Breaking News

ಕೊರೊನಾ ಮಹಾಮಾರಿಗೆ ರಾಜ್ಯದಲ್ಲಿ 6ನೇ ಬಲಿ- ಗದಗನಲ್ಲಿ ಮೊದಲ ಸಾವು

ಗದಗ: ರಾಜ್ಯದಲ್ಲಿ ಕೊರೊನಾ ತನ್ನ ಕಬಂದಬಾಹುವನ್ನು ಚಾಚುತ್ತಿದ್ದು, ಗದಗನಲ್ಲಿ 6ನೇ ಬಲಿ ಪಡೆದುಕೊಂಡಿದೆ. ಏಪ್ರಿಲ್ 4ರಂದು ಗದಗನ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ 80 ವರ್ಷದ ವೃದ್ಧೆ ಸಾವನ್ನಪ್ಪಿದ್ದಾರೆ. ವೃದ್ಧೆಗೆ ಏಪ್ರಿಲ್ 7ರಂದು ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಇದೀಗ ಗದಗ ನಗರದ ನಿವಾಸಿಯಾಗಿದ್ದ ರೋಗಿ ನಂಬರ್ 166 ಸಾವನ್ನಪ್ಪಿದ್ದಾರೆ. ಈ ಕುರಿತು ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಈವರೆಗೆ 181 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇಂದು ಸಾವನ್ನಪ್ಪಿದ ವೃದ್ಧೆ …

Read More »

ದೇಶದಲ್ಲಿ 6 ಸಾವಿರ ಗಡಿ ಸಮೀಪಿಸಿದ ಹೆಮ್ಮಾರಿ- 24 ಗಂಟೆಯಲ್ಲಿ 24 ಮಂದಿ ಸಾವು

ನವದೆಹಲಿ: ದೇಶದಲ್ಲಿ ಹೆಮ್ಮಾರಿ ಕೊರೊನಾ ಸೋಂಕಿತರ ಸಂಖ್ಯೆ 5,742 ಆಗಿದ್ದು, 174 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಒಂದೇ ದಿನ 773 ಮಂದಿಗೆ ಸೋಂಕು ದೃಢವಾಗಿದ್ದು, 24 ಗಂಟೆಯಲ್ಲಿ 32 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ 402 ದಿನ ಚೇತರಿಸಿಕೊಂಡಿದ್ದಾರೆ. ಹಾಟ್‍ಸ್ಪಾಟ್‍ಗಳ ಮೇಲೆ ನಿರಂತರವಾಗಿ ನಿಗಾವಹಿಸಿದ್ದೇವೆ ಅಂತ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಬರುತ್ತಿಲ್ಲ. ಮಂಗಳವಾರ ಒಂದು ಸಾವಿರ ಸೋಂಕಿತರ ಗಡಿ ದಾಟಿದ್ದ ಮಹಾರಾಷ್ಟ್ರದಲ್ಲಿ ಬುಧವಾರ ರಾತ್ರಿ …

Read More »

ಸಾಮಾಜಿಕ ಜಾಲತಾಣದಲ್ಲಿ ನಿಶ್ಚಿತಾರ್ಥ – ಸಮಾಜಕ್ಕೆ ಮಾದರಿಯಾದ ಕುಟುಂಬ

ಚಿಕ್ಕೋಡಿ (ಬೆಳಗಾವಿ): ಕೊರೊನಾ ಸೋಂಕು ಹರಡದಂತೆ ದೇಶಾದ್ಯಂತ ಏಪ್ರಿಲ್ 14ರವರೆಗೆ ಲಾಕ್‍ಡೌನ್ ಘೋಷಿಸಲಾಗಿದ್ದು, ಸಭೆ ಸಮಾರಂಭ ಮತ್ತು ಮದುವೆಗಳು ರದ್ದಾಗಿವೆ. ಆದರೆ ಬೆಳಗಾವಿಯ ಜೋಡಿಯೊಂದು ಸಾಮಾಜಿಕ ಜಾಲತಾಣದ ಮೂಲಕ ಮದುವೆಯ ನಿಶ್ಚಿತಾರ್ಥ ನೆರವೇರಿಸಿಕೊಂಡು ಸಮಾಜಕ್ಕೆ ಮಾದರಿಯಾಗಿದೆ. ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ನಿವಾಸಿ ಹಾಗೂ ಶಿಕ್ಷಕರಾಗಿರುವ ಪ್ರಕಾಶ್ ಪಾಟೀಲ್ ಅವರು ತಮ್ಮ ಪುತ್ರಿ ಆಶಾ ಪಾಟೀಲ್ ಅವರ ನಿಶ್ಚಿತಾರ್ಥವನ್ನು ಬಾಗಲಕೋಟೆಯ ಮಹಾಂತೇಶ್ ಜೊತೆಗೆ ನೆರವೇರಿಸಿದರು. ಅತಿ ಸರಳವಾಗಿ ಸಾಮಾಜಿಕ ಜಾಲತಾಣದ …

Read More »

ರಸ್ತೆಯಲ್ಲಿಯೇ ನಿಂತು ರೇಷ್ಮೆ ಮಾರುಕಟ್ಟೆ ವೀಕ್ಷಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ

ರಾಮನಗರ: ರೇಷ್ಮೆ ಸಚಿವರು ನಾರಾಯಣಗೌಡ ಅವರು ರಸ್ತೆಯಲ್ಲಿಯೇ ನಿಂತು ಏಷ್ಯಾದ ಅತಿ ದೊಡ್ಡ ರೇಷ್ಮೆ ಮಾರುಕಟ್ಟೆ ವೀಕ್ಷಿಸಿ, ಅಧಿಕಾರಿಗಳ ಜೊತೆ ಒಂದೈದು ನಿಮಿಷ ಚರ್ಚಿಸಿ ಬೆಂಗಳೂರಿಗೆ ರೈಟ್ ಹೇಳಿದ ಪ್ರಸಂಗ ರಾಮನಗರದಲ್ಲಿ ನಡೆದಿದೆ. ಮಂಡ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ರೇಷ್ಮೆ ಸಚಿವ ನಾರಾಯಣಗೌಡ ಅವರು ಮಾರ್ಗ ಮಧ್ಯೆ ಕಾಟಚಾರಕ್ಕೆ ಎಂಬಂತೆ ರಾಮನಗರದ ರೇಷ್ಮೆ ಮಾರುಕಟ್ಟೆ ಎದುರು ಕಾರು ನಿಲ್ಲಿಸಿ ಮಾರುಕಟ್ಟೆಗೂ ಭೇಟಿ ನೀಡದೇ ಕೇವಲ ರಸ್ತೆಯಲ್ಲಿಯೇ ವೀಕ್ಷಣೆ ನಡೆಸಿದರು. ಅಷ್ಟೇ ಅಲ್ಲದೆ …

Read More »

ಕೊರೊನಾ ಭೀತಿ ನಡುವೆ ರಕ್ತದಾನ- ದಾನಿಗಳಿಗೆ ಆರೋಗ್ಯ ಸಚಿವರಿಂದ ಮೆಚ್ಚುಗೆ

ಚಾಮರಾಜನಗರ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ರಕ್ತದ ಕೊರತೆ ಎದುರಾಗಿದೆ. ಲಾಕ್‍ಡೌನ್ ಹಾಗೂ ಕೊರೊನಾ ಬರುತ್ತೆ ಎಂಬ ತಪ್ಪು ಕಲ್ಪನೆಯಿಂದ ರಕ್ತದಾನಿಗಳು ರಕ್ತದಾನಕ್ಕೆ ಮುಂದೆ ಬಾರದೆ ರಕ್ತನಿಧಿ ಕೇಂದ್ರದಲ್ಲಿ ರಕ್ತ ಸಂಗ್ರಹ ಕಡಿಮೆಯಾಗಿದೆ. ಇದರಿಂದ ಸಿಜೇರಿಯನ್ ನಂತಹ ಪ್ರಕರಣಗಳಲ್ಲಿ ರಕ್ತ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ರಕ್ತದಾನ ಮಾಡುವ ಮೂಲಕ ಜಿಲ್ಲಾ ಸರ್ಕಾರಿ ನೌಕರರು ಮಾನವೀಯತೆ ಮೆರೆದಿದ್ದಾರೆ. ರಕ್ತನಿಧಿ ಕೇಂದ್ರದಲ್ಲಿ ರಕ್ತದ ಕೊರತೆ ಇರುವುದನ್ನು ಅರಿತ …

Read More »

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಜಂಟಿಯಾಗಿ ರು. 5 ಕೋಟಿ ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿದರು.

ಬೆಂಗಳೂರು:ಕೋವಿಡ್ 19 ಸೋಂಕು ನಿವಾರಣೆಗೆ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ವತಿಯಿಂದ ಬುಧವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಹಕಾರ ಸಚಿವ ಎಸ್ ಟಿ ಸೋಮಶೇಖರ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಜಂಟಿಯಾಗಿ ರು. 5 ಕೋಟಿ ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿದರು. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊರೋನಾದಿಂದ ನರಳುತ್ತಿರುವವರಿಗೆ ಹಾಗೂ ಇತರರಿಗೆ ಸಹಾಯಕವಾಗಲು ಮುಖ್ಯಮಂತ್ರಿಗಳ ನಿಧಿಗೆ …

Read More »

ಚಿಕ್ಕೋಡಿ ಪಟ್ಟಣದಲ್ಲಿ ಬುಧುವಾರ 52 ದ್ವಿಚಕ್ರವಾಹಗಳನ್ನು ಸೀಜ್ ಮಾಡಿದ್ದಾರೆ.

ಚಿಕ್ಕೋಡಿ : ಲಾಕ್‍ಡೌನ್ ಇದ್ದರೂ ಮನೆಯಿಂದ ಹೊರಗೆ ಬರಬೇಡಿ ಎಂದು ಪೊಲೀಸರು ಮನವಿ ಮಾಡಿಕೊಂಡರೂ ಕೇಳದೇ ಅನಾವಶ್ಯಕವಾಗಿ ರಸ್ತೆಯಲ್ಲಿ ಅಡ್ಡಾಡಿ ಲಾಕ್‍ಡೌನ್ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಚಿಕ್ಕೋಡಿ ಪಟ್ಟಣದಲ್ಲಿ ಬುಧುವಾರ 52 ದ್ವಿಚಕ್ರವಾಹಗಳನ್ನು ಸೀಜ್ ಮಾಡಿದ್ದಾರೆ. ಇಡೀ ವಿಶ್ವವನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕೊರೊನಾ ತೊಲಗಿಸುವ ನಿಟ್ಟಿನಲ್ಲಿ ಲಾಕ್‍ಡೌನ್ ಹೇರಲಾಗಿದೆ. ಸಾರ್ವಜನಿಕರು ಮನೆಯಲ್ಲಿಯೇ ಇರುವ ಮೂಲಕ ಲಾಕ್‍ಡೌನ್ ಪಾಲಿಸಿ ಎಂದು ಪೊಲೀಸರು ಮನವಿ ಮಾಡಿದರೂ ಕೇಳದ ಹಿನ್ನೆಲೆಯಲ್ಲಿ ಬುಧೂವಾರ ಡಿವೈಎಸ್ಪಿ ಮನೋಜ ನಾಯಿಕ …

Read More »

ಕೊರೋನಾ ವೈರಸ್ ವಿರುದ್ಧ ಹೋರಾಟಕ್ಕಾಗಿ ಆರೋಗ್ಯ ನಿರೀಕ್ಷಕರ ಸಂಘದಿಂದ ಹಣ ಸಹಾಯ ಮಾಡಿದರು

ಗೋಕಾಕ :ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಆರೋಗ್ಯ ನಿರೀಕ್ಷಕರ ಸಂಘ ಗೋಕಾಕ ತಾಲ್ಲೂಕು ವತಿಯಿಂದ ಪ್ರದಾನಮಂತ್ರಿ ವಿಪತ್ತು ಪರಿಹಾರ ನಿಧಿಗೆ 10ಸಾವಿರ ರೂಪಾಯಿ ನೀಡಲಾಯಿತು. ಗೋಕಾಕ ತಾಲೂಕಿನ ಆರೋಗ್ಯ ನಿರೀಕ್ಷಕರ ಸಂಘದಿಂದ ಕೊರೋನಾ ವೈರಸ್ ಹಿನ್ನಲೆಯಲ್ಲಿ ಕೇಂದ್ರಸರ್ಕಾರ ಕೋರಿರುವ ಆರ್ಥಿಕ ನೆರವಿಗೆ ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಡಾ॥ಅಂಟಿನ್ ಸರ್ ಮುಖಾಂತರ ಹತ್ತು ಸಾವಿರ ರೂಪಾಯಿಗಳನ್ನು ಸಂದಾಯ ಮಾಡಲಾಯಿತು . ಈ ಸಂದರ್ಭದಲ್ಲಿ ತಾಲೂಕಾ ಆರೋಗ್ಯ ನಿರೀಕ್ಷಕರ ಸಂಘದ ಪದಾಧಿಕಾರಿಗಳಾದ ಶ್ರೀ …

Read More »

ಲಾಕ್‌ಡೌನ್ ಹಂತಹಂತವಾಗಿ ತೆರವು ಗೊಳಿಸಲು ಕೇಂದ್ರ ಕ್ರಮ‌ ಕೈಗೊಳ್ಳಬೇಕು‌ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ‌ ಹೇಳಿದರು.

ಗೋಕಾಕ: ದೇಶದ ಆರ್ಥಿಕ ಪರಿಸ್ಥಿತಿಯನ್ನು ಕೂಡ ಗಮನದಲ್ಲಿಟ್ಟುಕೊಂಡು ಏಪ್ರಿಲ್ 14 ರ ನಂತರ ಲಾಕ್‌ಡೌನ್ ಹಂತಹಂತವಾಗಿ ತೆರವು ಗೊಳಿಸಲು ಕೇಂದ್ರ ಕ್ರಮ‌ ಕೈಗೊಳ್ಳಬೇಕು‌ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ‌ ಹೇಳಿದರು. ಇಂದು ಇಲ್ಲಿನ‌ ಗೃಹ ಕಚೇರಿ ಹಿಲ್‌ ಗಾರ್ಡನ್ ನಲ್ಲಿ ಪತ್ರಕರ್ತರಿಗೆ ಮತ್ತು ನಗರಸಭೆ ಸದಸ್ಯರಿಗೆ ಸ್ಯಾನಿಟೈಜರ್ ಮತ್ತು ಮಾಸ್ಕ್ ವಿತರಿಸಿದ ಬಳಿಕ ಅವರು ಮಾತನಾಡಿದರು. ಕೊರೋನಾ ಸೊಂಕು ಹರಡದಂತೆ ಲಾಕ್ ಡೌನ್ ಒಂದೇ ಉಪಾಯವಾಗಿದ್ದು ಸಹ ದೇಶದ …

Read More »

ಮುಂಬೈನಲ್ಲಿ ಮಾಸ್ಕ್ ಕಡ್ಡಾಯ – ಧರಿಸದೇ ಹೊರಬಂದರೆ ಅರೆಸ್ಟ್

ಮುಂಬೈ: ಭಾರತದಲ್ಲಿ ಕೊರೊನಾ ವೈರಸ್ ನ ಹಾಟ್‍ಸ್ಪಾಟ್ ಆಗಿರುವ ಮುಂಬೈನಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ. ಒಂದೇ ವೇಳೆ ಮಾಸ್ಕ್ ಧರಿಸದೇ ಹೊರಬಂದರೆ ಅಂತವರನ್ನು ಅರೆಸ್ಟ್ ಮಾಡಲಾಗುವುದು ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಜನರು ಧರಿಸುವ ಮಾಸ್ಕ್ ಗಳು ಕೆಮಿಕಲ್ ಇರುವ ಉತ್ತಮ ಗುಣಮಟ್ಟದ್ದು ಆಗಿರಬಹುದು ಅಥವಾ ಮನೆಯಲ್ಲಿ ತಯಾರಿಸಿದ ತೊಳೆಯಬಹುದಾದ ಮಾಸ್ಕ್ ಗಳನ್ನಾದರು ಧರಿಸಬಹುದು. ಆದರೆ ಎಲ್ಲಾ ಸಾರ್ವಜನಿಕ ಸ್ಥಳಗಳು, ಕಚೇರಿಗಳು, ಸಭೆಗಳು ಮತ್ತು ವಾಹನಗಳ ಒಳಗೂ …

Read More »