Breaking News

ಪಾಕ್ ಪರ ಘೋಷಣೆ ಪ್ರಕರಣ- ಆರೋಪಿಗಳಿಗೆ ಕಾಶ್ಮೀರಕ್ಕೆ ತೆರಳಲು ನ್ಯಾಯಾಲಯ ನಿರಾಕರಣೆ

ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಕಾಶ್ಮೀರಿ ಮೂಲದ ಮೂವರು ವಿದ್ಯಾರ್ಥಿಗಳು ತಮ್ಮ ಮೂಲ ಸ್ಥಳಕ್ಕೆ ಹೋಗಲು ಅರ್ಜಿ ಸಲ್ಲಿಸಿದ್ದರು. ವಿದ್ಯಾರ್ಥಿಗಳ ಅರ್ಜಿಯನ್ನು ಹುಬ್ಬಳ್ಳಿಯ ಎರಡನೇ ಜೆಎಂಎಫ್‍ಸಿ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ.ಫೆಬ್ರವರಿ 15 ರಂದು ಕೆಎಲ್‍ಇ ಕಾಲೇಜಿನಲ್ಲಿ ಕಾಶ್ಮೀರಿ ಮೂಲದ ಮೂವರು ವಿದ್ಯಾರ್ಥಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ಈ ವಿದ್ಯಾರ್ಥಿಗಳ ಜಾಮೀನಿಗೆ ಸಂಬಂಧಿಸಿದಂತೆ ಬೆಂಗಳೂರಿನ ವಕೀಲರ ತಂಡ ವಿದ್ಯಾರ್ಥಿಗಳ ಪರ ವಕಾಲತ್ತು ವಹಿಸಿತ್ತು. ಈ ವೇಳೆ …

Read More »

ಖಾದಿ ಮಂಡಳಿಗೆ ನೇಮಕ ನಿರೀಕ್ಷಿಸಿರಲಿಲ್ಲ, ಖುಷಿಯಾಗಿದೆ: ದುರ್ಯೋಧನ ಐಹೊಳೆ…?

ಬೆಳಗಾವಿ: ‘ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷನಾಗಿ ನೇಮಕಗೊಂಡಿರುವುದಕ್ಕೆ ಖುಷಿಯಾಗಿದೆ. ನಾನು ಈ ಹುದ್ದೆ ನಿರೀಕ್ಷಿಸಿರಲಿಲ್ಲ’ ಎಂದು ರಾಯಬಾಗದ ಶಾಸಕ ದುರ್ಯೋಧನ ಐಹೊಳೆ ಪ್ರತಿಕ್ರಿಯಿಸಿದರು. ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶ್ರಾವಣ ಸೋಮವಾರದ ದಿನ ಒಳ್ಳೆಯ ಕೊಡುಗೆ ನೀಡಿದ್ದಾರೆ. ಮಂಡಳಿಯಲ್ಲಿ ಕೆಲಸ ಮಾಡಲು ಬಹಳಷ್ಟು ಅವಕಾಶವಿದೆ. ಅದನ್ನು ಬಳಸಿಕೊಳ್ಳುತ್ತೇನೆ’ ಎಂದರು. ‘ಜಿಲ್ಲಾ ನಾಯಕರ ಸಹಕಾರ ಮತ್ತು ರಾಜಕಾರಣದಲ್ಲಿ ನನ್ನ ಗಾಡ್‌ಫಾದರ್‌ ಆಗಿರುವ ಉಪ ಮುಖ್ಯಮಂತ್ರಿ ಗೋವಿಂದ …

Read More »

ಪೊಲೀಸರಿಂದ ತಪ್ಪಿಸಿಕೊಳ್ಳಲು ಪತ್ನಿಯ ಪೆಟಿಕೋಟನ್ನೇ ಮಾಸ್ಕ್ ಮಾಡ್ಕೊಂಡ!

ಭೋಪಾಲ್: ಚೀನಿ ವೈರಸ್ ಕೋವಿಡ್ 19 ನಮ್ಮ ದೇಶಕ್ಕೂ ಒಕ್ಕರಿಸಿದ ಬಳಿಕ ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಕೆ ಕಡ್ಡಾಯ ಮಾಡಲಾಗಿದೆ. ಮಾಸ್ಕ್ ಧರಿಸದೆ ಮನೆಯಿಂದ ಹೊರಗೆ ಕಾಲಿಟ್ಟರೆ ದಂಡ ಕೂಡ ಬೀಳುತ್ತದೆ. ಅಂತೆಯೇ ಮಾಸ್ಕ್ ಧರಿಸದೇ ಬಂದ ವ್ಯಕ್ತಿಯೊಬ್ಬ ಪೊಲೀಸರಿಂದ ತಪ್ಪಿಸಿಕೊಳ್ಳಲು ತನ್ನ ಪತ್ನಿಯ ಪೆಟಿಕೋಟನ್ನೇ ಮಾಸ್ಕ್ ಮಾಡಿಕೊಂಡ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಕರ್ನಾಟಕದಂತೆ ಮಧ್ಯಪ್ರದೇಶದಲ್ಲೂ ಭಾನುವಾರ ಕಟ್ಟುನಿಟ್ಟಿನ ಲಾಕ್‍ಡೌನ್ ಹೇರಲಾಗಿತ್ತು. ಕೊರೊನಾ ಚೈನ್ ಬ್ರೇಕ್ ಮಾಡಲು ಲಾಕ್‍ಡೌನ್ ಒಂದೇ …

Read More »

ಲಾಕ್‍ಡೌನ್ ಸಂಕಷ್ಟದಲ್ಲೂ ಸರ್ಕಾರಿ ನೌಕರರ ಹಿತ ಕಾದಿದೆ ಬಿಎಸ್‍ವೈ ಸರ್ಕಾರ: ಸವದಿ

ನವದೆಹಲಿ: ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲೂ ಸರ್ಕಾರಿ ಸೇರಿದಂತೆ ಸಾರಿಗೆ ನೌಕರರ ಹಿತ ಕಾಯುವ ಕೆಲಸವನ್ನು ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಮಾಡಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು. ಸರ್ಕಾರಕ್ಕೆ ಒಂದು ವರ್ಷ ಪೂರ್ಣವಾದ ಹಿನ್ನೆಲೆಯಲ್ಲಿ ಇಂದು ದೆಹಲಿಯಲ್ಲಿ ಸುದ್ದಿಗೋಷ್ಢಿ ನಡೆಸಿ ಮಾತನಾಡಿದ ಅವರು, ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಸಾಲು ಸಾಲು ಸವಾಲುಗಳನ್ನು ಎದುರಿಸುತ್ತಿದ್ದೇವೆ. ಆರಂಭದಲ್ಲಿ ಅತಿವೃಷ್ಠಿ-ಅನಾವೃಷ್ಠಿ ಕಾಡಿದ್ದು, ರಾಜ್ಯದ 20 ಜಿಲ್ಲೆಗಳು ಸಂಕಷ್ಟದಲ್ಲಿದ್ದವು. ಅದೆಲ್ಲ ಸಮಸ್ಯೆ ನಿಭಾಯಿಸುವ …

Read More »

ಕೊವಿಡ್ ಕೇರ್ ಸೆಂಟರ್ ಘಟಪ್ರಭಾದ ಕೆಎಚ್ಐ, ಜೆಜಿಕೊ ಆಸ್ಪತ್ರೆಯಲ್ಲಿಪ್ರಾರಂಭಿಸಲು ಅಶೋಕ ಪೂಜಾರಿ ಮನವಿ

ಗೋಕಾಕ: ಉತ್ತರ ಕರ್ನಾಟಕದಲ್ಲಿ ವೈಧ್ಯಕೀಯ ಸೇವೆಯಲ್ಲಿ ತನ್ನದೇ ಆದ ಹಿರಿಮೆ-ಗರಿಮೆ ಹೊಂದಿರುವ ಘಟಪ್ರಭಾದಲ್ಲಿರುವ ಸೇವಾದಳದ ಸಂಸ್ಥಾಪಕ ನಾ.ಸು. ಹರ್ಡಿಕರ ಅವರ ನಿಸ್ವಾರ್ಥ ಸಾರ್ವಜನಿಕ ಸೇವಾ ಮನೋಭಾವನೆಯ ತತ್ವದೊಂದಿಗೆ ಸ್ಥಾಪನೆಗೊಂಡರುವ ಕರ್ನಾಟಕ ಆರೋಗ್ಯಧಾಮ (ಕೆ.ಎಚ್.ಆಯ್.) ಮತ್ತು ಮೂರುಸಾವಿರ ಮಠದ ಜಗದ್ಗುರುಗಳ ಧಾರ್ಮಿಕ ಮತ್ತು ಸಾಮಾಜಿಕ ಸೇವಾ ಮನೋಭಾವನೆಯಿಂದ ಪ್ರಾರಂಭಗೊಂಡಿರುವ ಜಗ್ದಗುರು ಗಂಗಾಧರರಾಜಯೋಗಿಂದ್ರ ಸಹಕಾರಿ ಆಸ್ಪತ್ರೆ (ಜೆ.ಜಿ.ಕೊ-ಆಪ್ ಹಾಸ್ಪಿಟಲ್) ಗಳು ಕೋವಿಡ್-19 ರೋಗಕ್ಕೆ ಬಳಲಿ ಬೆಂಡಾಗುತ್ತಿರುವ ಜನರಿಗೆ ತಮ್ಮ ಆಸ್ಪತ್ರೆಗಳಲ್ಲಿ ಕೂಡಲೇ ಪ್ರತ್ಯೇಕ …

Read More »

ರಾಣಿ ಚನ್ನಮ್ಮ ವಿಶ್ವವಿದ್ಯಾಯಲಕ್ಕೂ ಕೊರೊನಾ ಸೋಂಕುRCU ವಿವಿ ಸಿಂಡಿಕೇಟ್ ಬ್ಯಾಂಕ್ ಸೀಲ್ ಡೌನ್

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಯಲಕ್ಕೂ ಕೊರೊನಾ ಸೋಂಕು ವಕ್ಕರಿಸಿದ್ದು, ವಿಶ್ವವಿದ್ಯಾಯಲ ಆವರಣದಲ್ಲಿರುವ ಸಿಂಡಿಕೇಟ್ ಬ್ಯಾಂಕ್ ಸಿಬ್ಬಂದಿಯೊಬ್ಬರಿಗೆ ಸೋಂಕು ದೃಢವಾಗಿದೆ. ಸಿಬ್ಬಂದಿಗೆ ಸೋಂಕು ತಗುಲಿದ ಹಿನ್ನೆಲೆಯಲ್ಲಿ  ಸಿಂಡಿಕೇಟ್ ಬ್ಯಾಂಕ್ ಸೀಲ್ ಡೌನ್ ಮಾಡಲಾಗಿದೆ.  ನೌಕರನಿಗೆ ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ  ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು.   ವರದಿ ಪಾಸಿಟಿವ್ ಬಂದಿದೆ.

Read More »

ಮಧ್ಯರಾತ್ರಿ ‘ಬಿಗ್‍ಬಾಸ್’ ಖ್ಯಾತಿಯ ಕವಿತಾ ಗೌಡ ಮನೆಗೆ ಹೋಗಿ ಚಂದನ್ ಸರ್ಪ್ರೈಸ್

ಬೆಂಗಳೂರು: ರಿಯಾಲಿಟಿ ಶೋ ‘ಬಿಗ್‍ಬಾಸ್’ ಖ್ಯಾತಿಯ ಕಿರುತೆರೆ ನಟಿ ಕವಿತಾ ಗೌಡ ಮನೆಗೆ ಮಧ್ಯರಾತ್ರಿ ನಟ ಚಂದನ್ ಹೋಗಿ ಸರ್ಪ್ರೈಸ್ ಕೊಟ್ಟಿದ್ದಾರೆ. ಭಾನುವಾರ ಕವಿತಾ ಗೌಡ ಹುಟ್ಟುಹಬ್ಬ ಇತ್ತು. ಕೊರೊನಾ ಇರುವುದರಿಂದ ಮನೆಯಲ್ಲಿಯೇ ಸರಳವಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇದೇ ವೇಳೆ ನಟ ಚಂದನ್ 12 ಗಂಟೆಗೆ ಸರಿಯಾಗಿ ಕವಿತಾ ಗೌಡ ಮನೆಗೆ ಹೋಗಿ ಅವರಿಗೆ ಸರ್ಪ್ರೈಸ್ ನೀಡಿದ್ದಾರೆ. ಅಷ್ಟೇ ಅಲ್ಲದೇ ಕವಿತಾ ಗೌಡ ಹುಟ್ಟುಹಬ್ಬಕ್ಕೆ ಉಡುಗೊರೆಯನ್ನು ಕೊಟ್ಟಿದ್ದಾರೆ. “ಸ್ನೇಹಿತರ ಹುಟ್ಟುಹಬ್ಬದ …

Read More »

ಫ್ರಂಟ್‍ಲೈನ್ ನಲ್ಲಿ ಕೆಲಸ ಮಾಡುತ್ತಿದ್ದ 27 ವರ್ಷದ ಯುವ ವೈದ್ಯನನ್ನು ಮಹಾಮಾರಿ ಕೊರೊನಾ ಬಲಿ ಪಡೆದಿದೆ.

ನವದೆಹಲಿ: ಫ್ರಂಟ್‍ಲೈನ್ ನಲ್ಲಿ ಕೆಲಸ ಮಾಡುತ್ತಿದ್ದ 27 ವರ್ಷದ ಯುವ ವೈದ್ಯನನ್ನು ಮಹಾಮಾರಿ ಕೊರೊನಾ ಬಲಿ ಪಡೆದಿದೆ. ಶನಿವಾರ ರಾತ್ರಿ ವೈದ್ಯ ಜೋಗಿಂದರ್ ಚೌಧರಿ ನಿಧನರಾಗಿದ್ದು, ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಇವರನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಆಸ್ಪತ್ರೆಯಲ್ಲಿ ನೇಮಿಸಲಾಗಿತ್ತು. ಜೂನ್ 27ರಂದು ಚೌಧರಿ ಅವರಿಗೆ ಸೋಂಕು ತಗುಲಿದ್ದು ದೃಢವಾಗಿತ್ತು. ಕಳೆದ ಒಂದು ತಿಂಗಳಿನಿಂದ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಮೊದಲಿಗೆ ದೆಹಲಿಯ ಲೋಕ್ ನಾಯಕ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಸ್ಥಿತಿ ಗಂಭೀರವಾಗುತ್ತಿದ್ದಂತೆ …

Read More »

ಮನೆಯಲ್ಲಿದ್ದುಕೊಂಡೇ ಒಟಿಟಿಯಲ್ಲಿ ಕನ್ನಡ ಸಿನಿಮಾಗಳ ಮೇಲೆ ಅಪಾರ ಪ್ರೀತಿ ತೋರುತ್ತಿದ್ದಾರೆ.

ಕೊರೊನಾ ಎಫೆಕ್ಟ್ ನಿಂದ ಸಿನಿಮಾ ರಿಲೀಸ್ ಆಗ್ತಿಲ್ಲ. ಚಿತ್ರಮಂದಿರಕ್ಕೆ ಬಂದು ಸಿನಿಮಾ ಕಣ್ತುಂಬಿಕೊಳ್ಳೋ ಭಾಗ್ಯ ಸಿನಿರಸಿಕರ ಪಾಲಿಗೆ ಸದ್ಯಕ್ಕಿಲ್ಲ. ಹಾಗಂತ ನಮ್ಮ ಸಿನಿ ಪ್ರೇಮಿಗಳು ಸಿನಿಮಾ ನೋಡೋದು ಬಿಟ್ಟಿಲ್ಲ. ಮನೆಯಲ್ಲಿದ್ದುಕೊಂಡೇ ಒಟಿಟಿಯಲ್ಲಿ ಕನ್ನಡ ಸಿನಿಮಾಗಳ ಮೇಲೆ ಅಪಾರ ಪ್ರೀತಿ ತೋರುತ್ತಿದ್ದಾರೆ. ನಿಜ ಹೇಳ್ಬೇಕು ಅಂದ್ರೆ ಥಿಯೇಟರ್ ಅಂಗಳದಲ್ಲೂ ಸಿಗದ ಅದ್ಭುತ ರೆಸ್ಪಾನ್ಸ್ ಒಟಿಟಿ ಪ್ಲಾಟ್ ಫಾರ್ಮ್ ನಲ್ಲಿ ಕನ್ನಡ ಸಿನಿಮಾಗಳಿಗೆ ಸಿಕ್ತಿದೆ. ಇದಕ್ಕೆ ಬೆಸ್ಟ್ ಎಕ್ಸಾಂಪಲ್ ಅಂದ್ರೆ ‘ನಮ್ ಗಣಿ …

Read More »

ಬೆಳಗಾವಿಯಲ್ಲಿ ಆ್ಯಂಬುಲೆನ್ಸ್ ಗೆ ಬೆಂಕಿಯಿಟ್ಟಿದ್ದ 9 ಆರೋಪಿಗಳಿಗೆ ಕೊರೊನಾ ಪಾಸಿಟಿವ್..!

ಬೆಂಗಳೂರು,ಜು.27-ಬೆಳಗಾವಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಆ್ಯಂಬುಲೆನ್ಸ್ ಸುಟ್ಟು ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಯತ್ನ ನಡೆಸಿದ್ದ ಪ್ರಕರಣದಲ್ಲಿ ಬಂಧಿತರಾಗಿದ್ದ 22 ಆರೋಪಿಗಳಲ್ಲಿ 9 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಜು.22ರಂದು ಇಲ್ಲಿನ ಬಿಮ್ಸ್ ಆಸ್ಪತ್ರೆ ಮುಂಭಾಗ ಆ್ಯಂಬುಲೆನ್ಸ್‍ಗೆ ದುಷ್ಕರ್ಮಿಗಳು ಬೆಂಕಿ ಇಟ್ಟು ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಯತ್ನ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ 22 ಮಂದಿಯನ್ನು ಬಂಧಿಸಲಾಗಿತ್ತು. ಬಂಧಿತರಲ್ಲಿ 9 ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ಎಲ್ಲರನ್ನು …

Read More »