ಹೈದರಾಬಾದ್: ದೇಶಾದ್ಯಂತ ಕೊರೊನಾ ವೈರಸ್ ಅಬ್ಬರ ಜೋರಾಗಿದ್ದು, ಇದರ ಮಧ್ಯೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, 10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್ ನೀಡಿದ್ದಾರೆ. ರಾಜ್ಯದಲ್ಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆ ಇಲ್ಲದೇ ಮುಂದಿನ ತರಗತಿಗಳಿಗೆ ತೇರ್ಗಡೆ ಮಾಡಲು ನಿರ್ಧರಿಸಿದ್ದಾಗಿ ಇಲ್ಲಿನ ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಸದ್ಯದ ಸ್ಥಿತಿಯಲ್ಲಿ ಪರೀಕ್ಷೆ ತೆಗೆದುಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಈ ನಿರ್ಧಾರ ಕೈಗೊಂಡಿದ್ದಾಗಿ ತಿಳಿಸಿದ್ದಾರೆ. ಇನ್ನು ರಾಜ್ಯದಲ್ಲಿ ಸಿನಿಮಾ, …
Read More »ಮತ್ತೆ ಪೆಟ್ರೋಲ್ ಬೆಲೆ ಹೆಚ್ಚಳ…..
ನವದೆಹಲಿ: ಭಾನುವಾರ, ಸೋಮವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 60 ಪೈಸೆ ಹೆಚ್ಚಿಸಿದ್ದ ತೈಲ ಕಂಪನಿಗಳು ಇಂದೂ ಕೂಡ ಗ್ರಾಹಕರಿಗೆ ಶಾಕ್ ನೀಡಿದೆ. ಇಂದು ಲೀಟರ್ ಪೆಟ್ರೋಲ್ಗೆ 54 ಪೈಸೆ ಹಾಗೂ ಡೀಸೆಲ್ಗೆ 58 ಪೈಸೆ ಹೆಚ್ಚಳವಾಗಿದೆ. ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾದ ಪರಿಣಾಮ, 82 ದಿನಗಳ ಲಾಕ್ಡೌನ್ ವಿರಾಮದ ಬಳಿಕ ಭಾನುವಾರದಿಂದ ತೈಲ ಕಂಪನಿಗಳು ಇಂಧನ ಬೆಲೆಯಲ್ಲಿ ಏರಿಕೆ ಮಾಡುತ್ತಾ ಬಂದಿವೆ. ರಾಷ್ಟ್ರ …
Read More »ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಅಭಿನಂದನೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ
ರಾಜ್ಯದ ಹಿರಿಯ ನಾಯಕರಾದ ಗೌರವಾನ್ವಿತ ಶ್ರೀ ಮಲ್ಲಿಕಾರ್ಜುನ ಖರ್ಗೆ ಜೀಯವರು ರಾಜ್ಯಸಭೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಹಿನ್ನಲೆಯಲ್ಲಿ ಹೃದಯ ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದೆ. ಶ್ರೀ ಮಲ್ಲಿಕಾರ್ಜುನ ಖರ್ಗೆಜೀಯರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷವು ಇನ್ನೂ ಉತ್ತುಂಗಕ್ಕೆ ಬೆಳಯಲಿ ಹಾಗೂ ಅವರ ಮಾರ್ಗದರ್ಶನವೂ ನಮ್ಮೆಲ್ಲ ಕಾಂಗ್ರೆಸ್ ಪಕ್ಷದವರಿಗೆ ದಾರಿದೀಪವಾಗಿರಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ ಕೆ ಶಿವಕುಮಾರ ಜೀ, ವಿರೋಧ ಪಕ್ಷದ ನಾಯಕರಾದ …
Read More »ಇದೀಗ ಹಸಿರು ವಲಯದಲ್ಲಿರುವ ಗಡಿ ಜಿಲ್ಲೆಗೂ ಮಹಾಮಾರಿ ಕೊರೊನಾ ಬರುವ ಆತಂಕ……..
ಚಾಮರಾಜನಗರ: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಇದೀಗ ಹಸಿರು ವಲಯದಲ್ಲಿರುವ ಗಡಿ ಜಿಲ್ಲೆಗೂ ಮಹಾಮಾರಿ ಕೊರೊನಾ ಬರುವ ಆತಂಕ ಈಗ ಹೆಚ್ಚಾಗಿದೆ. ಮಹಾರಾಷ್ಟ್ರದ ಪುಣೆಯಿಂದ ಬಂದ ಕುಟುಂಬದಲ್ಲಿನ ಯುವಕನಿಗೆ ಸೋಂಕಿನ ಲಕ್ಷಣ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ಶನಿವಾರ ಮಹಾರಾಷ್ಟ್ರದಿಂದ ಬಂದಿದ್ದ 22 ವರ್ಷದ ಮೆಡಿಕಲ್ ವಿದ್ಯಾರ್ಥಿ ಒಬ್ಬನಿಗೆ ಬೇಧಿ, ಹೊಟ್ಟೆನೋವು, ವಿಪರೀತ ಕೆಮ್ಮು ಕಾಣಿಸಿಕೊಂಡಿದೆ. ಈ ಮೂಲಕ ಚಾಮರಾಜನಗರಕ್ಕೂ ಕೊರೊನಾ ಬರುತ್ತಾ ಎಂಬ ಆತಂಕ ಜಿಲ್ಲೆಯ ಜನರಲ್ಲಿ …
Read More »ಬೆಳಗಾವಿ:…ಜವಳಿ ಸಚಿವ ಪಾಟೀಲ್ ತವರಿನಲ್ಲೇ ವಾರದಲ್ಲಿ ಮೂವರು ನೇಕಾರರು ಆತ್ಮಹತ್ಯೆ
ಬೆಳಗಾವಿ: ಜವಳಿ ಸಚಿವ ಶ್ರೀಮಂತ ಪಾಟೀಲ್ ತವರು ಜಿಲ್ಲೆಯಲ್ಲೇ ನೇಕಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಲಬಾಧೆ ತಡೆಯಲಾರದೆ ವಾರದಲ್ಲಿ ಮೂವರು ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಬೆಳಗಾವಿ ನಗರದ ವಡಗಾಂವ ನಿವಾಸಿ ಸುಜಿತ್ ಉಪರಿ (38), ಹುಕ್ಕೇರಿ ತಾಲೂಕಿನ ಆನಂದಪುರ ನಿವಾಸಿ ಶಂಕರ (60), ವಡಗಾಂವ ನಿವಾಸಿ ಸುವರ್ಣ ಕಾಮ್ಕರ್ (47) ಆತ್ಮಹತ್ಯೆಗೆ ಶರಣಾದ ನೇಕಾರರು. ಕೊರೊನಾ ನಡುವೆ ಕೆಲಸವಿಲ್ಲದೇ ಕುಟುಂಬ ಸಾಗಿಸಲಾಗದೆ, ಸಾಲದ ಕಿರುಕುಳಕ್ಕೆ ಬೇಸತ್ತು ನೇಕಾರರು ಆತ್ಮಹತ್ಯೆಯತ್ತ ಮುಖ …
Read More »ಬಹುಭಾಷಾ ನಟ ಮುರಳಿ ಶರ್ಮಾಗೆ ಮಾತೃ ವಿಯೋಗ………….
ಮುಂಬೈ: ತೆಲುಗು, ತಮಿಳು, ಹಿಂದಿ ಮತ್ತು ಮರಾಠಿ ಭಾಷೆಗಳಲ್ಲಿ ನಟಿಸಿ ಖ್ಯಾತಿ ಪಡೆದಿರುವ ನಟ ಮುರಳಿ ಶರ್ಮಾ ಅವರ ತಾಯಿ ಸೋಮವಾರ ನಿಧನರಾಗಿದ್ದಾರೆ. ಪದ್ಮಾ ಶರ್ಮಾ (76) ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಮುರಳಿ ಶರ್ಮಾ ತಾಯಿ ಮುಂಬೈನಲ್ಲಿ ನೆಲೆಸಿದ್ದು, ಅವರ ಸ್ವ-ಗೃಹದಲ್ಲೇ ಕೊನೆಯುಸಿರೆಳೆದರು. ಕಳೆದ ವರ್ಷ ಮುರಳಿ ಅವರ ತಂದೆ ವೃಜ್‍ಭೂಷಣ್ ಶರ್ಮಾ ನಿಧನರಾಗಿದ್ದರು. ಈಗ ತಾಯಿಯೂ ಕೂಡ ವಿಧಿವಶರಾಗಿದ್ದಾರೆ. ಟಾಲಿವುಡ್ ಮತ್ತು ಬಾಲಿವುಡ್‍ನಲ್ಲಿ ತಮ್ಮ ವಿಭಿನ್ನ ಅಭಿನಯದ ಮೂಲಕವೇ ಚಿತ್ರರಂಗದಲ್ಲಿ …
Read More »ಪತ್ತೆಯಾಗದ ಕೊರೊನಾ ಸೋಂಕಿತ- ಶೋಧದಲ್ಲಿ 2 ರಾಜ್ಯದ ಅಧಿಕಾರಿಗಳು…………
ಕೋಲಾರ: ಕೊರೊನಾ ಸೋಂಕಿತ ತನಗೆ ಸೋಂಕು ತಗುಲಿರೋದು ದೃಢಪಡುತ್ತಿದ್ದಂತೆ ಮೊಬೈಲ್ ಸ್ವಿಚ್ ಆಫ್ ಮಾಡಿ ಎಸ್ಕೇಪ್ ಅಗಿರುವ ಘಟನೆ ಕೋಲಾರದಲ್ಲಿ ಆತಂಕಕ್ಕೆ ಕಾರಣವಾಗಿದೆ. ಕೋಲಾರದಲ್ಲಿ ಈ ಸೋಂಕಿತನಿಂದ ಸೋಂಕು ಹಬ್ಬುತ್ತಾ ಅನ್ನೋ ಆತಂಕ ಮನೆ ಮಾಡಿದೆ. ಮಂಡ್ಯ ಜಿಲ್ಲೆ ನಾಗಮಂಗಲ ಮೂಲದ ವ್ಯಕ್ತಿಯಿಂದ ಸದ್ಯ ಇಂಥಾದೊಂದು ಆತಂಕ ಎದುರಾಗಿದ್ದು, ಕೊರೊನಾ ಸೋಂಕಿತ (ರೋಗಿ-4863) ಜೂನ್ 3 ರಂದು ಆಂಧ್ರದ ತಿರುಪತಿ ತಿರುಮಲದಿಂದ ಕೋಲಾರಕ್ಕೆ ಬಂದಿದ್ದಾನೆ. ತಿರುಮಲದಲ್ಲಿ ಹೋಟೆಲ್ ಒಂದರಲ್ಲಿ ಕೆಲಸ …
Read More »ಕೊರೊನಾ ಆರ್ಭಟಕ್ಕೆ ರಾಷ್ಟ್ರ ರಾಜಧಾನಿ ತತ್ತರ……….
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ರಣ ಕೇಕೆ ಹಾಕಿ ಆರ್ಭಟಿಸುತ್ತಿದೆ. ದಿನದಿಂದ ದಿನಕ್ಕೆ ಸರ್ಕಾರದ ಕೈ ಮೀರಿ ಸೋಂಕು ಹಬ್ಬುತ್ತಿದೆ. ಒಂದು ಕಡೆ ಆಸ್ಪತ್ರೆಯಲ್ಲಿ ಬೆಡ್ ಸಿಗುತ್ತಿಲ್ಲ. ಮತ್ತೊಂದು ಕಡೆ ಮಣ್ಣಲ್ಲಿ ಶವಗಳನ್ನು ಹೂಳಲು ಜಾಗ ಸಿಗುತ್ತಿಲ್ಲ. ಈ ನಡುವೆ ದೆಹಲಿಯಲ್ಲಿ ಕೊರೊನಾ ಸಮುದಾಯಕ್ಕೆ ಹರಡಿರುವ ಭೀತಿ ಸೃಷ್ಟಿಯಾಗಿದೆ. ದೆಹಲಿ ರಾಜಕೀಯ ವ್ಯವಸ್ಥೆಯ ಶಕ್ತಿ ಕೇಂದ್ರ. ಕೇಂದ್ರಾಡಳಿತ ಪ್ರದೇಶವಾಗಿರುವ ಈ ರಾಜ್ಯ ಈಗ ಕೊರೊನಾ ವಿಚಾರದಲ್ಲಿ ದೊಡ್ಡ ಸದ್ದು …
Read More »ಧಾರವಾಡದಲ್ಲಿ ಎರಡೂವರೆ ವರ್ಷದ ಮಗು ಡಿಸ್ಚಾರ್ಜ್- ನಾಲ್ಕು ವರ್ಷದ ಮಗು ಸೇರಿ ನಾಲ್ವರಿಗೆ ಕೊರೊನಾ
ಧಾರವಾಡ: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಎರಡೂವರೆ ವರ್ಷದ ಮಗು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಜಿಲ್ಲೆಯಲ್ಲಿ ನಾಲ್ಕು ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಕುರಿತು ಜಿಲ್ಲಾಧಿಕಾರಿ ದೀಪಾ ಚೋಳನ್ ಮಾಹಿತಿ ನೀಡಿದ್ದು, 46 ವರ್ಷದ ಪುರುಷ ರೋಗಿ ನಂ.5,482, 42 ವರ್ಷದ ಮಹಿಳೆ ರೋಗಿ ನಂ.5483 ಹಾಗೂ 14 ವರ್ಷದ ಬಾಲಕ ರೋಗಿ ನಂ.5,484 ಈ ಮೂವರು ರಾಜಸ್ಥಾನದಿಂದ ಹಿಂದಿರುಗಿರುವ ಹಿನ್ನೆಲೆ ಹೊಂದಿದ್ದಾರೆ. ಇವರು ಹುಬ್ಬಳ್ಳಿ ಮಂಗಳವಾರಪೇಟೆಯ ನಿವಾಸಿಗಳಾಗಿದ್ದು, ಹೋಮ್ …
Read More »ಪ್ರವಾಸಿಗರೇ ಗಮನಿಸಿ- ಹೊಗೆನಕಲ್ ಜಲಪಾತಕ್ಕಿಲ್ಲ ಪ್ರವೇಶ
ಚಾಮರಾಜನಗರ: ಹೊಗೆನಕಲ್ ಜಲಪಾತವನ್ನ ಪ್ರವಾಸಿಗರಿಗೆ ಮುಕ್ತ ಮಾಡಲು ಯಾವುದೇ ಆದೇಶ ಇದುವರೆಗೂ ಬಂದಿಲ್ಲ. ಆದ್ದರಿಂದ ಜಲಪಾತ ಭೇಟಿಗೆ ಪ್ರವಾಸಿಗರಿಗೆ ನಿರ್ಬಂಧ ಮುಂದುವರಿಸಲಾಗಿದೆ. ಭಾರತದ ನಯಾಗರ ಎಂದೇ ಕರೆಯುವ ಹೊಗೆನಕಲ್ ಜಲಪಾತಕ್ಕೆ ಪ್ರವಾಸಿಗರ ನಿರ್ಬಂಧ ಮುಂದುವರಿಸಲಾಗಿದೆ. ಈ ಬಗ್ಗೆ ಕಾವೇರಿ ವನ್ಯಜೀವಿ ಧಾಮದ ಡಿಎಫ್‍ಒ ಡಾ.ರಮೇಶ್ ಮಾತನಾಡಿ, ಹೊಗೆನಕಲ್ ಜಲಪಾತವನ್ನ ಪ್ರವಾಸಿಗರಿಗೆ ಮುಕ್ತ ಮಾಡಲು ಯಾವುದೇ ಆದೇಶ ಇದುವರೆಗೂ ಬಂದಿಲ್ಲ. ಹೀಗಾಗಿ ಸದ್ಯಕ್ಕೆ ಜಲಪಾತ ಭೇಟಿಗೆ ಪ್ರವಾಸಿಗರಿಗೆ ನಿರ್ಬಂಧ ಮುಂದುವರಿಸಲಾಗಿದೆ ಎಂದು …
Read More »