ಬೆಳಗಾವಿ, ಫೆ.22-ಮಹದಾಯಿ ಯೋಜನೆ ಜಾರಿಗೆ ಸರ್ಕಾರ ಬದ್ಧವಾಗಿದೆ. ಈ ಸಂಬಂಧ ಇದೇ 26ರಂದು ದೆಹಲಿಗೆ ತೆರಳಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿ ಹೊಳಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದಲ್ಲೇ ಕಣಕುಂಬಿಗೂ ಭೇಟಿ ನೀಡಲಿದ್ದೇನೆ. ಗೋವಾ ಮುಖ್ಯಮಂತ್ರಿ ಬೇಕಾದರೆ ನ್ಯಾಯಾಲಯದ ಮೊರೆ ಹೋಗಲಿ. ಮಹದಾಯಿ ವಿಚಾರದಲ್ಲಿ ನಮ್ಮ ಪರ ನ್ಯಾಯ ಸಿಗುವ ವಿಶ್ವಾಸವಿದೆ. ನೀರಾವರಿ ಯೋಜನೆಯಲ್ಲಿ ಯಾವುದೇ ತಾರತಮ್ಯ ಒದಗಿಸುವುದಿಲ್ಲ. …
Read More »ಕೂಡ್ಲಿಗಿ,ತಾಲೂಕಿನಾಧ್ಯಂತ ದೇವಸ್ಥಾನಗಳಲ್ಲಿ: ಸಾಮೂಹಿಕ ಶಿವಭಜನೆ, ಸೌಹಾಧ೯ತಾ ಜಾಗರಣೋತ್ಸವ
ಕೂಡ್ಲಿಗಿ,ತಾಲೂಕಿನಾಧ್ಯಂತ ದೇವಸ್ಥಾನಗಳಲ್ಲಿ: ಸಾಮೂಹಿಕ ಶಿವಭಜನೆ, ಸೌಹಾಧ೯ತಾ ಜಾಗರಣೋತ್ಸವಶಿವ ಭಕ್ತರು ಶಿವರಾತ್ರಿ ಜಾಗರಣೆ ಪ್ರಯುಕ್ತ ಬಹುತೇಕರು ಮನೆಯಲ್ಲಿಯೇ ಆರಾಧನೆ ಮತ್ತು ಜಾಗರಣೆ ಮಾಡಿದರೆ ಕೆಲವರು ದೇವಸ್ಥಾನಗಳಲ್ಲಿ ಸಾಮೂಹಿಕ ಶಿವಭಜನೆ ಮಾಡುವುದರೊಂದಿಗೆ ಜಾಗರಣೆ ಆರಾಧನೆ ಮಾಡಿದ್ದಾರೆ<->ಬಳ್ಳಾರಿ ಜಿಲ್ಲೆ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನಾಧ್ಯಂತ ದೇವಸ್ಥಾನಗಳಲ್ಲಿ ಶಿವನ ಆರಾಧನೆ ಮತ್ತು ಸಾಮೂಹಿಕ ಭಜನೆ ಮಾಡುವುದರ ಮೂಲಕ ಜಾಗರಣೆ ಆಚರಿಸಿದರು.ಪಟ್ಟಣದ ಬಾಪೂಜಿನಗರದ ಶ್ರೀ ಬಸವಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಕೂಡ್ಲಿಗಿ ಹಿರೇ ಮಠ ಚಿದಾನಂದ ಸ್ವಾಮಿಗಳು ಮತ್ತು …
Read More »ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಗಮನ ಸೆಳೆದಿರುವ ಆಂದೋಲ ಕರುಣೇಶ್ವರ ಮಠದ ಸಿದ್ಧಲಿಂಗ ಸ್ವಾಮೀಜಿ ಈಗ ಮತ್ತೊಂದು ಆಕ್ಷೇಪಾರ್ಹ
ರಾಯಚೂರು: ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಗಮನ ಸೆಳೆದಿರುವ ಆಂದೋಲ ಕರುಣೇಶ್ವರ ಮಠದ ಸಿದ್ಧಲಿಂಗ ಸ್ವಾಮೀಜಿ ಈಗ ಮತ್ತೊಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ವಿರುದ್ಧ ಮಾತನಾಡುವವರಿಗೆ ಗೌರಿ ಲಂಕೇಶ್ಗೆ ಆದ ಗತಿಯೇ ಆಗುತ್ತದೆ ಎಂದು ಸ್ವಾಮೀಜಿ ಹೇಳಿರುವುದು ಅಚ್ಚರಿಗೆ ಕಾರಣವಾಗಿದೆ ಇನ್ನೂ 14-15 ವರ್ಷ ದಾಟದವರು ಕೂಡ ಪ್ರಧಾನಿ ಮೋದಿ, ಅಮಿತ್ ಶಾ ಬಗ್ಗೆ ಮಾತನಾಡುತ್ತಿದ್ದಾರೆ. ಭವಿಷ್ಯದಲ್ಲಿ ಅವರಿಗೂ ಗೌರಿ ಲಂಕೇಶ್ಗೆ ಆದ …
Read More »ದೇಶ ವಿರೋಧಿ ಹೇಳಿಕೆ ನೀಡಿದ ಅಮೂಲ್ಯಾ ಲಿಯೋನ್ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಎಬಿವಿಪಿ ಸಂಘಟನೆಗಳಿಂದ ಪ್ರತಿಭಟನೆ
ದೇಶ ವಿರೋಧಿ ಹೇಳಿಕೆ ನೀಡಿದ ಅಮೂಲ್ಯಾ ಲಿಯೋನ್ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಎಬಿವಿಪಿ ಸಂಘಟನೆಗಳಿಂದ ಪ್ರತಿಭಟನೆಸ್ವತಂತ್ರ ಉದ್ಯಾನವನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧದ ಪ್ರತಿಭಟನೆಯಲ್ಲಿ ಅಮೂಲ್ಯ ಲಿಯೋನ್ ಎಂಬ ಯುವತಿ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಹಾಕಿರುವುದನ್ನು ಖಂಡಿಸಿ ಬೆಳಗಾವಿಯಲ್ಲಿ ಎಬಿವಿಪಿ ಸಂಘಟನಾಕಾರರು ಪ್ರತಿಭಟಿಸಿದರು ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ದೇಶ ವಿರೋಧಿ ಚಟುವಟಿಕೆ ನಡೆದ ಘಟನೆ ಮಾಸುವ ಮುನ್ನವೇ ಮತ್ತೊಂದು ದೇಶದ್ರೋಹ ಚಟುವಟಿಕೆ ನಡೆಸಿರುವುದು ಖಂಡನೀಯ ದೇಶದ ಅನ್ನ ನೀರು …
Read More »ಹೊತ್ತಿ ಉರಿಯಿತು ಬೆಂಕಿಪೊಟ್ಟಣ ಸಾಗಿಸುತ್ತಿದ್ದ ಲಾರಿ
ವಿಜಯಪುರ, ಫೆ.22- ಬೆಂಕಿಪೊಟ್ಟಣ ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸುಟ್ಟು ಕರಕಲಾಗಿರುವ ಘಟನೆ ತಾಲ್ಲೂಕಿನ ಅರಕೇರಿ ತಾಂಡಾ ಬಳಿಯ ರಾಷ್ಟ್ರೀಯ ಹೆದ್ದಾರಿ-13ರಲ್ಲಿ ಬೆಳ್ಳಂ ಬೆಳಗ್ಗೆ ನಡೆದಿದೆ. ತಮಿಳುನಾಡಿನಿಂದ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಬೆಂಕಿಪೊಟ್ಟಣಗಳನ್ನು ಸಾಗಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಚಾಲಕ ಹಾಗೂ ಕ್ಲೀನರ್ ಎಚ್ಚೆತ್ತುಕೊಂಡು ಲಾರಿಯಿಂದ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿಪೊಟ್ಟಣದ ಬಾಕ್ಸ್‍ಗಳಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಆಗಸದೆತ್ತರಕ್ಕೆ ಚಿಮ್ಮಿದ ಬೆಂಕಿಯ ಕೆನ್ನಾಲಿಗೆಗೆ ನೋಡು ನೋಡುತ್ತಿದ್ದಂತೆಯೇ ಲಾರಿ ಸಂಪೂರ್ಣವಾಗಿ …
Read More »ಬೆಳಗಾವಿಯಲ್ಲಿ 23.88 ಲಕ್ಷ ರೂ. ನಕಲಿ ನೋಟು ವಶ,
ಬೆಳಗಾವಿ, ಫೆ.22- ನಕಲಿ ನೋಟು ಸರಬರಾಜು ಮಾಡುತ್ತಿದ್ದ ಐವರು ಅಂತಾರಾಜ್ಯ ಕಳ್ಳರನ್ನು ಬೆಳಗಾವಿ ಜಿಲ್ಲಾ ಅಪರಾಧ ಪತ್ತೆ ದಳದ ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಮತನೂರ ಕ್ರಾಸ್ ಬಳಿ ಎರಡು ಪ್ರತ್ಯೇಕ ವಾಹನಗಳಲ್ಲಿ 23.88 ಲಕ್ಷ ರೂ. ನಕಲಿ ಮತ್ತು 12 ಸಾವಿರ ರೂ. ಮೌಲ್ಯದ ಅಸಲಿ ನೋಟು ಸಾಗಿಸುವ ಸಂದರ್ಭದಲ್ಲಿ ದಾಳಿ ನಡೆಸಿದ ಡಿಸಿಐಬಿ ಹಾಗೂ ಸಂಕೇಶ್ವರ ಠಾಣೆಯ ಪೊಲೀಸರು ಐವರು ಅಂತಾರಾಜ್ಯ ಕಳ್ಳರನ್ನು …
Read More »ನಮ್ಮ ದೇಶದವರಾಗಿ ಪಾಕಿಸ್ತಾನದ ಪರ ಘೋಷಣೆ ಕೂಗುವುದು ವಿಕೃತ ಮನಸ್ಸಿನವರು:ಶಾಸಕಿ ಅನಿತಾ ಕುಮಾರಸ್ವಾಮಿ ಬೇಸರ
ರಾಮನಗರ: ಪಾಕ್ ಪರ ಘೋಷಣೆ ಕೂಗುತ್ತಿರುವುದನ್ನು ನೋಡಿ ನಿಜವಾಗಿಯೂ ನನಗೆ ಆಶ್ಚರ್ಯವಾಗುತ್ತಿದೆ. ನಮ್ಮ ದೇಶದವರಾಗಿ ಪಾಕಿಸ್ತಾನದ ಪರ ಘೋಷಣೆ ಕೂಗುವುದು ವಿಕೃತ ಮನಸ್ಸಿನವರು ಅಂತ ಹೇಳಬೇಕು ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನ ಪರ ಅಮೂಲ್ಯ ಘೋಷಣೆ ಕೂಗಿದ ವಿಚಾರವಾಗಿ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಪಾಕ್ ಪರ ಘೋಷಣೆ ಕೂಗಿದವರ ವಿರುದ್ಧ ಕ್ರಮ ತೆಗೆದುಕೊಳ್ಳಲೇಬೇಕು. ಮುಂದೆ ಇನ್ಯಾರು ಆ ರೀತಿ ಮಾಡಬಾರದು, ಆ ರೀತಿ ಕ್ರಮ ಕೈಗೊಂಡರೆ ಬೇರೆಯವರಿಗೂ …
Read More »ದೇಶದೆಲ್ಲೆಡೆ ಸಡಗರದ ಮಹಾ ಶಿವರಾತ್ರಿ, ದೇಗುಲಗಳಲ್ಲಿ ಮಹಾದೇವನಿಗೆ ವಿಶೇಷ ಪೂಜೆ
ಫೆ.21- ಮಹಾಶಿವರಾತ್ರಿ ಹಬ್ಬವನ್ನು ದೇಶದಾದ್ಯಂತ ಸಂಭ್ರಮ-ಸಡಗರದಿಂದ ಆಚರಿಸಲಾಗುತ್ತಿದ್ದು, ದೇಶದೆಲ್ಲೇಡೆ ಇರುವ ಶಿವ ದೇವಾಲಯಗಳು ಮತ್ತು ಭವ್ಯ ಪ್ರತಿಮೆಗಳ ಸ್ಥಳಗಳಲ್ಲಿ ವಿಶೇಷ ಪೂಜೆ-ಪುನಸ್ಕಾರಗಳು ನಡೆಯುತ್ತಿವೆ. ಮಹಾ ಶಿವರಾತ್ರಿ ಪ್ರಯುಕ್ತ ದೇಶಾದ್ಯಂತ ಹಲವಾರು ಧಾರ್ಮಿಕ ಮತ್ತು ಆಧ್ಯಾತ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಜಾಗರಣೆ ನಿಮಿತ್ತ ಅಹೋರಾತ್ರಿವಿವಿಧ ಸಮಾರಂಭಗಳು ಆಯೋಜಿತವಾಗಿವೆ. ಶಿವನ ದೇಗುಲಗಳಲ್ಲಿ ಭಕ್ತರು ಉಪವಾಸ ಮತ್ತು ಜಾಗರಣೆ ಮೂಲಕ ಶಿವ ಸ್ಮರಣೆ ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ. ವಿಶ್ವವಿಖ್ಯಾತ ಕಾಶಿ ವಿಶ್ವನಾಥ ದೇವಾಲಯ, ಕರ್ನಾಟಕದ ಕಾಡು …
Read More »ನೀರು ಹಂಚಿಕೆ ವಿಚಾರದಲ್ಲಿ ಗೆಜೆಟ್ ಅಧಿಸೂಚನೆ ಹೊರಡಿಸಲು ಸುಪ್ರಿಂ ಕೋರ್ಟ ಮ್ಮತಿಸಿರುವುದನ್ನು ನಾನು ಸ್ವಾಗತಿಸುತ್ತೇನೆ:ಸಚಿವರಾದ ರಮೇಶ್ ಜಾರಕಿಹೊಳಿ
ಮಹದಾಯಿ ನೀರು ಹಂಚಿಕೆ: ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ಸಚಿವ ರಮೇಶ್ ಜಾರಕಿಹೊಳಿ… ಬೆಳಗಾವಿ: ಉತ್ತರ ಕರ್ನಾಟಕದ ಬಹುದಿನದ ಬೇಡಿಕೆಯಾದ ಮಹದಾಯಿ ಯೋಜನೆಯ ನದಿ ನೀರು ಹಂಚಿಕೆ ವಿಚಾರದಲ್ಲಿ ಗೆಜೆಟ್ ಅಧಿಸೂಚನೆ ಹೊರಡಿಸಲು ಸುಪ್ರಿಂ ಕೋರ್ಟ ಮ್ಮತಿಸಿರುವುದನ್ನು ನಾನು ಸ್ವಾಗತಿಸುತ್ತೇನೆ ಎಂದು ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಕರ್ನಾಟಕ ಸರ್ಕಾರವು ಮಹದಾಯಿ ಯೋಜನೆ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸಲೇಬೇಕೆಂದು ಈ ಹಿಂದೆ …
Read More »(ಸಿಎಎ) ವಿರೋಧಿಸಿ ಪ್ರತಿಭಟನೆ ನಡೆಸುವ ಸಂಘಟಿತರು ಹಾಗೂ ಸಂಘಟನೆಗಳ ಮೇಲೆ ರಾಜ್ಯ ಸರ್ಕಾರ ಬ್ರಹ್ಮಾಸ್ತ್ರ ಬಳಸಲು ಮುಂದಾಗಿದೆ
ಸಂಘಟನೆಗಳ ಮೇಲೆ ರಾಜ್ಯ ಸರ್ಕಾರ ಬ್ರಹ್ಮಾಸ್ತ್ರ 10 ಲಕ್ಷ ಭದ್ರತಾ ಠೇವಣಿ ಹಾಗೂ ಕಾರ್ಯಕ್ರಮದ ಹೊಣೆಗಾರಿಕೆಯನ್ನು ಆಯೋಜಕರೇ ಹೊತ್ತುಕೊಳ್ಳಬೇಕು ಶಾಂತಿಯುತ ಪ್ರತಿಭಟನೆ ನೆಪದಲ್ಲಿ ಕಾನೂನು ಉಲ್ಲಂಘಿಸಿದವರಿಗೆ ಮೂಗುದಾರ ಹಾಕಲು ಸರ್ಕಾರ ಮುಂದಾಗಿದೆ. ಬೆಂಗಳೂರು,ಫೆ.21-ಕೇಂದ್ರ ಸರ್ಕಾರದ ನಾಗರಿಕ ತಿದ್ದುಪಡಿ ಕಾಯ್ದೆ(ಸಿಎಎ) ವಿರೋಧಿಸಿ ಪ್ರತಿಭಟನೆ ನಡೆಸುವ ಸಂಘಟಿತರು ಹಾಗೂ ಸಂಘಟನೆಗಳ ಮೇಲೆ ರಾಜ್ಯ ಸರ್ಕಾರ ಬ್ರಹ್ಮಾಸ್ತ್ರ ಬಳಸಲು ಮುಂದಾಗಿದೆ. ನಿನ್ನೆ ಫ್ರೀಡಂಪಾರ್ಕ್‍ನಲ್ಲಿ ಸಿಎಎ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಅಮೂಲ್ಯ ಲಿಯೋನ …
Read More »