ಬೆಂಗಳೂರು, ಮೇ 21-ನೆಲಮಂಗಲದ ಮಾಚೋಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯನ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಸಿಸಿಬಿಯ ಓಸಿಡಬ್ಲ್ಯು ತಂಡ ಬಂಧಿಸಿ ಮಾದನಾಯ್ಕನಹಳ್ಳಿ ಪೊಲೀಸರಿಗೆ ಒಪ್ಪಿಸಿದೆ. ಖಾಸಗಿ ಚಾನೆಲ್‍ನ ವ್ಯವಸ್ಥಾಪಕ ನಿರ್ದೇಶಕ ಮೋಹನ್‍ಕುಮಾರ್ (28) ಬಂಧಿತ ಆರೋಪಿ. ಮಾದನಾಯ್ಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2019 ಏಪ್ರಿಲ್ 15 ರಂದು ಗ್ರಾ.ಪಂ. ಸದಸ್ಯ ಲಕ್ಷ್ಮೀನಾರಾಯಣನನ್ನು ನಾಲ್ಕೈದು ಮಂದಿಯ ಗುಂಪು ಭೀಕರವಾಗಿ ಕೊಲೆ ಮಾಡಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು …
Read More »‘ಬಡವರಿಗೊಂದು, ಶ್ರೀಮಂತರಿಗೊಂದು ಕಾನೂನಾ?’- ಅಧಿಕಾರಿಗಳ ವಿರುದ್ಧ ಹಳ್ಳಿಗರು ಗರಂ
ಚಿಕ್ಕಮಗಳೂರು: ಜಿಲ್ಲೆಯ ವೈದ್ಯರ ಕೊರೊನಾ ವರದಿ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರೊಂದಿಗೆ ಸಂಪರ್ಕಕ್ಕೆ ಬಂದಿದ್ದ 800ಕ್ಕೂ ಅಧಿಕ ಜನರನ್ನು ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ಮುಂದಾಗಿದ್ದು, ಆದರೆ ಅಧಿಕಾರಿಗಳ ವಿರುದ್ಧ ಹಳ್ಳಿಯ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಬಡವರಿಗೊಂದು, ಶ್ರೀಮಂತರಿಗೊಂದು ಕಾನೂನು ಪಾಲನೆ ಮಾಡುತ್ತಿದ್ದಾರೆ ಎಂದು ಮಲೆನಾಡಿನ ಜನ ಆರೋಪಿಸಿದ್ದಾರೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ನಂದೀಪುರ ಗ್ರಾಮದ ಸರ್ಕಾರಿ ವೈದ್ಯರೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಅವರ ಸಂಪರ್ಕದಲ್ಲಿದ್ದ ಸುಮಾರು 800 ಜನರನ್ನು …
Read More »ಕಿರಾಣಿ ಅಂಗಡಿಗಳಿಗೆ ಹೋಗಿ ವ್ಯಾಪಾರ ಮಾಡಿ: ದರ್ಶನ್ ಪತ್ನಿ ವಿಜಯಲಕ್ಷ್ಮಿ………
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮೀ ಲಾಕ್‍ಡೌನ್ ವೇಳೆ ಕಿರಾಣಿ ಅಂಗಡಿಗಳಿಗೆ ಹೋಗಿ ವ್ಯಾಪಾರ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ದರ್ಶನ್ ಪತ್ನಿ ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ಇದೀಗ ಲಾಕ್‍ಡೌನ್ ವಿಚಾರವಾಗಿ ಟ್ವೀಟ್ ಮಾಡಿದ್ದಾರೆ. “ಕೊರೊನಾ ಲಾಕ್‍ಡೌನ್‍ನಿಂದ ಸಣ್ಣ ಉದ್ಯಮಗಳು ದೊಡ್ಡ ಸಂಕಷ್ಟವನ್ನು ಅನುಭವಿಸುತ್ತಿವೆ. ಲಾಕ್‍ಡೌನ್ ಮುಗಿದ ನಂತರ ಸ್ಥಳೀಯ ಮಾರಾಟಗಾರರಿಂದ ತರಕಾರಿಗಳನ್ನು ಖರೀದಿಸಿ. ಸ್ಟಾರ್ ಹೋಟೆಲ್‍ಗೆ ಹೋಗಿ ಕಾಫಿ ಕುಡಿಯುವ ಬದಲು ನಿಮ್ಮ ಮನೆಯ ಹತ್ತಿರ …
Read More »ಆರೋಗ್ಯ ಸೇತು ಆ್ಯಪ್ ಪ್ರತಿಯೊಬ್ಬ ನಾಗರಿಕನ ಸುರಕ್ಷಾ ಕವಚ : ಸುಧಾಕರ್…….
ಬೆಂಗಳೂರು : ನೊವೆಲ್ ಕೊರೋನ ವೈರಸ್ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ’ಆರೋಗ್ಯ ಸೇತು’ ಆ್ಯಪ್ ಸಹಕಾರಿಯಾಗಿದೆ, ಇನ್ನೂ ಹೆಚ್ಚು ವ್ಯಾಪಕವಾಗಿ ಇದನ್ನು ಜನರು ಬಳಸುವಂತಾಗಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಈ ಕುರಿತು ಗುರುವಾರದಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು – ಆರೋಗ್ಯ ಸೇತು ಆ್ಯಪ್ ಪ್ರತಿಯೊಬ್ಬ ನಾಗರಿಕನ ಸುರಕ್ಷಾ ಕವಚವಾಗಿದೆ, ಪ್ರತಿಯೊಬ್ಬ ಸರ್ಕಾರಿ ಸಿಬ್ಬಂದಿಗಳೂ ಇದನ್ನು ಡೌನ್ ಲೋಡ್ ಮಾಡಿಕೊಳ್ಳುವದು ಕಡ್ಡಾಯವಾಗಿದ್ದು, ಇದನ್ನು ಬಳಸದೇ ಕಚೇರಿಗೆ ಬರುವ …
Read More »ವಿಮಾನ ಪ್ರಯಾಣಕ್ಕೆ ದರ ನಿಗದಿ – ಬೆಂಗಳೂರಿನಿಂದ ಎಲ್ಲೆಲ್ಲಿಗೆ ಎಷ್ಟು ರೂ.? – ದರಪಟ್ಟಿ ಓದಿ
ನವದೆಹಲಿ: ಕೋವಿಡ್ 19 ನಿಂದಾಗಿ ಆಗಿರುವ ನಷ್ಟವನ್ನು ತುಂಬಲು ವಿಮಾನಯಾನ ಕಂಪನಿಗಳು ದುಬಾರಿ ಟಿಕೆಟ್ ದರವನ್ನು ವಿಧಿಸುತ್ತಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈಗ ನಾಗರಿಕ ವಿಮಾನಯಾನ ನಿರ್ದೇಶನಾಲಯ ದರವನ್ನು ನಿಗದಿ ಪಡಿಸಿದೆ. ಲಾಕ್‍ಡೌನ್ ಘೋಷಣೆಯಾದ ಬಳಿಕ ದೇಶಿಯ ವಿಮಾನ ಸಂಚಾರ ಮೇ 25ರಿಂದ ಆರಂಭವಾಗಲಿದೆ. ವಿಮಾನ ಸೇವೆಗೆ ವಿಮಾನಯಾನ ಸಚಿವಾಲಯ ಗ್ರೀನ್ ಸಿಗ್ನಲ್ ನೀಡುತ್ತಿದ್ದಂತೆ ಕಂಪನಿಗಳು ವಿಮಾನದ ಒಳಗಡೆ ಸಾಮಾಜಿಕ ಆಂತರ ಕಾಪಾಡುವ ನಿಟ್ಟಿನಲ್ಲಿ ದುಬಾರಿ ಟಿಕೆಟ್ ದರ …
Read More »ಪಿಒಕೆ ಭಾರತದ ಭಾಗವೆಂದ ಪಾಕ್………….
ಇಸ್ಲಾಮಾಬಾದ್: ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶ ತನಗೆ ಸೇರಿದ್ದು ಎಂದು ಮೊಂಡುತನ ತೋರುತ್ತಿದ್ದ ಪಾಕಿಸ್ತಾನವು ಸದ್ಯ ಭಾರತದ ಭಾಗವೆಂದು ಘೋಷಿಸಿದೆ. ಇತ್ತೀಚೆಗೆ ಭಾರತದ ಹವಾಮಾನ ಬುಲೆಟಿನ್‍ನಲ್ಲಿ ಗಿಲ್ಗಿಟ್-ಬಾಲ್ಟಿಸ್ತಾನವನ್ನು ಸೇರಿಸಿದಾಗ ಪಾಕಿಸ್ತಾನ ಸಾಕಷ್ಟು ಆಘಾತಕ್ಕೊಳಗಾಗಿತ್ತು. ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಕುರಿತ ತನ್ನ ಹೇಳಿಕೆಯನ್ನು ಅವರು ಪುನರಾವರ್ತಿಸಲು ಪ್ರಾರಂಭಿಸಿತ್ತು. ಜೊತೆಗೆ ಪಾಕ್ ತಮ್ಮ ಹವಾಮಾನ ಬುಲೆಟಿನ್‍ನಲ್ಲಿ ಜಮ್ಮು-ಕಾಶ್ಮೀರ ಮತ್ತು ಲಡಾಕ್ ತಾಪಮಾನವನ್ನು ಹೇಳುವ ಮೂಲಕ ಆಕ್ರೋಶ ಹೊರ ಹಾಕಿತ್ತು. ಆದರೆ ಈಗ ತಾಂತ್ರಿಕ ದೋಷದಿಂದಾಗಿ …
Read More »ಸಾಂಸ್ಥಿಕ ಕ್ವಾರಂಟೈನ್ ಬೇಡ, ಮಲೆನಾಡಲ್ಲಿ ಹೋಂಕ್ವಾರಂಟೈನ್ ಮಾಡಿ: ಶೋಭಾ ಕರಂದ್ಲಾಜೆ
ಚಿಕ್ಕಮಗಳೂರು: ಕರಾವಳಿ ಹಾಗೂ ಮಲೆನಾಡಿನ ಭಾಗದಲ್ಲಿ ಕ್ವಾರಂಟೈನ್‍ಗೆ ಒಳಪಡಿಸುವವರನ್ನು ಹೋಂ ಕ್ವಾರಂಟೈನಲ್ಲಿ ಇರಿಸುವಂತೆ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಮುಂಬೈ ಸೇರಿದಂತೆ ಬೇರೆ ರಾಜ್ಯ ಹಾಗೂ ವಿದೇಶಗಳಿಂದ ಸಾಕಷ್ಟು ಜನ ಬರುತ್ತಿದ್ದಾರೆ. ಇಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಕೂಡ ಹೆಚ್ಚಾಗುತ್ತಿವೆ. ಉಡುಪಿ-ಚಿಕ್ಕಮಗಳೂರು ಎರಡೂ …
Read More »ಮಹಾರಾಷ್ಟ್ರದ ನಂಟು – ಒಂದೇ ಕುಟುಂಬದ ಐವರಿಗೆ ಕೊರೊನಾ………
ರಾಯಚೂರು: ಜಿಲ್ಲೆಗೆ ಮಹಾರಾಷ್ಟ್ರದ ನಂಟಿನ ಶಾಪ ಇನ್ನೂ ಮುಗಿದಿಲ್ಲ. ಇಂದು ಹೊಸ ಐದು ಕೊರೊನಾ ಪಾಸಿಟಿವ್ ಪ್ರಕರಣಗಳು ಬಂದಿವೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 16ಕ್ಕೇರಿದೆ. ಮೇ 16 ರಂದು ಮುಂಬೈನಿಂದ ಬಂದ ರಾಯಚೂರು ತಾಲೂಕಿನ ಕೊರ್ವಿಹಾಳದ ಒಂದೇ ಕುಟುಂಬದ ಐದು ಜನರಿಗೆ ಸೋಂಕು ತಗುಲಿರುವುದು ದೃಢವಾಗಿದೆ. ದೇವಸುಗೂರಿನ ಸಾಂಸ್ಥಿಕ ಕ್ವಾರಂಟೈನ್‍ನಲ್ಲಿದ್ದ ಐವರನ್ನ ರಾಯಚೂರಿನ ಓಪೆಕ್ ಆಸ್ಪತ್ರೆ ಐಸೋಲೇಷನ್ ವಾರ್ಡಿಗೆ ದಾಖಲಿಸಲಾಗಿದೆ. ಐವರಲ್ಲಿ ಮೂವರು ಮಕ್ಕಳಿದ್ದಾರೆ. 12 …
Read More »ತೆಲಂಗಾಣ, ಮುಂಬೈನಿಂದ ಧಾರವಾಡಕ್ಕೆ ಬಂದಿರೋ ಪಾಸಿಟಿವ್ ಪ್ರಕರಣಗಳ ಟ್ರಾವೆಲ್ ಹಿಸ್ಟರಿ
ಧಾರವಾಡ: ಹೊರ ರಾಜ್ಯಗಳಿಂದ ಧಾರವಾಡ ಜಿಲ್ಲೆಗೆ ಆಗಮಿಸಿದ ಐವರಲ್ಲಿ ಕೊರೊನಾ ಸೋಂಕು ಇರುವುದು ಇಂದು ದೃಢಪಟ್ಟಿದ್ದು, ಅವರನ್ನು ರೋಗಿ ಸಂಖ್ಯೆ-1505, ರೋಗಿ ಸಂಖ್ಯೆ-1506, ರೋಗಿ ಸಂಖ್ಯೆ-1507, ರೋಗಿ ಸಂಖ್ಯೆ-1508 ಹಾಗೂ ರೋಗಿ ಸಂಖ್ಯೆ-1509 ಎಂದು ಗುರುತಿಸಲಾಗಿದೆ. ಈ ಐದು ಜನರ ಪ್ರಯಾಣದ ವಿವರವನ್ನು ಜಿಲ್ಲಾಡಳಿತ ಪ್ರಕಟಿಸಿದೆ. ರೋಗಿ ಸಂಖ್ಯೆ-1505 ಹಾಗೂ ರೋಗಿ ಸಂಖ್ಯೆ-1506 ಸಂಖ್ಯೆ ರೋಗಿಗಳು ಹುಬ್ಬಳ್ಳಿ ಶಹರದ ಹಳೆ ಹುಬ್ಬಳ್ಳಿಯ ನಿವಾಸಿಗಳಾಗಿದ್ದಾರೆ. ಇವರು ಕಳೆದ ಮಾರ್ಚ್‍ನಲ್ಲಿ ಹುಬ್ಬಳ್ಳಿಯಿಂದ ವಿಜಯವಾಡ …
Read More »ಕೋವಿಡ್-೧೯ ಸೋಂಕು ತಗುಲಿದ್ದ ಹಿರೇಬಾಗೇವಾಡಿಯ ವ್ಯಕ್ತಿಯೊಬ್ಬರು ಸಂಪೂರ್ಣ ಗುಣಮುಖ..
ಬೆಳಗಾವಿ, -ಕೋವಿಡ್-೧೯ ಸೋಂಕು ತಗುಲಿದ್ದ ಹಿರೇಬಾಗೇವಾಡಿಯ ವ್ಯಕ್ತಿಯೊಬ್ಬರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ ವ್ಯಕ್ತಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ ಬಿಡುಗಡೆ ಹೊಂದಿದವರ ವಿವರ: ಹಿರೇಬಾಗೇವಾಡಿ ಪಿ-483
Read More »