ಜು.19-ಕೋವಿಡ್-19ರ ಸೋಂಕಿನ ನಂತರವೂ ವ್ಯಕ್ತಿ, ಕುಟುಂಬ ಗೌರವಯುತವಾಗಿ ಬದುಕಬೇಕು. ಹಾಗಾಗಿ ಫಲಕ ಹಾಕುವ ಪರಿಪಾಠವನ್ನು ಸರ್ಕಾರ ಕೂಡಲೇ ನಿಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಸೋಂಕಿತರ ಮನೆಗಳ ಎದುರು ಸ್ಥಳೀಯ ಆಡಳಿತ ಹಾಕುತ್ತಿರುವ ಎಚ್ಚರಿಕೆ ಫಲಕ ನವಯುಗದ ಸಾಮಾಜಿಕ ತಾರಮ್ಯ, ಅಸ್ಪೃಶ್ಯತೆಗೆ ಕಾರಣವಾಗುತ್ತಿದೆ. ಕುಟುಂಬಗಳನ್ನು ಸಮಾಜ ತಿರಸ್ಕಾರದಿಂದ ನೋಡುವಂತೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಮನೆಗಳ ಎದುರು ಫಲಕ ಹಾಕಿ ಅಸ್ಪೃಶ್ಯತೆ ಸೃಷ್ಟಿಸುವ …
Read More »ಕೊನೆಗೂ ರಾಜ್ಯ ಸರ್ಕಾರ ನಿದ್ದೆಯಿಂದ ಎಚ್ಚೆತ್ತಿದೆ.
ಬೆಂಗಳೂರು: ಕೊನೆಗೂ ರಾಜ್ಯ ಸರ್ಕಾರ ನಿದ್ದೆಯಿಂದ ಎಚ್ಚೆತ್ತಿದೆ. ಕೋವಿಡ್ ಟೆಸ್ಟ್ ಮಾಡಿಸಿ ನೆಗೆಟಿವ್ ಬಂದರೆ ಮಾಹಿತಿ ನೀಡದೇ ಇದ್ದ ರಾಜ್ಯ ಸರ್ಕಾರ ಇನ್ನು ಮುಂದೆ ನಿಮ್ಮ ರಿಪೋರ್ಟ್ ನೆಗೆಟಿವ್ ಆದರೂ ಅದರ ಫಲಿತಾಂಶದ ಎಸ್‍ಎಂಎಸ್ ನಿಮ್ಮ ಮೊಬೈಲ್‍ಗೆ ಬರಲಿದೆ. ಹೀಗಾಗಿ ಇನ್ನು ಮುಂದೆ ಯಾರೂ ಆತಂಕದಲ್ಲಿ ದಿನ ದೂಡಬೇಕಾಗಿಲ್ಲ. ಈ ಬಗ್ಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರಾದ ಡಾ.ಅರುಂಧತಿ ಚಂದ್ರಶೇಖರ್ ಅವರು ಜುಲೈ 18ರಂದು ಸುತ್ತೋಲೆ ಹೊರಡಿಸಿದ್ದಾರೆ. ಎಲ್ಲಾ ಕೋವಿಡ್-19 …
Read More »ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಿದ್ದ ಬಿಗ್ ಬಿ ಅಭಿಮಾನಿಗಳಿಗೆ ಧನ್ಯವಾದ ಮತ್ತು ವಂದನೆ ಸಲ್ಲಿಸಿದ್ದರು.
ಮುಂಬೈ: ಕೊರೋನಾ ಸೋಂಕಿಗೆ ಗುರಿಯಾಗಿರುವ ಬಿಗ್ ಬಿ ಅಮಿತಾಬ್ ಬಚ್ಚನ್ ತಮ್ಮ ತಂದೆ ಕವಿ ಹರಿವಂಶರಾಯ್ ಬಚ್ಚನ್ ಅವರ ಕವಿತೆ ಸಾಲುಗಳನ್ನು ಶೇರ್ ಮಾಡಿಕೊಂಡಿದ್ದಾರೆ. ತಮ್ಮ ಬ್ಲಾಗ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ತಾನು ಇಂದು ಯಾವ ಸ್ಥಿತಿಯಲ್ಲಿ ಇದ್ದೇನೆ ಎಂಬುದಕ್ಕೆ ತನ್ನ ಭೂತಕಾಲದ ಕೆಲ ನಿರ್ಧಾರಗಳು ಕಾರಣ ಎಂಬ ಅರ್ಥದ ಸಾಲುಗಳನ್ನು ಹಂಚಿಕೊಂಡಿದ್ದಾರೆ. ಇಂದಿನ ರಿಪ್ಲೆಕ್ಷನ್ ಗೆ ಅಂದಿನ ನಿರ್ಧಾರಗಳೇ ಕಾರಣ ಎಂಬ ಅರ್ಥದಲ್ಲಿ ಹೇಳಿದ್ದಾರೆ. ಕೊರೋನಾ ಸೋಂಕು ದೃಢಪಟ್ಟ …
Read More »ನಕಲಿ ವಿಡಿಯೋ ವೈರಲ್ ಮಾಡಿದ ಪ್ರಕರಣ ಸಂಬಂಧ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆ ಹೆಸರಲ್ಲಿ ನಕಲಿ ವಿಡಿಯೋ ವೈರಲ್ ಮಾಡಿದ ಪ್ರಕರಣ ಸಂಬಂಧ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಮೀರ್ ಉಲ್ಲಾ ಬಂಧಿತ ಆರೋಪಿ. ಫೇಸ್‌ಬುಕ್‌ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡ ಹಿನ್ನೆಲೆಯಲ್ಲಿ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಆರೋಪಿ ಸಮೀರ್ ಉಲ್ಲಾ ಸಿನಿಮಾ ಇಂಡಸ್ಟ್ರೀಸ್ ನಲ್ಲಿ ಕೆಲಸ ಮಾಡುತ್ತಿದ್ದು, ಕಾಂಗ್ರೆಸ್ ನಾಯಕರೊಂದಿಗೆ ಗುರುತಿಸಿಕೊಂಡಿರುವ ಪ್ರಾಥಮಿಕ ಮಾಹಿತಿ ಈಗ ಲಭ್ಯವಾಗಿದೆ. ಈ ವಿಡಿಯೋವನ್ನು ಪರಿಶೀಲಿಸಿದ ಸಿಸಿಬಿ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ನಕಲಿ ವಿಡಿಯೋವನ್ನು …
Read More »ಬಾಲಕಿಗೆ ಕೊರೊನಾ ವರದಿ ನೆಗೆಟಿವ್ ಬಂದ್ರೂ ಗ್ರಾಮ ಸೀಲ್‍ಡೌನ್
ಮಡಿಕೇರಿ: ಬಾಲಕಿಗೆ ಕೊರೊನಾ ವರದಿ ನೆಗೆಟಿವ್ ಬಂದ್ರೂ ಗ್ರಾಮ ಸೀಲ್‍ಡೌನ್ ಮಾಡಿದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಶಾಲನಗರ ಸಮೀಪದ ಜನತಾ ಕಾಲೋನಿಯನ್ನು ಸೀಲ್‍ಡೌನ್ ಮಾಡಿ ಮೂರು ದಿನಗಳ ಕಳೆದಿವೆ. ಜನತಾ ಕಾಲೋನಿಯ 17 ವರ್ಷದ ಯುವತಿಗೆ ಕೊರೊನಾ ಸೋಂಕು ಇದೆ ಎಂದು ಶಂಕಿಸಲಾಗಿತ್ತು. ಆದ್ರೆ ಪರೀಕ್ಷೆಗೆ ಒಳಪಡಿಸಿದಾಗ ವರದಿಯಲ್ಲಿ ನೆಗೆಟಿವ್ ಬಂದಿದೆ. ಇಂದಿಗೂ ಸೀಲ್‍ಡೌನ್ ಮಾಡಿರುವ ಗ್ರಾಮವನ್ನು ತೆರವು ಮಾಡದೇ ಇರುವುದರಿಂದ ಗ್ರಾಮಸ್ಥರು ಅಧಿಕಾರಿಗಳ …
Read More »ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿ ಮೂವರಿಗೆ ಗಂಭೀರ ಗಾಯ: ಮಾನವೀಯತೆ ಮರೆತು ವಿಡಿಯೋ ಮಾಡಿದ ಜನ
ಯಾದಗಿರಿ ಜಿಲ್ಲೆ ಅಲ್ಲೀಪುರ ತಾಂಡಾದ ಬಳಿ ಬೈಕ್, ಟಿಪ್ಪರ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಗೂರು ಗ್ರಾಮದ ತಾಯಿ, ಮಗ, ಮಗಳು ಗಾಯಗೊಂಡು ರಸ್ತೆಯಲ್ಲಿ ಬಿದ್ದು ಒದ್ದಾಡಿದ್ದಾರೆ. ಜನ ನೀರು ಕೊಡದೇ ಅಮಾನವೀಯವಾಗಿ ವರ್ತಿಸಿದ್ದಾರೆ. ಗಾಯಗೊಂಡವರು ನರಳಾಡುತ್ತಾ ಸಹಾಯಕ್ಕಾಗಿ ಗೋಗರೆದರೂ ನೆರವಾಗದೇ ವಿಡಿಯೋ ಮಾಡಿಕೊಂಡು ಅಮಾನವೀಯ ವರ್ತನೆ ತೋರಿದ್ದಾರೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಇದೇ ಮಾರ್ಗವಾಗಿ ಬರುವಾಗ ಗಾಯಾಳುಗಳನ್ನು ಗಮನಿಸಿದ್ದು ಆಂಬುಲೆನ್ಸ್ ಗೆ ಕರೆ ಮಾಡಿ …
Read More »ಚಿಕ್ಕಮಗಳೂರು ಜಿಲ್ಲೆಯ ಮೂರು ಪೊಲೀಸ್ ಠಾಣೆ ಸೀಲ್ ಡೌನ್: ಹೆಚ್ಚಿದ ಆತಂಕ
ಚಿಕ್ಕಮಗಳೂರು: ನಾಲ್ವರು ಪೊಲೀಸರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಮೂರು ಪೊಲೀಸ್ ಠಾಣೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ, ಅಜ್ಜಂಪುರ ಹಾಗೂ ಯಗಟಿ ಪೊಲೀಸ್ ಠಾಣೆಗಳನ್ನು ಸೀಲ್‍ಡೌನ್ ಮಾಡಿ ಸೋಂಕಿತ ಪೊಲೀಸ್ ಪೇದೆಗಳನ್ನು ಚಿಕ್ಕಮಗಳೂರು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಲ್ಲಿಯವರೆಗೆ 250 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
Read More »ಬೆಳಗಾವಿಯಲ್ಲಿ ಬಿಮ್ಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ: ಚಿಕಿತ್ಸೆ ಸಿಗದೇ 30 ವರ್ಷದ ಯುವತಿ ಸಾವು
ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದರಿಂದ ಸಾವನ್ನಪ್ಪುವವರ ಸಂಖ್ಯೆಯೂ ಕೂಡ ಹೆಚ್ಚಿದೆ. ಇದುವರೆಗೂ ಬೆಳಗಾವಿ ಜಿಲ್ಲೆಯಾದ್ಯಂತ 932 ಜನರಲ್ಲಿ ಕೊರೋನಾ ಪಾಸಿಟಿವ್ ಕಂಡು ಬಂದಿದೆ. ಅದರಲ್ಲಿ 435 ಜನರು ಗುಣಮುಖರಾಗಿದ್ದರೆ, 24 ಜನರ ಸಾವನ್ನಪ್ಪಿದ್ದಾರೆ. ಇನ್ನು, 473 ಜನರಿಗೆ ಚಿಕಿತ್ಸೆ ಮುಂದುವರೆದಿದೆ. ಇನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. ಒಂದರ ಹಿಂದೆ ಇನ್ನೊಂದು …
Read More »ಬಿಮ್ಸ್ ನಲ್ಲಿ ನರಳಾಡಿ ಕೊರೊನಾ ಸೋಂಕಿತ ಸಾವು; ತನಿಖೆಗೆ ಆದೇಶಿಸಿದ ಬೆಳಗಾವಿ ಡಿಸಿ
ಬೆಳಗಾವಿ : ಬಿಮ್ಸ್ ನಲ್ಲಿ ನರಳಾಡಿ ಕೊರೊನಾ ಸೋಂಕಿತ ಸಾವು ಕೇಸ್ ಗೆ ಸಂಬಂಧಿಸಿದಂತೆ ಪ್ರಕರಣದ ಬಗ್ಗೆ ತನಿಖೆಗೆ ಬೆಳಗಾವಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಬಿಮ್ಸ್ ಆಸ್ಪತ್ರೆಯಲ್ಲಿ 65 ವರ್ಷದ ವೃದ್ಧರೊಬ್ಬರು ನರಳಾಡಿ ಸಾವನಪ್ಪಿದ್ದಾರೆ. ಈ ಬಗ್ಗೆ ಮಾಧ್ಯಮದಲ್ಲಿ ಸುದ್ಧಿ ಬಿತ್ತರವಾದ ಹಿನ್ನಲೆಯಲ್ಲಿ, ಎಚ್ಚೆತ್ತುಕೊಂಡ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಬಿಮ್ಸ್ ನಿರ್ದೇಶಕರಿಗೆ ಈ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಡಿಸಿ ಹಿರೇಮಠ ಅವರು, ಬಿಮ್ಸ್ ನಿರ್ದೇಶಕರಿಗೆ …
Read More »ಮೂಡಲಗಿ ಪೊಲೀಸ್ ಪೇದೆಗೆ ಕೊರೋನಾ ಸೋಂಕು ತಗಲಿರುವುದು ದೃಢ.
ಮೂಡಲಗಿ : ಮೂಡಲಗಿ ಪಟ್ಟಣದಲ್ಲಿರುವ ಪೊಲೀಸ್ ಠಾಣೆ ಹಾಗೂ ಸಿಪಿಐ ಠಾಣೆಯ ಎಲ್ಲ ಸಿಬ್ಬಂದಿಗಳನ್ನು ಕೂಡಲೇ ಗಂಟಲು ದ್ರವ ಪರೀಕ್ಷೆ ಮಾಡಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಮೂಡಲಗಿ ಪಟ್ಟಣ ಮತ್ತು ತಾಲೂಕಿನಲ್ಲಿ ಈಗಾಗಲೇ ಕೊರನ ಸೋಂಕುಗಳು ಪತ್ತೆಯಾಗಿದ್ದು ಈ ಹಿನ್ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಕೊರೋನಾ ಸೋಂಕು ತಗುಲಿ ಬಹುದು ಎಂಬ ಸಂಶಯ ವ್ಯಕ್ತವಾಗಿದ್ದು, ಆದಕಾರಣ ಜನತೆಯಲ್ಲಿ ಶಾಂತಯ್ಯ ನಿವಾರಿಸಲು ಶೀಘ್ರವೇ ಪೋಲಿಸ್ ಠಾಣೆಯ ಸಿಬ್ಬಂದಿಗಳ ಗಂಟಲು ದ್ರವ ಪರೀಕ್ಷೆ ಮಾಡುವುದು ಅವಶ್ಯವಿದೆ. …
Read More »
Laxmi News 24×7