Breaking News

ರಾಯಬಾಗ ತಾಲೂಕಿನ ಚಿಂಚಲಿ ಮಾಯಕ್ಕಾದೇವಿಗೂ ಕೊರೊನಾ ಬಿಸಿ

ಬೆಳಗಾವಿ(ಚಿಕ್ಕೋಡಿ): ಕೊರೊನಾ ವೈರಸ್ ಭೀತಿ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಮಾಯಕ್ಕಾದೇವಿಗೂ ಕೊರೊನಾ ಬಿಸಿ ತಟ್ಟಿದೆ. ಚಿಂಚಲಿಯ ಮಾಯಕ್ಕಾದೇವಿಯ ದರ್ಶನವನ್ನು ಇಂದಿನಿಂದ ಮಾರ್ಚ್ 31ರವರೆಗೂ ಸ್ಥಗಿತಗೊಳಿಸಲಾಗಿದೆ. ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇವಸ್ಥಾನದ ಆಡಳಿತ ಮಂಡಳಿ ದೇವಸ್ಥಾನವನ್ನು ಬಂದ್ ಮಾಡಿದೆ. ಮಾಯಕ್ಕಾದೇವಿ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಮಹಾರಾಷ್ಟ್ರದ ಆರಾದ್ಯ ದೇವತೆಯಾಗಿದ್ದು, ದೇವಿಯ ದರ್ಶನ ಪಡೆಯಲು ದಿನನಿತ್ಯ ಕರ್ನಾಟಕ ಹಾಗೂ ಮಹಾರಾಷ್ಟ್ರದಿಂದ …

Read More »

ಉಡುಪಿ :ದುಬೈನಿಂದ ಬಂದ ಗರ್ಭಿಣಿಗೆ ಕೊರೊನಾ ಸೋಂಕು ಇಲ್ಲ

ಉಡುಪಿ: ದುಬೈನಿಂದ ಬಂದ ಗರ್ಭಿಣಿಗೆ ಕೊರೊನಾ ಸೋಂಕಿನ ಸೋಂಕಿನ ಲಕ್ಷಣಗಳು ಇಲ್ಲ ಎಂದು ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದೆ. ಗರ್ಭಿಣಿಯ ಕುಟುಂಬಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಉಡುಪಿ ಜಿಲ್ಲೆಯ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಮಾರ್ಚ್ 16ರಂದು ಗರ್ಭಿಣಿ ದಾಖಲಾಗಿದ್ದರು. ಆಕೆ ವಿಪರೀತ ಕಫದಿಂದ ನರಳಾಡುತ್ತಿದ್ದರು. ವಾರದ ಹಿಂದೆ ದುಬೈನಿಂದ ಬಂದಿರುವುದರಿಂದ ಗರ್ಭಿಣಿ ಮೇಲೆ ಸಂಶಯ ಬಂದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮಣಿಪಾಲ ಕೆಎಂಸಿಗೆ ಆಕೆಯನ್ನು ಅಡ್ಮಿಟ್ ಮಾಡಿದ್ದರು. ಗರ್ಭಿಣಿಯ ಗಂಟಲಿನ ದ್ರವವನ್ನು ಶಿವಮೊಗ್ಗ …

Read More »

ಗೋವಾ ಕನ್ನಡಿಗರ ರಕ್ಷಣೆಗೆ ಆಗ್ರಹಿಸಿ ಪ್ರತಿ ಪಕ್ಷ ಧರಣಿ- ಸಿಎಂ ಉತ್ತರಕ್ಕೆ ಬಿಗಿಪಟ್ಟು

ಬೆಂಗಳೂರು: ಗೋವಾದಲ್ಲಿ ಇರುವ ಕನ್ನಡಿಗರ ಸಮಸ್ಯೆ ವಿಧಾನ ಪರಿಷತ್ ನಲ್ಲಿಂದು ಪ್ರತಿ ಧ್ವನಿಸಿತು. ಗೋವಾ ಕನ್ನಡಿಗರನ್ನು ರಕ್ಷಣೆ ಮಾಡುವಂತೆ ಪ್ರತಿಪಕ್ಷ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ಮುಖ್ಯಮಂತ್ರಿಗಳು ಉತ್ತರ ನೀಡುವಂತೆ ವಿಪಕ್ಷಗಳು ಒತ್ತಾಯ ಮಾಡಿದರು. ಸದನದಲ್ಲಿ ಗದ್ದಲ ಕೋಲಾಹಲಕ್ಕೆ ಸೃಷ್ಟಿಯಾಗಿದ್ದರಿಂದ ಕಲಾಪವನ್ನು ಮುಂದೂಡಿದ ಘಟನೆ ಕೂಡ ನಡೀತು. ವಿಧಾನ ಪರಿಷತ್ ಶೂನ್ಯವೇಳೆ ಕಲಾಪದಲ್ಲಿ ಗೋವಾದಲ್ಲಿ ಪೊಗೊ ಕಾಯಿದೆಯಿಂದ ಸಾವಿರಾರು ಕನ್ನಡಿಗರು ಆತಂಕದಲ್ಲಿ ಇದ್ದಾರೆ ಎಂದು ಬಸವರಾಜ …

Read More »

ಬೆಂಗಳೂರು: :ನಾನು ನಿರ್ಭಯಾ ತಾಯಿ ಪಾತ್ರ ಮಾಡ್ತೇನೆ: ಮಾಳವಿಕಾ

ಬೆಂಗಳೂರು: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಯಾರಾದರೂ ಸಿನಿಮಾ ಮಾಡಿದರೆ ಹೇಳಿ ನಾನು ನಿರ್ಭಯಾ ತಾಯಿ ಪಾತ್ರವನ್ನು ಮಾಡುತ್ತೇನೆ ಎಂದು ಹಿರಿಯ ನಟಿ ಮಾಳವಿಕಾ ಅವಿನಾಶ್ ಹೇಳಿದ್ದಾರೆ. ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನು ಬೆಚ್ಚಿ ಬೀಳಿಸಿತ್ತು. ಇಂದು ನಿರ್ಭಯಾ ದೋಷಿಗಳಿಗೆ ಮರಣದಂಡನೆ ಆಗಿದೆ. ನಿರ್ಭಯಾಳಿಗೆ ಇಂದು ನ್ಯಾಯ ಸಿಕ್ಕಿದೆ. ಇದು ದೇಶದ ಪ್ರತಿಯೊಬ್ಬ ಮಗಳ ಗೆಲವು ಎಂದು ನಿರ್ಭಯಾ ತಾಯಿ ಆಶಾದೇವಿ ತಮ್ಮ ಮೊದಲ …

Read More »

ಬೆಳಗಾವಿ:ವಸತಿ ಯೋಜನೆಗಳಲ್ಲಿ ಭಾರೀ ಅಕ್ರಮ;ಸರ್ಕಾರಿ ನೌಕರರೇ ಫಲಾನುಭವಿಗಳು!

ಬೆಳಗಾವಿ ಜಿಲ್ಲೆಯ ಆಥಣಿ ತಾಲೂಕಿನ ಐಗಳಿ ಗ್ರಾಮ ಪಂಚಾಯತ ಹದ್ದಿಯಲ್ಲಿ ಎಸ್ಸಿ/ಎಸ್ಟಿ ಫಲಾನುಭವಿಗಳ ಹೆಸರಿನಲ್ಲಿ ಮನೆಗಳನ್ನು ಮಂಜೂರು ಮಾಡಿಸಿಕೊಂಡು, ಅವರಿಗೆ ಅಲ್ಪ-ಸ್ವಲ್ಪ ಹಣ ನೀಡಿ ಸರ್ಕಾರಿ ನೌಕರರೇ ದೊಡ್ಡ ಮನೆಗಳನ್ನು ಕಟ್ಟಿಕೊಳ್ಳುತ್ತಿರುವ ಆಘಾತಕಾರಿ ಸಂಗತಿ ನಡೆದಿವೆ ಎನ್ನಲಾದ ಪ್ರಕರಣಗಳಿಗೆ ಸಂಬಂಧಪಟ್ಟಂತೆ ತನಿಖೆಗೆ ಆದೇಶ ನೀಡಲಾಗಿದೆಯಾದರೂ,ತನಿಖೆಯ ಹೆಸರಿನಲ್ಲಿ ಸುಖಾಸುಮ್ಮನೆ ಕಾಲಹರಣ ಮಾಡಲಾಗುತ್ತಿದೆ. ಈ ಮೂಲಕ ತಪ್ಪಿತಸ್ಥರ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ. ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಆಶಾ ಐಹೊಳೆ ಕೂಡ …

Read More »

ಸಾರಥಿ ಹೆಗಲ ಮೇಲೆ ಕುಳಿತ ಪುಟ್ಟ ರಾಮನ ಪರಿಚಯಿಸಿದ ತರುಣ್ ಸುಧೀರ್

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ಜೈಶ್ರೀರಾಮ್ ಹಾಡಿನಲ್ಲಿ ಕಾಣಿಸಿಕೊಂಡ ಪುಟ್ಟ ರಾಮನನ್ನು ಸಿನಿಮಾದ ನಿರ್ದೇಶಕ ತರುಣ್ ಸುಧೀರ್ ಪರಿಚಯ ಮಾಡಿಕೊಟ್ಟಿದ್ದಾರೆ. ತರುಣ್ ಸುಧೀರ್ ನಿರ್ದೇಶನ ಮತ್ತು ಡಿಬಾಸ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಮುಂದಿನ ಏಪ್ರಿಲ್‍ನಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ. ಈ ಹಿಂದೆ ಚಿತ್ರತಂಡ ಟೀಸರ್ ಮತ್ತು ಹಾಡುಗಳನ್ನು ಬಿಡುಗಡೆ ಮಾಡಿತ್ತು. ಇದರಲ್ಲಿ ದರ್ಶನ್ ಅವರ ಜೊತೆ ಪುಟ್ಟ ರಾಮನೊಬ್ಬ ಕಾಣಿಸಿಕೊಂಡಿದ್ದನು. ಈ ವಿಚಾರವಾಗಿ ದರ್ಶನ್ ಅವರ …

Read More »

ಶಿವಮೊಗ್: ಹೇಳದೆ ಕೇಳದೇ ಆಸ್ಪತ್ರೆಯಿಂದ ಓಡಿ ಹೋದ ಮಹಿಳೆ

ಶಿವಮೊಗ್ಗ: ಮಂಗನಕಾಯಿಲೆ ಸೋಂಕು ತಗುಲಿದ್ದ ಮಹಿಳೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಿಂದ ಎಸ್ಕೇಪ್ ಆಗಿರುವ ಆಘಾತಕಾರಿ ಘಟನೆ ನಡೆದಿದೆ. ಜಿಲ್ಲೆಯ ಸಾಗರ ತಾಲೂಕಿನ ಅರಳಗೋಡು ಗ್ರಾಮದ ಸುಮಿತ್ರಮ್ಮ ಮೆಗ್ಗಾನ್ ಆಸ್ಪತ್ರೆಯಿಂದ ಪರಾರಿಯಾಗಿದ್ದಾರೆ. ವೈದ್ಯರು ಪರೀಕ್ಷಿಸಿದ ನಂತರ ಮಹಿಳೆಗೆ ಕೆಎಫ್‍ಡಿ ಪಾಸಿಟಿವ್ ಇರುವ ಅಂಶ ದೃಢಪಟ್ಟಿತ್ತು. ಹೀಗಾಗಿ ಮಹಿಳೆಯ ಕುಟುಂಬಸ್ಥರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳೆದ ನಾಲ್ಕು ದಿನದ ಚಿಕಿತ್ಸೆಗೆ ದಾಖಲಿಸಿದ್ದರು. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸುಮಿತ್ರಮ್ಮ ಅವರಿಗೆ ಖಾಯಿಲೆ ಸ್ವಲ್ಪ ವಾಸಿಯಾಗಿತ್ತು. …

Read More »

ನೆಲಮಂಗಲ: ಕೊರೊನಾ ಆತಂಕದಲ್ಲಿ ನೆಲಮಂಗಲ ಸಬ್ ರಿಜಿಸ್ಟ್ರಾರ್ ಅಧಿಕಾರಿಗಳಿಂದ ಕೆಲಸ

ಬೆಂಗಳೂರು: ಪ್ರಪಂಚದಾದ್ಯಂತ ಕೊರೊನಾ ಹರಡುತ್ತಿದೆ. ಅಲ್ಲದೆ ನಮ್ಮ ದೇಶದಲ್ಲೂ ಕೂಡ ಕೊರೊನಾ ತನ್ನ ಅಟ್ಟಹಾಸವನ್ನು ಮುಂದುವರಿಸಿದೆ. ರಾಜ್ಯದಲ್ಲೂ ಕೂಡ ಮಾರ್ಚ್ 31ರವರೆಗೆ ಮೆಡಿಕಲ್ ಎಮರ್ಜೆನ್ಸಿಯನ್ನು ಸಹ ಘೋಷಣೆ ಮಾಡಿದೆ. ಮೆಡಿಕಲ್ ಎಮೆರ್ಜೆನ್ಸಿ ಸಮಯದಲ್ಲಿ ಗುಂಪು ಗುಂಪಾಗಿ ಜನ ಸೇರುವುದನ್ನು ನಿಷೇಧಿಸಿದೆ. ಬೆಂಗಳೂರು ಹೊರವಲಯ ನೆಲಮಂಗಲ ನಗರದ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಮಾತ್ರ ಅಧಿಕಾರಿಗಳು ಕೊರೊನಾ ಭಯದಲ್ಲಿ ಕೆಲಸ ಮಾಡುತ್ತಿದ್ದಾರೆ. ಇಂದು ಶುಕ್ರವಾರ ಹಿನ್ನೆಲೆಯಲ್ಲಿ ರಿಜಿಸ್ಟರ್ ಮಾಡಿಸಲು ಮುಗಿಬಿದ್ದಿದ್ದಾರೆ. ಇದರಿಂದ ರಿಜಿಸ್ಟ್ರಾರ್ …

Read More »

ಬೆಂಗ್ಳೂರು ಸಿಸಿಬಿ ಪೊಲೀಸರಿಂದ 56 ಲಕ್ಷ ಮೌಲ್ಯದ ವಸ್ತುಗಳು ವಶ ನಕಲಿ ಸ್ಯಾನಿಟೈಸರ್‌ಗಳ ಹಾವಳಿ

ಬೆಂಗಳೂರು: ಡೆಡ್ಲಿ ಕೊರೊನಾ ವೈರಸ್ ಭೀತಿಯನ್ನೇ ಬಂಡವಾಳ ಮಾಡಿಕೊಂಡ ಖದೀಮರು ಲಕ್ಷಾಂತರ ಮೌಲ್ಯದ ನಕಲಿ ಸ್ಯಾನಿಟೈಸರ್ ಹಾಗೂ ಹ್ಯಾಡ್ ರಬ್‍ಗಳನ್ನು ತಯಾರಿಸುತ್ತಿರುವ ವಿಚಾರ ಬೆಳಕಿಗೆ ಬಂದಿದೆ. ನಕಲಿ ಸ್ಯಾನಿಟೈಸರ್ ಹಾಗೂ ಹ್ಯಾಡ್ ರಬ್‍ಗಳ ತಯಾರಿಕೆ ಬಗ್ಗೆ ಖಚಿತ ಮಾಹಿತಿ ಪಡೆದ ಬೆಂಗಳೂರು ಸಿಸಿಬಿ ಪೊಲೀಸರು, ನಗರದ ಚಾಮರಾಜಪೇಟೆ ಮತ್ತು ವಿ.ವಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಗೊಡೌನ್‍ಗಳ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಬರೋಬ್ಬರಿ 56 ಲಕ್ಷ …

Read More »

ಮಧ್ಯಪ್ರದೇಶದಲ್ಲಿ 104 ಮ್ಯಾಜಿಕ್ ನಂಬರ್: ರಾಜ್ಯಪಾಲರಿಗೆ ರಾಜೀನಾಮೆ ನೀಡಲು ಕಮಲ್‍ನಾಥ್ ನಿರ್ಧಾರ

ಭೋಪಾಲ್: ಮಧ್ಯಪ್ರದೇಶದಲ್ಲಿ ಕಳೆದ 17 ದಿನಗಳಿಂದ ನಡೆಯುತ್ತಿರುವ ರಾಜಕೀಯ ಹೈಡ್ರಾಮಾಗೆ ಮತ್ತಷ್ಟು ತಿರುವು ಸಿಕ್ಕಂತಾಗಿದೆ. ಮುಖ್ಯಮಂತ್ರಿ ಕಮಲ್ ನಾಥ್ ರಾಜ್ಯಪಾಲರಿಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಭೋಪಾಲ್‍ನಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಧ್ಯಪ್ರದೇಶದ ವಿಧಾನಸಭೆಯ ಫಲಿತಾಂಶವು 11 ಡಿಸೆಂಬರ್ 2018 ರಂದು ಬಂದಿತ್ತು. ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಯಾವಾಗಲೂ ಅಭಿವೃದ್ಧಿಯಲ್ಲಿ ನಂಬಿಕೆ ಇಟ್ಟಿದ್ದೇನೆ. ರಾಜ್ಯದಲ್ಲಿ ಬಿಜೆಪಿಗೆ 15 ವರ್ಷಗಳ ಕಾಲ ಅಧಿಕಾರ ಸಿಕ್ಕಿತ್ತು. ಈಗ ನಾನು …

Read More »