ತುಮಕೂರು: ಇಷ್ಟು ದಿನ ಕೃಷಿ ಜಮೀನುಗಳೆಲ್ಲಾ ಬೀಳುಬಿಡುತಿದ್ದರು. ಕಾರಣ ನಗರದತ್ತ ಯುವಕರು ಮುಖ ಮಾಡುತಿದ್ದರು. ಆದರೆ ಈಗ ಬೀಳು ಬಿಟ್ಟ ಜಮೀನೆಲ್ಲಾ ಹಸನಾಗುತ್ತಿದೆ. ಅದರಲ್ಲಿ ಬೆಳೆ ಬೆಳೆಯಲಾಗುತ್ತಿದೆ. ಇದೆಲ್ಲಾ ಕೊರೋನಾ ಎಫೆಕ್ಟ್. ಬೆಂಗಳೂರು ಬಿಟ್ಟು ಬಂದ ಜನರೆಲ್ಲಾ ಈಗ ಕೃಷಿಯಲ್ಲಿ ತೊಡಗಿಕೊಂಡಿರಿವುದೇ ಇದಕ್ಕೆ ಕಾರಣ. ತುಮಕೂರು ಜಿಲ್ಲೆಯಲ್ಲಿ ಈಗ ಕೃಷಿ ಚಟುವಟಿಕೆಗಳು ಜೋರಾಗಿದೆ. ಇಷ್ಟು ದಿನ ಬೀಳು ಬಿಡುತಿದ್ದ ಜಮೀನುಗಳಲ್ಲಿ ವಿವಿಧ ರೀತಿಯ ಕೃಷಿ ಮಾಡಲಾಗುತ್ತಿದೆ. ಕೊರೋನಾದಿಂದ ಬೆಂಗಳೂರು ಬಿಟ್ಟು …
Read More »ಕಾಮುಕನೊಬ್ಬ ತನ್ನ 7 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಉದಯಪುರ: ರಾಜಸ್ಥಾನದ ಉದಯಪುರ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಕಾಮುಕನೊಬ್ಬ ತನ್ನ 7 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ. ಗೋವರ್ಧನ ವಿಲಾಸ್ ಪೊಲೀಸ್ ಠಾಣೆ ವ್ಯಾಪ್ತಿಯ ಸುರ್ಫಲಾ ಕಾಯ ಗ್ರಾಮದಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ. 36 ವರ್ಷದ ಟೆಂಪೋ ಚಾಲಕನನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ತಾಯಿ ದೂರು ನೀಡಿದ್ದು ಗಂಭೀರ ಸ್ಥಿತಿಯಲ್ಲಿರುವ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೋ) ಕಾಯಿದೆಯಡಿ …
Read More »ಶಿವಯೋಗಿ ಮಠದ ಪರಮ ಪೂಜ್ಯ ಹಾಲಸ್ವಾಮಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಶಿವಮೊಗ್ಗ : ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕು ರಾಂಪುರದ ಶಿವಯೋಗಿ ಮಠದ ಪರಮ ಪೂಜ್ಯ ಹಾಲಸ್ವಾಮಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಹಲವು ದಿನಗಳಿಂದ ತೀವ್ರ ತರ ಉಸಿರಾಟದ ತೊಂದರೆಯಿಂದ ನರಳುತ್ತಿದ್ದರು. ಭಕ್ತರು ಎಷ್ಟೇ ವಿನಂತಿಸಿದರೂ ಆಸ್ಪತ್ರೆಗೆ ಹೋಗಲು ನಿರಾಕರಿಸಿದ್ದರು. ಕೊನೆಗೆ ಎರಡು ದಿನಗಳ ಹಿಂದೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಕೋವಿಡ್ ಕೇಂದ್ರಕ್ಕೆ ಕರೆತರಲಾಗಿತ್ತು. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ದಾವಣಗೆರೆ ಜಿಲ್ಲೆ ಸಾಸ್ವೆಹಳ್ಳಿ ಸಮೀಪದ ರಾಂಪುರ ಮಹಾಸಂಸ್ಥಾನದ ಹಾಲಸ್ವಾಮಿ ಅವರಿಗೆ …
Read More »‘ಶವ’ದ ಫೋಟೋ ತೆಗೆಯಲು ಬಂದ ಛಾಯಾಗ್ರಾಹಕ ವ್ಯಕ್ತಿಯ ಜೀವ ಉಳಿಸಿದ್ದಾನೆ
ಇದೊಂದು ಅಚ್ಚರಿಯ ಘಟನೆ ‘ಶವ’ದ ಫೋಟೋ ತೆಗೆಯಲು ಬಂದ ಛಾಯಾಗ್ರಾಹಕ ವ್ಯಕ್ತಿಯ ಜೀವ ಉಳಿಸಿದ್ದಾನೆ. ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಛಾಯಾಗ್ರಾಹಕ ಥಾಮಸ್ ಎಂಬಾತನನ್ನು ಪೊಲೀಸರು ಶವದ ಫೋಟೋ ತೆಗೆಯಲು ಕರೆಸಿದ್ದರು. ಶಿವ ದಾಸನ್ ಎಂಬಾತನ ತಲೆಗೆ ಬಲವಾದ ಹೊಡೆತ ಬಿದ್ದಿದ್ದರಿಂದ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆಂದು ಭಾವಿಸಲಾಗಿತ್ತು. ನ್ಯಾಯಾಲಯದಲ್ಲಿ ಸಾಕ್ಷಿಯಾಗಿ ಪರಿಗಣಿಸುವ ಉದ್ದೇಶದಿಂದ ಛಾಯಾಚಿತ್ರ ತೆಗೆಸಲು ಪೊಲೀಸರು ಬಯಸಿದ್ದರು. ಕೊಠಡಿಯಲ್ಲಿ ಬೆಳಕು ಕಡಿಮೆ ಇದ್ದಿದ್ದರಿಂದ ಛಾಯಾಗ್ರಾಹಕ ಟಾಮಿ …
Read More »ಮೇಕೆದಾಟು ಅಣೆಕಟ್ಟು ಕಟ್ಟುವ ಕರ್ನಾಟಕದ ಮನವಿ ಪುರಸ್ಕರಿಸುವಂತೆ ಮನವಿ
ನವದೆಹಲಿ : ಮೇಕೆದಾಟು ಸಮಾನಾಂತರ ಅಣೆಕಟ್ಟು ಕಟ್ಟುವ ಕರ್ನಾಟಕ ಸರ್ಕಾರದ ಮನವಿಯನ್ನು ಕೂಡಲೇ ಪುರಸ್ಕರಿಸುವಂತೆ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ಕೇಂದ್ರದ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದರು. ಕೇಂದ್ರದ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಮತ್ತು ಸುರೇಶ್ ಅಂಗಡಿ ಅವರೊಂದಿಗೆ ನವದೆಹಲಿ ಯ ಜಲಶಕ್ತಿ ಸಚಿವಾಲಯದ ಕಚೇರಿಯಲ್ಲಿ ನಡೆದ ಈ ಭೇಟಿಯ ಸಮಯದಲ್ಲಿ ಬೆಂಗಳೂರು ಮಹಾನಗರಕ್ಕೆ ಕುಡಿಯುವ ನೀರು …
Read More »ಕೊರೊನಾಗೆ ಔಷಧಿ ಕಂಡು ಹಿಡಿಯಲು ಜಾಗತಿಕ ಮಟ್ಟದಲ್ಲಿ ಭಾರಿ ಪೈಪೋಟಿ..!
ಬೆಂಗಳೂರು, ಜು.15- ವಿಶ್ವವನ್ನೇ ಕಂಗೆಡಿಸಿರುವ ಮಹಾಮಾರಿ ಕೊರೊನಾಗೆ ಔಷಧಿ ಕಂಡು ಹಿಡಿದು ಈಗಾಗಲೇ ಪ್ರಯೋಗಾತ್ಮಕ ಪರೀಕ್ಷೆ ನಡೆಯುತ್ತಿದ್ದು, ಅದನ್ನು ಬಿಡುಗಡೆ ಮಾಡಲು ಜಾಗತಿಕ ಪೈಪೋಟಿ ಆರಂಭವಾಗಿದೆ. ಅಮೆರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರು ಇಂದು ಹೇಳಿಕೆ ನೀಡಿದ್ದು, ದಾಖಲಾರ್ಹ ಸಮಯದಲ್ಲಿ ಅಮೆರಿಕಾ ಕೊರೊನಾಗೆ ಔಷಧಿಯನ್ನು ಬಿಡುಗಡೆ ಮಾಡಲಿದೆ ಎಂದು ಘೋಷಿಸಿದ್ದಾರೆ. ರಷ್ಯಾ ಈಗಾಗಲೇ ತಾನು ಔಷಧಿ ಕಂಡು ಹಿಡಿದಿದ್ದು, ಮಾನವ ಪ್ರಯೋಗ ಮಾಡಿ ಯಶಸ್ವಿಯಾಗಿರುವುದಾಗಿ ಹೇಳಿಕೊಂಡಿತ್ತು. ಆಗಸ್ಟ್ ಮಧ್ಯ ಭಾಗದಲ್ಲಿ …
Read More »ಜಿಲ್ಲೆಯಲ್ಲಿ ಮೂರು ದಿನದಲ್ಲಿ ಕೊರೊನಾಗೆ ನಾಲ್ಕು ಜನ ಪ್ರಾಣ ತೆತ್ತಿದ್ದು ಜಿಲ್ಲೆಯ ಜನ ಕಂಗಾಲಾಗಿದ್ದಾರೆ.
ಚಿಕ್ಕಮಗಳೂರು: ಸೋಮವಾರ ಎರಡು, ಮಂಗಳವಾರ ಒಂದು, ಬುಧವಾರ ಒಂದು ಎಂಬಂತೆ ಜಿಲ್ಲೆಯಲ್ಲಿ ಮೂರು ದಿನದಲ್ಲಿ ಕೊರೊನಾಗೆ ನಾಲ್ಕು ಜನ ಪ್ರಾಣ ತೆತ್ತಿದ್ದು ಜಿಲ್ಲೆಯ ಜನ ಕಂಗಾಲಾಗಿದ್ದಾರೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರು ಹಾಗೂ ಸಾವಿನ ಸಂಖ್ಯೆ ಕೂಡ ಹೆಚ್ಚುತ್ತಿದ್ದು ಜಿಲ್ಲೆಯ ಜನ ತೀವ್ರ ಆತಂಕಕ್ಕೀಡಾಗಿದ್ದಾರೆ. ಜಿಲ್ಲೆಯ 72 ವರ್ಷದ ವೃದ್ಧೆ ಕೊರೊನಾಗೆ ಬಲಿಯಾಗಿದ್ದಾರೆ. ಅಸ್ತಮಾ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಕೊರೊನಾಗೆ …
Read More »ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದಕ್ಕೆ ಬೆಳಗಾವಿಯಲ್ಲಿ 124, ಕಲಬುರಗಿಯಲ್ಲಿ 106 ಮಂದಿ ವಿರುದ್ಧ ಎಫ್‌ಐಆರ್
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ರಾಕೆಟ್ ವೇಗದಲ್ಲಿ ಏರಿಕೆಯಾಗುತ್ತಿದ್ದು, ಇದಕ್ಕೆ ಕ್ವಾರಂಟೈನ್‌ಗಳು ಒಂದು ರೀತಿಯಲ್ಲಿ ಕಾರಣರಾಗಿದ್ದಾರೆ. ಇಲ್ಲಿಯವರೆಗೆ ಬರೋಬ್ಬರಿ 1.51 ಲಕ್ಷ ಮಂದಿ ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಹೌದು. ಕೋವಿಡ್ 19 ಸೋಂಕಿತರ ಪ್ರಥಮ ಸಂಪರ್ಕ ಮತ್ತು ದ್ವಿತೀಯ ಸಂಪರ್ಕಿತರು 14 ದಿನಗಳ ಕಾಲ ಕ್ವಾರಂಟೈನ್‌ನಲ್ಲಿ ಇರಬೇಕಾಗುತ್ತದೆ. ಆದರೆ ಕರ್ನಾಟಕದಲ್ಲಿ 2.25 ಲಕ್ಷ ಮಂದಿ ಈ ನಿಯಮವನ್ನು ಉಲ್ಲಂಘಿಸಿ ಸುತ್ತಾಟ ಮಾಡಿದ್ದಾರೆ. ಈ ಪೈಕಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಅತಿ ಹೆಚ್ಚು …
Read More »ಪ್ಲಾಸ್ಮಾ ದಾನ ಮಾಡಿದವರಿಗೆ 5 ಸಾವಿರ ರೂ. ಭತ್ಯೆ: ಸಚಿವ ಸುಧಾಕರ್
ಬೆಂಗಳೂರು: ಕೊರೊನಾದಿಂದ ಗುಣಮುಖರಾದವರು ಪ್ಲಾಸ್ಮಾ ದಾನ ಮಾಡಿದರೇ ಅವರಿಗೆ 5 ಸಾವಿರ ರೂ. ಭತ್ಯೆ ನೀಡುವುದಾಗಿ ಸರ್ಕಾರ ಘೋಷಿಸಿದೆ. ಗುಣಮುಖರಾದವರು 14-28 ದಿನಗಳ ಒಳಗೆ ಒಬ್ಬ ವ್ಯಕ್ತಿ ಒಂದು ಬಾರಿಯಷ್ಟೇ ದಾನ ಮಾಡಲು ಅವಕಾಶವಿದೆ. ಈಗಾಗಲೇ ದೆಹಲಿಯಲ್ಲಿ ಪ್ಲಾಸ್ಮಾ ಬ್ಯಾಂಕ್ ಆರಂಭಿಸಲಾಗಿದ್ದು, ಕೊರೊನಾದಿಂದ ಗುಣಮುಖರಾದವರು ಪ್ಲಾಸ್ಮಾ ದಾನವಾಗಿ ನೀಡುತ್ತಿದ್ದಾರೆ. ರಾಜ್ಯದಲ್ಲಿ ಕೊರೊನಾ ಮಹಾಮಾರಿ ಇನ್ನಷ್ಟು ವ್ಯಾಪಿಸೋ ಬಗ್ಗೆ ಎಚ್ಚರಿಕೆ ಬೆನ್ನಲ್ಲೇ ಸರ್ಕಾರ ಹೊಸ ಹೊಸ ಕ್ರಮಕ್ಕೆ ಮುಂದಾಗಿದೆ. ವಾರದ ಲಾಕ್‍ಡೌನ್ …
Read More »ಸಚಿವ ರಮೇಶ್ ಜಾರಕಿಹೊಳಿ ಅವರು ಕೇಂದ್ರದ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ
ಹೊಸದಿಲ್ಲಿ: ಮೇಕೆದಾಟು ಸಮಾನಾಂತರ ಅಣೆಕಟ್ಟು ಕಟ್ಟುವ ಕರ್ನಾಟಕ ಸರ್ಕಾರದ ಮನವಿಯನ್ನು ಕೂಡಲೇ ಪುರಸ್ಕರಿಸುವಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಕೇಂದ್ರದ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದರು. ಕೇಂದ್ರದ ಸಚಿವರಾದ ಪ್ರಲ್ಹಾದ್ ಜೋಶಿ ಸುರೇಶ್ ಅಂಗಡಿ ಅವರೊಂದಿಗೆ ದೆಹಲಿಯ ಜಲಶಕ್ತಿ ಸಚಿವಾಲಯದ ಕಚೇರಿಯಲ್ಲಿ ನಡೆದ ಈ ಭೇಟಿಯ ಸಮಯದಲ್ಲಿ ಬೆಂಗಳೂರು ಮಹಾನಗರಕ್ಕೆ ಕುಡಿಯುವ ನೀರು ಒದಗಿಸಲು ಅನುಕೂಲವಾಗುವಂತೆ 4.75 TMC ನೀರನ್ನು ಸದ್ಬಳಕೆ ಮಾಡಿಕೊಳ್ಳುವ …
Read More »