Breaking News

ತಮ್ಮ ವೇತನದಿಂದ ಕಂಟೈನ್ಮೆಂಟ್ ಝೋನ್‍ನಲ್ಲಿರೋ ಬಡವರಿಗೆ ಉಚಿತ ದಿನಸಿ ವಿತರಿಸ್ತಿರೋ ಪೇದೆ

ಬೆಳಗಾವಿ/ಚಿಕ್ಕೋಡಿ: ಕಂಟೈನ್ಮೆಂಟ್ ಝೋನ್‍ನಲ್ಲಿರುವ ಬಡ ಜನರು ಹೊರಗೆ ಬರಲಾಗದೆ ಅವರ ಜೀವನ ತುಂಬಾ ಕಷ್ಟವಾಗಿದೆ. ಇದೀಗ ಇವರ ಸ್ಥಿತಿಯನ್ನ ನೋಡಿ ಪೊಲೀಸ್ ಕಾನ್ಸ್‌ಟೇಬಲ್ ಸಹಾಯ ಮಾಡುತ್ತಿದ್ದಾರೆ. ಜಿಲ್ಲೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಬಿ.ಕೆ.ನಾಗನೂರೆ ದಿನನಿತ್ಯ ಬಡವರಿಗೆ ತರಕಾರಿ ಹಂಚುತ್ತಿದ್ದಾರೆ. ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಸಂಕೇಶ್ವರ ಪಟ್ಟಣವನ್ನ ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲಾಗಿದೆ. ಸಂಕೇಶ್ವರ ಪಟ್ಟಣದಲ್ಲಿ ಬಡವರು ದಿನಗೂಲಿ ಇಲ್ಲದೇ ಆಹಾರಕ್ಕಾಗಿ ಪರಿತಪಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ …

Read More »

ಪೊಲೀಸರು ಮಾಡಿದ ಒಂದು ತಪ್ಪಿನಿಂದ ಧಾರವಾಡದಲ್ಲಿ ಓರ್ವ ಅಂಗವಿಕಲ ಇಂದು ಕೊಲೆಯಾಗಿದ್ದಾರೆ ಎಂಬ ಆರೋಪ?

ಧಾರವಾಡ: ಪೊಲೀಸರು ಮಾಡಿದ ಒಂದು ತಪ್ಪಿನಿಂದ ಧಾರವಾಡದಲ್ಲಿ ಓರ್ವ ಅಂಗವಿಕಲ ಇಂದು ಕೊಲೆಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹೌದು. ಧಾರವಾಡದ ಪತ್ರೇಶ್ವರ ನಗರದಲ್ಲಿ ಈ ಕೊಲೆ ನಡೆದಿದ್ದು, ಉಮೇಶ್ ಬಾಳಗಿ (37) ಕೊಲೆಯಾದ ಅಂಗವಿಕಲ. ಕಳೆದ ಹಲವು ವರ್ಷಗಳಿಂದ ಉಮೇಶ್ ಬಾಳಗಿ ಹಾಗೂ ಸಂಬಂಧಿಕರ ನಡುವೆ ಆಸ್ತಿ ವಿವಾದ ನಡೆದಿತ್ತು. ಈ ಮೊದಲು ಉಮೇಶ್‍ನ ಮೇಲೆ ಸಂಬಂಧಿಕರು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಆಗ ಉಮೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. …

Read More »

ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಲು,ಬ್ರೇಡ್‌, ಬಿಸ್ಕತ್ತು ವಿತರಣೆ

ಹುಕ್ಕೇರಿ:ಸ್ಥಳೀಯ ಗುಡಸ ಗ್ರಾಮದ ಅಖಿಲ ಕರ್ನಾಟಕ ವಿಶ್ವ ಕರ್ಮ ಹೋರಾಟಗಾರರ ಸಮೀತಿಯ ತಾಲೂಕ ಅಧ್ಯಕ್ಷರಾದ ರವೀಂದ್ರ ಬಡಿಗೇರ ಅವರು ಮಹಾಮಾರಿ ಕೊರೋನ ರೋಗ ತಡೆಗಟ್ಟಲು ಪ್ರತಿನಿತ್ಯ ಪ್ರಾಣದ ಹಂಗಿಲ್ಲದೇ ಹೋರಾಡುತ್ತಿರುವ ಆಶಾ-ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಲು, ಬ್ರೇಡ್‌, ಬಿಸ್ಕತ್ತುಗಳು ಕೊಟ್ಟು ವಿತರಿಸಿದರು‌. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಮಿತಿಯ ಪ್ರಧಾನ ಕಾರ್ಯದರ್ಶಿಯಾದ ಸುರೇಶ ಪತ್ತಾರ.ರಾಜ್ಯ ಉಪಾಧ್ಯಕ್ಷರಾದ ಸಿದ್ದಾರೋಡ ಬಡಿಗೇರ. ಮಹೇಶ್ ಪತ್ತಾರ.ಬಸವರಾಜ ಬಡಿಗೇರ.ಆಶಾ-ಅಂಗನವಾಡಿ ಕಾರ್ಯಕರ್ತೆಯರು,ಸಮಿತಿಯ ಸರ್ವ ಸದಸ್ಯರು ಹಾಜರಿದ್ದರು.

Read More »

ಮೇ 18ರ ನಂತರ ಬಸ್ ಸೇವೆ ಪ್ರಾರಂಭದ ಸುಳಿವು ಕೊಟ್ಟ ಬಿಎಂಟಿಸಿ…….

ಬೆಂಗಳೂರು: ಮೇ 17ಕ್ಕೆ ಲಾಕ್‍ಡೌನ್ ಅವಧಿ ಮುಗಿಯುತ್ತಿರುವ ಹಿನ್ನೆಲೆ ಸಿಬ್ಬಂದಿಗೆ ಬಿಎಂಟಿಸಿ ಆದೇಶ ಹೊರಡಿಸಿದ್ದು, ಲಾಕ್‍ಡೌನ್‍ನಿಂದ ಸ್ಥಗಿತಗೊಂಡಿದ್ದ ಬಸ್ ಸೇವೆ ಮತ್ತೆ ಆರಂಭವಾಗುವ ಸುಳಿವನ್ನು ನೀಡಿದೆ. ಮೇ 18ರಿಂದ ಎಲ್ಲಾ ಸಿಬ್ಬಂದಿ ಕೆಲಸಕ್ಕೆ ಹಾಜರಾಗುವಂತೆ ಬಿಎಂಟಿಸಿ ಆದೇಶ ಹೊರಡಿಸಿದೆ. ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಲಾಕ್‍ಡೌನ್ ಜಾರಿಗೊಳಿಸಿದ ಹಿನ್ನೆಲೆ ಬಿಎಂಟಿಸಿ ಸೇರಿದಂತೆ ಎಲ್ಲಾ ಬಸ್ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲಾ ಸೇವೆಗಳನ್ನು ಸ್ಥಗಿತಗೊಂಡಿದ್ದವು. ಕೆಲ ಬಿಎಂಟಿಸಿ ಬಸ್‍ಗಳು …

Read More »

ಯುಎಇಯಿಂದ ಉಡುಪಿಗೆ ಬಂದ ಐವರಿಗೆ ಕೊರೊನಾ……..

ಉಡುಪಿ: ಯುಎಇಯಿಂದ ಉಡುಪಿಗೆ ಬಂದ 49 ಮಂದಿ ಪೈಕಿ ಐವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇನ್ನಿಬ್ಬರ ವರದಿ ಬರುವುದು ಬಾಕಿಯಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಮಾಹಿತಿ ನೀಡಿದ್ದಾರೆ. 47 ದಿನದಿಂದ ಜಿಲ್ಲೆಯಲ್ಲಿ ಯಾವುದೇ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿರಲಿಲ್ಲ, ಹೀಗಾಗಿ ಜಿಲ್ಲೆ ಗ್ರೀನ್ ಝೋನ್‍ನಲ್ಲಿ ಇತ್ತು. ಆದರೆ ವಿದೇಶಿ ನೆಲದಲ್ಲಿರುವ ಭಾರತೀಯರನ್ನು ರಕ್ಷಿಸುವ ಕಾರ್ಯಕ್ಕೆ ಭಾರತ ಮುಂದಾಗಿದ್ದು, ಉಡುಪಿ ಜಿಲ್ಲೆಗೆ 49 ಮಂದಿ ಯುಎಇಯಿಂದ ಬಂದಿದ್ದು, ಅವರಲ್ಲಿ …

Read More »

ಮೃತರಾದ ಮಾಜಿ ಭೂಗತ ಲೋಕದ ದೊರೆ ಮುತ್ತಪ್ಪ ರೈ ಅವರು ಡಾನ್ ಅದರೂ ಸಿನಿಮಾರಂಗದ ಜೊತೆ ನಿಕಟ ಸಂಬಂಧ

ಬೆಂಗಳೂರು: ಮೃತರಾದ ಮಾಜಿ ಭೂಗತ ಲೋಕದ ದೊರೆ ಮುತ್ತಪ್ಪ ರೈ ಅವರು ಡಾನ್ ಅದರೂ ಸಿನಿಮಾರಂಗದ ಜೊತೆ ನಿಕಟ ಸಂಬಂಧವನ್ನು ಹೊಂದಿದ್ದರು. ಹಲವು ವರ್ಷಗಳಿಂದ ಕ್ಯಾನ್ಸರ್ ರೋಗದ ಸಮಸ್ಯೆಯಿಂದ ಬಳಲುತ್ತಿದ್ದ ಮುತ್ತಪ್ಪ ರೈ ಇಂದು ನಸುಕಿನ ಜಾವ 2.10ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಒಂದು ಕಾಲದಲ್ಲಿ ಡಾನ್ ಆಗಿ ಮೆರೆದಿದ್ದ ರೈ ನಂತರ ಜಯಕರ್ನಾಟಕ ಸಂಘಟನೆ ಕಟ್ಟಿ ಸಮಾಜ ಸೇವೆಯ ಕಡೆ ಮುಖ ಮಾಡಿದ್ದರು. ಜೊತೆಗೆ ಸಿನಿಮಾದಲ್ಲೂ …

Read More »

SSLC ಪರೀಕ್ಷೆ ದಿನಾಂಕ ಸೋಮವಾರ ನಿಗದಿ ಸಾಧ್ಯತೆ……..

ಚಾಮರಾಜನಗರ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಇಂದು ಗಡಿ ಜಿಲ್ಲೆ ಚಾಮರಾಜನಗರಕ್ಕೆ ಭೇಟಿ ನೀಡಿದ್ದು, ಸೋಮವಾರ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ದಿನಾಂಕವನ್ನು ನಿಗದಿಗೊಳಿಸುವ ಸಾಧ್ಯತೆ ಇದೆ ಎಂದಿದ್ದಾರೆ. ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೆ ನಮ್ಮ ನಾಡಿನ ಹಿರಿಯರೊಂದಿಗೆ ಚರ್ಚೆ ನಡೆಸಲಾಗಿದೆ. ಕೊರೊನಾ ಹೆಮ್ಮಾರಿಯಿಂದ ಶಿಕ್ಷಣ ಇಲಾಖೆಗೆ ತೊಂದರೆಯಾಗಿದೆ. ಮುಂದಿನ ದಿನಗಳಲ್ಲಿ ತರಗತಿಗಳು ಹೇಗಿರಬೇಕು ಅಂತಾ ಚರ್ಚೆ ನಡೆಸುತ್ತಿದ್ದೇವೆ. ನಾಳೆ ಶಿಕ್ಷಕರ ಮತ್ತು ಪದವೀದರ ಕ್ಷೇತ್ರದ ಪರಿಷತ್ ಸದಸ್ಯರ ಜೊತೆ …

Read More »

ಜೂನ್ 5ರಿಂದ ಈ ಬಾರಿ ಮಳೆಗಾಲ ಶುರು

ನವದೆಹಲಿ: ಈ ಬಾರಿಯ ನೈರುತ್ಯ ಮಾನ್ಸೂನ್ ಮಾರುತಗಳ ಆಗಮನ ವಿಳಂಬವಾಗಲಿದೆ ಎಂದು ಕೇಂದ್ರ ಹವಮಾನ ಇಲಾಖೆ ತಿಳಿಸಿದೆ. ಮಾನ್ಸೂನ್ ಆರಂಭಕ್ಕೆ ಸಂಬಂಧಿಸಿದಂತೆ ಇಂದು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಐಎಂಡಿ, ಜೂನ್ 1 ರ ಬದಲು 5ರಂದು ಮಾನ್ಸೂನ್ ಮಾರುತಗಳು ಕೇರಳ ತಲುಪುವ ಸಾಧ್ಯತೆ ಇದೆ. ಹೀಗಾಗಿ ಮಾನ್ಸೂನ್ ಆರಂಭ ನಾಲ್ಕು ದಿನ ವಿಳಂಬವಾಗಲಿದೆ ಎಂದು ಅಂದಾಜಿಸಿದೆ. ಕಳೆದ ವರ್ಷವೂ ಜೂನ್ 6ರಂದು ದೇಶದಲ್ಲಿ ಮಾನ್ಸೂನ್ ಆರಂಭವಾಗಬಹುದು ಎಂದು ಅಂದಾಜಿಸಲಾಗಿತ್ತು. ಆದರೆ …

Read More »

ಹಾಸನದಲ್ಲಿ ಮತ್ತೆ ಮೂವರಿಗೆ ಕೊರೊನಾ- ಜಿಲ್ಲೆಯಲ್ಲಿ 12ಕ್ಕೇರಿದ ಸೋಂಕಿತರ ಸಂಖ್ಯೆ

ಹಾಸನ: ಜಿಲ್ಲೆಯಲ್ಲಿ ಇಂದು ತಂದೆ-ಮಗ ಸೇರಿದಂತೆ ಮತ್ತೆ ಮೂವರಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು, ಎಲ್ಲರೂ ಮುಂಬೈನಿಂದ ವಾಪಸ್ ಬಂದವರಾಗಿದ್ದಾರೆ. ಈ ಹಿಂದೆ ಹಾಸನದಲ್ಲಿ ಒಂಬತ್ತು ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದವು. ಅವರೆಲ್ಲರೂ ಚನ್ನರಾಯಪಟ್ಟಣ ತಾಲೂಕಿನವರಾಗಿದ್ದು, ಮುಂಬೈಯಿಂದ ವಾಪಸ್ಸಾದವರಾಗಿದ್ದರು. ಇಂದು ಮತ್ತೆ ಮೂರು ಜನರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಹಾಸನದಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ 12ಕ್ಕೆ ಏರಿದೆ. ಮೂವರಲ್ಲಿ ಇಬ್ಬರು ಚನ್ನರಾಯಪಟ್ಟಣ ಮೂಲದ ತಂದೆ ಮತ್ತು ಮಗನಾಗಿದ್ದು, ಮುಂಬೈನಿಂದ ಸ್ವಂತ …

Read More »

ಚಿಕ್ಕೋಡಿ ಪೊಲೀಸ್ ಠಾಣೆ ಪೇದೆ ಓರ್ವ ರಸ್ತೆ ಅಪಘಾತದಲ್ಲಿ ಮೃತಪಟ್ಟ ಧಾರುಣ ಘಟನೆ

ಚಿಕ್ಕೋಡಿ: ಕರ್ತವ್ಯ ಮುಗಿಸಿ ಊರಿಗೆ ತೆರಳುತ್ತಿದ್ದ ಚಿಕ್ಕೋಡಿ ಪೊಲೀಸ್ ಠಾಣೆ ಪೇದೆ ಓರ್ವ ರಸ್ತೆ ಅಪಘಾತದಲ್ಲಿ ಮೃತಪಟ್ಟ ಧಾರುಣ ಘಟನೆ ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳ್ಳಿ ಗ್ರಾಮದ ಹತ್ತಿರ ಗುರುವಾರ ಸಂಭವಿಸಿದೆ. ಮೃತ ಪೇದೆ ರಮೇಶ ನಾಯಿಕ(೨೫) ಎಂದು ಗುರ್ತಿಸಲಾಗಿದೆ. ಈತನು ಕರ್ತವ್ಯ ಮುಗಿಸಿ ದ್ವಿಚಕ್ರ ವಾಹನದ ಮೂಲಕ ತನ್ನ ಊರು ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮಕ್ಕೆ ತೆರಳುವಾಗ ನಿಪ್ಪಾಣಿ ಮುಧೋಳ ರಾಜ್ಯ ಹೆದ್ದಾರಿಯ ನಾಗರಮುನ್ನೋಳ್ಳಿ ಗ್ರಾಮ ವ್ಯಾಪ್ತಿಯ ಬೆಳಗಲಿ ಕ್ರಾಸ್ …

Read More »