ಕೊಣ್ಣೂರ:ಗೆಳೆಯರ ಜೊತೆ ನದಿಗೆ ಈಜಲು ಹೋಗಿ ನೀರು ಪಾಲಾದ ಘಟನೆ ಗೋಕಾಕ ತಾಲೂಕಿನ 9 ಕೊಣ್ಣೂರು ಗ್ರಾಮದಲ್ಲಿ ನಡೆದಿದೆ. ಫರೀದ್ ಅಸ್ಲಂ ಸೌ ದಾಗರ (೧೬) ಮೃತ ಯುವಕ. ಘಟಪ್ರಭಾ ನದಿಗೆ ಗೆಳೆಯರ ಜೊತೆ ಈಜಲು ಹೋಗಿದ್ದ. ಫರೀದ್ ಗೆ ಈಜು ಬರದೆ ನದಿ ದಡದಲ್ಲಿ ಕುಳಿತು ಸ್ನಾನ ಮಾಡುತ್ತಿದ್ದ ಇಂದು ನದಿಗೆ ನೀರು ಹೆಚ್ಚಿಗೆ ಇರುವುದರಿಂದ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದು, ಸುಳಿಯಲ್ಲಿ ಸಿಲುಕಿದ್ದ ನಂತರ ಸ್ಥಳೀಯರ ಸಹಾಯದಿಂದ …
Read More »ಮತ್ತೇ ಲಾಕ್ ಡೌನ್ ಆಗತ್ತಾ?..ಬಿಎಸ್ ವಾಯ ಹೇಳಿದ್ದೇನು..
ಬೆಂಗಳೂರು: ಕೋವಿಡ್-೧೯ ಸೋಂಕು ನಿಯಂತ್ರಣ ಉದ್ದೇಶದಿಂದ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಜಾರಿಮಾಡುವ ಉದ್ದೇಶವಿಲ್ಲ. ಆದರೆ ಜನ ಜಾಗೃತಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು ನಗರದಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ಕುರಿತಂತೆ ಮಹತ್ವದ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಅಷ್ಟೇ ಅಲ್ಲದೇ ವಾರಾಂತ್ಯದ ಕರ್ಫ್ಯೂ ಸಹ ಜಾರಿಗೊಳಿಸುವುದಿಲ್ಲ, ಆದರೆ ಜನರಲ್ಲಿ ಮಾಸ್ಕ್ ಧರಿಸುವ ಕುರಿತು ಮತ್ತಷ್ಟು ಜನಜಾಗೃತಿ ಮೂಡಿಸಲಾಗುವುದು
Read More »ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯ
ಬೆಂಗಳೂರು: ಇಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯವಾಗಿದೆ. ಇಂದು ಈ ಕಾರ್ಯಕ್ರಮಕ್ಕಾಗಿ ಡಿಕೆ ಶಿವಕುಮಾರ್ ಅವರ ಮನೆಗೆ ಎಂಸ್ ಕೃಷ್ಣ ಅವರ ಕುಟುಂಬ ಆಗಮಿಸಿತ್ತು. ಮೂರು ದಿನಗಳ ಹಿಂದೆಯಷ್ಟೇ ಎಸ್‍ಎಂಕೆ ನಿವಾಸಕ್ಕೆ ಡಿಕೆಶಿ ಕುಟುಂಬ ಹೋಗಿದ್ದರು. ಇಂದು ಗುರು-ಹಿರಿಯ ಸಮ್ಮಖದಲ್ಲಿ ದಿವಂಗತ ಸಿದ್ಧಾರ್ಥ ಅವರ ಪುತ್ರ ಅಮರ್ಥ್ಯ ಸುಬ್ರಮಣ್ಯಗೂ ಮತ್ತು …
Read More »ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ ನಕಲಿ ವಿಡಿಯೋ ಬಿಡುಗಡೆ ಮಾಡಿದ ಆರೋಪ……..?
ಭೋಪಾಲ್, ಜೂ.15- ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ ನಕಲಿ ವಿಡಿಯೋ ಬಿಡುಗಡೆ ಮಾಡಿದ ಆರೋಪದ ಮೇಲೆ ಭೋಪಾಲ್ ಕ್ರೈಂ ಬ್ರ್ಯಾಂಚ್ ಎಫ್‍ಐಆರ್ ದಾಖಲಿಸಿದೆ. ಬಿಜೆಪಿ ದಿಗ್ವಿಜಯ್ ಸಿಂಗ್ ವಿರುದ್ಧ ದೂರು ಸಲ್ಲಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ವಿಡಿಯೋವನ್ನು ಹರಿಬಿಟ್ಟಿರುವ ಆರೋಪದ ಮೇಲೆ ಐಪಿಸಿಯ ವಿಭಿನ್ನ ಸೆಕ್ಷನ್ ಗಳ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ. ಹೆಚ್ಚಿನ ಮಾಹಿತಿ ಇನ್ನೂ …
Read More »ಜೆಡಿಎಸ್ ಪರಿಷತ್ ಅಭ್ಯರ್ಥಿ ಆಯ್ಕೆ ಕುರಿತು ಗೌಡರ ನಿರ್ಧಾರವೇ ಫೈನಲ್
ಬೆಂಗಳೂರು, ಜೂ.15- ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‍ನ ಏಳು ಸದಸ್ಯ ಸ್ಥಾನಕ್ಕೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಆಯ್ಕೆ ಮಾಡುವ ಅಧಿಕಾರವನ್ನು ಪಕ್ಷದ ವರಿಷ್ಠರಿಗೆ ನೀಡಲಾಗಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಇಂದು ಮಧ್ಯಾಹ್ನ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಪಕ್ಷದಲ್ಲಿ ಹಲವು ಆಕಾಂಕ್ಷಿಗಳಿದ್ದು, ಒಂದು ಸ್ಥಾನ …
Read More »ಕೊರೊನಾ ಮಹಾಮಾರಿ ಬೆಂಗಳೂರಿನ ಮೂಲೆ ಮೂಲೆಗಳಿಗೂ ವ್ಯಾಪಿಸುತ್ತಿದೆ…………
ಬೆಂಗಳೂರು, ಜೂ.15-ಕೊರೊನಾ ಮಹಾಮಾರಿ ಬೆಂಗಳೂರಿನ ಮೂಲೆ ಮೂಲೆಗಳಿಗೂ ವ್ಯಾಪಿಸುತ್ತಿದೆ. 198 ವಾರ್ಡ್‍ಗಳಲ್ಲಿ ಈಗಾಗಲೇ 122 ವಾರ್ಡ್‍ಗಳಿಗೆ ಮಹಾಮಾರಿ ಕಾಲಿಟ್ಟಿದ್ದು, 142 ಕಂಟೇನ್ಮೆಂಟ್ ಜೋನ್‍ಗಳನ್ನು ಸ್ಥಾಪಿಸಲಾಗಿದೆ. ನಿನ್ನೆಯಿಂದೀಚೆಗೆ 32 ಕಂಟೈನ್‍ಮೆಂಟ್ ಪ್ರದೇಶಗಳನ್ನು ಗುರುತಿಸಲಾಗಿದ್ದು, ನಗರದ ಪ್ರತಿಯೊಂದು ರಸ್ತೆಗೂ ಬೀಳುತ್ತಿವೆ ಸೀಲ್‍ಡೌನ್ ಬ್ಯಾರಿಕೇಡ್‍ಗಳು. ನಗರದ ಎಂಟು ವಲಯಗಳಿಗೂ ಮಹಾಮಾರಿ ಹಬ್ಬುತ್ತಿದ್ದು, ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಸೋಂಕು ತಡೆಗಟ್ಟಲು ಹರಸಾಹಸ ಪಡುತ್ತಿದ್ದಾರೆ. ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ …
Read More »ಅಶೋಕ ಚಂದರಗಿ ವಿಧಾನಪರಿಷತ್‍ಗೆ ನಾಮನಿರ್ದೇಶನ ಮಾಡಬೇಕೆಂದು ಒತ್ತಾಯ…………
ಬೆಳಗಾವಿ: ಬೆಳಗಾವಿಯ ಕನ್ನಡಪರ ಹೋರಾಟಗಾರರು, ಹಿರಿಯ ಪತ್ರಕರ್ತರು, ಸಾಮಾಜಿಕ ಚಿಂತಕರಾದ ಅಶೋಕ ಚಂದರಗಿ ಅವರನ್ನು ಸರಕಾರದಿಂದ ವಿಧಾನಪರಿಷತ್‍ಗೆ ನಾಮನಿರ್ದೇಶನ ಮಾಡಬೇಕೆಂದು ಆಗ್ರಹಿಸಿ ಕನ್ನಡಪರ ಹೋರಾಟಗಾರ ಮೆಹಬೂಬ್ ಮಕಾನಂದಾರ ಅವರು ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು. ಬೆಳಗಾವಿಯ ಜಿಪಂ ಸಭಾಂಗಣದಲ್ಲಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಭೇಟಿಯಾದ ಮೆಹಬೂಬ್ ಮಕಾನಂದಾರ ಅಶೋಕ ಚಂದರಗಿ ಅವರು, ಹಲವಾರು ದಶಕಗಳಿಂದ ಕನ್ನಡ ಪರ ಹೋರಾಟ ಮಾಡುತ್ತ ಬಂದಿದ್ದಾರೆ. ಹಿರಿಯ …
Read More »ಸಚಿವ ರಮೇಶ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರ ಮಧ್ಯೆ ಮತ್ತೆ ಕದನ…?…
ಬೆಳಗಾವಿ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರ ಮಧ್ಯೆ ಮತ್ತೆ ಕದನ ಆರಂಭವಾಯಿತೋ ಎನ್ನಲಾಗುತ್ತಿದೆ. ಇಲ್ಲಿನ ಜಿಲ್ಲಾ ಪಂಚಾಯಿತಿಯಲ್ಲಿ ನಡೆದ ತಾಲ್ಲೂಕು ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸಚಿವ ರಮೇಶ ಜಾರಕಿಹೊಳಿ ಪ್ರತಿಕ್ರಿಸಿದ್ದಾರೆ. ಸಭೆಯಲ್ಲಿ ನೀರು ಶುದ್ಧೀಕರಣ ಘಟಕದ ಬಗ್ಗೆ ಚರ್ಚೆ ನಡೆಯುವಾಗ ಸಚಿವ ಸುರೇಶ ಅಂಗಡಿಮಧ್ಯಪ್ರವೇಶಿಸಿ, ಅದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಚಾರದ ಕಾರ್ಯಕ್ರಮ, ಫೋಟೊ ಹಾಕಿಕೊಂಡ ಕಾರ್ಯಕ್ರಮ ಎಂದರು. ಇದಕ್ಕೆ …
Read More »ಪ್ರತಿ ನಿತ್ಯ ದೇಶದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಮಂದಿಯಲ್ಲಿ ಕೊರೊನಾ
ನವದೆಹಲಿ: ಪ್ರತಿ ನಿತ್ಯ ದೇಶದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಕೊರೊನಾ ಗಣನೀಯ ಏರಿಕೆಯ ನಡುವೆ ಒಳ್ಳೆ ಸುದ್ದಿಯೊಂದು ಮುನ್ನೆಲೆಗೆ ಬಂದಿದೆ. ಭಾರತದಲ್ಲಿ ಕೊರೊನಾದಿಂದ ಗುಣಮುಖವಾಗುತ್ತಿರುವ ಪ್ರಮಾಣ ಶೇ.51 ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಇಲಾಖೆ ತನ್ನ ವೆಬ್‍ಸೈಟಿನಲ್ಲಿ ಪ್ರಕಟಿಸಿರುವ ಮಾಹಿತಿ ಪ್ರಕಾರ ಭಾರತದಲ್ಲಿ 3,32,424 ಮಂದಿಯಲ್ಲಿ ಈವರೆಗೂ ಸೋಂಕು ಕಂಡು ಬಂದಿದೆ. ಈ ಪೈಕಿ 1,69,797 ಮಂದಿ ಚೇತರಿಸಿಕೊಂಡು ಗುಣಮುಖವಾಗಿದ್ದಾರೆ. ಸದ್ಯ 1,53,106 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ …
Read More »ಬಾಲಿವುಡ್‍ನಲ್ಲಿ ನೆಪಟೋಯಿಸಂ ಮತ್ತು ನಿರ್ದೇಶಕ ಕರಣ್ ಜೋಹರ್ ವಿರುದ್ಧ ಕಿಡಿ…..
ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಳಿಕ ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಹಳೆಯ ವಿಡಿಯೋವೊಂದು ಮುನ್ನಲೆಗೆ ಬಂದಿದೆ. ಸುಶಾಂತ್ ಅಭಿಮಾನಿಗಳು ವಿಡಿಯೋವನ್ನು ಶೇರ್ ಮಾಡಿಕೊಳ್ಳುವ ಮೂಲಕ ಬಾಲಿವುಡ್‍ನಲ್ಲಿ ನೆಪಟೋಯಿಸಂ ಮತ್ತು ನಿರ್ದೇಶಕ ಕರಣ್ ಜೋಹರ್ ವಿರುದ್ಧ ಕಿಡಿಕಾರಿದ್ದಾರೆ. ಬಾಲಿವುಡ್‍ನಲ್ಲಿ ಸ್ಟಾರ್ ಕುಡಿಗಳಿಗೆ ಮಾತ್ರ ಸಿನಿ ಅಂಗಳದಲ್ಲಿ ಬೆಳೆಯಲು ಬಿಡುತ್ತಾರೆ. ಹೊಸ ಕಲಾವಿದರನ್ನು ತುಳಿದು ಹಾಕೋ ಪ್ರಯತ್ನ ನಡೆಯುತ್ತಿರುತ್ತೆ ಅನ್ನೋ ಮಾತುಗಳು ಬಾಲಿವುಡ್ ನಲ್ಲಿ ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಈ …
Read More »