Breaking News

1461ಜನರ ಮೇಲೆ ಆರೋಗ್ಯ ಇಲಾಖೆ ನಿಗಾ,ಜಿಲ್ಲೆಯ ಹತ್ತು ಜನರಿಗೆ ಕೊರೋನಾ ಸೊಂಕು,44 ಜನರ ರಿಪೋರ್ಟ ನೆಗೆಟೀವ್

ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 1461ಜನರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದ್ದು ಜಿಲ್ಲೆಯ ಹತ್ತು ಜನರಿಗೆ ಕೊರೋನಾ ಸೊಂಕು ಇರುವದು ದೃಡವಾಗಿದೆ.144 ಜನರ ರಿಪೋರ್ಟ ನೆಗೆಟೀವ್ ಬಂದಿದೆ. ಇಂದು ಗುರುವಾರ ಒಂದೇ ದಿನ ಮೂರು ಜನರ ರಿಪೋರ್ಟ್ ಪಾಸಿಟೀವ್ ಬಂದಿದ್ದು ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ 10 ಕ್ಕೇರಿದೆ ಬೆಳಗಾವಿ ಜಿಲ್ಲೆಯ ಒಟ್ಟು 47 ಕೊರೋನಾ ಶಂಕಿತರ ರಿಪೋರ್ಟ್ ಬರಬೇಕಾಗಿದೆ. ಹಿರೇಬಾಗೇವಾಡಿಯಲ್ಲಿ ನಾಲ್ಕು ಜನ,ಬೆಳಗುಂದಿ ಒಂದು,ಬೆಳಗಾವಿ …

Read More »

ಕೊರೋನಾ 3ನೇ ಹಂತಕ್ಕೆ ಕಾಲಿಡದಂತೆ ಕ್ರಮ : ಸಚಿವ ಬೊಮ್ಮಾಯಿ

ಬೆಂಗಳೂರು, ಏ. 9- ದೇಶದಲ್ಲಿ ಕೊರೋನ ಸೋಂಕು ಮೂರನೇ ಹಂತಕ್ಕೆ ಹೋಗದಂತೆ ತಡೆಯಲು ಹಾಗೂ ಸಮಯದಾಯಕ್ಕೆ ಹರಡದಂತೆ ನೋಡಿಕೊಳ್ಳಲು ಕೆಲವು ರಾಜ್ಯಗಳಲ್ಲಿ ಕಠಿಣ ಕ್ರಮ ಈಗಾಗಲೇ ಕೈಗೊಳ್ಳಲಾಗಿದ್ದು, ನಮ್ಮ ರಾಜ್ಯದಲ್ಲೂ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ನಿರ್ಧಾರ ಮಾಡ್ತುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನ ತಡೆಗಟ್ಟಲು ಪರಿಣಿತರ ತಂಡ ನಿನ್ನೆ ಮುಖ್ಯಮಂತ್ರಿಯವರಿಗೆ ವರದಿ ನೀಡಿದೆ. ಈ ಬಗ್ಗೆ ಇವತ್ತು ಚರ್ಚೆ ಮಾಡಿ …

Read More »

ಇಂದು ನಡೆದ ಮಹತ್ವದ ಸಂಪುಟ ಸಭೆಯ ಹೈಲೈಟ್ಸ್ …”

ಬೆಂಗಳೂರು, ಏ.9-ರಾಜ್ಯದಲ್ಲಿ ಇನ್ನು ಹದಿನೈದು ದಿನಗಳ ಕಾಲ ಲಾಕ್ಡೌನ್ ವಿಸ್ತರಣೆಗೆ ಎಲ್ಲ ಸಚಿವರು‌ ಸಲಹೆ ಮಾಡಿದ್ದು,ನಾಳೆ ಪ್ರಧಾನಿ‌ ಜೊತೆ ಚರ್ಚಿಸಿದ ಬಳಿಕ ಮುಂದಿನ‌ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಸಚಿವ ಸಂಪುಟ ಸಭೆ ಬಳಿಕ‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಏ.14ರ ನಂತರ‌ ಲಾಕ್ಡೌನ್ ವಿಸ್ತರಿಸಲು ಸಂಪುಟದ ಎಲ್ಲ ಸದಸ್ಯರು ಒತ್ತಾಯ ಮಾಡಿದ್ದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಾಳೆ ಚರ್ಚಿಸಿದ ಬಳಿಕ‌ ತೀರ್ಮಾನಿಸಲಾಗುವುದು ಎಂದರು. ಲಾಕ್ಡೌನ್ ಸಂದರ್ಭದಲ್ಲಿ …

Read More »

ಚಿಕ್ಕೋಡಿ:ಗುಟ್ಕಾ ತಿಂದು ಉಗಿದವನ ಶರ್ಟ್ ಬಿಚ್ಚಿಸಿ ರಸ್ತೆ ಸ್ವಚ್ಛಗೊಳಿಸಿದ್ರು

ಚಿಕ್ಕೋಡಿ(ಬೆಳಗಾವಿ): ಗುಟ್ಕಾ ತಿಂದು ರಸ್ತೆಯಲ್ಲೇ ಉಗಿದಿದ್ದವನ ಶರ್ಟ್ ಬಿಚ್ಚಿಸಿ ಅದರಿಂದಲೇ ರಸ್ತೆ ಸ್ವಚ್ಛ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದಲ್ಲಿ ನಡೆದಿದೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ನಿಪ್ಪಾಣಿ ನಗರದ ರಸ್ತೆಗಳನ್ನ ಪೌರ ಕಾರ್ಮಿಕರು ಸ್ವಚ್ಛ ಮಾಡುತ್ತಿದ್ದ ಸಂದರ್ಭದಲ್ಲಿ ವಿಜಯಪುರ ಮೂಲದ ವ್ಯಕ್ತಿಯೊಬ್ಬ ಗುಟ್ಕಾ ಜಗಿದು ರಸ್ತೆಯಲ್ಲಿಯೇ ಉಗುಳಿದ್ದಾನೆ. ಈ ವೇಳೆ ಸ್ಥಳದಲ್ಲೇ ಇದ್ದ ನಿಪ್ಪಾಣಿ ನಗರ ಸಭೆಯ ಪೌರಾಯುಕ್ತ ಮಹಾವೀರ ಬೋರಣ್ಣವರ ಗುಟ್ಕಾ ತಿಂದು ಉಗಳುವುದನ್ನ ಗಮನಿಸಿ ವ್ಯಕ್ತಿಯನ್ನ …

Read More »

17 ದಿನದಲ್ಲಿ ಮೊದಲ 50, ಈಗ ಕೇವಲ 4 ದಿನದಲ್ಲಿ 47 ಮಂದಿಗೆ ಕರ್ನಾಟಕದಲ್ಲಿ ಸೋಂಕು

ಬೆಂಗಳೂರು: ಕೊರೊನಾ ಪೀಡಿತ ರಾಜ್ಯಗಳ ಪೈಕಿ ಕರ್ನಾಟಕಕ್ಕೆ 11ನೇ ಸ್ಥಾನ ಸಿಕ್ಕಿರಬಹುದು. ಆದರೆ ಲಾಕ್‍ಡೌನ್ ಮಧ್ಯೆ ಕೊರೊನಾ ಪೀಡಿತರ ಸಂಖ್ಯೆ ದಿಢೀರ್ ಏರಿಕೆ ಆಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕರ್ನಾಟಕದಲ್ಲಿ ಮೊದಲ ಪ್ರಕರಣ ಬೆಳಕಿಗೆ ಬಂದಿದ್ದು ಮಾರ್ಚ್ 8 ರಂದು. ಖಾಸಗಿ ಕಂಪನಿಯ ಟೆಕ್ಕಿಗೆ ಕೊರೊನಾ ಬಂದಿತ್ತು. ಇದಾದ 17 ದಿನದಲ್ಲಿ ಕೊರೊನಾ ಪೀಡಿತರ ಸಂಖ್ಯೆ 50ಕ್ಕೆ ಏರಿಕೆ ಆಗಿತ್ತು. ಮಾರ್ಚ್ 31ಕ್ಕೆ 100ನೇ ಪ್ರಕರಣ ಬಂದಿತ್ತು. ಅಂದರೆ ಮಾರ್ಚ್ 25 …

Read More »

ಪತ್ನಿ, ಮಗು ನೋಡಿ ವಾಪಸ್ ಬರೋವಾಗ ಲಾಕ್‍ಡೌನ್ ಅಡ್ಡಿ – ಹುಚ್ಚು ಸಾಹಸಕ್ಕೆ ಕೈ ಹಾಕಿ ಜೀವಬಿಟ್ಟ ಕಂಡಕ್ಟರ್

ಬಾಗಲಕೋಟೆ: ಪತ್ನಿ ಮತ್ತು ಮಗು ನೋಡಿಕೊಂಡು ವಾಪಸ್ ಬರುವಾಗ ಕೊರೊನಾ ಲಾಕ್‍ಡೌನ್ ಅಡ್ಡಿಯಾದ ಪರಿಣಾಮ, ಕೆಎಸ್ಆರ್‌ಟಿಸಿ ಕಂಡಕ್ಟರ್ ಓರ್ವ ಹುಚ್ಚು ಸಾಹಸಕ್ಕೆ ಕೈ ಹಾಕಿ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಹುನಗುಂದದ ನಿವಾಸಿ ಮಲ್ಲಪ್ಪ ಬೊಮ್ಮಣಗಿ (45) ಮೃತ ಕೆಎಸ್ಆರ್‌ಟಿಸಿ ಕಂಡಕ್ಟರ್. ಈ ಘಟನೆ ಸೋಮವಾರ ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಲ್ಲಪ್ಪ ತನ್ನ ಪತ್ನಿ ಮತ್ತು ಮಗುವನ್ನು ನೋಡಲು ಗ್ರಾಮಕ್ಕೆ ತೆರಳಿದ್ದನು. ಬಳಿಕ ಇಬ್ಬರನ್ನು ನೋಡಿಕೊಂಡು …

Read More »

ಒಂದು ದಿನದ ಮಗುವನ್ನ ದೇವಸ್ಥಾನದಲ್ಲಿ ಬಿಟ್ಟು ಹೋದ ಪಾಪಿಗಳು

ಚಿಕ್ಕೋಡಿ/ಬೆಳಗಾವಿ: ಒಂದು ದಿನದ ನವಜಾತ ಗಂಡು ಮಗುವನ್ನು ದೇವಸ್ಥಾನದಲ್ಲಿ ಬಿಟ್ಟು ಹೋಗಿರುವ ಅಮಾನವೀಯ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಖೋಡ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಹೊರವಲಯದ ಬಸವೇಶ್ವರ ದೇವಸ್ಥಾನದಲ್ಲಿ ಹೆರಿಗೆಯ ನಂತರ ಗಂಡು ಮಗುವನ್ನು ಕೈಚೀಲದಲ್ಲಿ ಇಟ್ಟು ಪರಾರಿಯಾಗಿದ್ದಾರೆ. ಇಂದು ಬೆಳಗಿನ ಜಾವ 5 ಗಂಟೆಗೆ ಮಗು ಅಳುವಿನ ಧ್ವನಿ ಕೇಳಿದ ಸ್ಥಳೀಯರು ಮಗುವನ್ನು ರಕ್ಷಿಸಿ, ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಆಶಾ ಕಾರ್ಯಕರ್ತೆಯರು ಹಾಗೂ …

Read More »

ಗಲ್ಲಿ- ಗಲ್ಲಿಗೆ ತೆರಳಿ ಜಾಗೃತಿ ಮೂಡಿಸಿದ ಸ್ಥಳಿಯ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು.

  ಗೋಕಾಕ: ತಾಲೂಕಿನ ಧುಪದಾಳ ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ಸೇರಿದಂತೆ ಪೋಲಿಸ್ ಇಲಾಖೆ ಅಧಿಕಾರಿಗಳ ವತಿಯಿಂದ ಧುಪದಾಳ ಗ್ರಾಮದಲ್ಲಿ ಪ್ರತಿ ಗಲ್ಲಿ ಗಲ್ಲಿಗಳಿಗೆಯ ಮನೆ ಮನೆಗಳಿಗೆ ತೆರಳಿ ಮನೆ ಬಿಟ್ಟು ಹೊರಗೆ ಬರದಂತೆ ಅಂಗನವಾಡಿ ಕಾರ್ಯಕರ್ತೆ ಮನವಿ ಮಾಡಿಕೊಳ್ಳುವ ಮೂಲಕ ಕೊರೊನೋ ವೈರಸ್ ಬಗ್ಗೆ ಮುದ್ರಣ ಪತ್ರಿಕೆ ನೀಡಿ ಜಾಗೃತಿ ಮೂಡಿಸಲಾಗಿತ್ತು. ಇನ್ನು ಈ ಕೊರೊನೋ ಜಾಗೃತಿಯಲ್ಲಿ ಪೋಲಿಸ್ ಅಧಿಕಾರಿಗಳು , ಆರೋಗ್ಯ …

Read More »

ಸುದ್ದಿ ಮಾಡಲು ಹೋದ ವರದಿಗಾರನಿಗೆ ಮ್ಯಾನೆಜರನಿಂದ ದರ್ಪ

ಜಗತ್ತಿನ ತುಂಬ ಕರೊನಾ ವೈರಸ್ ತಡೆಯುವ ಬಗ್ಗೆ ಮುಂಜಾಗೃತೆಗಾಗಿ ಸರಕಾರ ಎಲ್ಲ ಇಲಾಖೆಗಳಿಗೆ ಸೂಚನೆ ಮಾಡಿದೆ ಆದರೆ ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನಲ್ಲಿರುವ ಕೆನರಾ ಬ್ಯಾಂಕ ಮ್ಯಾನೇಜರ್ ಕಲ್ಲಪ್ಪ ತೇಲಿ ಎಂಬ ಮ್ಯಾನೆಜರ ನಿಯಮ ಉಲ್ಲಂಘನೆ ಮಾಡಿ ಬ್ಯಾಂಕಿನ ಒಳಗಡೆ ಯಾರನ್ನು ತೆಗೆದುಕೊಳ್ಳದೆ ಹೊರಗಡೆ ಗ್ರಾಹಕರನ್ನು ನಿಲ್ಲಿಸಿ ಸತಾಯಿಸುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಸುದ್ದಿ ಮಾಡಲು ತೆರಳಿದ ವರದಿಗಾರನ ಮೇಲೆ ದರ್ಪ ತೊರಿದ್ದಲ್ಲದೆ ಅವಾಚ್ಯ ಶಬ್ದ ಬಳಸಿ ನಿಂದಿಸಿದ್ದಲ್ಲದೆ ನೀವು …

Read More »

ಶಂಕಿತ ಕೊರೊನಾ ರೋಗಿಗಳ ಬಗ್ಗೆ ನಿರ್ಲಕ್ಷ್ಯ 2 ಖಾಸಗಿ ಆಸ್ಪತ್ರೆಗಳು ಬಂದ್- ಜಿಲ್ಲಾಧಿಕಾರಿ

ಕಲಬುರಗಿ: ದೇಶದಲ್ಲಿ ಕೊರೊನಾ ಪ್ರಕರಣಗಳು ಭಯಾನಕ ರೀತಿಯಲ್ಲಿ ಹೆಚ್ಚಾಗುತ್ತಿದ್ದು, ರಜ್ಯದಲ್ಲಿ ಸಹ 181ಕ್ಕೆ ತಲುಪಿದೆ. ಹೀಗಾಗಿ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಕೊರೊನಾ ವೈರಸ್ ಲಕ್ಷಣಗಳಿರುವವರ ಬಗ್ಗೆ ಮಾಹಿತಿ ನೀಡದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಕುರಿತು ಕಲಬುರಗಿ ಜಿಲ್ಲಾಧಿಕಾರಿ ಶರತ್.ಬಿ ಎಚ್ಚರಿಕೆ ನೀಡಿದ್ದು, ಶಂಕಿತ ಕೊರೋನಾ ರೋಗಿಗಳನ್ನು ಬಹಳ ದಿನಗಳ ಕಾಲ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಿಸಿಕೊಂಡು ರೋಗ ಉಲ್ಬಣಿಸಿದ ಬಳಿಕ ಇಎಸ್‍ಐ ಮತ್ತು ಜಿಮ್ಸ್ …

Read More »