Breaking News

ಬಕ್ರೀದ್ ಹಬ್ಬಕ್ಕೆ ಬಲಿ ಕೊಡಲು ತರಲಾಗಿದ್ದ ಎರಡು ಒಂಟೆಗಳ ರಕ್ಷಣೆ

ಕೋಲಾರ: ಬಕ್ರೀದ್ ಹಬ್ಬಕ್ಕೆ ಬಲಿ ಕೊಡಲು ತರಲಾಗಿದ್ದ ಎರಡು ಒಂಟೆಗಳ ರಕ್ಷಣೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ನಗರದ ಬಾಲಕೃಷ್ಣ ಬಡಾವಣೆಯಲ್ಲಿ ನಡೆದಿದೆ. ಫಾಸಿಲ್ ಎಂಬಾತನಿಗೆ ಸೇರಿದ ಎರಡು ಒಂಟೆಗಳನ್ನು ಮದೀನ ಮಸೀದಿಯಲ್ಲಿ ಇರಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಒಂಟೆಗಳನ್ನು ರಕ್ಷಿಸಿ, ಮಾಲೂರಿನ ಗೋ ಶಾಲೆಗೆ ರವಾನೆ ಮಾಡಿದೆ. ಬಕ್ರೀದ್ ಹಬ್ಬದಲ್ಲಿ ಒಂಟೆ ಮಾಂಸ ದಾನ ಮಾಡುವುದು ಬಕ್ರೀದ್ ಹಬ್ಬದ ಪ್ರತೀತಿ. ಆದ್ರೆ ಈ …

Read More »

ಲಕ್ಷಾಂತರ ರೂ. ಅಂದರ್ ಬಾಹರ್ ಆಡ್ತಾರೆ ಶ್ರೀಮಂತರು

ಕೋಲಾರ: ಜಿಲ್ಲೆಯಲ್ಲಿ ಅಂತರ್ ರಾಜ್ಯ ಹೈಟೆಕ್ ಜೂಜು ಅಡ್ಡೆಯೊಂದು ತಲೆ ಎತ್ತಿದ್ದು, ಪ್ರತಿದಿನ ಲಕ್ಷಾಂತರ ರೂಪಾಯಿ ಜೂಜಾಟ ನಡೆಯುವ ಈ ಅಡ್ಡೆಗೆ ಪೊಲೀಸರ ಕುಮ್ಮಕ್ಕು ಸಹ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಜಿಲ್ಲೆಯ ಗಡಿ ಗ್ರಾಮಗಳಲ್ಲಿ ಅಂದರ್ ಬಾಹರ್ ಜೂಜು ನಿರಾಂತಕವಾಗಿ ನಡೆಯುತ್ತಿದೆ. ಪ್ರತಿ ನಿತ್ಯ ನೂರಾರು ಮಂದಿ ಒಂದೆಡೆ ಸೇರಿ ಎರಡು ಪಾಳಿಗಳಲ್ಲಿ ಜೂಜು ಕೇಂದ್ರಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದು, ನಿತ್ಯವೂ ಲಕ್ಷಾಂತರ ರೂಪಾಯಿ ವರೆಗೆ ವಹಿವಾಟು ನಡೆಯುತ್ತಿದೆ. ಶ್ರೀನಿವಾಸಪುರ ತಾಲೂಕಿನ …

Read More »

3.50 ಲಕ್ಷ ರೂ. ಮೌಲ್ಯದ ಗೋಮಾಂಸ ಸಾಗಾಟ ಮಾಡ್ತಿದ್ದವರ ಬಂಧನ

ಕಾರವಾರ: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿ ಸೇರಿ ವಾಹನ ವಶಕ್ಕೆ ಪಡೆದ ಘಟನೆ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಹಿರೇಗುತ್ತಿ ಚೇಕ್ ಪೋಸ್ಟ್ ಬಳಿ ನಡೆದಿದೆ. ಆರೋಪಿಗಳನ್ನು ಅಮೂಲ (36), ಜಮೀರ್ ಸಯ್ಯದ್(29) ಎಂದು ಗುರುತಿಸಲಾಗಿದೆ. ಬೆಳಗಾವಿಯಿಂದ ಭಟ್ಕಳಕ್ಕೆ ಸಾಗಾಟವಾಗುತ್ತಿದ್ದ ಗೋಮಾಂಸವನ್ನು ರಾಷ್ಟ್ರೀಯ ಹೆದ್ದಾರಿ 66 ರ ಹಿರೆಗುತ್ತಿ ಚೆಕ್‍ ಪೋಸ್ಟ್ ನಲ್ಲಿ ಗೋಕರ್ಣ ಪಿಎಸ್‍ಐ ನವೀನ್ ಕುಮಾರ ನೇತೃತ್ವದ ತಂಡ ತಪಾಸಣೆ ನಡೆಸಿದ ವೇಳೆ …

Read More »

ವೈದ್ಯ, ನರ್ಸ್ ಕಾವಲಿನಲ್ಲಿ ಸಿಇಟಿ ಬರೆದ ಸೋಂಕಿತ ವಿದ್ಯಾರ್ಥಿ

ಚಿಕ್ಕಮಗಳೂರು: ವೈದ್ಯ ಹಾಗೂ ನರ್ಸ್ ಕಾವಲಿನ ಮಧ್ಯೆ ಕೊರೊನಾ ಸೋಂಕಿತ ವಿದ್ಯಾರ್ಥಿ ಪ್ರತ್ಯೇಕ ಕೊಠಡಿಯಲ್ಲಿ ಸಿಇಟಿ ಪರೀಕ್ಷೆ ಬರೆದಿದ್ದಾರೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ವಿದ್ಯಾರ್ಥಿಗೆ ಬುಧವಾರ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿತ್ತು. ಹೀಗಾಗಿ ಜಿಲ್ಲಾಡಳಿತ ವಿದ್ಯಾರ್ಥಿಗೆ ಎಲ್ಲ ರೀತಿಯ ಸೌಕರ್ಯ ಕಲ್ಪಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿತ್ತು. ವಿದ್ಯಾರ್ಥಿಗೆ ಕೊರೊನಾ ಲಕ್ಷಣಗಳು ತೀರಾ ಕಡಿಮೆ ಇದ್ದ ಕಾರಣ ಹೋಮ್ ಐಸೋಲೇಷನ್‍ನಲ್ಲಿ ಚಿಕಿತ್ಸೆಗೆ ಅವಕಾಶ ನೀಡಲಾಗಿತ್ತು. ಇಂದು ಬೆಳಗ್ಗೆ ಅರ್ಧ ಗಂಟೆ …

Read More »

ಕಳೆದ 24 ಗಂಟೆಗಳಿಂದ ನೀರು ಬರದೇ ರೋಗಿಗಳು ಪರದಾಟ:ಬೆಳಗಾವಿ ಬಿಮ್ಸ್ ರೋಗಿಗಳು

ಬೆಳಗಾವಿ: ನಗರದ ಬಿಮ್ಸ್ ಆಸ್ಪತ್ರೆ ಅವ್ಯವಸ್ಥೆಗಳ ಆಗಾರವಾಗಿದ್ದು, ಕಳೆದ 24 ಗಂಟೆಗಳಿಂದ ನೀರು ಬರದೇ ರೋಗಿಗಳು ಪರದಾಡುತ್ತಿದ್ದಾರೆ. ರೋಗಿಗಳು ಶೌಚಕ್ಕೂ ಹೋಗಲಾರದೇ ನರಕ ಯಾತನೆ ಅನುಭವಿಸುಂತಾಗಿದೆ. ಸರಿ ಸುಮಾರು 40 ಕ್ಕೂ ಹೆಚ್ಚು ಗರ್ಭಿಣಿಯರು ಕೊರೊನಾ ಸೋಂಕಿನಿಂದ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆ ಸೇರಿ ಎರಡು ವಾರಗಳು ಕಳೆದುಹೊಗಿವೆ. ಆದರೆ ಈಗ ಸಿಬ್ಬಂದಿ ಇವರನ್ನು ಡಿಸ್ಚಾರ್ಜ ಮಾಡಲು ಮುಂದಾಗಿದ್ದಾತೆ. ನಿಮ್ಮ ಹತ್ತು ದಿನದ ಚಿಕಿತ್ಸೆ ಅವಧಿ ಮುಗಿದಿದ್ದು, ನಿಮ್ಮನ್ನು ಡಿಸ್ಚಾರ್ಜ್ ಮಾಡುತ್ತೇವೆ ಎಂದು …

Read More »

ಕೊರೊನಾ ಸೋಂಕಿತ ವ್ಯಕ್ತಿಯನ್ನ ನಡೆದುಕೊಂಡು ಮನೆಗೆ ಹೋಗಿ ಎಂದ ಆರೋಗ್ಯ ಇಲಾಖೆ

ಕೊಪ್ಪಳ: ಕೊರೊನಾ ಸೋಂಕಿತ ವ್ಯಕ್ತಿಯನ್ನ ನಡೆದುಕೊಂಡು ಮನೆಗೆ ಹೋಗಿ ಎಂದು ಆರೋಗ್ಯ ಇಲಾಖೆ ಸಿಬ್ಬಂದಿ ಹೇಳುವ ಮೂಲಕ ಅಮಾನವೀಯವಾಗಿ ವರ್ತಿಸಿರುವ ಘಟನೆ ಕೊಪ್ಪಳದಲ್ಲಿ ಬೆಳಕಿಗೆ ಬಂದಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮುದೇನೂರ ಗ್ರಾಮದ ನಿವಾಸಿಗೆ ಸಿಬ್ಬಂದಿ ಕೊರೊನಾ ಇರುವುದನ್ನು ದೃಢಪಡಿಸಿದ್ದಾರೆ. ಅಲ್ಲದೆ ಮನೆಗೆ ನಡೆದುಕೊಂಡು ಹೋಗಿ ಎಂದು ಹೇಳಿ ಕಳಿಸಿದ್ದಾರೆ ಎಂದು ಸೋಂಕಿತ ಆರೋಪಿಸುತ್ತಿದ್ದಾರೆ. ಮುದೇನೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಈ ರೀತಿ ಅಮಾನವಿಯ ರೀತಿಯಲ್ಲಿ ನಡೆದುಕೊಂಡಿದ್ದಾರೆ …

Read More »

ಆಗಸ್ಟ್ 5ರಿಂದ ಯೋಗ, ಜಿಮ್ ಓಪನ್ ಸೇರಿದಂತೆ ಆಗಸ್ಟ್ 31ರವರೆಗೆ ಶಾಲೆ ಕಾಲೇಜ್ ನಿರ್ಬಂಧ

ಬೆಂಗಳೂರು: ಕೇಂದ್ರ ಸರ್ಕಾರ ಅನ್‍ಲಾಕ್ 3ಗೆ ಮಾರ್ಗಸೂಚಿ ಪ್ರಕಟಿಸಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಯಥಾವತ್ತಾಗಿ ಜಾರಿಗೆ ತರಲು ನಿರ್ಧರಿಸಿದೆ. ಇದರ ಜೊತೆಗೆ ಸಂಡೇ ಲಾಕ್‍ಡೌನ್, ಶನಿವಾರ ರಜೆ ದಿನವನ್ನೂ ರದ್ದುಗೊಳಿಸಿದೆ.ಕೇಂದ್ರದ ಮಾರ್ಗಸೂಚಿಯಂತೆ ಆಗಸ್ಟ್ 1ರಿಂದ ನೈಟ್ ಕರ್ಫ್ಯೂ ರದ್ದು, ಆಗಸ್ಟ್ 5ರಿಂದ ಯೋಗ, ಜಿಮ್ ಓಪನ್ ಸೇರಿದಂತೆ ಆಗಸ್ಟ್ 31ರವರೆಗೆ ಶಾಲೆ ಕಾಲೇಜ್ ನಿರ್ಬಂಧ ಮುಂದುವರಿಕೆಯನ್ನು ಪಾಲಿಸಿದೆ. ಜೊತೆಗೆ ಥಿಯೇಟರ್, ಬಾರ್, ರೆಸ್ಟೋರೆಂಟ್, ಮೆಟ್ರೋಗೆ ಅವಕಾಶ ಇಲ್ಲ ರಾಜಕೀಯ, ಧಾರ್ಮಿಕ …

Read More »

ಕೊರೊನಾ ಮಹಾಮಾರಿಗೆ ಬಲಿಯಾದ ವ್ಯಕ್ತಿಗಳ ಅಂತಿಮ ಸಂಸ್ಕಾರವನ್ನು ಅವರ ಧರ್ಮದ ವಿಧಿ ವಿಧಾನಗಳಂತೆ ನೆರೆವೇರಿಸಿದರು.

ಗೋಕಾಕ: ನಗರದ ಅಂಬಿಗೇರ ಗಲ್ಲಿಯ ನಿವೃತ ಮುಖ್ಯೋಪಾದ್ಯರೊಬ್ಬರು ಕೊರೊನಾ ಮಹಾಮಾರಿಗೆ ಗುರುವಾರ ಬಲಿಯಾಗಿದ್ದು ,ಅವರ ಅಂತ್ಯ ಸಂಸ್ಕಾರವನ್ನು ನಗರಸಭೆ ಸಿಬ್ಬಂದ್ದಿ ಮತ್ತು  ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ನೆರೆವೇರಿಸಿದರು. ಕೊರೊನಾ ಮಹಾಮಾರಿಗೆ ಬಲಿಯಾದ ಮುಖ್ಯೋಪಾದ್ಯಯರ ಅಂತಿಮ ಸಂಸ್ಕಾರವನ್ನು ಅವರ ಧರ್ಮದ ವಿಧಿ ವಿಧಾನಗಳಂತೆ  ನೆರೆವೇರಿಸಿದರು. ಪಿಏಫ್ಐ ಕಾರ್ಯಕರ್ತರು ಸ್ವಯಂ ಪ್ರೇರಣೆಯಿಂದ ಮುಖ್ಯೋಪಾದ್ಯಯವರ ಅಂತ್ಯ ಸಂಸ್ಕಾರ ನೆರೆವೇರಿಸಲು ನಗರಸಭೆ ಸಿಬ್ಬಂದ್ದಿಯೊಂದಿಗೆ ಮುಂದೆ ಬಂದು ಅಂತ್ಯ ಸಂಸ್ಕಾರ ಮಾಡಿರುವುದರಿಂದ ಪಿಎಫ್ಐ ಕಾರ್ಯಕರ್ತರು …

Read More »

ಕೊವಾಕ್ಸಿನ್‌ನ ಕ್ಲಿನಿಕಲ್ ಟ್ರಯಲ್ ಬೆಳಗಾವಿ ಆಸ್ಪತ್ರೆಯಲ್ಲಿ ಆರಂಭ

ಬೆಳಗಾವಿ, ಜುಲೈ 30: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಆಯ್ಕೆ ಮಾಡಿದ 12 ಕೇಂದ್ರಗಳಲ್ಲಿ ಒಂದಾದ ಬೆಳಗಾವಿ ಮೂಲದ ಜೀವನ್ ರೇಖಾ ಆಸ್ಪತ್ರೆಯಲ್ಲಿ ಬಿಬಿವಿ 152 ಕೋವಿಡ್ -19 ಲಸಿಕೆ ಅಥವಾ ಕೊವಾಕ್ಸಿನ್‌ನ ಮಾನವ ಕ್ಲಿನಿಕಲ್ ಪ್ರಯೋಗ ಪ್ರಾರಂಭವಾಗಿದೆ. ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಕೋವಿಡ್ ಲಸಿಕೆಯಾದ ಕೊವಾಕ್ಸಿನ್‌ನ ಕ್ಲಿನಿಕಲ್ ಪರೀಕ್ಷೆಗಳು ಈಗಾಗಲೇ ಏಮ್ಸ್ ಸೇರಿದಂತೆ 12 ಕೇಂದ್ರಗಳಲ್ಲಿ ಪ್ರಾರಂಭವಾಗಿವೆ. ಜೀವನ್ ರೇಖಾ ನಿರ್ದೇಶಕ ಟಿ.ಎನ್.ಐ.ಇ ಅವರೊಂದಿಗೆ ಮಾತನಾಡಿದ ಡಾ.ಅಮಿತ್ ಭಾಟೆ, …

Read More »

ಲೇಖಕಿಯರ ಸಂಘ: ಅಧಿಕಾರ ಹಸ್ತಾಂತರ

ಬೆಳಗಾವಿ: ಜಿಲ್ಲಾ ಲೇಖಕಿಯರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಡಾ‌.ಹೇಮಾವತಿ ಸೋನೊಳಿ ಅವರಿಗೆ ನಿರ್ಗಮಿತ ಅಧ್ಯಕ್ಷೆ ಜ್ಯೋತಿ ಬದಾಮಿ ಅಧಿಕಾರ ಹಸ್ತಾಂತರಿಸಿದರು. ‘ತಮ್ಮ ಎರಡು ವರ್ಷಗಳ ಅಧಿಕಾರದ ಅವಧಿಯಲ್ಲಿ ಸಾಕಷ್ಟು ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲಾಯಿತು. ಕುಪ್ಪಳ್ಳಿ ಹಾಗೂ ನಿಡಸೋಸಿಯ ಶ್ರೀಮಠದ ಸಾಹಿತ್ಯ ಚಿಂತನ ಕವಿಗೋಷ್ಠಿ ಕಾರ್ಯಕ್ರಮ ಯಶಸ್ವಿಯಾಗಿ ಜನಪ್ರಿಯತೆ ಗಳಿಸಿತು’ ಎಂದು ಜ್ಯೋತಿ ತಿಳಿಸಿದರು. ಉಡುಪಿಯ ಉಪನ್ಯಾಸಕಿ ಸಂಧ್ಯಾ ಶೆಣೈ, ’20 ವರ್ಷಗಳ ಗಟ್ಟಿ ಹೆಜ್ಜೆಗುರುತು ಮೂಡಿಸುತ್ತಾ ಹಿರಿಯ …

Read More »