ಅಂಕೋಲದ ಶಿರೂರಿನಲ್ಲಿ ಸಂಭವಿಸಿದ್ದ ಭಯಾನಕ ಭೂಕುಸಿತದ ರಕ್ಷಣಾ ಕಾರ್ಯಾಚರಣೆ ಎಂದೋ ಸ್ಥಗಿತಗೊಂಡಿದೆ. ಆದಾಗ್ಯೂ, ಇನ್ನೂ ಇಬ್ಬರ ಶವ ಪತ್ತೆಯಾಗಿಲ್ಲ. ಅಷ್ಟೇ ಅಲ್ಲ ಅವರ ಕುಟುಂಬದವರಿಗೆ ಮರಣ ಪತ್ರವನ್ನೂ ಆಡಳಿತ ನೀಡದಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಏತನ್ಮಧ್ಯೆ ರಕ್ಷಣಾ ಕಾರ್ಯಾಚರಣೆಯಲ್ಲೂ ಭ್ರಷ್ಟಾಚಾರದ ಆರೋಪ ಕೇಳಿಬಂದಿದ್ದು, ಕೋರ್ಟ್ ಆದೇಶದ ಹೊರತಾಗಿಯೂ ಎಸ್ಪಿ ವಿರುದ್ಧ ಕೇಸ್ ದಾಖಲಿಸಿದ್ದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಕಾರವಾರ, ಡಿಸೆಂಬರ್ 11: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರಿನಲ್ಲಿ ಸಂಭವಿಸಿದ ಭೀಕರ …
Read More »10 ಭ್ರಷ್ಟ ಅಧಿಕಾರಿಗಳ ಆಸ್ತಿ, ಹಣ, ಚಿನ್ನ ಕಂಡು ಲೋಕಾಯುಕ್ತರೇ ಬೆರಗು,
ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕದಾದ್ಯಂತ 10 ಭ್ರಷ್ಟ ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ, ಚಿನ್ನ ಪತ್ತೆಯಾಗಿತ್ತು. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಗದಗ, ಕಲಬುರಗಿ, ರಾಯಚೂರು, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ದಾಳಿ ನಡೆದಿದೆ. ಡಿಹೆಚ್‌ಒ ಸುನಿಲ್ ಕುಮಾರ್ ಮತ್ತು ಡಿವೈಎಸ್ಪಿ ನಂಜುಂಡಯ್ಯ ಅವರ ಆಸ್ತಿಗಳ ಮೌಲ್ಯ ಅತಿ ಹೆಚ್ಚಾಗಿದೆ. ಡಿಸೆಂಬರ್ 11: ಮಂಗಳವಾರ (ಡಿಸೆಂಬರ್ 10) ಬೆಳ್ಳಂಬೆಳಗ್ಗೆ ಲೋಕಾಯುಕ್ತ (Lokayukta) ಅಧಿಕಾರಿಗಳು …
Read More »ಸುವರ್ಣ ಸೌಧ, ಎಲ್ಲೆಡೆ ಪೊಲೀಸ್ ಸರ್ಪಗಾವಲು
ಬೆಳಗಾವಿ: ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯವು 2ಎ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟ ಉಗ್ರರೂಪ ಪಡೆದುಕೊಂಡಿದೆ ಮತ್ತು ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ನಡೆಸಿದ್ದರಿಂದ ಹಲವಾರು ಜನರಿಗೆ ರಕ್ತದ ಗಾಯಗಳಾಗಿವೆ. ಇದೇ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಹೆಚ್ಚು ಉದ್ರಿಕ್ತರಾಗಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವ ಸಾಧ್ಯತೆ ಇರುವುದರಿಂದ ಪೊಲೀಸ್ ಬಲ ಮತ್ತು ಭದ್ರತೆಯನ್ನು ಹೆಚ್ಚಿಸಲಾಗಿದೆ. ಪ್ರತಿಭಟನಾಕಾರರು ಇಲ್ಲಿಂದ ಕೇವಲ ಒಂದು ಕಿಮೀ ದೂರದಲ್ಲಿ ಪ್ರತಿಭಟನೆ ನಡೆಸುತ್ತಿರುವುದರಿಂದ …
Read More »ಹಿಂಸಾಚಾರಕ್ಕೆ ತಿರುಗಿದ್ದು ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್
ಬೆಳಗಾವಿ: ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದ ಪಂಚಮಸಾಲಿ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಇಂದು ಮಧ್ಯಾಹ್ನ ಸುವರ್ಣ ಸೌಧ ಮುತ್ತಿಗೆ ಹಾಕಲು ಬಂದ ಹೋರಾಟಗಾರರನ್ನು ಪೊಲೀಸರು ದಾರಿಯಲ್ಲೇ ತಡೆದಿದ್ದಾರೆ. ಮುತ್ತಿಗೆ ಹಾಕಲು ಅನುಮತಿ ನೀಡುವುದಿಲ್ಲ ಎಂದು ಪೊಲೀಸರು ತಿಳಿಸಿದರೂ ಪ್ರತಿಭಟನಾಕಾರರು ಪಟ್ಟುಹಿಡಿದಿದ್ದಾರೆ.ಈ ವೇಳೆ ತಳ್ಳಾಟ ನೂಕಾಟ ನಡೆದಿದೆ. ಈ ಸಂದರ್ಭದಲ್ಲಿ ಪೊಲೀಸರ ಮೇಲೆಯೇ ಚಪ್ಪಲಿ, ಕಲ್ಲು ಬಿದ್ದಿದೆ. ಮ್ಮ ಮೇಲೆಯೇ ಕಲ್ಲುತೂರಿದ್ದಕ್ಕೆ ಸಿಟ್ಟಾದ …
Read More »ಸಂಘರ್ಷದ ಸ್ವರೂಪ ಪಡೆದ ಪಂಚಮಸಾಲಿ ಸಮಾಜದ ಹೋರಾಟ,
ಸಂಘರ್ಷದ ಸ್ವರೂಪ ಪಡೆದ ಪಂಚಮಸಾಲಿ ಸಮಾಜದ ಹೋರಾಟ, ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನ, ಕಲ್ಲು ತೂರಾಟ, ಲಾಠಿ ಪ್ರಹಾರ, ಹಲವರಿಗೆ ಗಾಯ, ಪಂಚಮಸಾಲಿ ಮುಖಂಡರು ಪೋಲೀಸರ ವಶಕ್ಕೆ, ಒಂದು ಗಂಟೆಗೂ ಹೆಚ್ಚು ಸಮಯ ರಾಷ್ಡ್ರೀಯ ಹೆದ್ದಾರಿ ಬಂದ್ಪಂಚಮಸಾಲಿ ಹೋರಾಟಗಾರ ಮೇಲೆ ಲಾಠಿ ಚಾರ್ಜ್: 20 ಪೊಲೀಸರು 50 ಜನರಿಗೆ ಗಾಯ; ಹಲವು ನಾಯಕರ ಬಂಧನಬೆಳಗಾವಿಯಲ್ಲಿ ವಾಹನ, ಪೊಲೀಸರ ಮೇಲೆ ಕಲ್ಲು ತೂರಾಟ, ಹಲವರಿಗೆ ಗಾಯ
Read More »ನಾನು ಎಂದಿಗೂ ಪಂಚಮಸಾಲಿ ಸಮುದಾಯದ ಪರ: ಹೆಬ್ಬಾಳಕರ್…!!
ಬೆಳಗಾವಿ : ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ನಾನು ಎಂದಿಗೂ ಸಮುದಾಯದ ಪರ ನಿಲ್ಲುತ್ತೇನೆ. ಅಧಿಕಾರಕ್ಕಿಂತ ಸಮಾಜದ ಹಿತಾಸಕ್ತಿ ಮುಖ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಸುವರ್ಣ ಸೌಧದ ಮುಂಭಾಗ ಮಂಗಳವಾರ ನಡೆದ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸಮಾಜ ಹಾಗೂ ವಕೀಲರ ಪ್ರತಿಭಟನೆಯಲ್ಲಿ …
Read More »ಮಾಜಿ ಸಿಎಂ ಕೃಷ್ಣ ವಿಧಿವಶ- ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ
ಮಾಜಿ ಸಿಎಂ ಕೃಷ್ಣ ವಿಧಿವಶ- ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ ಗೋಕಾಕ- ಪದ್ಮ ವಿಭೂಷಣ, ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ (೯೩) ಅವರ ನಿಧನಕ್ಕೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ. ನಗುಮುಖದ ಮೂಲಕ ತಮ್ಮದೇಯಾದ ವಿಶಿಷ್ಟ ಶೈಲಿಯ ರಾಜಕಾರಣದ ಮೂಲಕ ಗಮನ ಹರಿಸಿದ್ದ ಎಸ್.ಎಂ.ಕೃಷ್ಣ ಅವರು ರಾಜ್ಯದ ಮುಖ್ಯಮಂತ್ರಿಯಾಗಿ, ಸ್ಪಿಕರ್ ಆಗಿ, ಕೇಂದ್ರದ ಮಂತ್ರಿಯಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು. …
Read More »ಬೆಳಗಾವಿ-ಶಬರಿಮಲೆ ಕೊಲ್ಲಂ ನಡುವೆ ವಿಶೇಷ ರೈಲು
ಬೆಳಗಾವಿ: ಬೆಳಗಾವಿ-ಶಬರಿಮಲೆ ಕೊಲ್ಲಂ ನಡುವೆ ವಿಶೇಷ ರೈಲು ಸಂಚಾರಕ್ಕೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಸೋಮವಾರ ಡಿ-09 ರಂದು ಬೆಳಗಾವಿ ರೈಲು ನಿಲ್ದಾಣದಲ್ಲಿ ಬೆಳಗಾವಿಯಿಂದ ಶಬರಿಮಲೆಗೆ ತೆರಳುವ ವಿಶೇಷ ರೈಲು ಸಂಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು ದೇಶದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ಕರ್ನಾಟಕದಿಂದ ಪ್ರತಿ ವರ್ಷ ಲಕ್ಷಾಂತರ ಭಕ್ತರು ಯಾತ್ರೆ ಕೈಗೊಳ್ಳುತ್ತಾರೆ. ಜಿಲ್ಲೆಯಿಂದಲೂ …
Read More »ಎಸ್.ಎಂ. ಕೃಷ್ಣ ಅವರ ಅಗಲಿಕೆಯ ಸುದ್ದಿ ತೀವ್ರ ನೋವುಂಟು ಮಾಡಿದೆ; ಸತೀಶ್ ಜಾರಕಿಹೊಳಿ
ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಸಚಿವರಾಗಿಯೂ ಮಹಾರಾಷ್ಟ್ರದ ರಾಜ್ಯಪಾಲರಾಗಿಯೂ ಅನೇಕ ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಪದ್ಮವಿಭೂಷಣ ಪುರಸ್ಕೃತ ಹಿರಿಯ ರಾಜಕಾರಣಿ ಶ್ರೀ ಎಸ್.ಎಂ. ಕೃಷ್ಣ ಅವರ ಅಗಲಿಕೆಯ ಸುದ್ದಿ ತೀವ್ರ ನೋವುಂಟು ಮಾಡಿದೆ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬ ವರ್ಗಕ್ಕೆ ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ಸಿಗಲಿ ಎಂದು ಈ ಮೂಲಕ ನನ್ನ ಸಂತಾಪಗಳನ್ನು ಸೂಚಿಸುತ್ತೇನೆ.
Read More »ಎಂಇಎಸ್ಗೆ ಸಿಎಂ ಖಡಕ್ ಎಚ್ಚರಿಕೆ
ಬೆಳಗಾವಿ, ಡಿಸೆಂಬರ್ 09: ಬೆಳಗಾವಿ ಕೇಂದ್ರಾಡಳಿತ ಪ್ರದೇಶ ಆಗಬೇಕೆಂಬ ಆದಿತ್ಯ ಠಾಕ್ರೆ ಹೇಳಿಕೆಗೆ ಬೆಳಗಾವಿ ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಕಿಡಿಕಾರಿದ್ದಾರೆ. ಆದಿತ್ಯ ಠಾಕ್ರೆ ಬಾಲಿಶತನದ ಹೇಳಿಕೆ ನೀಡಿದ್ದಾರೆ. ಮಹಾಜನ್ ವರದಿಯೇ ಅಂತಿಮ. ಬೆಳಗಾವಿ ಕೇಂದ್ರಾಡಳಿತ ಪ್ರದೇಶ ಮಾಡೋಕಾಗುತ್ತಾ? ಮಹಾಜನ್ ವರದಿಯನ್ನ ಒಪ್ಪಿಕೊಳ್ಳಬೇಕು. ಎಂಇಎಸ್ ಹೋರಾಟ ವಿಚಾರವಾಗಿ ಮಾತನಾಡಿದ್ದು, ಎಂಇಎಸ್ ಹೋರಾಟ ಮಾಡಿದರೆ ನಾವು ಸುಮ್ಮನೆ ಇರಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.
Read More »