು ಟಾಕ್ ಕ್ರಿಯೇಟ್ ಮಾಡಿದ್ದ ಚಿತ್ರ ಫ್ಯಾಮಿಲಿ ಪ್ಯಾಕ್. ಈ ಚಿತ್ರ ತಯಾರಿಯ ಕಾಲದಲ್ಲಿಯೇ ಭರಪೂರ ಪ್ರಚಾರ ಪಡೆದುಕೊಂಡಿದ್ದಾರ ಹಿಂದೆ ಬಲವಾದ ಕಾರಣಗಳಿದ್ದಾವೆ. ಇದು ಪವರ್‍ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಪಿಆರ್‍ಕೆ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣಗೊಳ್ಳಲಿರೋ ಚಿತ್ರವೆಂಬುದು ಪ್ರಧಾನ ಕಾರಣವಾಗಿತ್ತು. ಅದಲ್ಲದೇ ಈ ಹಿಂದೆ ಸಂಕಷ್ಟಕರ ಗಣಪತಿ ಎಂಬ ಚೆಂದದ ಚಿತ್ರ ನಿರ್ದೇಶನ ಮಾಡಿದ್ದ ಅರ್ಜುನ್ ಕುಮಾರ್ ಎಸ್ ಫ್ಯಾಮಿಲಿ ಪ್ಯಾಕಿನ ಸಾರಥ್ಯ ವಹಿಸಿಕೊಂಡಿದ್ದಾರೆ. ಅದೂ …

Read More »

ಣ್ಣೆ ಏಟಿನಲ್ಲಿ 250 ಜನರಿಗೆ ಕಚ್ಚಿ ಓರ್ವನ ಸಾವಿಗೆ ಕಾರಣವಾಗಿದ್ದ ಮಂಗ.

ಲಕ್ನೋ: ಎಣ್ಣೆ ಏಟಿನಲ್ಲಿ 250 ಜನರಿಗೆ ಕಚ್ಚಿ, ಓರ್ವನ ಸಾವಿಗೆ ಕಾರಣವಾಗಿದ್ದ ಮಂಗವು ಜೀವಾವಧಿ ಶಿಕ್ಷೆಗೆ ಗುರಿಯಾದ ಘಟನೆ ಉತ್ತರ ಪ್ರದೇಶ ಮಿರ್ಜಾಪುರದಲ್ಲಿ ನಡೆದಿದೆ. ಮಿರ್ಜಾಪುರ ಜಿಲ್ಲೆಯ ನಿವಾಸಿ ಅತೀಂದ್ರಿಯ ಎಂಬವರು ‘ಕಲುವಾ’ ಹೆಸರಿನ ಮಂಗವನ್ನು ಸಾಕಿದ್ದರು. ಆದರೆ ಅವರು ಅದಕ್ಕೆ ನಿಯಮಿತವಾಗಿ ಮದ್ಯ ಕುಡಿಸುತ್ತಿದ್ದರು. ನಿಧಾನವಾಗಿ ಕೋತಿ ಮದ್ಯ ವ್ಯಸನಿಯಾಗಿತ್ತು. ಈ ಮಧ್ಯೆ ಅತೀಂದ್ರಿಯ ಮೃತಪಟ್ಟಿದ್ದರಿಂದ ಕೋತಿಗೆ ಮದ್ಯ ನೀಡುವವರೇ ಇಲ್ಲದಂತಾಗಿತ್ತು. ಕಲುವಾ ಮದ್ಯಕ್ಕಾಗಿ ಸ್ಥಳೀಯರ ಮೇಲೆ ಹಲ್ಲೆ …

Read More »

ಇಂದು ಮತ್ತೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ…………..

ನವದೆಹಲಿ: ದೇಶದಲ್ಲಿ ಕಳೆದ 11 ದಿನಗಳಿಂದ ಪೆಟ್ರೋಲ್, ಡೀಸಲ್ ಬೆಲೆ ಏರುತ್ತಲೇ ಇದ್ದು, 11ನೇ ದಿನವಾದ ಇಂದು ಪೆಟ್ರೋಲ್ ಬೆಲೆ 55 ಪೈಸೆ ಹಾಗೂ ಡೀಸೆಲ್ 69 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ಕೇವಲ 11 ದಿನಗಳಲ್ಲಿ ಪೆಟ್ರೋಲ್ ಬೆಲೆ 6 ರೂ. ಹಾಗೂ ಡೀಸೆಲ್ 6.49 ರೂ.ಗಳಷ್ಟು ಹೆಚ್ಚಳವಾಗಿದೆ. ಕಳೆದ 11 ದಿನಗಳಲ್ಲಿ ಪ್ರತಿ ದಿನ 20 ಪೈಸೆಯಿಂದ 80 ಪೈಸೆ ವರೆಗೂ ಪೆಟ್ರೋಲ್, ಡೀಸೆಲ್ ದರವನ್ನು ಹೆಚ್ಚಳ …

Read More »

200 ವರ್ಷದ ಹಳೆಯದಾದ ಶಿವನ ದೇವಾಲಯ ಪತ್ತೆ…….

ಹೈದರಾಬಾದ್: ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಸುಮಾರು 200 ವರ್ಷ ಹಳೆಯ ಶಿವ ದೇವಾಲಯ ಪತ್ತೆಯಾಗಿದೆ. ಪೆನ್ನಾ ನದಿ ಪಾತ್ರದಲ್ಲಿ ದೇವಾಲಯ ಪತ್ತೆಯಾಗಿದೆ. ಮರಳು ಗಣಿಗಾರಿಕೆ ವೇಳೆ ಶಿವ ದೇವಾಲಯ ಕಂಡು ಜನರು ಅಚ್ಚರಿಗೆಗೊಳಗಾಗಿದ್ದಾರೆ. ಸುಮಾರು 200 ವರ್ಷ ಹಳೆಯ ದೇಗುಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ.ದೇಗುಲದ ಗೋಪುರ ಕಾಣಿಸಿಕೊಂಡಿದ್ದು, ಕಲ್ಲುಗಳಿಂದ ಮಾಡಲ್ಪಟ್ಟಿದೆ. ಗೋಪುರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯರು ಮರಳಿನಲ್ಲಿ ಹುದುಗಿರುವ ದೇವಾಲಯ ತೆಗೆಯಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಈ ಸಂಬಂಧ …

Read More »

ಚೀನಾ ಸೈನಿಕರ ವಿರುದ್ಧ ಹೋರಾಡಿಹುತಾತ್ಮರಾದ ವೀರ ಯೋಧರಿಗೆ ನಮನಗಳು: ಬಿಎಸ್‍ವೈ.

ಬೆಂಗಳೂರು: ಚೀನಾ ಸೈನಿಕರ ವಿರುದ್ಧ ಹೋರಾಡಿ ಹುತಾತ್ಮರಾದ ಸೈನಿಕರ ತ್ಯಾಗ ಬಲಿದಾನಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನಮನಗಳನ್ನು ಸಲ್ಲಿಸುವ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಭಾರತ ಚೀನಾ ಗಡಿಯ ಗಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ಕೆಚ್ಚೆದೆಯಿಂದ ಹೋರಾಡಿ ಹುತಾತ್ಮರಾದ ನಮ್ಮ ವೀರ ಯೋಧರ ತ್ಯಾಗ ಬಲಿದಾನಕ್ಕೆ ಅನಂತ ನಮನಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಇಂತಹ ಕ್ಲಿಷ್ಟ ಸಂದರ್ಭವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ …

Read More »

ಪ್ರಧಾನಿ ಮೋದಿ ಸಿಎಂಗಳ ಜೊತೆ ಎರಡನೇ ಹಂತದ ಮೀಟಿಂಗ್-……….

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ ಸಿಎಂಗಳ ಜೊತೆಗೆ ಮಾತುಕತೆ ನಡೆಸುತ್ತಿದ್ದು ಇಂದು ಎರಡನೇ ಹಂತದ ಸಭೆ ನಡೆಯಲಿದೆ. ಮಧ್ಯಾಹ್ನ ಮೂರು ಗಂಟೆಗೆ ಸಭೆ ನಡೆಯಲಿದ್ದು, ಅತಿ ಹೆಚ್ಚು ಸೋಂಕು ಕಾಣಿಸಿಕೊಂಡಿರುವ ಹದಿನೈದು ರಾಜ್ಯಗಳ ಮುಖ್ಯಮಂತ್ರಿಗಳು ಜೊತೆ ಮೋದಿ ಸಭೆ ನಡೆಯಲಿದ್ದಾರೆ. ಮಂಗಳವಾರ ಕೇಂದ್ರಾಡಳಿತ ಪ್ರದೇಶಗಳು ಒಳಗೊಂಡಂತೆ ಒಟ್ಟು 21 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಸಭೆ ನಡೆಸಿದ್ದು, ಸೋಂಕು ನಿಯಂತ್ರಣದ …

Read More »

ಗ್ರಾಮದಲ್ಲಿ ಕೊರೊನಾ ಸೋಂಕಿತ- ಹಳ್ಳಿ ಬಿಟ್ಟು ಜಮೀನು ಸೇರಿದ ಜನ………..

ಯಾದಗಿರಿ: ರಾಜಕಾರಣಿಗಳು ಬೇಕಾಬಿಟ್ಟಿಯಾಗಿ ದೊಡ್ಡ ಸಮಾರಂಭದಲ್ಲಿ ಭಾಗವಹಿಸುವ ಮೂಲಕ ಲಾಕ್‍ಡೌನ್ ನಿಯಮ ಉಲ್ಲಂಘಿಸಿ, ಸಾಮಾಜಿಕ ಅಂತರ ಕಾಪಾಡುವುದು, ಮಾಸ್ಕ್ ಧರಿಸುವುದನ್ನು ನಿರ್ಲಕ್ಷಿಸುತ್ತಿದ್ದಾರೆ. ಇನ್ನೊಂದೆಡೆ ಕೊರೊನಾ ತಡೆಗೆ ಲಸಿಕೆ ಸಂಶೋಧನೆಯಾಗಿಲ್ಲ. ಹೀಗಿರುವಾಗ ಸಾಮಾಜಿಕ ಅಂತರವೇ ಮಹಾಮಾರಿ ತಡೆಗೆ ಆಯುಧವಾಗಿದೆ. ಇದನ್ನರಿತ ಗ್ರಾಮಸ್ಥರು ಕೊರೊನಾ ಬಂದ ಹಿನ್ನೆಲೆ ಹಳ್ಳಿ ಬಿಟ್ಟು ಜಮೀನು ಸೇರಿ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಕೊರೊನಾಗೆ ಸದ್ಯ ಔಷಧಿ ಇಲ್ಲ. ಹೀಗಾಗಿ ಮುನ್ನೆಚ್ಚರಿಕೆ ಕ್ರಮ ಅನುಸರಿಸುವುದು ಅನಿವಾರ್ಯವಾಗಿದೆ. ಮಾಸ್ಕ್ ಧರಿಸುವುದು, …

Read More »

ಕೊರೊನಾ ವೈರಸ್‌ – ರೋಗಿಯ ಜೀವ ಉಳಿಸಬಲ್ಲ ಮೊದಲ ಔಷಧಿ ಲಭ್ಯ…..

ಲಂಡನ್‌: ಸದ್ಯಕ್ಕೆ ಕೊರೊನಾ ವೈರಸ್‌ಗೆ ಔಷಧಿ ಲಭ್ಯವಿಲ್ಲ. ವಿಶ್ವದ ವಿವಿಧ ದೇಶಗಳಲ್ಲಿ ಔಷಧಿ ಕಂಡು ಹಿಡಿಯುವ ಕಾರ್ಯ ನಡೆಯುತ್ತಿದೆ. ಆದರೆ ಇಂಗ್ಲೆಂಡ್‌ ಸಂಶೋಧಕರು ಒಂದು ಡ್ರಗ್ಸ್‌ ನೀಡುವ ಮೂಲಕ ಕೋವಿಡ್‌ 19 ಗುಣಪಡಿಸಬಹುದು ಎಂದು ಹೇಳಿದ್ದಾರೆ. ಹೌದು. ವಿಶ್ವದೆಲ್ಲೆಡೆ ಕಡಿಮೆ ಬೆಲೆಗೆ ಸಿಗುವ ʼಡೆಕ್ಸಮೆಥಾಸೊನ್ʼ(Dexamethasone) ನೀಡಿದ್ರೆ ಕೋವಿಡ್‌ 19 ನಿಂದ ಬಳಲುತ್ತಿರುವ ರೋಗಿ ಗುಣವಾಗುವ ಸಾಧ್ಯತೆ ಹೆಚ್ಚು  ಎಂದು ಸಂಶೋಧಕರು ತಿಳಿಸಿದ್ದಾರೆ. ಡೆಕ್ಸಮೆಥಾಸೊನ್ ನೀಡಿದ್ದರಿಂದ ಇಂಗ್ಲೆಂಡ್‌ನಲ್ಲಿ ಸಾವಿನ ದವಡೆಯಲ್ಲಿದ್ದ ಸುಮಾರು …

Read More »

ನನಗೆ ಒಬ್ಬನೇ ಮಗ- ಕಣ್ಣೀರಿಟ್ಟ ಕರ್ನಲ್ ಸಂತೋಷ್ ಬಾಬು ತಾಯಿ…….

ಹೈದರಾಬಾದ್: ನನಗೆ ಒಬ್ಬನೇ ಮಗ ಎಂದು ಹುತಾತ್ಮ ಯೋಧ ಕರ್ನಲ್ ಸಂತೋಷ್ ಬಾಬು ಅವರ ತಾಯಿ ಕಣ್ಣೀರಿಟ್ಟಿದ್ದಾರೆ. ಭಾರತ-ಚೀನಾ ಮಧ್ಯೆ ಯುದ್ಧದ ಕಾರ್ಮೋಡ ಆವರಿಸುತ್ತಿದೆ. ಪದೇ ಪದೇ ಕಿರಿಕ್ ಮಾಡುವ ಚೀನಾ, ಯುದ್ಧೋನ್ಮಾದದಲ್ಲೇ ತೇಲಾಡುತ್ತಿದೆ. ಸೋಮವಾರ ರಾತ್ರಿ ನಡೆದ ದಾಳಿಯಲ್ಲಿ ಭಾರತೀಯ ಸೇನೆ ಕರ್ನಲ್ ಮತ್ತು ಇಬ್ಬರು ಸೈನಿಕರು ಹುತಾತ್ಮರಾಗಿದ್ದರು. ಇಂದು ರಾತ್ರಿ ಬಂದ ಮಾಹಿತಿ ಪ್ರಕಾರ ಒಟ್ಟು 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ …

Read More »

ಅಶೋಕ ವೆಂಕಪ್ಪ ಚಂದರಗಿ ಅವರನ್ನು ಎಂಎಲ್ಸಿ ಮಾಡುವಂತೆ

ಬೆಳಗಾವಿ: ಸಮಸ್ತ ಕರ್ನಾಟಕ ವಿಶೇಷವಾಗಿ ಉತ್ತರ ಕರ್ನಾಟಕ ಜಿಲ್ಲೆಗಳ ಜ್ಞಾನ ಅನುಭವ ಹೊಂದಿರುವ ಪ್ರಮುಖ ಕನ್ನಡ ಹೋರಾಟಗಾರ ಅಶೋಕ ವೆಂಕಪ್ಪ ಚಂದರಗಿ ಅವರನ್ನು ಎಂಎಲ್ಸಿ ಮಾಡುವಂತೆ ಕನ್ನಡಪರ ಹೋರಾಟಗಾರರ ಒಕ್ಕೂಟ ಆಗ್ರಹಿಸಿದೆ. ಇಂದು ಸಂಯುಕ್ತ ಸುದ್ದಿಗೋಷ್ಠಿಯಲ್ಲಿ ಕರವೇ ಮಹಾದೇವ ತಳವಾರ ಮತ್ತು ಹಿರಿಯ ಕನ್ನಡ ಮುಖಂಡರು ರಾಜ್ಯ ಬಿಜೆಪಿ ಸರಕಾರ ಮತ್ತು ಎಲ್ಲ ರಾಜಕೀಯ ಪಕ್ಷಗಳನ್ನು ಆಗ್ರಹಿಸಿದ್ದಾರೆ. ಕನ್ನಡ ನಾಡು-ನುಡಿ, ನೆಲ -ಜಲ ಹಾಗೂ ಸಾಮಾಜಿಕ ಸೇವಾ ವಲಯದಲ್ಲಿ ನೈಜ …

Read More »