ಚಾಮರಾಜನಗರ: ಗಾಂಜಾ ಬೆಳೆದಿದ್ದ ಜಮೀನಿನ ಮೇಲೆ ಪೊಲೀಸರು ದಾಳಿ ನಡೆಸಿ 12 ಲಕ್ಷ ರೂಪಾಯಿ ಮೌಲ್ಯದ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ .ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕುರಟ್ಟಿಹೊಸೂರು ಗ್ರಾಮದ ಮಾರ ಎಂಬಾತ ತನ್ನ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ. ಮಾಹಿತಿ ಮೇರೆಗೆ ರಾಮಾಪುರ ಠಾಣೆಯ ಪೊಲೀಸರು ದಾಳಿ ನಡೆಸಿದ್ದರು.211 ಕೆಜಿ ತೂಕದ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡು ಆರೋಪಿ ಮಾರನನ್ನು ಬಂಧಿಸಿದ್ದಾರೆ. ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಗ್ರಾಮ ಪಂಚಾಯತಿ ಆಸ್ತಿಗಳ ಮ್ಯಾನ್ಯುಯಲ್ ಸಮೀಕ್ಷೆ ನಡೆಯುತ್ತಿದೆ – ಪ್ರಿಯಾಂಕ್ ಖರ್ಗೆ
ಬೆಳಗಾವಿ: ರಾಜ್ಯದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯುಯಲ್ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಎನ್.ರವಿಕುಮಾರ್ ಅವರು, ಗ್ರಾಮ ಪಂಚಾಯತಿಗಳಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿಗಳ ಮ್ಯಾನ್ಯುಯಲ್ ಸರಿಯಾಗಿ ಆಗಿಲ್ಲ. ಸಂಪೂರ್ಣವಾಗಿ ಆಸ್ತಿ ನಮೂದು ಆಗಬೇಕು. …
Read More »ಕಾಮಗಾರಿಯೇ ಮುಗಿದಿಲ್ಲ!ಬೆಂಗಳೂರು ಮಂಗಳೂರು ಹೆದ್ದಾರಿಯಲ್ಲಿ ಮತ್ತೊಂದು ಟೋಲ್
ಹಾಸನದಿಂದ ಮಂಗಳೂರನ್ನು ಸಂಪರ್ಕಿಸುವ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯ 700 ಕೋಟಿ ರೂ. ವೆಚ್ಚದ ಚತುಷ್ಪಥ ರಸ್ತೆ ಕಾಮಗಾರಿ ಇನ್ನೂ ಅಪೂರ್ಣವಾಗಿದೆ. ಆದರೂ, ಆಲೂರು ತಾಲ್ಲೂಕಿನಲ್ಲಿ ಹೊಸ ಟೋಲ್ ಪ್ಲಾಜಾ ಆರಂಭಿಸಲು ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಇದರಿಂದ ಜನರ ಆಕ್ರೋಶ ಹೆಚ್ಚಾಗಿದ್ದು, ಕಾಮಗಾರಿ ಪೂರ್ಣಗೊಳ್ಳುವವರೆಗೆ ಟೋಲ್ ಸಂಗ್ರಹಕ್ಕೆ ವಿರೋಧ ವ್ಯಕ್ತವಾಗಿದೆ. ಸ್ಥಳೀಯರು ಹೋರಾಟದ ಎಚ್ಚರಿಕೆ ನೀಡಿದ್ದಾರೆ. ರಾಜಧಾನಿ ಬೆಂಗಳೂರು ಹಾಗೂ ಬಂದರು ನಗರಿ ಮಂಗಳೂರು ಮಧ್ಯೆ ಸಂಪರ್ಕ ಕಲ್ಪಿಸುವ ಪ್ರಮುಖ …
Read More »ಪಂಚಮಸಾಲಿ ಮೀಸಲಾತಿಗೆ ಕಾನೂನಲ್ಲಿ ಅವಕಾಶವಿಲ್ಲ;ಸಾದ್ ಅಬ್ಬಯ್ಯ
ಹುಬ್ಬಳ್ಳಿ: ಕಾಂಗ್ರೆಸ್ ಶಾಸಕ ಮತ್ತು ಕೊಳೆಗೇರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ, ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲವೆಂದು ಅಚ್ಚರಿಯ ಮಾತನ್ನಾಡಿದರು. ಮೀಸಲಾತಿ ಕೇಳುವುದು ಕಾನೂನುಬಾಹಿರ ಯಾಕೆಂದರೆ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ, ಅದರ ಪ್ರತಿನಿಧಿಗಳೇ ಸುಪ್ರೀಮ್ ಕೋರ್ಟ್ ಗೆ ಅಫಿಡವಿಟ್ ಒಂದನ್ನು ಸಲ್ಲಿಸಿ ಪಂಚಮಸಾಲಿಗಳಿಗೆ ಮೀಸಲಾತಿ ನೀಡಲು ಅವಕಾಶವಿಲ್ಲ ಎಂದು ಹೇಳಿದ್ದರು, ಈಗ ಸುಮ್ಮನೆ ತೋರಿಕೆಗೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಅವರು …
Read More »ಗೃಹಲಕ್ಷ್ಮಿ ಹಣದಿಂದ ಬೋರ್ವೆಲ್ ಕೊರೆಸಿದ ಅತ್ತೆ, ಸೊಸೆ!
ಗದಗ, ಕರ್ನಾಟಕ ಸರ್ಕಾರ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ನೀಡುತ್ತಿರುವ 2000 ರೂ. ಹಣವನ್ನು ಕೂಡಿಟ್ಟು ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಮಾಲಧಾರ ಓಣಿಯ ಅತ್ತೆ ಹಾಗೂ ಸೊಸೆ ಕೊಳವೆ ಬಾವಿ ಕೊರೆಸಿದ್ದಾರೆ. ಬೋರ್ವೆಲ್ನಲ್ಲಿ ಅವರಿಗೆ ನೀರು ಕೂಡ ದೊರೆತಿದೆ. ಇದೀಗ ಈ ಬಗ್ಗೆ ಅತ್ತೆ ಮಾಬುಬೀ ಹಾಗೂ ಸೊಸೆ ರೋಷನ್ ಬೇಗಂ ಹರ್ಷ ವ್ಯಕ್ತಪಡಿಸಿದ್ದಾರೆ. ಅತ್ತೆ ಹಾಗೂ ಸೊಸೆ ಸೇರಿ ಗೃಹಲಕ್ಷ್ಮಿ ಯೋಜನೆಯಿಂದ ದೊರೆತ 44 ಸಾವಿರ ರೂ. …
Read More »ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು ಕೊಡ್ತಾರೆ: ಬೆಲ್ಲದ
ಹುಬ್ಬಳ್ಳಿ, ಡಿಸೆಂಬರ್ 14: ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಮುಸ್ಲಿಮರೆಂದರೆ ಪ್ರೀತಿ. ಅವರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು ಕೊಡುತ್ತಾರೆ ಎಂದು ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದವರಿಗೆ ಇವರು ಮುತ್ತು ಕೊಡುತ್ತಾರೆ, ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಕೋರರಿಗೆ ಮುತ್ತು ಕೊಡುತ್ತಾರೆ, ಕುಕ್ಕರ್ ಬಾಂಬ್ ಇಟ್ಟವರಿಗೂ ಮುತ್ತು ಕೊಡುತ್ತಾರೆ. ಆದರೆ ಶಾಂತ ರೀತಿಯಿಂದ ಹೋರಾಟ ಮಾಡಿದ ನಮ್ಮ …
Read More »ಹೋರಾಟವನ್ನು ಅಸಂವೈಧಾನಿಕ ಅಂತ ಹೇಳಿ ಸಮುದಾಯದ ಬಗ್ಗೆ ಸಿಎಂ ನಿಷ್ಕಾಳಜಿ ಪ್ರದರ್ಶಿಸಿದ್ದಾರೆ: ಸ್ವಾಮೀಜಿ
ಬೆಳಗಾವಿ: ಪ್ರತಿಭಟನೆನಿರತ ಪಂಚಮಸಾಲಿಗಳ ಮೇಲೆ ಲಾಠಿ ಪ್ರಹಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ಮಾತಾಡುವಾಗ ಪಂಚಮಸಾಲಿಗಳ ಮೀಸಲಾತಿ ಹೋರಾಟವನ್ನು ಸಂವಿಧಾನಬಾಹಿರ ಅಂತ ಹೇಳಿದ್ದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಸಮುದಾಯದವರಲ್ಲಿ ತೀವ್ರ ಅಸಮಾಧಾನವನ್ನುಂಟು ಮಾಡಿದೆ. ನಗರದಲ್ಲಿಂದು ಮಾಧ್ಯಮಗೋಷ್ಠಿಯೊಂದನ್ನು ಉದ್ದೇಶಿಸಿ ಮಾತಾಡಿದ ಸ್ವಾಮೀಜಿ, ನಮ್ಮ ಹೋರಾಟವನ್ನು ಅಸಂವೈಧಾನಿಕ ಎಂದು ಹೇಳುವ ಮೂಲಕ ಸಮುದಾಯದ ಬಗ್ಗೆ ತನಗೆ ಯಾವುದೇ ಕಾಳಜಿ ಇಲ್ಲವೆನ್ನುವುದನ್ನು ಸಿದ್ದರಾಮಯ್ಯ ನಿರೂಪಿಸಿದ್ದಾರೆ, ಅವರು ಹೇಳಿರುವುದು ಬಸವಣ್ಣನ ಎಲ್ಲ ಅನುಯಾಯಿಗಳಿಗೆ ಮಾಡಿದ …
Read More »ಆಹಾರ ಸುರಕ್ಷತೆ ಗುಣಮಟ್ಟ ಇಲಾಖೆ ಮತ್ತು ಔಷಧ ನಿಯಂತ್ರಣ ಇಲಾಖೆ ವಿಲೀನ
ಬೆಂಗಳೂರು, ಡಿಸೆಂಬರ್ 14: ಆಹಾರ ಸುರಕ್ಷತೆ ಗುಣಮಟ್ಟ ಇಲಾಖೆ (Food safety and quality Department) ಮತ್ತು ಔಷಧ ನಿಯಂತ್ರಣ ಇಲಾಖೆಗಳನ್ನು (Drug Control Department) ವಿಲೀನಗೊಳಿಸಿ ಕರ್ನಾಟಕ ಸರ್ಕಾರ (Karnataka Government) ಆದೇಶ ಹೊರಡಿಸಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಎಂದು ಹೊಸದಾಗಿ ನಾಮಕರಣ ಮಾಡಲಾಗಿದೆ. ಹೊಸ ಇಲಾಖೆಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರೇ ಮುಖ್ಯಸ್ಥರಾಗಿದ್ದಾರೆ. ಎರಡು ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯನಿರ್ವಹಣೆಗೆ ಸೂಚನೆ …
Read More »ರೋಗಿಗಳನ್ನೂ ಲೆಕ್ಕಿಸದೆ ಆಸ್ಪತ್ರೆಯೊಳಗೆ ಜೋರಾಗಿ ಹಾಡು ಹಾಕಿ ನರ್ಸ್ಗಳ ಡ್ಯಾನ್ಸ್
ತೆಲಂಗಾಣದ ಜಗ್ತಿಯಾಲ ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ಗಳ ನೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಕರ್ತವ್ಯ ನಿರತ ನರ್ಸ್ಗಳು ಮತ್ತು ವೈದ್ಯಕೀಯ ಸಿಬ್ಬಂದಿ ಸಂಭ್ರಮಾಚರಣೆ ಹೆಸರಿನಲ್ಲಿ ಗಲಾಟೆ ಸೃಷ್ಟಿಸಿದರು. ಜೋರಾಗಿ ಹಾಡು ಹಾಕಿಕೊಂಡ ಅವರು ಆಸ್ಪತ್ರೆಯಲ್ಲಿ ರೋಗಿಗಳಿದ್ದಾರೆ ಎನ್ನುವುದನ್ನೂ ಮರೆತು ಕುಣಿದು ಕುಪ್ಪಳಿಸಿದರು. ಇದಕ್ಕೆ ರೋಗಿಗಳ ಸಂಬಂಧಿಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಆ ರೀಲ್ಸ್ ಅನ್ನು ಅಪ್ಲೋಡ್ ಮಾಡಿದ ನಂತರ ಭಾರೀ ವಿರೋಧ ವ್ಯಕ್ತವಾಗಿದೆ. ರೋಗಿಗಳ ಆರೋಗ್ಯವನ್ನೂ ಲೆಕ್ಕಿಸದೆ ಮೋಜು-ಮಸ್ತಿ ಮಾಡುತ್ತಿರುವ ನರ್ಸ್ಗಳ ಬಗ್ಗೆ …
Read More »ಬಳ್ಳಾರಿ ಬಾಣಂತಿಯರ ಸಾವಿಗೆ ಔಷಧ ಮಾತ್ರ ಕಾರಣವಲ್ಲ: ರಾಜ್ಯ ಮಹಿಳಾ ಆಯೋಗ
ಬಳ್ಳಾರಿ, ಡಿಸೆಂಬರ್ 14: ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ (BIMS) ಬಾಣಂತಿಯರ ಸಾವಿಗೆ ಕೇವಲ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಮಾತ್ರ ಕಾರಣವಲ್ಲ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿನ ಅಸ್ವಚ್ಛತೆ ಕೂಡ ಕಾರಣವಾಗಿರಬಹುದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ (Nagalakshmi Chowdhary) ಅನುಮಾನ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜ್ಯ ಮಹಿಳಾ ಆಯೋದ ಅಧ್ಯಕ್ಷ ಡಾ. ನಾಗಲಕ್ಷ್ಮೀ ಚೌದರಿ ಅವರು ಶುಕ್ರವಾರ (ಡಿ.13) ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದರು. ಆಸ್ಪತ್ರೆಯಲ್ಲಿನ ಹೆರಿಗೆ ವಾರ್ಡ್, ಶಸ್ತ್ರಚಿಕಿತ್ಸಾ …
Read More »