ರಾಯಚೂರು: ಗ್ರೀನ್ ಝೋನ್ ನಲ್ಲಿದ್ದ ರಾಯಚೂರು ಜಿಲ್ಲೆಯಾದ್ಯಂತ ಭಾನುವಾರ ರಾತ್ರೋರಾತ್ರಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮೇ 31ರವರೆಗೆ ನಿಷೇಧಾಜ್ಞೆ ನಿಷೇಧಾಜ್ಞೆ ಮುಂದುವರಿಸಿ ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಸಂಜೆ 7 ರಿಂದ ಬೆಳಗ್ಗೆ 7ರವರೆಗೆ ಜನರು ಓಡಾಡದಂತೆ ಎಚ್ಚರಿಕೆ ನೀಡಲಾಗಿದೆ. ಂಮಹಾರಾಷ್ಟ್ರದ ಮುಂಬೈ ನಂಟಿನಿಂದ ರಾಯಚೂರಿನಲ್ಲಿ ಆತಂಕ ಸೃಷ್ಟಿಯಾಗಿದೆ. ಮುಂಬೈನಿಂದ ಬಂದ 6 ಮಂದಿಯಲ್ಲಿ ಕೊರೊನಾ ಇರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಕ್ವಾರಂಟೈನ್ ಕೇಂದ್ರಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಮಧ್ಯಾಹ್ನ …
Read More »ಕೊರೊನಾ ವಿಶೇಷ ಪ್ಯಾಕೇಜ್ ಕನ್ನಡಿಯೊಳಗಿನ ಗಂಟು: ಸಿದ್ದರಾಮಯ್ಯ ವ್ಯಂಗ್ಯ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಆತ್ಮನಿರ್ಭರಭಾರತ ಯೋಜನೆಯಡಿಯಲ್ಲಿ ಘೋಷಿಸಿರುವ ಕೊರೊನಾ ವಿಶೇಷ ಪ್ಯಾಕೇಜ್ ಕನ್ನಡಿಯೊಳಗಿನ ಗಂಟು ಆಗಿದ್ದು, ಹಳೆ ಸರಕಿಗೆ ಹೊಸ ಹೊದಿಕೆ ಹೊದಿಸಿದಂತಾಗಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. 20 ಲಕ್ಷ ಕೋಟಿ ರೂ. ಪ್ಯಾಕೇಜ್ ನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಐದು ಕಂತುಗಳಾಗಿ ಹಂಚಿದರು. ಈ ಕುರಿತು ಸಹ ಟ್ವೀಟ್ ಮಾಡಿರುವ ಸಿದ್ದರಾಮಯ್ಯನವರು ತಮ್ಮದೇ ಲೆಕ್ಕಾಚಾರವನ್ನು ಜನರ ಮುಂದಿಟ್ಟಿದ್ದಾರೆ. 20 …
Read More »ಹುಬ್ಬಳ್ಳಿಯ ಪಾರ್ಲೆ ಬಿಸ್ಕೆಟ್ ಕಂಪನಿ 53 ಸಾವಿರ ಬಿಸ್ಕೆಟ್ ಪೊಟ್ಟಣಗಳನ್ನು ದಾನವಾಗಿ ನೀಡಿದೆ.
ಹುಬ್ಬಳ್ಳಿ: ಕೊರೊನಾ ವೈರಸ್ ಹಿನ್ನೆಲೆ ಹಲವು ಕಂಪನಿಗಳು ಹಾಗೂ ಧನಿಕರು ಹಲವು ರೀತಿಯಲ್ಲಿ ಸಹಾಯ ಮಾಡುತ್ತಿದ್ದು, ಹುಬ್ಬಳ್ಳಿಯ ಪಾರ್ಲೆ ಬಿಸ್ಕೆಟ್ ಕಂಪನಿ 53 ಸಾವಿರ ಬಿಸ್ಕೆಟ್ ಪೊಟ್ಟಣಗಳನ್ನು ದಾನವಾಗಿ ನೀಡಿದೆ. ಹುಬ್ಬಳ್ಳಿಯ ಗೋಕುಲ ಕೈಗಾರಿಕಾ ಪ್ರದೇಶದಲ್ಲಿರುವ ತಯಾರಿಕಾ ಘಟಕದಲ್ಲಿ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ಕಂಪನಿ ವತಿಯಿಂದ ಸಾಂಕೇತಿಕವಾಗಿ ಬಿಸ್ಕೆಟ್ ಪೊಟ್ಟಣ ನೀಡಲಾಯಿತು. ಒಟ್ಟು 53 ಸಾವಿರ …
Read More »ಬಸ್ ಸಂಚಾರ ಪುನರಾರಂಭಕ್ಕೆ ಹುಬ್ಬಳ್ಳಿ ಸಾರಿಗೆ ವಿಭಾಗದಲ್ಲಿ ಸಿದ್ಧತೆಗಳು ಪೂರ್ಣಗೊಂಡಿವೆ.
ಹುಬ್ಬಳ್ಳಿ: ಬಸ್ ಸಂಚಾರ ಪುನರಾರಂಭಕ್ಕೆ ಹುಬ್ಬಳ್ಳಿ ಸಾರಿಗೆ ವಿಭಾಗದಲ್ಲಿ ಸಿದ್ಧತೆಗಳು ಪೂರ್ಣಗೊಂಡಿವೆ. ಬಸ್ ಸಂಚಾರ ಪುನರಾರಂಭಿಸಲು ರಾಜ್ಯ ಸರ್ಕಾರದಿಂದ ನಿರ್ದೇಶನಗಳು ಬಂದ ನಂತರ ಮಾರ್ಗದರ್ಶಿ ಸೂಚನೆಗಳ ಪ್ರಕಾರ ಎಲ್ಲಾ ಸುರಕ್ಷತಾ ಕ್ರಮಗಳೊಂದಿಗೆ ಬಸ್ಸುಗಳನ್ನು ರಸ್ತೆ ಗಿಳಿಸಲು ಹುಬ್ಬಳ್ಳಿ ಸಾರಿಗೆ ವಿಭಾಗದಲ್ಲಿ ಎಲ್ಲಾ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ವಿಭಾಗದಲ್ಲಿ 2166 ಸಿಬ್ಬಂದಿಗಳಿದ್ದು ಎಲ್ಲರಿಗೂ ಕರ್ತವ್ಯಕ್ಕೆ ಸಿದ್ಧರಾಗಿರುವಂತೆ ಸೂಚಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ್ ತಿಳಿಸಿದ್ದಾರೆ. ಈಗಾಗಲೇ ಹುಬ್ಬಳ್ಳಿ ಹಳೆ ಬಸ್ ನಿಲ್ದಾಣ, …
Read More »ಸಿಡಿಲು ಬಡಿದು ಮನೆಯಲ್ಲಿ ಕುಳಿತಿದ್ದ ಯುವಕ ಸಾವು……….
ಉಡುಪಿ: ಭಾನುವಾರ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಜನರ ಜೀವನ ಅಸ್ತವ್ಯಸ್ತವಾಗಿದೆ. ಜಿಲ್ಲೆಯಲ್ಲೂ ಭಾರೀ ಗುಡುಗು ಸಹಿತ ಮಳೆಯಾಗಿದ್ದು, ಪರಿಣಾಮ ಸಿಡಿಲು ಬಡಿದು ಯುವಕ ಮೃತಪಟ್ಟಿರುವ ಘಟನೆ ನಡೆದಿದೆ. ಕಾಪು ತಾಲೂಕಿನ ಕಟಪಾಡಿ ಏಣಗುಡ್ಡೆಯಲ್ಲಿ ಈ ಘಟನೆ ನಡೆದಿದ್ದು, ಕಟಪಾಡಿ ಏಣಗುಡ್ಡೆ ನಿವಾಸಿ ಭರತ್ (22) ಮೃತ ಯುವಕ. ಮೃತ ಭರತ್ ಸಿಡಿಲು ಸಹಿತ ಮಳೆ ಬರುವಾಗ ಮನೆಯಲ್ಲಿ ಕುಳಿತಿದ್ದನು. ಆದರೂ ಸಿಡಿಲು ಬಡಿದು ಯುವಕ …
Read More »ಬೆಳಗಾವಿ,-ಕೋವಿಡ್-೧೯ ಸೋಂಕು ತಗುಲಿದ್ದ 9 ಜನರು ಸಂಪೂರ್ಣ ಗುಣಮುಖ
ಬೆಳಗಾವಿ,-ಕೋವಿಡ್-೧೯ ಸೋಂಕು ತಗುಲಿದ್ದ 9 ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 9 ಜನರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ ಬಿಡುಗಡೆ ಹೊಂದಿದವರ ವಿವರ: ಪಿ-298 ಪಿ-418 ಪಿ- 448 ಪಿ-484 ಪಿ-495 ಪಿ-496 ಪಿ-541 ಪಿ-542 ಪಿ-551
Read More »6609 ಜನರ ವರದಿ ಕೊರೊನಾ ನೆಗೆಟಿವ್ ನಾಳೆ146 ಜನರ ವರದಿ ನಿರೀಕ್ಷೆಯಲ್ಲಿ ಜಿಲ್ಲಾಡಳಿತ
ಬೆಳಗಾವಿ- ನಾಳೆ 146 ಕೊರೊನಾ ಶಂಕಿತರ ವರದಿ ನಿರೀಕ್ಷೆಯಲ್ಲಿ ಬೆಳಗಾವಿ ಜಿಲ್ಲಾಡಳಿತವಿದ್ದು ಬೆಳಗಾವಿ ಜಿಲ್ಲಾಡಳಿತದಿಂದ ಹೆಲ್ತ್ ಬುಲೆಟಿನ್ ರಿಲೀಸ್ ಆಗಿದೆ. ಬೆಳಗಾವಿ ಜಿಲ್ಲೆಯಲ್ಲಿ 50 ಆಕ್ಟಿವ್ ಕೊರೊನಾ ಪಾಸಿಟಿವ್ ಕೇಸ್ ಗಳಿವೆ, ಬೆಳಗಾವಿ ಜಿಲ್ಲೆಯಲ್ಲಿ ಈವರೆಗೂ 8281 ಜನರ ಮೇಲೆ ಆರೋಗ್ಯ ಇಲಾಖೆ ನಿಗಾ ವಹಿಸಿದೆ. ಒಟ್ಟು 78 ಜನರಿಗೆ 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಒಟ್ಟು 50 ಜನರಿಗೆ ಬೆಳಗಾವಿಯ ಬೀಮ್ಸ್ ಆಸ್ಪತ್ರೆಯಲ್ಲಿ ಐಸೋಲೇಟ್ ಮಾಡಲಾಗಿದೆ. …
Read More »ರಾಜ್ಯದಲ್ಲಿ ಇನ್ನೆರಡು ದಿನ ಲಾಕ್‍ಡೌನ್ 3.0 ಮುಂದುವರಿಕೆ
ಬೆಂಗಳೂರು : ಸೋಮವಾರದಿಂದ ಜನಜೀವನ ಸಹಜ ಸ್ಥಿತಿಗೆ ಬರಬಹುದೆಂಬ ನಿರೀಕ್ಷೆ ಮತ್ತೆ ಹುಸಿಯಾಗಿದ್ದು, ರಾಜ್ಯದಲ್ಲಿ ಎರಡು ದಿನ ಲಾಕ್‍ಡೌನ್ ಮುಂದುವರಿಸಿ ಸರ್ಕಾರ ಆದೇಶ ನೀಡಿದೆ. ಈ ಹಿಂದಿನ ಮಾರ್ಗಸೂಚಿಗಳಂತೆ ಮೇ 19ರವರೆಗೆ ಬಸ್, ಆಟೋ, ಟ್ಯಾಕ್ಸಿ ಸಂಚಾರವಿರಲ್ಲ ಮತ್ತು ಮಾಲ್, ಥಿಯೇಟರ್, ಶಾಲಾ, ಕಾಲೇಜ್, ದೇವಸ್ಥಾನ, ಮಸೀದಿ, ಚರ್ಚ್ ಈ ಹಿಂದಿನಂತೆ ಬಂದ್ ಆಗಲಿವೆ. ಮುಂದಿನ ಆದೇಶ ಬರುವ ತನಕ ಅಥವಾ ಮೇ 19ರ ರಾತ್ರಿ 12 ಗಂಟೆಯ ತನಕ …
Read More »ಶ್ರೀ ಜಗದೀಶ್ ಶೆಟ್ಟರ್ ರಾಜ್ಯ ಸಚಿವರ ನೇತೃತ್ವದಲ್ಲಿ ಆಶಾ ಕಾರ್ಯಕರ್ತರಿಗೆ ಸನ್ಮಾನ
ಹುಬ್ಬಳ್ಳಿ: ಮಾನ್ಯ ಶ್ರೀ ಜಗದೀಶ್ ಶೆಟ್ಟರ್ ರಾಜ್ಯ ಸಚಿವರ ನೇತೃತ್ವದಲ್ಲಿ ವಾರ್ಡ್ ನಂಬರ್ 47 ರಲ್ಲಿ ಬರುವ ಸುವಿಧಾ ಅನೆಕ್ಸ್ ಅಪಾರ್ಟ್ಮೆಂಟ್ಸ್ ನಲ್ಲಿ ಆಶಾ ಕಾರ್ಯಕರ್ತರಿಗೆ ಸನ್ಮಾನ ಮಾಡಲಾಯಿತು. ಮತ್ತು ಈ ಕಾರ್ಯಕ್ರಮದಲ್ಲಿ ಅಪಾರ್ಟ್ಮೆಂಟ್ಗಳಿಗೆ ಸ್ಯಾನಿಟೈಸರ್ ಸ್ಟ್ಯಾಂಡ್ ಗಳನ್ನು ವಿತರಿಸಲಾಯಿತು . ರಾಜ್ಯ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾದ ಶ್ರೀ ಮಹೇಂದ್ರ ಕೌತಾಳ್ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ತೆಂಗಿನಕಾಯಿ ಹಾಗೂ ಹುಡಾ ಅಧ್ಯಕ್ಷರಾದ ನಾಗೇಶ್ ಕಲಬುರ್ಗಿ ಮಲ್ಲಿಕಾರ್ಜುನ್ ಸಹಕಾರ …
Read More »ಎಪಿಎಂಸಿ ಕಾಯ್ದೆ ವಿರೋಧಿಸುವವರು ಚರ್ಚೆಗೆ ಬರಲಿ: ಸಚಿವ ಸಿ.ಟಿ.ರವಿ
ಚಿಕ್ಕಮಗಳೂರು: ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸುವವರಿಗೆ ಸಚಿವ ಸಿ.ಟಿ.ರವಿ ಸಾರ್ವಜನಿಕ ಚರ್ಚೆಗೆ ಆಹ್ವಾನ ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ವಿರೋಧಕ್ಕಾಗಿ ವಿರೋಧ ಮಾಡೋದು ಅರ್ಥಹೀನ. 2003ರಲ್ಲಿ ಡ್ರಾಫ್ಟ್ ಆಯ್ತು. ಯುಪಿಎ ಸರ್ಕಾರದ ಅವಧಿಯಲ್ಲಿ ಆ ಡ್ರಾಫ್ಟ್ ನ ಪರಿಷ್ಕರಣೆ ಮಾಡಿ ಮಾಡೆಲ್ ಡ್ರಾಫ್ಟ್ ಆದ ಬಳಿಕ 16 ರಾಜ್ಯಗಳು ಅದನ್ನು ಒಪ್ಪಿಕೊಂಡವು. ಈಗ ಅದನ್ನು ಇನ್ನಷ್ಟು ಸುಧಾರಣೆ ಮಾಡಿ ರೈತ ಸ್ನೇಹಿಯಾಗಿ ಹೊಸ ಕಾಯ್ದೆಯನ್ನು ಜಾರಿಗೆ …
Read More »