ಕೋಲಾರ: ಚಿನ್ನದ ಕಳ್ಳರು ನೂರಾರು ಅಡಿ ಆಳದ ಗಣಿ ಪ್ರದೇಶದಲ್ಲಿ ಸಿಲುಕಿ ಭಾರೀ ಸುದ್ದಿಯಾಗಿದ್ದರು. ಗಣಿಗೆ ಇಳಿದಿದ್ದ ಐವರಲ್ಲಿ ಇಬ್ಬರು ಮಣ್ಣಾದರೆ, ಮತ್ತೋರ್ವನ ಶವ ಪಾತಾಳ ಸೇರಿದೆ. ಇದೀಗ ಗಣಿಯಿಂದ ಪಾರಾಗಿ ಬಂದ ಕಳ್ಳನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೆಜಿಎಫ್ ಚಿನ್ನದ ಗಣಿಯಲ್ಲಿ ಕಳ್ಳತನಕ್ಕೆ ಇಳಿದ 5 ಜನರಲ್ಲಿ 3 ಜನ ಮೃತಪಟ್ಟರೆ, ಮತ್ತೊಬ್ಬನಿಗೆ ಕೊರೊನಾ ವಕ್ಕರಿಸಿದೆ. ಕೋಲಾರದ ಕೆಜಿಎಫ್ ನಲ್ಲಿ ಮೇ-13 ರಂದು ರಾತ್ರಿ ಕೆಜಿಎಫ್ ನಗರದ …
Read More »ಮಾಲ್ಡೀವ್ಸ್ ನ ಮಾಲೆಯಿಂದ 152 ಹಾಗೂ ಕತಾರ್ ನ ದೋಹಾದಿಂದ 182 ಜನ ಅನಿವಾಸಿ ಭಾರತೀಯರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ
ಬೆಂಗಳೂರು: ಕೊರೊನಾ ವೈರಸ್ ಲಾಕ್ಡೌನ್ ಸಂದರ್ಭದಲ್ಲಿ ಮಾಲ್ಡೀವ್ಸ್ ನ ಮಾಲೆಯಿಂದ 152 ಹಾಗೂ ಕತಾರ್ ನ ದೋಹಾದಿಂದ 182 ಜನ ಅನಿವಾಸಿ ಭಾರತೀಯರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಒಂಭತ್ತನೇ ಏರ್ ಇಂಡಿಯಾ ವಿಮಾನದಲ್ಲಿ ಗರ್ಭಿಣಿಯರು, ಮಕ್ಕಳು ಸೇರಿದಂತೆ ಒಟ್ಟು 152 ಮಂದಿ ಅನಿವಾಸಿ ಭಾರತೀಯರು ಶುಕ್ರವಾರ ಸಂಜೆ 6.50ಕ್ಕೆ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಒಟ್ಟು 152 ಪ್ರಯಾಣಿಕರಲ್ಲಿ ಇಬ್ಬರು ಗರ್ಭಿಣಿಯರು, ಹತ್ತು ವರ್ಷದೊಳಗಿನ …
Read More »ಈಜಲು ನದಿಗೆ ದುಮುಕಿದ ಯುವಕ ನಾಪತ್ತೆ…………
ಯಾದಗಿರಿ: ಕೃಷ್ಣಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ಯುವಕರ ಪೈಕಿ ಓರ್ವ ನಾಪತ್ತೆಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಜಿಲ್ಲೆಯ ಸುರಪುರ ತಾಲೂಕಿನ ಶೇಳ್ಳಗಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಚಂದಣ್ಣ ಗೊಂಡಿಕಾರ (35) ನಾಪತ್ತೆಯಾಗಿರುವ ಯುವಕ. ಜಿಲ್ಲೆಯಲ್ಲಿ ಬಿಸಿಲಿನ ತಾಪ ಹೆಚ್ಚಿರುವ ಕಾರಣ ಇಬ್ಬರು ಸ್ನೇಹಿತರೊಂದಿಗೆ ಚಂದಣ್ಣ ಗ್ರಾಮದ ಹತ್ತಿರದ ಕೃಷ್ಣಾನದಿಗೆ ಈಜಲು ತೆರಳಿದ್ದ. ಮೂವರಲ್ಲಿ ಇಬ್ಬರು ಈಜಿ ದಡ ಸೇರಿದ್ದಾರೆ. ಚಂದಣ್ಣ ನದಿಯಿಂದ ಹೊರ ಬರದೆ ನಾಪತ್ತೆಯಾಗಿದ್ದಾನೆ. ಶುಕ್ರವಾರ ಮಧ್ಯಾಹ್ನ …
Read More »ಮೇ 29ರ ಬದಲು ಜೂನ್ 4ಕ್ಕೆ ಕೊಡಗು ಸಂತ್ರಸ್ತರಿಗೆ ಮನೆ ಹಸ್ತಾಂತರ: ವಿ ಸೋಮಣ್ಣ
ಮಡಿಕೇರಿ: 2018ರ ಪ್ರಕೃತಿ ವಿಕೋಪದಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ನಿರ್ಮಾಣ ಮಾಡಿರುವ ಮನೆಗಳ ಹಸ್ತಾಂತರ ಕಾರ್ಯ ಮತ್ತೊಂದು ವಾರ ತಡವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಪ್ರತಿಕ್ರಿಯಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ವಿ ಸೋಮಣ್ಣ, ಲಾಕ್ಡೌನ್ ಮುಂದುವರೆಯುವ ಬಗ್ಗೆ ಪ್ಲಾನ್ ಇರಲಿಲ್ಲ. ಹೀಗಾಗಿ ಮೇ 29ರಂದು ಸಂತ್ರಸ್ತರಿಗೆ ಮನೆ ಹಸ್ತಾಂತರಿಸಲು ನಿರ್ಧರಿಸಲಾಗಿತ್ತು. ಆದರೆ ಲಾಕ್ಡೌನ್ ಮೇ ಕೊನೆಯವರೆಗೆ ಇರುವುದರಿಂದ ಜೂನ್ 4ರಂದು ಮನೆ ಹಸ್ತಾಂತರಿಸಲಾಗುವುದು …
Read More »ರಾಯಚೂರಿನಲ್ಲಿ ಹೊಸ ಹತ್ತು ಪ್ರಕರಣ ಪತ್ತೆ- 26ಕ್ಕೇರಿದ ಕೊರೊನಾ ಸೋಂಕಿತರ ಸಂಖ್ಯೆ
ರಾಯಚೂರು: ಜಿಲ್ಲೆಯಲ್ಲಿ ಇಂದು ಹತ್ತು ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಮಹಾರಾಷ್ಟ್ರದ ನಂಟಿನಿಂದ ರಾಯಚೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 26 ಕ್ಕೇರಿದೆ. ದೇವದುರ್ಗ ತಾಲೂಕಿನ ಮಸರಕಲ್ ಕ್ವಾರಂಟೈನ್ ಕೇಂದ್ರದಲ್ಲಿದ್ದವರಲ್ಲಿ ಸೋಂಕು ಪತ್ತೆಯಾಗಿದೆ. ಇದರಲ್ಲಿ 1 ವರ್ಷ ಹಾಗೂ 4 ವರ್ಷದ ಗಂಡು ಮಕ್ಕಳು, 13 ವರ್ಷ ಹಾಗೂ 17 ವರ್ಷದ ಹೆಣ್ಣು ಮಕ್ಕಳಿದ್ದಾರೆ. ರೋಗಿ-1713 ರಿಂದ ರೋಗಿ-1722 ವರೆಗೆ ಕ್ರಮವಾಗಿ ರಾಯಚೂರಿನವರಲ್ಲಿ ಕೋವಿಡ್ 19 ಪಾಸಿಟಿವ್ ಕಾಣಿಸಿಕೊಂಡಿದೆ. …
Read More »ರಂಜಾನ್ ವೇಳೆ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡದಂತೆ ಶ್ರೀರಾಮ ಸೇನಾ ಮನವಿ
ಹುಬ್ಬಳ್ಳಿ: ಕೊರೊನಾ ವೈರಸ್ ಹರಡುವಿಕೆಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಹಿನ್ನಲೆ ಮುಸ್ಲಿಂ ಬಾಂಧವರ ರಂಜಾನ್ ಹಬ್ಬದ ಸಂದರ್ಭದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಬಾರದು ಎಂದು ಶ್ರೀರಾಮ ಸೇನಾ ಮುಖಂಡರು ತಹಶಿಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ರಾಜ್ಯದಲ್ಲಿ ಹಾಗೂ ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿರುವುದು ಚಿಂತಾಜನಕ ಸಂಗತಿಯಾಗಿದೆ. ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಯಾವುದೇ ಸಾಮೂಹಿಕ ಪ್ರಾರ್ಥನೆ, ಸಭೆ ಸಮಾರಂಭ …
Read More »ಮದ್ಯ ನಿಷೇಧಕ್ಕೆ ಆಗ್ರಹಿಸಿ ಸರ್ಕಾರಕ್ಕೆ ಹಣ ಕಳಿಸಿದ ಮಹಿಳೆಯರು…………
ಧಾರವಾಡ: ಸರ್ಕಾರಕ್ಕೆ ಮಹಿಳೆಯರು ಹಣ ಕಳುಹಿಸುವ ಮೂಲಕ ರಾಜ್ಯದಲ್ಲಿ ಮದ್ಯ ನಿಷೇಧಿಸುವಂತೆ ಒತ್ತಾಯಿಸಿದ್ದಾರೆ. ನಗರದ ಮುರುಘಾಮಠ ಆವರಣದ ಅಂಚೆ ಕಚೇರಿ ಎದುರು ಪ್ರತಿಭಟನೆ ಮಾಡಿದ ಮಹಿಳೆಯರು, ಮನಿ ಆರ್ಡರ್ ಮೂಲಕ ಸರ್ಕಾರಕ್ಕೆ ಹಣ ಕಳುಹಿಸಿ ರಾಜ್ಯದಲ್ಲಿ ಮದ್ಯ ನಿಷೇಧಿಸುವಂತೆ ಆಗ್ರಹಿಸಿದ್ದಾರೆ. ಈ ಮೂಲಕ ಮಹಿಳೆಯರು ವಿನೂತನ ಪ್ರತಿಭಟನೆ ಮಾಡಿದ್ದಾರೆ. ಈ ಮೊದಲು ಮಹಿಳೆಯರು ಮನಿ ಆರ್ಡರ್ ಅಭಿಯಾನ ಮಾಡಿದ್ದರು. ಈ ವೇಳೆ ನೂರಾರು ಮಹಿಳೆಯರಿಂದ 1,020ರೂಪಾಯಿ ಜಮೆಯಾಗಿತ್ತು. ಈ ಹಣವನ್ನು …
Read More »ಮಹಾರಾಷ್ಟ್ರದಿಂದ ಬಂದ ಮಕ್ಕಳಿಗೂ ಕೊರೊನಾ ಪಾಸಿಟಿವ್………
ಯಾದಗಿರಿ: ಮಹಾರಾಷ್ಟ್ರದಿಂದ ಯಾದಗಿರಿಗೆ ಬಂದಿರುವ ಇಬ್ಬರು ಮಕ್ಕಳಲ್ಲಿ ಕೊರೊನಾ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 15ಕ್ಕೆ ಏರಿದೆ. ರೋಗಿ ಸಂಖ್ಯೆ-1733, 06 ವರ್ಷದ ಹೆಣ್ಣು ಮಗು ಮತ್ತು ರೋಗಿ ಸಂಖ್ಯೆ-1743, 09 ವರ್ಷದ ಬಾಲಕನಿಗೆ ಕೊರೊನಾ ಸೋಂಕು ಇರುವುದು ಧೃಡಪಟ್ಟಿದೆ. ಮೊದಲ ಹಂತದ ಮಾಹಿತಿ ಸಂಗ್ರಹಣೆ ಸಂದರ್ಭದಲ್ಲಿ ಇಬ್ಬರು ಮಕ್ಕಳು ಮಹಾರಾಷ್ಟ್ರದಿಂದ ಬಂದಿರುವುದು ಎಂಬುದು ತಿಳಿದುಬಂದಿದೆ. ಇಬ್ಬರ ಸಮಗ್ರ ಟ್ರಾವೆಲ್ ಹಿಸ್ಟರಿ ಪತ್ತೆಗಾಗಿ ಜಿಲ್ಲಾಡಳಿತ ಕಾರ್ಯನಿರ್ವಹಿಸುತ್ತಿದೆ. ಸದ್ಯ ಇಬ್ಬರು …
Read More »ಶನಿವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 7ರ ವರೆಗೆ ಕರ್ಫ್ಯೂ: ಭಾಸ್ಕರ್ ರಾವ್
ಬೆಂಗಳೂರು: ಲಾಕ್ಡೌನ್ 4.0 ಭಾಗವಾಗಿ ರಾಜ್ಯ ಸರ್ಕಾರ ಮಾರ್ಗಸೂಚಿ ರೂಪಿಸಿದ್ದು, ಭಾನುವಾರ ಸಂಪೂರ್ಣ ಲಾಕ್ಡೌನ್ ಜಾರಿಯಲ್ಲಿರುತ್ತದೆ ಎಂದು ನಿಯಮ ರೂಪಿಸಲಾಗಿತ್ತು. ಇದೀಗ ಭಾನುವಾರ ಜಾರಿಯಾಗುವ ಕರ್ಫ್ಯೂ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮಾಹಿತಿ ನೀಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶನಿವಾರ ಸಂಜೆ 7 ರಿಂದ ಸೋಮವಾರ ಬೆಳಗ್ಗೆ 7ರ ವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅಗತ್ಯ ಸೇವೆ ನೀಡುವವರಿಗೆ ಮಾತ್ರ ವಿನಾಯ್ತಿ ಇರುತ್ತದೆ …
Read More »ಪಂಚಾಯ್ತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಿ ರಾಜ್ಯ ಸರ್ಕಾರ ಗೆಜೆಟ್ ನೋಟಿಫಿಕೇಷನ್
ಬೆಂಗಳೂರು : ರಾಜ್ಯದಲ್ಲಿ ಹೊಸದಾಗಿ ರಚನೆಯಾಗಿರುವ ತಾಲ್ಲೂಕು ಪಂಚಾಯ್ತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಿ ರಾಜ್ಯ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ(ಜಿ.ಪಂ) ಸಿ ಮಂಜೂರ್, ರಾಜ್ಯದಲ್ಲಿ ಹೊಸದಾಗಿ ರಚನೆಯಾಗಿರುವ ತಾಲೂಕು ಪಂಚಾಯ್ತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸುವ ಕುರಿತು ಕರ್ನಾಟಕ ವಿಶೇಷ ರಾಜ್ಯಪತ್ರದಲ್ಲಿ ಪ್ರಕಟಿಸಿದ್ದು, ಮುಂದಿನ ಅಗತ್ಯ ಕ್ರಮಕ್ಕಾಗಿ ಕಳುಹಿಸಿ ಕೊಡಲಾಗಿದೆ ಎಂಬುದಾಗಿ ರಾಜ್ಯ ಹೊಸ ತಾಲೂಕುಗಳ ಜಿಲ್ಲಾ ಪಂಚಾಯ್ತಿಯ ಕಾರ್ಯನಿರ್ವಾಹಕ …
Read More »