Breaking News

ಕೊರೊನಾ ಆತಂಕ- ಮಗುವಿಗೆ ಹಾಲುಣಿಸುವ ಮುನ್ನ ತಾಯಂದಿರು ತೆಗೆದುಕೊಳ್ಳಬೇಕಾದ ಕ್ರಮಗಳು

ಬೆಂಗಳೂರು: ಕೊರೊನಾ ಆತಂಕ ಮಾತ್ರ ಕಡಿಮೆ ಆಗುತ್ತಲೇ ಇಲ್ಲ. ಪಕ್ಕದ ಬೀದಿಯಲ್ಲಿ ಬಂತು, ಮನೆಯ ಹಿಂದೆಯ ನಿವಾಸಿಗೆ ಸೋಂಕು ತಗುಲಿತು ಎಂಬ ವಿಷಯಗಳನ್ನು ನೀವು ಕೇಳಿರುತ್ತೀರಿ. ಕೊರೊನಾ ಭಯ ಬೇಡ ಮುಂಜಾಗ್ರತೆ ಇರಲಿ ಎಂದು ತಜ್ಞರು ಸೇರಿದಂತೆ ಸರ್ಕಾರ ಸಲಹೆಗಳನ್ನು ನೀಡುತ್ತಾ ಬಂದಿದೆ. ಆರೋಗ್ಯ ಇಲಾಖೆ ಸಹ ಕೊರೊನಾಗೆ ಸಂಬಂಧಿಸಿದ ಮಾಹಿತಿಯನ್ನು ಸಾರ್ವಜನಿಕರು ನೀಡುವ ಪ್ರಯತ್ನವನ್ನು ಮಾಡುತ್ತಿದೆ. ಮನೆಯಲ್ಲಿ ಮಕ್ಕಳು ಮತ್ತು ಹಿರಿಯರು ಇದ್ರೆ ಹೆಚ್ಚು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು …

Read More »

ಮಧ್ಯಪ್ರದೇಶ ರಾಜ್ಯಪಾಲ ಲಾಲ್‍ಜಿ ಟಂಡನ್ (85) ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಲಖನೌ: ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಧ್ಯಪ್ರದೇಶ ರಾಜ್ಯಪಾಲ ಲಾಲ್‍ಜಿ ಟಂಡನ್ (85) ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಲಖನೌನ ಮೆದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಜೂನ್ 11 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಉಸಿರಾಟದ ತೊಂದರೆ, ಜ್ವರ ಮತ್ತು ಮೂತ್ರಕೋಶದ ತೊಂದರೆಯಿಂದ ಬಳಲುತ್ತಿದ್ದರು. ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಕಾರಣ ಸೋಮವಾರ ಲಾಲ್‍ಜಿ ಟಂಡನ್ ಅವರನ್ನು ವೆಂಟಿಲೇಟರ್ ನಲ್ಲಿ ಇಡಲಾಗಿತ್ತು. ಅಲ್ಲದೇ ಸಣ್ಣ ಶಸ್ತ್ರಚಿಕಿತ್ಸೆಯನ್ನೂ ಮಾಡಲಾಗಿತ್ತು ಎಂಬ ಮಾಹಿತಿ ಲಭಿಸಿದೆ.  ಸದ್ಯ …

Read More »

ದುಬೆ ಸತ್ತಿದ್ದು ಪೊಲೀಸರ ಗುಂಡೇಟಿನಿಂದಲ್ಲ – ಮರಣೋತ್ತರ ವರದಿ ಹೇಳಿದ್ದೇನು?

ಲಕ್ನೋ: ಪೊಲೀಸ್ ಎನ್‍ಕೌಂಟರ್ ನಲ್ಲಿ ಸಾವನ್ನಪ್ಪಿದ ಗ್ಯಾಂಗ್‍ಸ್ಟರ್ ವಿಕಾಸ್ ದುಬೆಯ ಮರಣೋತ್ತರ ಪರೀಕ್ಷೆ ಬಂದಿದ್ದು, ವರದಿಯಲ್ಲಿ ಆತ ಪೊಲೀಸರ ಗುಂಡೇಟಿನಿಂದ ಸಾನ್ನಪ್ಪಿಲ್ಲ ಎಂದು ತಿಳಿದು ಬಂದಿದೆ. ಜುಲೈ 2ರಂದು ರಾತ್ರಿ ಪೊಲೀಸರ ತಂಡ 60 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ವಿಕಾಸ್ ದುಬೆಯನ್ನು ಬಂಧಿಸಲೆಂದು ದಿಕ್ರು ಗ್ರಾಮಕ್ಕೆ ತೆರಳಿತ್ತು. ಈ ವಿಚಾರ ಮೊದಲೇ ತಿಳಿದಿದ್ದ ವಿಕಾಸ್ ದುಬೆ ಬೆಂಬಲಿಗರು ರಸ್ತೆಗೆ ಅಡ್ಡಲಾಗಿ, ಕಲ್ಲು ಹಾಗೂ ಇಟ್ಟಿಗೆಗಳನ್ನು ಇಟ್ಟಿದ್ದರು. ಇದನ್ನು ತೆರವುಗೊಳಿಸಿ ಪೊಲೀಸರು …

Read More »

ಹಿಂದೂ ಸಂಪ್ರದಾಯದಂತೆ ಪತಿಗೆ ಪತ್ನಿ ಪಾದಪೂಜೆ………..

ಬೆಂಗಳೂರು: ಭೀಮನ ಅಮಸ್ಯೆ ದಂಪತಿಗೆ ಪವಿತ್ರ ದಿನವಾಗಿದ್ದು, ಹಿಂದೂ ಸಂಪ್ರದಾಯದಂತೆ ಪತಿಗೆ ಪತ್ನಿ ಪಾದಪೂಜೆ ಮಾಡುತ್ತಾರೆ. ಈ ಕ್ಷಣಗಳನ್ನು ನೆನಪಿರಲಿ ಪ್ರೇಮ್ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ, ಪತ್ನಿಯ ಪಾದ ಪೂಜೆಯಿಂದ ಜಾಕ್‍ಪಾಟ್ ಹೊಡಿಯಲಿದೆ ಎಂದು ಬರೆದಿದ್ದಾರೆ. ಈ ಕುರಿತು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿ ಸುಂದರ ಕ್ಷಣಗಳನ್ನು ಪ್ರೇಮ್ ಹಂಚಿಕೊಂಡಿದ್ದಾರೆ. ಇದಕ್ಕೆ ಸಾಲುಗಳನ್ನು ಬರೆದಿರುವ ಅವರು, ನಿನ್ನ ಪ್ರೀತ್ಸಿದ್ಮೇಲೆ ಆಯಸ್ಸು ಜಾಸ್ತಿ ಆಯಿತು. ಮದುವೆ ಆದ್ಮೇಲೆ ಅದೃಷ್ಟ ಕುಲಾಯಿಸ್ತು. …

Read More »

S.D.M.&K.I.M.S. ಫುಲ್ ಖಾಸಗಿ ಆಸ್ಪತ್ರೆಗಳಿಗೆ ಶೆಟ್ಟರ್ ಮನವಿ

ಧಾರವಾಡ: ಜಿಲ್ಲೆಯಲ್ಲಿ ಲಾಕ್‍ಡೌನ್ ಮುಂದುವರಿಸುವ ಬಗ್ಗೆ ಗಮನಿಸಬೇಕಿದೆ. ಜಿಲ್ಲೆಯಲ್ಲಿ ಇನ್ನೂ 24ರ ವರೆಗೆ ಲಾಕ್‍ಡೌನ್ ಇದೆ. ಗುರುವಾರ ಕ್ಯಾಬಿನೆಟ್ ಸಭೆ ಇದೆ ಅಲ್ಲಿಯೂ ಚರ್ಚಿಸುತ್ತೇವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು. ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅಧಿಕಾರಿಗಳ ಹಾಗೂ ಶಾಸಕರ ಸಭೆ ನಡೆಸಿದರು. ಸಭೆಯ ನಂತರ ಮಾತನಾಡಿದ ಅವರು, …

Read More »

ಪತಿಯನ್ನು ಕೊಲೆಗೈದ ಪತ್ನಿಗೆ ಕೊರೊನಾ- 13 ಪೊಲೀಸರು ಕ್ವಾರಂಟೈನ್‌

ಬೆಂಗಳೂರು: ಕೊಲೆ ಆರೋಪಿಗೆ ಕೋವಿಡ್‌ 19 ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಅಮೃತಹಳ್ಳಿ ಪೊಲೀಸ್ ಠಾಣೆಯ 13 ಮಂದಿ ಪೊಲೀಸರು ಕ್ವಾರಂಟೈನ್ ಆಗಿದ್ದಾರೆ. ಜೂನ್‌ 9 ರಂದು ಪ್ರಿಯರ ಅಭಿಷೇಕ್ ಜೊತೆಗೆ ಸೇರಿ ಗಂಡ ಹರೀಶ್‌ನನ್ನು ಪತ್ನಿ ಕೃಪಾ ಕೊಲೆ ಅಮೃತಹಳ್ಳಿಯಲ್ಲಿ ಮಾಡಿಸಿದ್ದಳು. ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಹಿನ್ನೆಲೆಯಲ್ಲಿ ಇಬ್ಬರು ಸೇರಿ ಹರೀಶ್‌ನನ್ನು ಕೊಲೆ ಮಾಡಿಸಿದ್ದಳು. ಕೊಲೆ ಮಾಡಿದ ಬಳಿಕ ಗಂಡ ಕಾಣೆಯಾಗಿದ್ದಾನೆ ಅಂತಾ ಪೊಲೀಸ್ ಠಾಣೆಗೆ ಕೃಪಾ …

Read More »

ಗೂಗ್ಲಿ ಸಿನಿಮಾ ತೆರೆಕಂಡ ನಿನ್ನೆಗೆ 7 ವರ್ಷವಾಗಿದೆ. ಈ ಸಮಯದಲ್ಲಿ ಚಿತ್ರತಂಡ ಸಿನಿಮಾದ ಯಶಸ್ಸನ್ನು ನೆನಪಿಸಿಕೊಂಡಿದೆ.

ಬೆಂಗಳೂರು: ಪವನ್ ಒಡೆಯರ್ ನಿರ್ದೇಶನ, ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬ್ಲಾಕ್ ಬಸ್ಟರ್ ಚಿತ್ರ ಗೂಗ್ಲಿ ಸಿನಿಮಾ ತೆರೆಕಂಡ ನಿನ್ನೆಗೆ 7 ವರ್ಷವಾಗಿದೆ. ಈ ಸಮಯದಲ್ಲಿ ಚಿತ್ರತಂಡ ಸಿನಿಮಾದ ಯಶಸ್ಸನ್ನು ನೆನಪಿಸಿಕೊಂಡಿದೆ. 2013ರ ಜುಲೈ 19ರಂದು ಗೂಗ್ಲಿ ಸಿನಿಮಾ ತೆರೆಕಂಡಿತ್ತು. ಯಶ್ ನಾಯಕನಾಗಿ, ಕೃತಿ ಕರಬಂಧ ನಾಯಕಿಯಾಗಿ ಮಿಂಚಿದ್ದರು. ಲವ್, ಕಾಲೇಜ್ ಲೈಫ್, ಸಕ್ಸಸ್ ಹೀಗೆ ಎಲ್ಲ ಅಂಶಗಳನ್ನು ಒಳಗೊಂಡಿದ್ದ ಸಿನಿಮಾ ಅಂದು ಕಾಲೇಜು ಯುವಕ-ಯುವತಿಯರಿಗೆ ಬಹಳ ಇಷ್ಟ ಆಗಿತ್ತು. …

Read More »

ಮೈ-ಕೈ ಕೆಸರಿನ ಫೋಟೋದ ಬಳಿಕ ಟ್ರ್ಯಾಕ್ಟರ್ ಏರಿದ ಸಲ್ಲು ಭಾಯ್

ಮುಂಬೈ: ಮೈ-ಕೈ ಕೆಸರು ತುಂಬಿಕೊಂಡ ಫೋಟೋ ಭಾರೀ ಚರ್ಚೆಗೆ ಗುರಿಯಾದ ಬಳಿಕ ಇದೀಗ ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಕೃಷಿ ಮಾಡುತ್ತಿರುವ ವಿಡಿಯೋವೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದು, ಇದೀಗ ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಹೌದು. ಕೊರೊನಾ ವೈರಸ್ ಎಂಬ ಚೀನಿ ಕಾಯಿಲೆ ನಮ್ಮ ದೇಶಕ್ಕೆ ಕಾಲಿಟ್ಟ ಬಳಿಕ ಅದು ಹರಡುವುದನ್ನು ತಡೆಗಟ್ಟುವ ಸಲುವಾಗಿ ದೇಶಾದ್ಯಂತ ಲಾಕ್‍ಡೌನ್ ಹೇರಲಾಯಿತು. ಪರಿಣಾಮ ಹಲವು ಮಂದಿ ಕೃಷಿಯತ್ತ ಮುಖಮಾಡಿದ್ದಾರೆ. ಅಂತೆಯೇ …

Read More »

ಕೊರೊನಾ ವೈರಸ್‌ನಿಂದ ನಲುಗುತ್ತಿರುವ ವಿಶ್ವಕ್ಕೆ ಸಿಹಿ ಸುದ್ದಿ ಸಿಕ್ಕಿದೆ.

ಲಂಡನ್‌: ಕೊರೊನಾ ವೈರಸ್‌ನಿಂದ ನಲುಗುತ್ತಿರುವ ವಿಶ್ವಕ್ಕೆ ಸಿಹಿ ಸುದ್ದಿ ಸಿಕ್ಕಿದೆ. ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯ ಅಭಿವೃದ್ಧಿ ಪಡಿಸಿರುವ ಲಸಿಕೆ ಸುರಕ್ಷಿತವಾಗಿದೆ. ಆಕ್ಸ್‌ಫರ್ಡ್‌ ಮತ್ತು ಅಸ್ಟ್ರಾಜೆನೆಕಾ ಜಂಟಿಯಾಗಿ ಅಭಿವೃದ್ಧಿ ಪಡಿಸಿದ AZD1222 ಹೆಸರಿನ ಲಸಿಕೆಯ ಸುರಕ್ಷಿತವಾಗಿದೆ ಎಂದು ವೈದ್ಯ ಕ್ಷೇತ್ರಕ್ಕೆ ಸಂಬಂಧಿಸಿದ ‘ದಿ ಲ್ಯಾನ್ಸೆಟ್‌ ಮೆಡಿಕಲ್‌ ಜರ್ನಲ್’‌ನಲ್ಲಿ ಸಂಶೋಧನಾ ವರದಿ ಪ್ರಕಟವಾಗಿದೆ. 1,077 ಮಂದಿ ಆರೋಗ್ಯಕರ ಸ್ವಯಂಸೇವಕರ ಮೇಲೆ ನಡೆಸಿದ ಆರಂಭಿಕ ಹಂತದ ಕ್ಲಿನಿಕಲ್ ಟ್ರಯಲ್‌ ಯಶಸ್ವಿಯಾಗಿದ್ದು, ಈ ವೇಳೆ ಲಸಿಕೆ ರೋಗನಿರೋಧಕ …

Read More »

ಹಿಂಸಾತ್ಮಕ ರೀತಿಯಲ್ಲಿ ಅಕ್ರಮ ಗೋಸಾಗಾಟ- ವಾಹನ ತಡೆದ ಭಜರಂಗದಳ ಕಾರ್ಯಕರ್ತರು

ಮಂಗಳೂರು: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಮೂರು ದನ, ಎರಡು ಕರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿದ್ದಾಗ ಭಜರಂಗ ದಳ ಸಂಘಟನೆ ಕಾರ್ಯಕರ್ತರು ತಡೆದ ಘಟನೆ ಇಂದು ನಸುಕಿನ ಜಾವ ಬೆಳ್ತಂಗಡಿ ಸಮೀಪ ನಡೆದಿದೆ. ಈ ವೇಳೆ ಗೋಸಾಗಾಟಗಾರ ರಾಜೇಶ್ ಹಾಗೂ ಇನ್ನೋರ್ವ ಆರೋಪಿ ಭಜರಂಗದಳ ಕಾರ್ಯಕರ್ತರ ಮೇಲೆ ತಲ್ವಾರ್ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಿಕಪ್ ವಾಹನದಲ್ಲಿ ನಗರದ ಕಂಕನಾಡಿಯ ಪಿ.ಕೆ.ಚಿಕನ್ ಸೆಂಟರ್ ಮಾಲಕ ಅಬ್ದುಲ್ …

Read More »