ಬೆಂಗಳೂರು: ಕೆಪಿಎಸ್‌ಸಿ ಹಗರಣದಲ್ಲಿ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಬಂಧನದ ಬೆನ್ನಲ್ಲೇ ಇದೀಗ ಸಿಐಡಿ ತಂಡ ಮತ್ತೊಂದು ಬೇಟೆಯಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯವರ್ತಿಯೊಬ್ಬನನ್ನ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದೆ. ಪ್ರಕರಣದಲ್ಲಿ ಗ್ಯಾನೇಂದ್ರ ಕುಮಾರ್ ಅವರಿಗೆ ಸಹಾಯ ಮಾಡಿದ್ದ ಹಿನ್ನೆಲೆ ಮಧ್ಯವರ್ತಿಯನ್ನ ವಶಕ್ಕೆ ಪಡೆಯಲಾಗಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ. ಇನ್ನೂ ಕಳೆದ ರಾತ್ರಿಯಷ್ಟೇ ಕೆಪಿಎಸ್‌ಸಿ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರನ್ನು ಬಂಧಿಸಲಾಗಿತ್ತು. ವಿಚಾರಣೆಗೆ …
Read More »ಚಿಕ್ಕಮಗಳೂರಲ್ಲಿ ಆಹಾರ ಇಲಾಖೆ ಅಧಿಕಾರಿಗಳ ದಾಳಿ – 30 ಕೆಜಿ ನಕಲಿ ನಾಟಿ ತುಪ್ಪ ಪತ್ತೆ
ಚಿಕ್ಕಮಗಳೂರು: ನಗರದ ಮಾರ್ಕೆಟ್ ರಸ್ತೆಯಲ್ಲಿನ ಮನೆಯೊಂದರ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ 30 ಕೆ.ಜಿ.ಗೂ ಹೆಚ್ಚಿನ ನಕಲಿ ನಾಟಿ ತುಪ್ಪ ವಶ ಪಡಿಸಿಕೊಂಡಿದ್ದಾರೆ. ಚಿಕ್ಕಮಗಳೂರು ನಗರ ಠಾಣೆಯ ಪೊಲೀಸರು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ಈ ವೇಳೆ ಮನೆಯೊಂದರಲ್ಲಿ ದಂಧೆಕೋರರು ಡಾಲ್ಡಾ, ರಾಸಾಯನಿಕ ಬಳಸಿ ತುಪ್ಪ ತಯಾರಿಸಿರುವುದು ಗೊತ್ತಾಗಿದೆ. ಅದನ್ನು ನಾಟಿ ತುಪ್ಪ ಎಂದು ಮಾರಾಟ ಮಾಡುತ್ತಿದ್ದರು. ದಂಧೆಕೋರರು ಮನೆಯ ಬಾಗಿಲು ಲಾಕ್ …
Read More »ಕಲಬುರಗಿ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜಯ
ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆಯ ಅಧಿಕಾರದ ಗದ್ದುಗೆಗೆ ಕಾಂಗ್ರೆಸ್ ಮತ್ತೊಮ್ಮೆ ಏರಿದ್ದು, ಮೇಯರ್ ಹಾಗೂ ಉಪ ಮೇಯರ್ ಎರಡೂ ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜ್ಮಲ್ ಗೋಳಾ ಅವರು 35 ಮತಗಳನ್ನು ಪಡೆದು 24ನೇ ಮೇಯರ್ ಆಗಿ ಆಯ್ಕೆಯಾದರು. ಉಪ ಮೇಯರ್ ಆಗಿ ಕಾಂಗ್ರೆಸ್‌ನ ಫರನಾ ಖುಸ್ರೋ ಜಾಗೀರದಾರ್ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಪಾಲಿಕೆಯಲ್ಲಿ ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮ ಮನೆಮಾಡಿದೆ. ಬಿಜೆಪಿ ಅಭ್ಯರ್ಥಿ ಗುರುರಾಜ್ ಪಟ್ಟಣ ಅವರು 26 …
Read More »ನೇಪಾಳ ಜಲಪ್ರಳಯ – ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸ್ ಆದ 54 ಮಂದಿ ಕನ್ನಡಿಗರು
ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಭೀಕರ ಜಲಪ್ರಳಯದ ನಡುವೆ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರಿಗೆ ಕೊನೆಗೂ ನೆಮ್ಮದಿ ಸಿಕ್ಕಿದೆ. ನೇಪಾಳ ಪ್ರವಾಹದಲ್ಲಿ ಸಿಲುಕಿದ್ದ 54 ಮಂದಿ ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ಸಾಗಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕನ್ನಡಿಗರು, ನೇಪಾಳದಲ್ಲಿ ಎದುರಾದ ಭೀಕರ ಅನುಭವವನ್ನು ಹಂಚಿಕೊಂಡಿದ್ದಾರೆ. ಹಾವೇರಿ, ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಒಟ್ಟು 54 ಮಂದಿ ಪ್ರವಾಸಿಗರು ಆಗಸ್ಟ್ 23ರಂದು ನೇಪಾಳ ಪ್ರವಾಸ ಕೈಗೊಂಡಿದ್ದರು. ಆದರೆ ಆಗಸ್ಟ್ 26ರಂದು …
Read More »ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ – ಪರಾರಿಯಾಗಲು ಯತ್ನಿಸಿದ ವ್ಯಕ್ತಿ ಜಾರಿಬಿದ್ದು ಸಾವು
ಚಿಕ್ಕಮಗಳೂರು: ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ಪರಾರಿಯಾಗಲು ಯತ್ನಿಸಿದ ವ್ಯಕ್ತಿ ಜಾರಿಬಿದ್ದು ಸಾವನ್ನಪ್ಪಿದ ಘಟನೆ ಎನ್.ಆರ್.ಪುರ ತಾಲೂಕಿನ ಕಡಬಗೆರೆ ಸಮೀಪದ ಕಾಫಿತೋಟದಲ್ಲಿ ನಡೆದಿದೆ. ಗುಡ್ಡೆಕೊಪ್ಪ ಗ್ರಾಮದ ರಮೇಶ್ (35) ಮೃತ ದುರ್ದೈವಿ. ಬಾಸಾಪುರ ಅರಣ್ಯ ಪ್ರದೇಶದಲ್ಲಿ ಕಳೆದ ರಾತ್ರಿ ಗುಂಪೊಂದು ಅಂದರ್-ಬಾಹರ್ ಆಡುತ್ತಿತ್ತು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಬಾಳೆಹೊನ್ನೂರು ಪೊಲೀಸರು ದಾಳಿ ನಡೆಸಿದ್ದರು. ಅಲ್ಲಿದ್ದ 9 ಜನ ಪರಾರಿಯಾಗಲು ಯತ್ನಿಸಿದ್ದು, ಅದರಲ್ಲಿ ಇಬ್ಬರನ್ನು …
Read More »ಈ ಬಾರಿ ದಸರಾ ಮೆರವಣಿಗೆಯ ರೂಪವನ್ನೇ ಬದಲಾಯಿಸುತ್ತೇವೆ: ಸಿಎಂ
ಮೈಸೂರು: ಈ ಬಾರಿಯ ದಸರಾವನ್ನು ಅದ್ಧೂರಿಯಾಗಿ ಮತ್ತು ಬಹಳ ವಿಭಿನ್ನವಾಗಿ ಮಾಡುತ್ತೇವೆ ಎಂದು ಮೈಸೂರಿನಲ್ಲಿ ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಸರಾದ ಮೆರವಣಿಗೆಯ ರೂಪವನ್ನೇ ಬದಲಾಯಿಸುತ್ತೇವೆ. ಮಿಲಿಟರಿ, ಸೇನಾ ಪಡೆ ಮೆರವಣಿಗೆಯಲ್ಲಿ ಬರಲಿದೆ. ಕನ್ನಡದ ಚಿತ್ರ ನಟ, ನಟಿಯರು ಕೂಡ ಮೆರವಣಿಗೆಯಲ್ಲಿ ಸಾಗಲಿದ್ದಾರೆ. ಒಂದೇ ಪ್ರಕಾರದ 5 ಜಾನಪದ ಕಲಾವಿದರಿಗೆ ಈ ಬಾರಿ ಅವಕಾಶ ಇಲ್ಲ. ಬದಲಾದ ಕಾಲಕ್ಕೆ ತಕ್ಕಂತೆ ಮೆರವಣಿಗೆಯ …
Read More »ಹೊಸೂರು ಹೆದ್ದಾರಿಯಲ್ಲಿ ಧಗಧಗನೇ ಹೊತ್ತಿ ಉರಿದ ಕಾರು
ಬೆಂಗಳೂರು: ಹೆದ್ದಾರಿಯಲ್ಲಿ ಕಾರೊಂದು ಧಗಧಗನೇ ಹೊತ್ತಿ ಉರಿದಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಹೊಸೂರುಮುಖ್ಯರಸ್ತೆ ನೆರಳೂರು ಗೇಟ್ ಬಳಿ ನಡೆದಿದೆ. ಚಲಿಸುತ್ತಿದ್ದ ಕಾರಿನ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಕೂಡಲೇ ಕಾರು ರಸ್ತೆ ಬದಿ ನಿಲ್ಲಿಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಹೊಗೆ ಜೊತೆ ಬೆಂಕಿ ಕಿಡಿ ಕಾಣಿಸಿಕೊಂಡಿದೆ. ಈ ವೇಳೆ ಪೆಟ್ರೋಲ್ ಬಂಕ್ ಸಿಬ್ಬಂದಿ ಬೆಂಕಿ ನಂದಿಸಲು ಪರದಾಡಿದರು. ನೋಡನೋಡುತ್ತಿದ್ದಂತೆ ಇಡೀ ಕಾರಿಗೆ ಬೆಂಕಿ ಆವರಿಸಿದ್ದು, ಕಾರು ಸಂಪೂರ್ಣ …
Read More »ಕೆರೆ ತಡೆಗೋಡೆಗೆ ಖಾಸಗಿ ಬಸ್ ಡಿಕ್ಕಿ – 10 ಮಂದಿ ವಿದ್ಯಾರ್ಥಿಗಳಿಗೆ ಗಾಯ
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಕೆರೆ ತಡೆಗೋಡೆಗೆ ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ 10 ಮಂದಿ ವಿದ್ಯಾರ್ಥಿಗಳು ಹಾಗೂ ಓರ್ವ ಉಪನ್ಯಾಸಕಿ ಗಾಯಗೊಂಡ ಘಟನೆ ಸಾಗರ ತಾಲೂಕಿನ ಕಾಸ್ಪಾಡಿ ಬಳಿ ನಡೆದಿದೆ. ಸಾಗರ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ಕ್ರೀಡಾಕೂಟಕ್ಕೆ ವಿದ್ಯಾರ್ಥಿಗಳನ್ನ ಖಾಸಗಿ ಬಸ್‌ನಲ್ಲಿ ಕರೆದೊಯ್ಯಲಾಗಿತ್ತು. ಕ್ರೀಡಾಕೂಟ ಮುಗಿಸಿ, ವಾಪಸ್ ಬರುವ ವೇಳೆ ನಿಯಂತ್ರಣ ತಪ್ಪಿ ಕಾಸ್ಪಾಡಿ ಕೆರೆಯ ತಡೆಗೋಡೆಗೆ ಬಸ್ ಡಿಕ್ಕಿಯಾಗಿದೆ. ಬಸ್ ನಲ್ಲಿದ್ದ 48 ಜನರ …
Read More »ಕುಮಾರಸ್ವಾಮಿ ರಾಮನಗರಕ್ಕೆ ಬಂದ್ರೆ ಕಾಲು ತೊಳೆದು ಸ್ವಾಗತ ಮಾಡ್ತೇನೆ: ಇಕ್ಬಾಲ್ ಹುಸೇನ್
ರಾಮನಗರ: ಕೇಂದ್ರ ಸಚಿವ ಕುಮಾರಸ್ವಾಮಿಯವರು ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತ ಮಾಡುತ್ತೇನೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ವಾಪಸ್ ಆಗುತ್ತಾರೆ ಎಂಬ ಚರ್ಚೆಯ ಕುರಿತು ಪ್ರತಿಕ್ರಿಯಿಸಿದರು. ಅವರು ರಾಜ್ಯ ರಾಜಕಾರಣಕ್ಕೆ ಬಂದರೆ ಸಂತೋಷದಿಂದ ಸ್ವಾಗತಿಸುತ್ತೇವೆ. ಒಂದು ವೇಳೆ ರಾಮನಗರಕ್ಕೆ ಬಂದರೆ ಅವರ ಪಾದ ತೊಳೆದು ಸ್ವಾಗತ ಮಾಡುತ್ತೇವೆ ಎಂದು ಕೌಂಟರ್ ನೀಡಿದ್ದಾರೆ. …
Read More »ಗೃಹಲಕ್ಷ್ಮಿಗೆ ಮೂರರ ಸಂಭ್ರಮ – ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ವಿಧಾನಸೌಧ, ಸುವರ್ಣಸೌಧ, ಮೈಸೂರು ಅರಮನೆ
ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿಗೆ ಮೂರು ವರ್ಷಗಳ ಸಂಭ್ರಮ. ಈ ಸಂಭ್ರಮದ ಸವಿನೆನಪಿಗಾಗಿ ಬೆಂಗಳೂರಿನ ವಿಧಾನಸೌಧ, ಬೆಳಗಾವಿಯ ಸುವರ್ಣಸೌಧ, ಮೈಸೂರು ಅರಮನೆ ಸೇರಿ ಹಲವೆಡೆ ಗುಲಾಬಿ ಬಣ್ಣದ ಲೈಟ್‌ಗಳು(P ಕಂಗೊಳಿಸಲಿವೆ. ಬೆಂಗಳೂರಿನ ವಿಧಾನಸೌಧ, ಬೆಳಗಾವಿಯ ಸುವರ್ಣಸೌಧ, ಮೈಸೂರು ಅರಮನೆ, ಚಿತ್ರದುರ್ಗದ ಕಲ್ಲಿನಕೋಟೆ, ಹಂಪಿಯ ಕಲ್ಲಿನರಥ, ಮಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡ, ಬೆಳಗಾವಿ ಕಿತ್ತೂರು ಚೆನ್ನಮ್ಮ ವೃತ್ತ ಇವೆಲ್ಲವೂ ಭಾನುವಾರ (ಆ.30) ಸಂಜೆ 6ರಿಂದ ರಾತ್ರಿ …
Read More »
Laxmi News 24×7