ನವದೆಹಲಿ: ವ್ಯಕ್ತಿಯೊಬ್ಬ ತನ್ನ ಸಹೋದರಿಯನ್ನು ಭೇಟಿಯಾಗಲು ಹೋಗಿದ್ದ ಗರ್ಭಿಣಿ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಹೇಮಲತಾ (30) ಮೃತ ಮಹಿಳೆ. ಆರೋಪಿ ವಿಜಯ್ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಈ ಘಟನೆ ದಕ್ಷಿಣಪುರಿಯಲ್ಲಿರುವ ಅಂಬೇಡ್ಕರ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಭಾನುವಾರ ಮಧ್ಯರಾತ್ರಿ ಸುಮಾರು 12.30ಕ್ಕೆ ಆರೋಪಿ ವಿಜಯ್ ಪೊಲೀಸ್ ಠಾಣೆಗೆ ಹೋಗಿ ತನ್ನ ಹೆಂಡತಿಯನ್ನು ಕೊಲೆ ಮಾಡಿದ್ದೇನೆ ಎಂದು ಅಧಿಕಾರಿಗಳಿಗೆ ತಿಳಿಸಿದ್ದಾನೆ. ತಕ್ಷಣ …
Read More »ಭಾರತದಲ್ಲಿ ಕಿಲ್ಲರ್ ಕೊರೊನಾಗೆ 2,415 ಮಂದಿ ಬಲಿ – 74 ಸಾವಿರ ಗಡಿದಾಟಿತ ಸೋಂಕಿತರ ಸಂಖ್ಯೆ
ನವದೆಹಲಿ: ವಿಶ್ವವ್ಯಾಪಿ ಹರಡಿರುವ ಕಿಲ್ಲರ್ ಕೊರೊನಾ ವೈರಸ್‍ಗೆ ಭಾರತದಲ್ಲಿ ಬರೋಬ್ಬರಿ 2,415 ಮಂದಿ ಬಲಿಯಾಗಿದ್ದಾರೆ. ಈವರೆಗೆ 74,292 ಮಂದಿ ಸೋಂಕಿಗೆ ತುತ್ತಾಗಿದ್ದು, 24,453 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ ಎಂದು ವರದಿಯಾಗಿದೆ. ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಭಾರತದಲ್ಲಿ ಮಾರ್ಚ್ 24ರಿಂದ ಲಾಕ್‍ಡೌನ್ ಜಾರಿಗೊಳಿಸಲಾಗಿದೆ. ಮೇ 17 ರಂದು ಮುಗಿಯಬೇಕಿದ್ದ ಲಾಕ್‍ಡೌನ್ ಅವಧಿಯನ್ನು ವಿಸ್ತರಿಸುವ ಸಾಧ್ಯತೆ ಇದೆ. ಲಾಕ್‍ಡೌನ್ 4.0 ಈವರೆಗೆ ಇದ್ದ ಲಾಕ್‍ಡೌನ್ ನಿಯಮಗಳಿಗಿಂತ ಭಿನ್ನವಾಗಿರಲಿದೆ ಎನ್ನಲಾಗಿದೆ. ಮಹಾರಾಷ್ಟ್ರದಲ್ಲಿ ಈವರೆಗೆ …
Read More »ಶ್ರಮಿಕರಿಗಾಗಿ ಇಂದು ವಿಶೇಷ ಪ್ಯಾಕೇಜ್ ವಿಸ್ತರಣೆ ಮಾಡ್ತಾರಾ ಬಿಎಸ್‍ವೈ?
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ರಾತ್ರಿ 20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದು, ರಾಜ್ಯದಲ್ಲಿ ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಶ್ರಮಿಕರಿಗಾಗಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆಗಳಿವೆ. ಹೌದು. ಇಂದು ಲಾಕ್ ಡೌನ್ ನ ಮತ್ತೊಂದು ಪ್ಯಾಕೇಜ್ ವಿಸ್ತರಣೆ ಘೋಷಣೆ ಮಾಡುವ ಸಾಧ್ಯತೆ ಇದ್ದು, ಕೆಲವು ಕಸುಬುದಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬಹುದು. ಅಕ್ಕಸಾಲಿಗರು, ಬಡಗಿಗಳು, ಕುಂಬಾರರು, ಅರ್ಚಕರು, ಟೈಲರ್ ಗಳು, ಅಡುಗೆ …
Read More »ಕುಡಿದ ಮತ್ತಲ್ಲಿ ಕೆಎಸ್ಆರ್‌ಟಿಸಿ ಬಸ್ ಚಾಲಕನ ಎಡವಟ್ಟು- ತಪ್ಪಿದ ಭಾರೀ ಅನಾಹುತ
ಬಾಗಲಕೋಟೆ: ಕುಡಿದ ಮತ್ತಲ್ಲಿ ಕೆಎಸ್ಆರ್‌ಟಿಸಿ ಬಸ್ ಚಾಲಕ ನಿಯಂತ್ರಣ ತಪ್ಪಿ ನೀರಿನ ಟ್ಯಾಂಕ್‍ಗೆ ಡಿಕ್ಕಿ ಹೊಡೆದು ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಗುಳೇದಗುಡ್ಡ ತಾಲೂಕಿನ ಆಸಂಗಿ ಗ್ರಾಮದಲ್ಲಿ ನಡೆದಿದೆ. ಆಸಂಗಿ ಗ್ರಾಮದ ಜ್ಯೋತೆವ್ವ ಜಾರ್ಜ್ ಆಸಂಗಿ (36), ನವೀನ್ ರತ್ನಪ್ಪ ನಾಗರಾಳ (22) ಹಾಗೂ 8 ವರ್ಷದ ಬಾಲಕಿ ಗಾಯಾಳುಗಳು. ಗುಳೇದಗುಡ್ಡ ತಾಲೂಕಿನ ಮಂಗಳಗುಡ್ಡ ನಿವಾಸಿ ಪರಸಪ್ಪ ಶಿರಗುಪ್ಪಿ ಕುಡಿದು ಬಸ್ ಚಾಲನೆ ಮಾಡಿದ ಚಾಲಕ. ಪರಸಪ್ಪ ಶಿರಗುಪ್ಪಿ ಮಂಗಳೂರಿನಿಂದ …
Read More »ರಾಜ್ಯಕ್ಕೆ ತಬ್ಲಿಘಿ ಜೊತೆ ಅಜ್ಮೀರ್ ಕಂಟಕ- ಹೊರ ರಾಜ್ಯದಿಂದ ಬಂದವ್ರಲ್ಲಿಯೇ ಹೆಚ್ಚು ಪಾಸಿಟಿವ್
ಬೆಂಗಳೂರು: ರಾಜ್ಯಕ್ಕೆ ತಬ್ಲಿಘಿ ಜೊತೆ ಅಜ್ಮೀರ್ ಕಂಟಕ ಎದುರಾಗಿದೆ. ಹೊರ ರಾಜ್ಯದಿಂದ ಬರುವವರಲ್ಲಿ ಸೋಂಕು ಹೆಚ್ಚಾಗ್ತಾ ಇದೆ. ಅಜ್ಮೀರ್ ಯಾತ್ರೆಗೆ ಹೋಗಿದ್ದವರಲ್ಲಿ ಮತ್ತು ಅಹಮದಾಬಾದ್ ಪ್ರಯಾಣ ಮಾಡಿದ್ದವರು ರಾಜ್ಯಕ್ಕೆ ಕಂಟಕವಾಗ್ತಾ ಇದ್ದಾರೆ. ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿನಕ್ಕೆ ಹೆಚ್ಚುತ್ತಲೇ ಇದೆ. ಸಾವಿರ ಗಡಿಯತ್ತ ಸೋಂಕಿತರ ಸಂಖ್ಯೆ ಏರುತ್ತಿದ್ದು 925ಕ್ಕೆ ತಲುಪಿದೆ. ಅರ್ಧದಷ್ಟು ವಿದೇಶದಿಂದ ಬಂದವರಾದರೆ ಇನ್ನರ್ಧ ತಬ್ಲಿಘಿಗಳಿಂದಲೇ ಪ್ರಕರಣಗಳು ಹೆಚ್ಚಾಗಿದೆ. ಬೆಂಗಳೂರು, ಬೆಳಗಾವಿ, ಬಾಗಲಕೋಟೆ ಮತ್ತು ಕಲಬುರಗಿ ಸೇರಿದಂತೆ …
Read More »ಗ್ರೀನ್ ಝೋನ್‍ನಲ್ಲಿದ್ದ ಹಾಸನ ಜಿಲ್ಲೆಗೆ ಮುಂಬೈ ಕಂಟಕ!…….
ಹಾಸನ: ಗ್ರೀನ್ ಝೋನ್‍ನಲ್ಲಿದ್ದ ಹಾಸನ ಜಿಲ್ಲೆಗೆ ಮಹಾಮಾರಿ ಕೊರೊನಾ ಕಾಲಿಟ್ಟಿದೆ. ಮುಂಬೈಯಿಂದ ಹಾಸನಕ್ಕೆ ಆಗಮಿಸಿದ ಒಂದೇ ಕುಟುಂಬದ ನಾಲ್ವರಿಗೆ ಸೋಂಕು ದೃಢ ಪಟ್ಟಿದೆ. ಜಿಲ್ಲೆಯಲ್ಲಿ ಮಂಗಳವಾರ ಒಂದೇ ದಿನ ಐವರಲ್ಲಿ ಕೊರೊನಾ ದೃಢಪಟ್ಟಿದೆ. ಚನ್ನರಾಯಪಟ್ಟಣ ತಾಲೂಕಿನ ಐವರು ಮೇ 10ರಂದು ಮುಂಬೈನಿಂದ ಬಂದಿದ್ದರು. ಅದರಲ್ಲಿ ಒಂದೇ ಕುಟುಂಬದ ನಾಲ್ವರು ಒಂದೇ ಕಾರಿನಲ್ಲಿ ಬಂದಿದ್ದರು. ಒಂದೇ ಫ್ಯಾಮಿಲಿಯ ಇಬ್ಬರು ಮಕ್ಕಳು, ಓರ್ವ ಮಹಿಳೆ, ಓರ್ವ ಪುರುಷನಲ್ಲಿ ಸೋಂಕು ದೃಢಪಟ್ಟಿದೆ. ಕಾರ್ ಚಾಲಕನ …
Read More »ಅಂಗನವಾಡಿಯಲ್ಲಿ ಮಕ್ಕಳಿಗೆ ಹಾಗೂ ಗರ್ಭಿಣಿ ಬಾಣಂತಿಯರಿಗೆ ಮಾನ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಆಹಾರ ವಿತರಣೆ ಮಾಡಿದರು
ಗೋಕಾಕ ನಗರದ ನಾಯಕ ಗಲ್ಲಿ ಅಂಗನವಾಡಿ ಕೋಡ್ ಸಂಖ್ಯೆ 203 ರಲ್ಲಿ ಶಿಶು ಅಭಿವೃದ್ಧಿ ಯೋಜನೆ ಗೋಕಾಕ ವತಿಯಿಂದ ಅಂಗನವಾಡಿಯ ಮಕ್ಕಳಿಗೆ ಹಾಗೂ ಗರ್ಭಿಣಿ ಬಾಣಂತಿಯರಿಗೆ ಮನೆಯಲ್ಲಿ ಆಹಾರ ತಯಾರಿಸಲು ಫುಡ್ ಕಿಟ್ ನ್ನು ಮಾನ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀ ಅನಿಲ ಕಾಂಬಳೆಯವರು ಆಹಾರ ಸಾಮಗ್ರಿಗಳನ್ನು ವಿತರಿಸಿದರು. ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ನಸರೀನ ಕೊಣ್ಣೂರ, ಅಂಗನವಾಡಿ ಕಾರ್ಯಕರ್ತೆ ಕಮಲಾ ನರೇವಾಡಿ ಅಂ.ಸಹಾಯಕಿ ಮಹಾದೇವಿ ಚಿಕ್ಕಪ್ಪಗೋಳ ಹಾಜರಿದ್ದರು.
Read More »ಪ್ರಧಾನಿ ಘೋಷಿಸಿದ 20 ಲಕ್ಷ ಕೋಟಿ ಪ್ಯಾಕೇಜ್ ಬಗ್ಗೆ ಸಿಎಂ ಬಿಎಸ್ವೈ ಪ್ರತಿಕ್ರಿಯೆ ಏನು ಗೊತ್ತೇ..!
ಬೆಂಗಳೂರು: ಕೊರೊನಾ ಲಾಕ್ ಡೌನ್ 4.0 ಆರಂಭಕ್ಕೆ ಮುನ್ನವೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಕಟಿಸಿರುವ 20 ಲಕ್ಷ ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ರೈತರು, ಕಾರ್ಮಿಕರು ಮತ್ತು ಸಣ್ಣ ಉದ್ಯಮಿದಾರರಿಗೆ ಹೊಸ ಭರವಸೆ ಮತ್ತು ಚೈತನ್ಯವನ್ನು ತುಂಬಿಸಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ ಎನ್ ಅಶ್ವತ್ಥನಾರಾಯಣ ಪ್ರತಿಪಾದಿಸಿದ್ದಾರೆ. ಜತೆಗೆ, ಲೋಕಲ್ ಸೇ ಗ್ಲೋಬಲ್ ಎನ್ನುವ ಮೋದಿ ಅವರ ಘೋಷಣೆ ಐತಿಹಾಸಿಕ. ಲೋಕಲ್ ಉತ್ಪನ್ನಗಳಿಗೆ ವೋಕೋಲ್ (ಬಾಯಿ ಮಾತಿನ …
Read More »”ಕಾರ್ಮಿಕ ಕಾಯ್ದೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ತರುವುದನ್ನು ರಾಜ್ಯ ಸರ್ಕಾರ ಕೈಬಿಡಬೇಕು” : ಹೆಚ್ಡಿಕೆ
ಬೆಂಗಳೂರು, ಮೇ 12- ರೈತರಿಗೆ ಮಾರಕವಾಗುವ ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕರಿಗೂ ಮಾರಕವಾಗಿರುವ ಕಾರ್ಮಿಕ ಕಾಯ್ದೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ತರುವುದನ್ನು ರಾಜ್ಯ ಸರ್ಕಾರ ಕೈ ಬಿಡಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನಿರ್ದೇಶನದಂತೆ ಕೃಷಿ ಉತ್ಪನ್ನಗಳನ್ನು ಎಲ್ಲಿ ಬೇಕಾದರೂ ಖರೀದಿಸಲು ಅವಕಾಶ ನೀಡುವಂತೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಇದರಿಂದ ಎಪಿಎಂಸಿಗಳು ಮುಚ್ಚುವಂತಾಗುತ್ತದೆ ಎಂದು ಆರೋಪಿಸಿದರು. ರಾಜ್ಯ …
Read More »ಐಪಿಎಲ್ ರದ್ದಾದ್ರೆ ಬಿಸಿಸಿಐಗೆ ಅಂದಾಜು 4,000 ಕೋಟಿ ರೂ. ನಷ್ಟ!
ಮುಂಬೈ: ಕೊರೊನಾ ವೈರಸ್ ಕಾರಣದಿಂದ ವಿಶ್ವ ಕ್ರೀಡಾಲೋಕ ತತ್ತರಿಸಿದೆ. ಹಲವು ಪ್ರತಿಷ್ಠಿತ ಟೂರ್ನಿಗಳು ಕೊರೊನಾದಿಂದ ರದ್ದಾಗಿದ್ದು, ಮತ್ತಷ್ಟು ಟೂರ್ನಿಗಳನ್ನು ಮುಂದೂಡಲಾಗಿದೆ. ಇತ್ತ 2020ರ ಐಪಿಎಲ್ ಟೂರ್ನಿ ಕೂಡ ಲಾಕ್‍ಡೌನ್ ಹಿನ್ನೆಲೆಯಲ್ಲಿ ಏಪ್ರಿಲ್ 15ಕ್ಕೆ ಮುಂದೂಡಲಾಗಿತ್ತು. ಆದರೆ ಮತ್ತೆ ಲಾಕ್‍ಡೌನ್ ಮುಂದುವರಿಸಿದ ಕಾರಣ ಬಿಸಿಸಿಐ ಮುಂದಿನ ಆದೇಶದವರೆಗೂ ಐಪಿಎಲ್ ಮುಂದೂಡಿತ್ತು. ಆದರೆ ಇದುವರೆಗೂ ಐಪಿಎಲ್ ಆರಂಭವಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಮತ್ತೆ 2020ರ ಐಪಿಎಲ್ ಶೆಡ್ಯೂಲ್ ಮುಂದೂಡಲು ಬಿಸಿಸಿಐ ಚಿಂತನೆ ನಡೆಸಲು …
Read More »