ಬೆಂಗಳೂರು: ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಹುಟ್ಟುಹಬ್ಬಕ್ಕೆ ಇನ್ನೂ 7 ದಿನ ಬಾಕಿ ಇದ್ದು, ಅವರ ಅಭಿಮಾನಿಗಳು ಈಗಿನಿಂದಲೇ ತಯಾರಿ ನಡೆಸಿದ್ದಾರೆ. ಅಭಿಮಾನಿಗಳು ಸಿದ್ಧತೆ ಮಾಡಿಕೊಳ್ಳುತ್ತಿರುವುದು ಒಂದು ಕಡೆಯಾದರೆ ಇನ್ನೊಂದೆಡೆ ಕಿಚ್ಚ ಸುದೀಪ್ ಈಗಲೇ ವಿಶೇಷ ಗಿಫ್ಟ್ ನೀಡುವ ಮೂಲಕ ಶುಭ ಕೋರಿದ್ದಾರೆ. ನಟ ಶಿವರಾಜ್ ಕುಮಾರ್ ಕೊರೊನಾ ಕಾರಣದಿಂದಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಹುಟ್ಟುಹಬ್ಬದ ದಿನ ಮನೆಯಲ್ಲಿ ಇರುವುದಿಲ್ಲ. ನನ್ನ ಹುಟ್ಟುಹಬ್ಬಕ್ಕಿಂತ ನಿಮ್ಮ ಆರೋಗ್ಯ ಮುಖ್ಯ. …
Read More »ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರೋಬ್ಬರಿ 147 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಹೇಗೆ?
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ ಒಂದು ವಾರದಿಂದ ಸೋಂಕಿನ ಸಂಖ್ಯೆಯ ಪ್ರಮಾಣ ಅಧಿಕವಾಗಿದೆ. ಪ್ರತಿನಿತ್ಯ ರಾಜ್ಯದ ಹೆಲ್ತ್ ಬುಲೆಟಿನ್ ಬೆಂಗಳೂರು ಹೊರತುಪಡಿಸಿದರೆ ಮಂಗಳೂರಿನಲ್ಲೇ ಹೆಚ್ಚಿನ ಪ್ರಕರಣಗಳನ್ನು ವರದಿ ಆಗುತ್ತಿವೆ. ಇನ್ನು ಇಂದು ಒಂದೇ ದಿನ 147 ಜನರಿಗೆ ಸೋಂಕು ಹಬ್ಬಿದ್ದು ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚು ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರೋಬ್ಬರಿ 147 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು …
Read More »ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿಗೆ ಈವರೆಗೆ 6 ಜನ ಬಲಿ
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕಿಲ್ಲರ್ ಕೊರೋನಾ ಕಾಟ ಬೆಂಬಿಡದೇ ಕಾಡುತ್ತಿದೆ.ಇಂದು ಮತ್ತೆ 11 ಜನ ಸೊಂಕಿತರು ಬೆಳಗಾವಿ ಜಿಲ್ಲೆಯಲ್ಲಿ ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 393 ಕ್ಕೇರಿದಂತಾಗಿದೆ ಬೆಳಗಾವಿ ಜಿಲ್ಲೆಯಲ್ಲಿ ಇಂದು ಪತ್ತೆಯಾಗಿರುವ 11ಜನ ಸೊಂಕಿತರ ಪೈಕಿ ನಾಲ್ಕು ಜನ ಬೆಳಗಾವಿ ನಗರದವರಾಗಿದ್ದಾರೆ. ಒಬ್ಬರು ವೀರಭದ್ರ ನಗರ ಬೆಳಗಾವಿ ವಯಸ್ಸು (48) ಸಾವು ಇನ್ನೊಬ್ಬರು ಸುಭಾಷ್ ನಗರ ,ಅನಿಗೋಳ,ಹನುಮಾನ ನಗರದಲ್ಲಿ ತಲಾ ಒಂದು ಅಥಣಿ ತಾಲ್ಲೂಕು 5 ರಾಯಬಾಗ 1 …
Read More »ಗೋಕಾಕ ರಸಗೊಬ್ಬರ ಮಳಿಗೆಯೊಂದರ ಮೇಲೆ ಕೃಷಿ ಇಲಾಖೆಯ ತಂಡ ದಾಳಿ,……………
ಗೋಕಾಕ: ರೈತರ ದೂರಿನ ಹಿನ್ನೆಲೆಯಲ್ಲಿ ತಾಲೂಕಿನ ಮಮದಾಪುರ ಗ್ರಾಮದ ರಸಗೊಬ್ಬರ ಮಳಿಗೆಯೊಂದರ ಮೇಲೆ ಕೃಷಿ ಇಲಾಖೆಯ ಚಿಕ್ಕೊಡಿ ವಿಭಾಗದ ಉಪನಿರ್ದೇಶಕರ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿತು. ಜಿಲ್ಲಾಧಿಕಾರಿಗಳಿಗೆ ರೈತರು ನೀಡಿದ್ದ ದೂರನನ್ವಯ ದಾಳಿ ನಡೆಸಿದ ಅಧಿಕಾರಿಗಳು, ಅಂಗಡಿಯ ದಾಸ್ತಾನು ಮತ್ತು ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಯೂರಿಯಾ ಹಾಗೂ ರಸಗೊಬ್ಬರಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು, ಪರವಾನಿಗೆ ಇಲ್ಲದ ರಸಗೊಬ್ಬರಗಳನ್ನು ಮಾರಾಟ ಮಾಡುವುದು. ರಸಗೊಬ್ಬರಗಳನ್ನು ಪರವಾನಿಗೆಯಲ್ಲಿ ಘೋಷಿಸದೇ ಇರುವ ಸ್ಥಳಗಳಲ್ಲಿಸಂಗ್ರಹಿಸಿಟ್ಟು …
Read More »ಕೊರೊನಾಗೆ ಬೆಂಗ್ಳೂರು ತತ್ತರ- ಒಂದೇ ದಿನ 1,235 ಮಂದಿಗೆ ಸೋಂಕು
ಬೆಂಗಳೂರು: ರಾಜ್ಯದಲ್ಲಿಂದು 1,925 ಮಂದಿಗೆ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 23,474 ಕ್ಕೇರಿಕೆಯಾಗಿದೆ. ಇಂದು ಸಹ ಮಹಾಮಾರಿಗೆ 38 ಮಂದಿಗೆ ಬಲಿಯಾಗಿದ್ದಾರೆ. ರಾಜಧಾನಿ ಮತ್ತೆ ಕೊರೊನಾ ಅಟ್ಟಹಾಸಕ್ಕೆ ತತ್ತರಿಸಿದ್ದು, ಇಂದು 1,235 ಮಂದಿಗೆ ಕೊರೊನಾ ಸೋಂಕು ತಗುಲಿದೆ. 23,474 ಪ್ರಕರಣಗಳಲ್ಲಿ 13,250 ಸಕ್ರಿಯ ಕೇಸ್ ಗಳಿವೆ. ಇಂದು 603 ಮಂದಿ ಡಿಸ್ಚಾರ್ಜ್ ಆಗಿದ್ದು, 38 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ 243 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಂದು ಬಿಡುಗಡೆಯಾದ ಬುಲೆಟಿನ್ …
Read More »ಹಾವೇರಿಯಲ್ಲಿ ಎಎಸ್‍ಐ, ವೈದ್ಯ, ಶಿಕ್ಷಕ, ಆಶಾ ಕಾರ್ಯಕರ್ತೆಯರು ಸೇರಿ 15 ಜನರಿಗೆ ಕೊರೊನಾ
ಹಾವೇರಿ: ಜಿಲ್ಲೆಯಲ್ಲಿ ಇಂದು 15 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯ ಹಾನಗಲ್‍ನಲ್ಲಿ ಮೂವರು ಆಶಾ ಕಾರ್ಯಕರ್ತೆಯರು ಸೇರಿ ಐವರಿಗೆ ಕೊರೊನಾ ಸೋಂಕು ಧೃಡಪಟ್ಟಿದೆ. ಹಾವೇರಿ ತಾಲೂಕಿನಲ್ಲಿ ಓರ್ವ ಬಾಣಂತಿ ಮಹಿಳೆ, ಓರ್ವ ಎಎಸ್‍ಐ, ಓರ್ವ ಶಿಕ್ಷಕ, ಓರ್ವ ವೈದ್ಯ ಸೇರಿದಂತೆ ಐವರಿಗೆ ಕೊರೊನಾ ಸೋಂಕು ಧೃಡಪಟ್ಟಿದೆ. ಶಿಗ್ಗಾಂವಿ ಪಟ್ಟಣದ ಕಂಟೈನ್ಮೆಂಟ್ ಝೋನ್ ನ ರೋಗಿ ನಂ.9412 ಸಂಪರ್ಕದಿಂದ ಮೂವರಿಗೆ ಕೊರೊನಾ ಸೋಂಕು ಧೃಡಪಟ್ಟಿದೆ. ಅಲ್ಲದೆ ರಟ್ಟೀಹಳ್ಳಿ ತಾಲೂಕಿನಲ್ಲಿ ಇಬ್ಬರಿಗೆ …
Read More »ಪ್ರಸಿದ್ಧ ಶಿರಸಿಯ ಮಾರಿಕಾಂಬಾ ದೇವಸ್ಥಾನ ಸೀಲ್‍ಡೌನ್……….
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 21 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಇತ್ತ ಶಿರಸಿಯ ಮಾರಿಕಾಂಬಾ ದೇವಸ್ಥಾನವನ್ನು ಒಂದು ವಾರ ಸೀಲ್‍ಡೌನ್ ಮಾಡಲಾಗಿದೆ. ಶಿರಸಿಯ ಮಾರಿಕಾಂಬಾ ದೇವಸ್ಥಾನದ ಪಕ್ಕದಲ್ಲೇ ವಾಸವಿದ್ದ ವ್ಯಕ್ತಿಗೂ ಕೊರೊನಾ ಪಾಸಿಟಿವ್ ವರದಿಯಾಗಿದ್ದು, ಈತ ಪ್ರತಿ ದಿನ ಶಿರಸಿಯ ಮಾರಿಕಾಂಬಾ ದೇವಸ್ಥಾನಕ್ಕೆ ದೇವರ ದರ್ಶನಕ್ಕೆ ಹೋಗುತಿದ್ದ ಎನ್ನಲಾಗಿದೆ. ಹೀಗಾಗಿ ಈತನಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಈಗ ದೇವಸ್ಥಾನವನ್ನು ಸೀಲ್‍ಡೌನ್ ಮಾಡುವ ನಿರ್ಧಾರಕ್ಕೆ ಮಾಡಲಾಗಿದೆ. ಶಿರಸಿ …
Read More »ಭಾರತಕ್ಕೆ ಕೊರೊನಾ ಸೋಂಕಿತರನ್ನ ಕಳಸ್ತಿದೆಯಾ ಪಾಕಿಸ್ತಾನ?
ಶ್ರೀನಗರ: ನೆರೆಯ ವೈರಿ ರಾಷ್ಟ್ರ ಪಾಕಿಸ್ತಾನ ಕೊರೊನಾ ಸೋಂಕಿತರನ್ನ ಭಾರತಕ್ಕೆ ರಹಸ್ಯವಾಗಿ ಕಳಿಸ್ತಿದೆಯಾ ಎಂಬ ಅನುಮಾನ ಹುಟ್ಟಿಕೊಂಡಿದೆ. ಶನಿವಾರ ಸೈನಿಕರ ಗುಂಡಿಗೆ ಬಲಿಯಾದ ಇಬ್ಬರು ಉಗ್ರರಿಗೆ ಕೊರೊನಾ ಸೋಂಕು ತಗುಲಿರೋದು ಖಚಿತವಾಗಿದೆ. ಇಬ್ಬರು ಉಗ್ರರು ಸಾವನ್ನಪ್ಪಿದ ಬಳಿಕ ಮೃತದೇಹಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇಂದು ಬಂದ ವರದಿಯಲ್ಲಿ ಇಬ್ಬರು ಕೊರೊನಾ ಸೋಂಕಿತರು ಎಂಬ ವಿಚಾರ ಬೆಳಕಿಗೆ ಬಂದಿದೆ. ಕೊರೊನಾ ಸೋಂಕಿತರನ್ನು ಭಾರತದೊಳಗೆ ಕಳಿಸಲು ಪಾಕ್ ಪ್ರಯತ್ನಿಸುತ್ತಿದೆ ಅನ್ನೋ ಅನುಮಾನಗಳು ದಟ್ಟವಾಗುತ್ತಿವೆ. …
Read More »ಸಿ.ಟಿ.ರವಿ ಮತ್ತು ಮೂಡಿಗೆರೆ ಶಾಸಕ ಕುಮಾರಸ್ವಾಮಿ ಲಾಕ್‍ಡೌನ್ ನಮಗಲ್ಲ ಎಂಬಂತೆ ಸ್ಥಳೀಯ ಜನ ಪ್ರತಿನಿಧಿಗಳ ಜೊತೆ ಪ್ರವಾಸಿ ತಾಣಗಳಿಗೆ ಭೇಟಿ
ಚಿಕ್ಕಮಗಳೂರು: ಕೊರೊನಾ ಆತಂಕದಿಂದ ಇಡೀ ರಾಜ್ಯವೇ ಲಾಕ್‍ಡೌನ್ ಆಗಿದೆ. ಆದರೆ ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಮತ್ತು ಮೂಡಿಗೆರೆ ಶಾಸಕ ಕುಮಾರಸ್ವಾಮಿ ಲಾಕ್‍ಡೌನ್ ನಮಗಲ್ಲ ಎಂಬಂತೆ ಸ್ಥಳೀಯ ಜನ ಪ್ರತಿನಿಧಿಗಳ ಜೊತೆ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದಾರೆ. ಸಚಿವ ಸಿ.ಟಿ.ರವಿ, ಮೂಡಿಗೆರೆ ಶಾಸಕ ಕುಮಾರಸ್ವಾಮಿ ಹಾಗೂ ಸ್ಥಳೀಯ ಜನ ಪ್ರತಿನಿಧಿಗಳು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರವಾಸಿ ಸ್ಥಳಗಳಾದ ದೇವರಮನೆಗುಡ್ಡ, ಹೇಮಾವತಿ ನದಿ ಮೂಲ, ಬಲ್ಲಾಳರಾಯನ ದುರ್ಗಕ್ಕೆ ಭೇಟಿ …
Read More »ಪೊಲೀಸರನ್ನು ಬೆಂಬಿಡದೆ ಕಾಡುತ್ತಿದೆ ಕೊರೊನಾ………
ಬೆಂಗಳೂರು: ಕೊರೊನಾ ಮಹಾಮಾರಿ ಪೊಲೀಸರನ್ನು ಬೆಂಬಿಡದೆ ಕಾಡುತ್ತಿದ್ದು, ಇಂದು ಒಟ್ಟು 8 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಹೊಡದಾಗಿ ಎರಡು ಪೊಲೀಸ್ ಠಾಣೆಗಳು ಸೀಲ್‍ಡೌನ್ ಆಗಿವೆ. ಸಿಲಿಕಾನ್ ಸಿಟಿಯ ಮಲ್ಲೇಶ್ವರ ಹಾಗೂ ರಾಜಾಜಿ ನಗರ ಸಂಚಾರ ಪೊಲೀಸ್ ಠಾಣೆಗಳು ಸೀಲ್ ಪಟ್ಟಿಗೆ ಸೇರ್ಪಡೆಯಾಗಿದ್ದು, ನಗರದಲ್ಲಿ ಇಂದು ಒಟ್ಟು 8 ಜನರಿಗೆ ಸೋಂಕು ತಗುಲಿದೆ. ಮಲ್ಲೇಶ್ವರಂ ಠಾಣೆಯ ಇಬ್ಬರು ಸಿಬ್ಬಂದಿಗೆ ಕರೊನಾ ಸೋಂಕು ದೃಢಪಟ್ಟಿದ್ದು, 36 ವರ್ಷದ ಓರ್ವ ಕಾನ್ಸ್‍ಸ್ಟೇಬಲ್ ಮತ್ತು …
Read More »