Breaking News

1.03 ಕೋಟಿ ಮೌಲ್ಯದ ವಿದೇಶಿ ಸಿಗರೇಟ್ ವಶ

ಹೈದರಾಬಾದ್: ಅಕ್ರಮವಾಗಿ ಸಂಗ್ರಹಿಸಿ ಸಾಗಿಸಲಾಗುತ್ತಿದ್ದ ವಿದೇಶಿ ಸಿಗರೇಟನ್ನು ಟಾಸ್ಕ್ ಫೋರ್ಸ್ ಪೊಲೀಸರು ವಶಪಡಿಸಿಕೊಂಡಿದ್ದು, ಐವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳ ಬಳಿಯಿಂದ ಸುಮಾರು 1.03 ಕೋಟಿ ರೂ. ಮೌಲ್ಯದ ವಿದೇಶಿ ಸಿಗರೇಟ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಸಿದ್ದಿಯಂಬಾರ್ ಬಜಾರ್‌ನ ಸಮೀಪದಲ್ಲಿ ಆಟೋವೊಂದನ್ನು ಪೊಲೀಸರು ತಡೆದು ತಪಾಸಣೆ ಮಾಡಿದ್ದಾರೆ. ಆಗ ಆಟೋದಲ್ಲಿ ವಿವಿಧ ಬ್ರಾಂಡ್‍ಗಳ ಅಕ್ರಮವಾಗಿ ಆಮದು ಮಾಡಿಕೊಂಡ ವಿದೇಶಿ ಸಿಗರೇಟ್‍ಗಳ 503 ಪೆಟ್ಟಿಗೆ ಪತ್ತೆಯಾಗಿವೆ. ತಕ್ಷಣ ಆಟೋ …

Read More »

ಸಾಂಬ್ರಾ ವಿಮಾನ ನಿಲ್ದಾಣದಲ್ಲಿಸತೀಶ್ ಜಾರಕಿಹೊಳಿಅವರಿಗೆ ಅದ್ಧೂರಿ ಸ್ವಾಗತ

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶನಿವಾರ ಅದ್ದೂರಿಯಾಗಿ ಸ್ವಾಗತಿಸಿದರು. ಜುಲೇ 2 ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅಧಿಕೃತವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿದ ಬಳಿಕ ಇದೇ ಮೊದಲ ಬಾರಿಗೆ  ಜಿಲ್ಲೆಗೆ ಆಗಮಿಸಿದ್ದು,ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.  ಕಾರ್ಯಾಧ್ಯಕ್ಷ , ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಸನ್ಮಾನಿ, …

Read More »

ಬೆಳಗಾವಿ ನಗರದಲ್ಲಿ ಮನೆ ಮನೆಗೆ ತೆರಳಿ ಬಳೆ ತೊಡಿಸುವ ಮಹಿಳೆಗೆ ಕೊರೋನಾ

ಬೆಳಗಾವಿ: ಮನೆ ಮೆನೆಗೆ ತೆರಳಿ ಬಳೆ ತೋಡಿಸುತ್ತಿದ್ದ ಮಹಿಳೆಗೆ ಕೊರೋನಾ ಸೋಂಕು ಧೃಡಪಟ್ಟ ಬಳಿಕ ಮಹಿಳೆಯ ಪ್ರಾಥಮಿಕ ಸಂಪರ್ಕಕ್ಕೆ ಬಂದ ಜನರನ್ನು ಪತ್ತೆ ಹಚ್ಚಲು ಅಧಿಕಾರಿಗಳು ಪರದಾಡುತ್ತಿದ್ದಾರೆ. 58 ವರ್ಷದ ಸೊಂಕೀತ ಮಹಿಳೆ ಪ್ರತಿ ದಿನ ಗಲ್ಲಿ ಗಲ್ಲಿಗಳಲ್ಲಿ ಸುತ್ತಾಡಿ 200 ಕ್ಕೂ ಹೆಚ್ಚು ಮನೆಗಳ ಮಹಿಳೆಯರಿಗೆ ಬಳೆ ತೊಡೆಸಿದ್ದಾಳೆ ಎಂದು ತಿಳಿದು ಬಂದಿದ್ದು ಈ ಮಹಿಳೆಯ ಟ್ರಾವಲ್ ಹಿಸ್ಟರಿ ನೋಡಿ ಅಧಿಕಾರಿಗಳು ಹೈರಾನಾಗಿದ್ದಾರೆ. ಸೊಂಕು ತಗಲಿರುವ ಈ ಮಹಿಳೆ …

Read More »

ಇಬ್ಬರು ಆಂಕರ್ ಗಳಿಗೆ ಹಾಗೂ ಇಬ್ಬರು ಕ್ಯಾಮರಾಮನ್ ಗಳಿಗೆ ಸೋಂಕು

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು,  ಇಬ್ಬರು ಆಂಕರ್ ಗಳಿಗೆ ಹಾಗೂ ಇಬ್ಬರು ಕ್ಯಾಮರಾಮನ್ ಗಳಿಗೆ ಸೋಂಕು ತಗುಲಿದೆ. ರಾಜ್ಯಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇಬ್ಬರು ಮಹಿಳಾ ಆಂಕರ್ ಗಳಿಗೆ ಮತ್ತು ಇಬ್ಬರು ಕ್ಯಾಮರಾ ಮನ್ ಗಳಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಅವರನ್ನು ನಿಗದಿತ ಕೋವಿಡ್ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರನ್ನು ಗುರುತಿಸಿ ಕ್ವಾರಂಟೈನ್ ಗೆ …

Read More »

ರಾಜ್ಯಾದ್ಯಂತ ಜುಲೈ 4 ರಿಂದ 7 ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ

ಹವಾಮಾನ ಇಲಾಖೆ ರಾಜ್ಯದ ಜನತೆಗೆ ಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಜುಲೈ 4 ರಿಂದ 7 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಇನ್ನೂ, ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ಉತ್ತರ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, …

Read More »

ಕೊರೋನಾದಿಂದ ದುಡ್ಡು ಮಾಡುವ ದರಿದ್ರ ಪರಿಸ್ಥಿತಿ ಸರ್ಕಾರಕ್ಕೆ ಬಂದಿಲ್ಲ.

ಬೆಂಗಳೂರು(ಜು.04): ಕೊರೋನಾದಿಂದ ದುಡ್ಡು ಮಾಡುವ ದರಿದ್ರ ಪರಿಸ್ಥಿತಿ ಸರ್ಕಾರಕ್ಕೆ ಬಂದಿಲ್ಲ. ವೈದ್ಯಕೀಯ ಸಲಕರಣೆಗಳ ದರ ಆರಂಭದಲ್ಲಿ ಹೆಚ್ಚಿತ್ತು. ಈಗ ಸಲಕರಣೆಗಳ ದರ ಇಳಿಕೆಯಾಗಿದೆ. ಮೊದಲಿನ ದರಗಳಿಗೆ ಹೋಲಿಸಿ ಆರೋಪ ಮಾಡುವುದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್‌.ಆರ್‌.ವಿಶ್ವನಾಥ್‌ ತಿರುಗೇಟು ನೀಡಿದ್ದಾರೆ. 2200 ಕೋಟಿ ಭ್ರಷ್ಟಾಚಾರ: ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ ಸಿದ್ದರಾಮಯ್ಯ ಶುಕ್ರವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ …

Read More »

ದೇಶದಲ್ಲಿ 6.40 ಲಕ್ಷ ಮಂದಿಗೆ ಕೊರೋನಾ: 3.92 ಲಕ್ಷ ಜನರು ಗುಣಮುಖ!

ನವದೆಹಲಿ(ಜು.04): ದೇಶಾದ್ಯಂತ ಹೊಸ ಸೋಂಕು ಬೆಳಕಿಗೆ ಬರುವ ಪ್ರಮಾಣದ ನಾಗಾಲೋಟ ಮುಂದುವರೆದಿದ್ದು, ಶುಕ್ರವಾರ 23010 ಜನರಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. ಇದು ಈವರೆಗಿನ ದೈನಂದಿನ ಗರಿಷ್ಠವಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 640843 ಮುಟ್ಟಿದೆ. ಇನ್ನು ನಿನ್ನೆ 449 ಜನರು ವೈರಸ್‌ಗೆ ಬಲಿಯಾಗುವುದರೊಂದಿಗೆ ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 18653ಕ್ಕೆ ತಲುಪಿದೆ. ಇದೇ ವೇಳೆ ಈವರೆಗೆ 392403 ಜನರು ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಮಹಾರಾಷ್ಟ್ರದಲ್ಲಿ ಶುಕ್ರವಾರ ಒಂದೇ ದಿನ 6364 ಹೊಸ …

Read More »

ಊಟ ಬಡಿಸುವುದು ತಡವಾಯಿತೆಂದು ತಾಯಿಗೇ ಗುಂಡಿಟ್ಟ ಭೂಪ!

ನವದೆಹಲಿ: ರಾತ್ರಿ ತನಗೆ ಊಟ ಬಡಿಸಲು ತಡಮಾಡಿದಳು ಎಂದು ಪುತ್ರನೊಬ್ಬ ಗುಂಡಿಟ್ಟು ತನ್ನ ತಾಯಿಯನ್ನು ಹತ್ಯೆ ಮಾಡಿದ್ದಾನೆ. ಬಾವಾನಾ ಕೈಗಾರಿಕಾ ಪ್ರದೇಶದ ನಿವಾಸಿ ಬಾಲಾ ದೇವಿ (60) ಹತಳಾದ ತಾಯಿ. ಸೂರಜ್​ (26) ಹತ್ಯೆ ಮಾಡಿದವನು. ಆತನನ್ನು ಬಂಧಿಸಲಾಗಿದೆ. ಆತನ ಬಳಿ ಇದ್ದ ಅಕ್ರಮ ಪಿಸ್ತೂಲ್​ ಅನ್ನೂ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೂರಜ್​ ಶುಕ್ರವಾರ ರಾತ್ರಿ ಪಾನಮತ್ತನಾಗಿ ಮನೆಗೆ ಬಂದಿದ್ದ. ಬಾಲಾದೇವಿ ಇನ್ನೂ ಅಡುಗೆ ಮಾಡುತ್ತಿದ್ದಳು. ಮನೆಗೆ …

Read More »

GST ತೆರಿಗೆದಾರರಿಗೆ ಭರ್ಜರಿ ಸಿಹಿಸುದ್ದಿ

ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್.ಟಿ.) ರಿಟರ್ನ್ ಸಲ್ಲಿಕೆ ಕುರಿತಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಮಾಸಿಕ ಮತ್ತು ತ್ರೈಮಾಸಿಕ ಮಾರಾಟ ರಿಟರ್ನ್ ಮತ್ತು ತೆರಿಗೆ ಪಾವತಿ ಅರ್ಜಿ GSTR-3B ವಿಳಂಬ ಸಲ್ಲಿಕೆ ಶುಲ್ಕವನ್ನು ಗರಿಷ್ಠ 500 ರೂಪಾಯಿಗಳಿಗೆ ಮಿತಿಗೊಳಿಸಲಾಗಿದೆ. 2017ರ ಜುಲೈನಿಂದ 2020ರ ಜುಲೈ ವರೆಗಿನ ಅವಧಿಯ ರಿಟರ್ನ್ ಗಳಿಗೆ ಈ ನಿಯಮ ಅನ್ವಯವಾಗಲಿದ್ದು, ತೆರಿಗೆ ಬಾಕಿ ಉಳಿಸಿಕೊಂಡಿರದಿದ್ದರೆ ವಿಳಂಬ ಶುಲ್ಕ ಇರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ. ತೆರಿಗೆದಾರರಿಗೆ ಈ …

Read More »

ಬೆಳಗಾವಿಯಲ್ಲಿ ಕರ್ತವ್ಯ ನಿಭಾಯಿಸಿದ ಪೊಲೀಸ್ ಪೇದೆ ಗಳಿಗುಕೊರೋನ್ ಸೋಂಕು..

ಬೆಳಗಾವಿ- ನಿಪ್ಪಾಣಿಯ ಕುಗನೊಳ್ಳಿ,ರಾಯಬಾಗ ಸೇರಿದಂತೆ ಬೆಳಗಾವಿ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಕರ್ತವ್ಯ ನಿಭಾಯಿಸಿದ ಮೂವರು ಪೋಲೀಸ್ ಪೇದೆಗಳಿಗೆ ಕೊರೋನಾ ಸೊಂಕು ಇರುವದು ದೃಡವಾದ ಹಿನ್ನಲೆಯಲ್ಲಿ ಮೂವರನ್ನು ಐಸೋಲೇಟ್ ಮಾಡಲಾಗಿದೆ. ಸೊಂಕು ಪತ್ತೆಯಾದ ಮೂವರು ಡಿ ಆರ್ ಪೇದೆಗಳು ಜಿಲ್ಲೆಯ ಬೇರೆ ಬೇರೆ ಪ್ರದೇಶಗಳಲ್ಲಿ ಕರ್ತವ್ಯ ನಿಭಾಯಿಸಿದ್ದು ಈ ಮೂವರು ಪೇದೆಗಳು ಬೆಳಗಾವಿ ನಗರದ ಪೋಲೀಸ್ ಹೆಡ್ ಕ್ವಾಟರ್ಸ್ ನಲ್ಲಿ ವಾಸವಾಗಿದ್ದರು. ಈ ಮೂವರು ಪೋಲೀಸ್ ಪೇದೆಗಳ ಪ್ರಾಥಮಿಕ ಸಂಪರ್ಕಕ್ಕೆ ಬಂದವರನ್ನು …

Read More »