ಬೆಂಗಳೂರು: ಇನ್ನು ಮುಂದೆ ರಾಜ್ಯದಲ್ಲಿ ಬಸ್, ಕ್ಯಾಬ್ ಮೂಲಕ ರಾತ್ರಿಯೂ ಸಂಚರಿಸಬಹುದು. ಕೋವಿಡ್ 19 ಲಾಕ್‍ಡೌನ್ ವೇಳೆ ಹೇರಲಾಗಿದ್ದ ರಾತ್ರಿಯ ಕರ್ಫ್ಯೂ ನಿರ್ಬಂಧವನ್ನು ಸಡಿಲಿಸಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಬಸ್, ಟ್ಯಾಕ್ಸಿಗಳಲ್ಲಿ ಕಂಟೈನ್ಮೆಂಟ್ ವಲಯ ಹೊರತು ಪಡಿಸಿ ಉಳಿದ ಕಡೆ ಸಂಚರಿಸಬಹುದು. ಪ್ರಯಾಣಿಕರು ಹೊಂದಿರುವಂತಹ ಬಸ್ ಟಿಕೆಟ್ ಆಧಾರದ ಮೇಲೆ ಬಸ್ ನಿಲ್ದಾಣಗಳಿಗೆ ಹೋಗಲು ಮತ್ತು ಬಸ್ ನಿಲ್ದಾಣದಿಂದ ಮನೆಗಳಿಗೆ …
Read More »ಧಾರ್ಮಿಕ ಕ್ಷೇತ್ರಗಳಿಗೆ ಮಾರ್ಗಸೂಚಿ ಪ್ರಕಟಿಸಿದ ಕೇಂದ್ರ ಸರ್ಕಾರ……………..
ನವದೆಹಲಿ: ಕೇಂದ್ರ ಸರ್ಕಾರ ಎಲ್ಲಾ ಧಾರ್ಮಿಕ ಕ್ಷೇತ್ರಗಳಿಗೆ ಮಾರ್ಗಸೂಚಿಯನ್ನು ಪ್ರಕಟಿಸಿದ್ದು, ಕಂಟೈನ್ಮೆಂಟ್ ಝೋನ್‍ಗಳಲ್ಲಿ ಹೊರತುಪಡಿಸಿ ಉಳಿದೆಲ್ಲಾ ಧಾರ್ಮಿಕ ಸ್ಥಳಗಳನ್ನು ತೆರೆಯಲು ಅನುಮತಿ ನೀಡಿದೆ. ಜೂನ್ 8ರಿಂದ ಮಂದಿರ, ಮಸೀದಿ, ಚರ್ಚ್ ತೆರೆಯಲಿದೆ. ಕೇಂದ್ರದ ಮಾರ್ಗಸೂಚಿಯಂತೆ ಧಾರ್ಮಿಕ ಕ್ಷೇತಗಳಲ್ಲಿ ಪ್ರಸಾದ, ತೀರ್ಥ ನೀಡುವಂತಿಲ್ಲ ಎಂದು ತಿಳಿಸಿದ್ದು, 65 ವರ್ಷ ಮೇಲ್ಪಟ್ಟ ಹಾಗೂ 10 ವರ್ಷದೊಳಗಿನ ಮಕ್ಕಳನ್ನು ಧಾರ್ಮಿಕ ಕೇಂದ್ರಗಳಿಗೆ ಪ್ರವೇಶ ನಿಷೇಧ ಮಾಡಲಾಗಿದೆ. ಕಡ್ಡಾಯವಾಗಿ ಆರು ಅಡಿ ಅಂತರ ಕಾಯ್ದುಕೊಳ್ಳಬೇಕು. ಫೇಸ್ …
Read More »ಹುಬ್ಬಳ್ಳಿ ರೈಲ್ವೆ ನಿಲ್ದಾಣ ಸದ್ಯದಲ್ಲೇ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್ ಫಾರ್ಮ್ ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗಲಿದೆ.
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿ ರೈಲ್ವೆ ನಿಲ್ದಾಣ ಸದ್ಯದಲ್ಲೇ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್ ಫಾರ್ಮ್ ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಈಗಿರುವ ಒಂದನೇ ಪ್ಲಾಟ್ ಫಾರ್ಮ್ 550 ಮೀಟರ್ ಉದ್ದವಿದ್ದು, ಅದನ್ನು 1,400 ಮೀಟರ್‍ಗೆ ಹೆಚ್ಚಿಸಲಾಗುತ್ತಿದ್ದು, ಹತ್ತು ಮೀಟರ್ ಅಗಲವಿರುತ್ತದೆ. ಈಗಿನ ತಪಾಸಣಾ ಕ್ಯಾರೇಜ್ ಮಾರ್ಗವನ್ನು ಪೂರ್ಣ ಪ್ಲಾಟ್ ಫಾರ್ಮ್ ಆಗಿ ಪರಿವರ್ತಿಸಲಾಗುತ್ತಿದೆ. ಈಗಾಗಲೇ ಕೆಲಸ ಆರಂಭವಾಗಿದ್ದು, ಈ ವರ್ಷದ ಅಂತ್ಯದ ವೇಳೆಗೆ ಕಾಮಗಾರಿ …
Read More »ಗೋಕಾಕ: ಕೊರೋನಾ ಶಂಕೆ ಹಿನ್ನೆಲೆ ಇಲ್ಲಿನ ಲೋಕೊಪಯೋಗಿ ಕಚೇರಿ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಕ್ವಾರಂಟೈನ್ ಮಾಡಲಾಗಿದೆ.
ಗೋಕಾಕ: ಕೊರೋನಾ ಶಂಕೆ ಹಿನ್ನೆಲೆ ಇಲ್ಲಿನ ಲೋಕೊಪಯೋಗಿ ಕಚೇರಿ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಕ್ವಾರಂಟೈನ್ ಮಾಡಲಾಗಿದೆ. ಸುಮಾರು 14 ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಈಗಾಗಲೇ ಲೋಕೊಪಯೋಗಿ ಕಚೇರಿಯನ್ನು ಸಿಲ್ ಡೌನ್ ಮಾಡಲಾಗಿದ್ದು ಕೊರೋನಾ ಶಂಕೆವಿರುವ ಅಧಿಕಾರಿ ಮತ್ತು ಸಿಬ್ಬಂದಿಗಳ ಮೇಲೆ ತೀವ್ರ ನಿಗಾಃ ಇರಿಸಲಾಗಿದೆ. ಲೊಕೋಪಯೋಗಿ ಇಲಾಖೆಯ ಎಸ್‌ಡಿಎ ಕಲ್ಲೊಳ್ಳಿ ಗ್ರಾಮದ ಸೋಂಕಿತನ ಸಂಪರ್ಕಕ್ಕೆ ಬಂದಿದ್ದಾನೆ. ಮುಂಬೈನಿಂದ ಬಂದ …
Read More »ಶ್ರೀ ಮಹಾಲಕ್ಷ್ಮೀ ಸೋಸೈಟಿಯಿಂದ ಆಶಾ ಕಾರ್ಯಕರ್ತೆಯರಿಗೆ ಗೌರವ ಧನ
ಮೂಡಲಗಿ:- ಕೊರೋನಾ ಲಾಕ್‍ಡೌನ್ ಸಮಯದಲ್ಲಿ ತಮ್ಮ ಜೀವ ಪಣಕ್ಕಿಟ್ಟು ವಾರಿಯರ್ಸಗಳಾಗಿ ಕಾರ್ಯ ನಿರ್ವಹಿಸಿದ ಆಶಾ ಕಾರ್ಯಕರ್ತೆಯರನ್ನು ಸ್ಥಳೀಯ ಶ್ರೀ ಮಹಾಲಕ್ಷ್ಮೀ ಕೋ-ಆಪ್ ಕ್ರೆಡಿಟ್ ಸೊಸಾಯಿಟಿ ವತಿಯಿಂದ ಮೂರು ಸಾವಿರ ಗೌರವ ಧನ ನೀಡಿ ಗೌರವಿಸಲಾಯಿತು. ಬ್ಯಾಂಕ್ ಸಭಾ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಆಶಾ ಕಾರ್ಯಕರ್ತೆಯರಾದ ಇಂದೂಮತಿ ರಾಜನಾಳ,ಮಹಾದೇವಿ ಹಣಬರ,ಸವಿತಾ ಪಾಲಬಾಂವಿ,ವಿಜಯಲಕ್ಷ್ಮೀ ರೇಳೆಕರ ಅವರನ್ನು ಸೊಸಾಯಿಟಿ ವತಿಯಿಂದ ಗೌರವ ಧನದ ಚೆಕ್ಕು ನೀಡಿ ಗೌರವಿಸಿದರು. ಸೊಸಾಯಿಟಿ ಅಧ್ಯಕ್ಷ ಎಸ್.ಆರ್.ಖಾನಟ್ಟಿ, ಉಪಾಧ್ಯಕ್ಷ …
Read More »ಜನತಾ ಜೀವ ವೈವಿಧ್ಯತೆಯ ಸಂರಕ್ಷಣೆಯು ಪ್ರತಿಯೊಬ್ಬರ ಆದ್ಯಕರ್ತವ್ಯ.ಮುಖ್ಯಾಧಿಕಾರಿ ಸತೀಶ್ ಕುಮಾರ್.
ಮಂಡ್ಯ :ರಾಜಪೇಟೆ ಪಟ್ಟಣದ ಸ್ವರ್ಣಜಯಂತಿ ಶಹರಿ ರೋಜ್ ಗಾರ್ ಯೋಜನಾ ಭವನದ ಸಭಾಂಗಣದಲ್ಲಿ ಜನತಾ ಜೀವವೈವಿದ್ಯ ದಾಖಲಾತಿ ನೋಂದಣಿ ಹಾಗೂ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಪುರಸಭೆ ಮುಖ್ಯಾಧಿಕಾರಿ ಸತೀಶ್ ಕುಮಾರ್ ಮಾತನಾಡಿದರು. ನಾವು ಉಸಿರಾಡುವ ಗಾಳಿ, ಕುಡಿಯುವ ನೀರು, ತಿನ್ನುವ ಆಹಾರ ಸೇರಿದಂತೆ ಸಂಪೂರ್ಣವಾಗಿ ಪರಿಸರವೇ ಮಾಲಿನ್ಯವಾಗುತ್ತಿರುವುದರಿಂದ ಅಪರೂಪದ ಜೀವಸಂಕುಲಗಳು ನಶಿಸಿಹೋಗುತ್ತಿವೆಯಲ್ಲದೇ ನಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರವು ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ …
Read More »ಪಿಎಂ ಕೇರ್ಸ್ ಫಂಡ್ ಅನುಮಾನ ಮೂಡಿಸಿದೆ, ವೆಬ್‍ಸೈಟ್‍ನಲ್ಲಿ ಮಾಹಿತಿ ಪ್ರಕಟಿಸುವಂತೆ ಪಿಐಎಲ್ ಸಲ್ಲಿಕೆ
ನವದೆಹಲಿ: ಪಿಎಂ ಕೇರ್ಸ್ ಫಂಡ್ ಗೆ ಬರುತ್ತಿರುವ ದೇಣಿಗೆ ಮೂಲ ಮತ್ತು ಅದನ್ನು ಯಾವ ಉದ್ದೇಶಗಳಿಗೆ ಬಳಕೆ ಮಾಡಲಾಗಿದೆ ಎಂಬ ವಿವರವನ್ನು ವೆಬ್‍ಸೈಟ್ ನಲ್ಲಿ ಪ್ರಕಟಿಸಲು ಸೂಚಿಸುವಂತೆ ಕೋರಿ ದೆಹಲಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಮಾಹಿತಿ ಹಕ್ಕು ಕಾಯ್ದೆಯಡಿ ಪಿಎಂ ಕೇರ್ಸ್ ಮಾಹಿತಿ ಕೋರಿ ಪ್ರಧಾನ ಮಂತ್ರಿ ಕಾರ್ಯಾಲಯಕ್ಕೆ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಬಳಿಕ ಡಾ.ಎಸ್.ಎಸ್ ಹೂಡಾ ಅವರು ವಕೀಲ ಆದಿತ್ಯ ಹೂಡಾ ಮೂಲಕ ಈ …
Read More »ಗಣಿನಾಡಿನಲ್ಲಿ ಕೋವಿಡ್-19 ಗೆದ್ದ ಕೊರೊನಾ ವಾರಿಯರ್ ಸೇರಿ ಮೂವರು ಡಿಸ್ಚಾರ್ಜ್
ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿಂದು ಮಹಾಮಾರಿ ಕೊರೊನಾ ಸೋಂಕಿನಿಂದ ಗುಣಮುಖರಾದ ಮೂವರನ್ನು ಜಿಲ್ಲಾಸ್ಪತ್ರೆಯಿಂದ ಬಿಡುಗಡೆಗೊಳಿಸಲಾಯಿತು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಅವರ ಸಮಕ್ಷಮದಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾದ ಆ ಮೂವರನ್ನ ಚಪ್ಪಾಳೆ ತಟ್ಟುವ ಮೂಲಕ ಜಿಲ್ಲಾಸ್ಪತ್ರೆಯ ಸಿಬ್ಬಂದಿ ಆತ್ಮೀಯವಾಗಿ ಬಿಡುಗಡೆಗೊಳಿಸಿದರು. ಜಿಲ್ಲಾಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು, 34 ವರ್ಷದ ಪುರುಷ, ರೋಗಿ ಸಂಖ್ಯೆ-2308 ಅವರು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. 44 ವರ್ಷದ, ರೋಗಿ ಸಂಖ್ಯೆ-2781 ಮಥುರಾದಿಂದ …
Read More »ಆನ್‍ಲೈನ್ ಕ್ಲಾಸಿಗೆ ಹಾಜರಾಗಲು ಮನೆಯ ಹಂಚು ಏರಿದ ಬಿಎ ವಿದ್ಯಾರ್ಥಿನಿ…………
ತಿರುವನಂತಪುರಂ: ಕೊರೊನಾ ಮಹಾಮಾರಿಯ ಅಟ್ಟಹಾಸದಿಂದ ಇದೀಗ ತಗರತಿಗಳೆಲ್ಲವೂ ಆನ್ ಲೈನ್ ನಲ್ಲೇ ನಡೆಯುತ್ತಿದೆ. ಆದರೆ ಇಲ್ಲಿ ಸಮಸ್ಯೆಯೆಂದರೆ ಕೆಲವರಿಗೆ ತರಗತಿಗೆ ಹಾಜರಾಗಲು ನೆಟ್ ವರ್ಕ್ ಇಲ್ಲದೆ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇರಳದ ಪದವಿ ವಿದ್ಯಾರ್ಥಿನಿಯೊಬ್ಬಳು ಒಳ್ಳೆಯ ಉಪಾಯವೊಂದನ್ನು ಕಂಡುಕೊಂಡಿದ್ದಾಳೆ. ಹೌದು. ಕುಟ್ಟಿಪುರಂ ಕೆಎಂಸಿಟಿ ಆರ್ಟ್ಸ್ & ಸೈನ್ಸ್ ಕಾಲೇಜಿನ ವಿದ್ಯಾರ್ಥಿನಿ ನಮಿತಾ, ಮೊಬೈಲ್ ನೆಟ್‍ವರ್ಕ್ ಇಲ್ಲವೆಂದು ತನ್ನದೇ ಆದ ಐಡಿಯಾವೊಂದನ್ನು ಕಂಡುಕೊಂಡು ಇದೀಗ ಭಾರೀ ಸುದ್ದಿಯಾಗಿದ್ದಾಳೆ. ಕೊಟ್ಟಕಲ್ ಸಮೀಪದ ಅರೀಕ್ಕಲ್ …
Read More »ಶಂಕರ ಬಿದರಿಗೆ ಪರಿಷತ್ ಟಿಕೆಟ್ ನೀಡಲು ಮನವಿ
ಬೆಂಗಳೂರು, ಜೂ.4- ನಿವೃತ್ತ ಡಿಜಿಪಿ ಶಂಕರ ಬಿದರಿ ಅವರನ್ನು ರಾಜ್ಯಸಭೆ ಹಾಗೂ ವಿಧಾನ ಪರಿಷತ್‍ಗೆ ಸ್ಪರ್ಧೆಗೆ ಅವಕಾಶ ಕಲ್ಪಿಸುವಂತೆ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಒಕ್ಕೂಟದಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಮನವಿ ಸಲ್ಲಿಸಿದ್ದಾರೆ. ಮಹಾಸಂಸ್ಥೆ ಅಧ್ಯಕ್ಷ ಶಿವಕುಮಾರ್ ಮೇಟಿ ನೇತೃತ್ವದಲ್ಲಿ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದು, ಶಂಕರ ಬಿದರಿಯವರು ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ್ದು, ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸುಮಾರು …
Read More »