ಮೈಸೂರು: ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ 72 ವರ್ಷದ ವೃದ್ಧ ಇಂದು ಸಾವನ್ನಪ್ಪಿದ್ದಾರೆ. ಮೈಸೂರಿನ ನಜರ್‍ಬಾದ್ ನಿವಾಸಿಯಾಗಿದ್ದ 72 ವರ್ಷದ ವೃದ್ಧನಿಗೆ ಕೊರೊನಾ ಸೋಂಕು ತಗುಲಿತ್ತು. 17 ದಿನಗಳ ಹಿಂದೆ ಕೊರೊನಾದಿಂದ ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಡಿಸ್ವಾರ್ಜ್ ಆಗಿದ್ದರು. ಆದ್ರೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧ ಸಾವನ್ನಪ್ಪಿದ್ದಾರೆ. ಮೃತ ವೃದ್ಧನ ಅಂತ್ಯಕ್ರಿಯೆ ಶುಕ್ರವಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮೈಸೂರಿನ 90 ಕೊರೊನಾ ಸೋಂಕಿತರಲ್ಲಿ 88 ಮಂದಿ ಗುಣಮುಖವಾಗಿ …
Read More »ಡೆಡ್ಲಿ ಕೊರೊನಾ ಮಧ್ಯೆ ಇದೀಗ ರಾಜ್ಯದಲ್ಲಿ ಚಂಡಮಾರುತ ಅಪ್ಪಳಿಸುವ ಭೀತಿ ಎದುರಾಗಿದೆ.
ಬೆಂಗಳೂರು: ಡೆಡ್ಲಿ ಕೊರೊನಾ ಮಧ್ಯೆ ಇದೀಗ ರಾಜ್ಯದಲ್ಲಿ ಚಂಡಮಾರುತ ಅಪ್ಪಳಿಸುವ ಭೀತಿ ಎದುರಾಗಿದೆ. ಕೇರಳದ ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಮೇ 17ರೊಳಗೆ ಆಮ್‍ಫಾನ್ ಚಂಡಮಾರುತದಿಂದ ಭಾರೀ ಮಳೆಯಾಗಲಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮೇ 15 ಮತ್ತು 16ರಂದು ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮೇ 18ರಂದು ಈ ಆಮ್‍ಫಾನ್ ಚಂಡಮಾರುತದ ಅಬ್ಬರ ಹೆಚ್ಚಾಗಲಿದ್ದು, ಒಂದು ಗಂಟೆಗೆ 172 ಕಿ.ಮೀ. …
Read More »ರಮೇಶ್ ಕುಮಾರ್ ಲಾಕ್‍ಡೌನ್ ಉಲ್ಲಂಘನೆ- ನೂರಾರು ಜನ ಸೇರಿಸಿ ಕೆರೆ ಪೂಜೆ….
ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೂರಾರು ಜನರನ್ನು ಸೇರಿಸಿ ಕರೆಯಲ್ಲಿ ಪೂಜೆ ಮಾಡುವ ಮೂಲಕ ಲಾಕ್‍ಡೌನ್ ನಿಯಮ ಉಲ್ಲಂಘಿಸಿದ್ದಾರೆ. ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಆಲವಾಟ್ಟ ಗ್ರಾಮದ ಕೆರೆಗೆ ಕೆ.ಸಿ.ವ್ಯಾಲಿ ನೀರು ಹರಿದ ಹಿನ್ನೆಲೆ ತಮ್ಮದೆ ಮುಖಂಡರು, ಸ್ಥಳೀಯರನ್ನು ಸೇರಿಸಿಕೊಂಡು ಪೂಜೆ ಸಲ್ಲಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಪೂಜೆ ವೇಳೆ ನೂರಾರು ಜನರ ಜಮಾವಣೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದ ಮಾಜಿ ಸ್ಪೀಕರ್ ವಿರುದ್ಧ ಹಲವರು …
Read More »ವಿಜಯಪುರಕ್ಕೆ ಮಹಾರಾಷ್ಟ್ರದ 1,590 ಕಾರ್ಮಿಕರ ಆಗಮನ………..
ವಿಜಯಪುರ: ಶುಕ್ರವಾರ ಬೆಳಗಿನ ಜಾವ ನಾಲ್ಕು ಗಂಟೆಗೆ ಮಹಾರಾಷ್ಟ್ರದಿಂದ ವಲಸೆ ಕಾರ್ಮಿಕರು ವಿಜಯಪುರಕ್ಕೆ ಆಗಮಿಸಲಿದ್ದಾರೆ. ಶ್ರಮಿಕ್ ವಿಶೇಷ ರೈಲಿನ ಮೂಲಕ ಮಹಾರಾಷ್ಟ್ರದ ಸಿಂಧದುರ್ಗದಿಂದ ಒಟ್ಟು 1,590 ಕಾರ್ಮಿಕರು ಬೆಳಗಿನ ಜಾವ 4 ಗಂಟೆಗೆ ವಿಜಯಪುರಕ್ಕೆ ಬಂದಿಳಿಯಲಿದ್ದಾರೆ. ಜಿಲ್ಲೆಗೆ ಆಗಮಿಸುವ ಎಲ್ಲ ಕಾರ್ಮಿಕರನ್ನು ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಕಾರ್ಮಿಕರನ್ನು ಅವರ ತಾಲೂಕುಗಳ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಕ್ವಾರಂಟೈನ್ ಮಾಡಲಾಗುವುದು. ರೈಲ್ವೇ ನಿಲ್ದಾಣದಿಂದಲೇ ಕಾರ್ಮಿಕರನ್ನ ಕ್ವಾರಂಟೈನ್ ಕೇಂದ್ರಕ್ಕೆ ಕಳಿಸಲು …
Read More »ಕೊರೊನಾ ಹಾಟ್‍ಸ್ಪಾಟ್ ಆಗೋದನ್ನೇ ತಪ್ಪಿಸಿದ ಕಮಾಂಡರ್ ಡಾ. ಜಿ ಶಿವಣ್ಣ………
ಬೆಂಗಳೂರು: ದೊಡ್ಡಬಸ್ತಿಯಲ್ಲಿ ಒಂದೇ ಒಂದು ಪಾಸಿಟಿವ್ ಪ್ರಕರಣದಿಂದ ಬೆಂಗಳೂರು ಆತಂಕಗೊಂಡಿತ್ತು. ಇಡೀ ದೊಡ್ಡಬಸ್ತಿ ಕೊರೊನಾ ಹಾಟ್‍ಸ್ಪಾಟ್ ಆಗುತ್ತಾ ಅನ್ನೋ ಆತಂಕ ಜನರನ್ನು ಕಾಡಿತ್ತು. ಆದರೆ ಜನರ ಸಹಕಾರ ಹಾಗೂ ಕೋವಿಡ್ ಕಮಾಂಡರ್ ಜಿ.ಶಿವಣ್ಣ ಅವರ ಮಾಸ್ಟರ್ ಪ್ಲಾನ್‍ನಿಂದ ಕೊರೊನಾ ಹಾಟ್‍ಸ್ಪಾಟ್ ಆಗೋದನ್ನೇ ತಪ್ಪಿಸಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ಕೆಂಗೇರಿ ಹೋಬಳಿಯ ದೊಡ್ಡಬಸ್ತಿಯನ್ನ ನೋಡಿ ಪಾದರಾಯನಪುರದ ಜನ ಬುದ್ಧಿ ಕಲಿಯಬೇಕಿದೆ. ಏಪ್ರಿಲ್ 12ರಂದು ಈ ಏರಿಯಾದಲ್ಲಿ ಗರ್ಭಿಣಿ ಮಹಿಳೆಗೆ ಕೊರೊನಾ ಸೋಂಕು …
Read More »ತಾಯಂದಿರೊಂದಿಗೆ ನರ್ಸ್‍ಗಳ ಅನುಚಿತ ವರ್ತನೆ- ಸಾರ್ವಜನಿಕರ ಆಕ್ರೋಶ
ಹುಬ್ಬಳ್ಳಿ: ಕೊರೊನಾ ವಿರುದ್ಧದ ಹೋರಾಟದಲ್ಲಿ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಹಾಗೂ ನರ್ಸ್ ಗಳು ತಮ್ಮ ಜೀವ ಪಣಕ್ಕಿಟು ರೋಗಿಗಳ ಉಪಚಾರ ಮಾಡುತ್ತಿದ್ದಾರೆ. ಆದರೆ ಹಳೇ ಹುಬ್ಬಳ್ಳಿಯ ಹೆಗ್ಗೇರಿ ನಗರ ಆರೋಗ್ಯ ಕೇಂದ್ರದ ನರ್ಸ್ ಗಳು ಮಾತ್ರ ಮಕ್ಕಳು ಹಾಗೂ ಪೋಷಕರ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಹೆಗ್ಗೇರಿ ಆರೋಗ್ಯ ಕೇಂದ್ರದಲ್ಲಿ ಪ್ರತಿ ಗುರುವಾರ ನವಜಾತ ಶಿಶುಗಳಿಂದ ಹಿಡಿದು 10 ವರ್ಷದ ಮಕ್ಕಳಿಗೆ ಓಪಿವಿ, ಬಿಸಿಜಿ, ಪೆಂಟಾ, ಐಪಿವಿ, ವಿಟಮಿನ್ ಲಸಿಕೆಯನ್ನು ಹಾಕಲಾಗುತ್ತದೆ. …
Read More »ವೈನ್ ಶಾಪ್ ತೆರೆಯಲು ಹಣದ ಬೇಡಿಕೆ- ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಪಿಡಿಒ!
ಹುಬ್ಬಳ್ಳಿ: ವೈನ್ ಶಾಪ್ ತೆರೆಯಲು ಅನುಮತಿ ನೀಡಲು ಲಂಚ ಪಡೆಯುತ್ತಿದ್ದ ಪಿಡಿಒ ಅಧಿಕಾರಿಯನ್ನ ಎಸಿಬಿ ಬಲೆಗೆ ಬಿದಿದ್ದಾರೆ. ಜಿಲ್ಲೆಯ ವರೂರು ಗ್ರಾಮ ಪಂಚಾಯಿತಿ ಪಿಡಿಒ ಬಸವರಾಜ್ ಬಡಿಗೇರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ಗ್ರಾಮದ ‘ಗಾಯತ್ರಿ ವೈನ್ಸ್’ ಮುಚ್ಚಿಸಲು ಮಹಿಳಾ ಸಂಘದವರು, ಗ್ರಾಮಸ್ಥರು ಅರ್ಜಿ ಕೊಟ್ಟಿದ್ದರು. ಇದನ್ನೇ ಹಣ ಪೀಕಲು ಬಳಸಿಕೊಂಡ ಪಿಡಿಒ ಬಸವರಾಜ್, ಗ್ರಾಮಸ್ಥರು ನೀಡಿರುವ ಅರ್ಜಿ ತಿರಸ್ಕಾರ ಮಾಡಿ ವೈನ್ ಶಾಪ್ ತೆರಯಲು ತೊಂದರೆ ಇಲ್ಲದಂತೆ ಮಾಡಲು …
Read More »ಬೆಳಗಾವಿ: ಡಿ ಗ್ರೂಪ್ ನೌಕರರು ಗುತ್ತಿಗೆದಾರರಿಗೆ ಹಣಕೊಡಬೇಕಂತೆ. ಈ ಸಂಬಂಧ ಕೊರೊನಾ ವಾರಿಯರ್ಸ್ಕ್ಯಾ ಕಣ್ಣೀರು
ಬೆಳಗಾವಿ: ಕಳೆದ ಎರಡು ತಿಂಗಳಿಂದ ಮನೆ ಮಠ ಬಿಟ್ಟು ಆಸ್ಪತ್ರೆಯಲ್ಲಿ ಕೊರೊನಾ ವಾರಿಯರ್ಸ್ ಸೇವೆ ಸಲ್ಲಿಸ್ತಾ ಇದ್ದಾರೆ. ಆದರೆ ಇಲ್ಲೊಂದು ಆಸ್ಪತ್ರೆಯಲ್ಲಿ ಕೊರೊನಾ ಡ್ಯೂಟಿ ಬೇಡ ಅಂದ್ರೆ ಡಿ ಗ್ರೂಪ್ ನೌಕರರು ಗುತ್ತಿಗೆದಾರರಿಗೆ ಹಣಕೊಡಬೇಕಂತೆ. ಈ ಸಂಬಂಧ ಕೊರೊನಾ ವಾರಿಯರ್ಸ್ಕ್ಯಾ ಕಣ್ಣೀರು ಹಾಕಿದ್ದಾರೆ. ರಾಜ್ಯದಲ್ಲಿ ಕೊರೊನಾ ರಣಕೇಕೆ ಹಾಕ್ತಿದೆ. ಸೋಂಕಿತರನ್ನು ಮಹಾಮಾರಿ ವೈರಸ್‍ನಿಂದ ಕಾಪಾಡಲು ಕೊರೊನಾ ವಾರಿಯರ್ಸ್ ತಮ್ಮ ಜೀವವನ್ನೇ ಪಣಕ್ಕಿಟ್ಟು ಸೇವೆ ಸಲ್ಲಿಸ್ತಿದ್ದಾರೆ. ಆದರೆ ರಕ್ಷಕರಿಗೆ ರಕ್ಷಣೆ ಇಲ್ಲ …
Read More »ಕೊರೊನಾ ಮುಕ್ತ ಹೊಸಪೇಟೆ- ಜಿಲ್ಲೆಯಲ್ಲಿ 4 ಪ್ರಕರಣಗಳು ಮಾತ್ರ ಬಾಕಿ……..
ಬಳ್ಳಾರಿ: ಜಿಲ್ಲೆಯ ಹೊಸಪೇಟೆ ನಗರದಲ್ಲಿ 11 ಕೊರೊನಾ ಪ್ರಕರಣಗಳು ಪತ್ತೆಯಾಗಿ ಆತಂಕ ಸೃಷ್ಟಿಯಾಗಿತ್ತು. ಇದೀಗ ಹೊಸಪೇಟೆಯಲ್ಲಿ ಮತ್ತೋರ್ವ ವ್ಯಕ್ತಿ ಡಿಸ್‍ಚಾರ್ಜ್ ಆಗಿದ್ದು, ಈ ಮೂಲಕ ಹೊಸಪೇಟೆ ನಗರ ಕೊರೊನಾ ಮುಕ್ತವಾಗಿದೆ. ಜಿಲ್ಲೆಯಲ್ಲಿ ಒಟ್ಟು 17 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದವು. ಇದರಲ್ಲಿ 11 ಹೊಸಪೇಟೆಯಲ್ಲೇ ಇದ್ದವು. ಆದರೆ ಇದೀಗ ಹೊಸಪೇಟೆಯ 11 ಜನ ಸಹ ಡಿಸ್‍ಚಾರ್ಜ್ ಆಗಿದ್ದು, ಕೊರೊನಾ ಮುಕ್ತವಾಗಿದೆ. ಜಿಲ್ಲೆಯಲ್ಲಿ ಒಟ್ಟು 13ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು …
Read More »ಹಣ್ಣು, ತರಕಾರಿ ಬೆಳೆಗಾರರಿಗೆ 15 ಸಾವಿರ ರೂ.- ಬಿಎಸ್‍ವೈಯಿಂದ ಮತ್ತೆ 162 ಕೋಟಿ ಪ್ಯಾಕೇಜ್ ಪ್ರಕಟ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಪ್ಯಾಕೇಜ್ ಘೋಷಣೆ ಮಾಡಿದ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ತರಕಾರಿ, ಹಣ್ಣು ಬೆಳೆಗಾರರು ಹಾಗೂ ಕೈಮಗ್ಗ ಕಾರ್ಮಿಕರಿಗಾಗಿ ಒಟ್ಟು 162 ಕೋಟಿ ರೂ. ಪ್ಯಾಕೇಜ್ ಪ್ರಕಟಿಸಿದ್ದಾರೆ. ತರಕಾರಿ, ಹಣ್ಣು ಬೆಳೆಗಾರರಿಗೆ ಪ್ರತಿ ಹೆಕ್ಟೇರ್‌ಗೆ 15 ಸಾವಿರ ರೂಪಾಯಿನಂತೆ ಒಟ್ಟು 137 ಕೋಟಿ ರೂ. ಪ್ಯಾಕೇಜ್ ಅನ್ನು ರಾಜ್ಯ ಸರ್ಕಾರದಿಂದ ಘೋಷಣೆ ಮಾಡಲಾಗಿದೆ. ಇದು 7 ಬಗೆಯ ಹಣ್ಣುಗಳು, 10 ತರಕಾರಿ ಬೆಳೆಗಳಿಗೆ ಸಿಮೀತವಾಗಿದೆ. …
Read More »