ಕುಟುಂಬಕ್ಕೆ ಪುಟ್ಟ ಕಂದಮ್ಮನ ಆಗಮನದಿಂದ ಸಂತೋಷ ಜಾರಕಿಹೊಳಿ ದಂಪತಿಗಳ ವತಿಯಿಂದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ…!! ನೂತನ ಸಚಿವರು ಹಾಗೂ ಗೋಕಾಕ ಮತಕ್ಷೇತ್ರದ ಶಾಸಕರು ಆದ ರಮೇಶ ಜಾರಕಿಹೊಳಿ ಅವರ ಹಿರಿಯ ಸುಪುತ್ರ ಯುವಕರ ಕಣ್ಮಣಿ ಸಂತೋಷ ಜಾರಕಿಹೊಳಿ ಅವರು ಇತ್ತೀಚಿಗೆ ಗಂಡು ಮಗುವಿಗೆ ತಂದೆ ಆಗಿದ್ದರು.ತಮ್ಮ ಕುಟುಂಬಕ್ಕೆ ಪುಟ್ಟ ಕಂದಮ್ಮನ ಆಗಮನದಿಂದ ಅವರ ಮನೆಯಲ್ಲಿ ಸಂತಸದ ವಾತಾವರಣ ನಿರ್ಮಾಣವಾಗಿತ್ತು.ಗಂಡು ಮಗುವಿಗೆ ಜನ್ಮ ನೀಡಿದ ಸಂತೋಷ ಜಾರಕಿಹೊಳಿ ಅವರ ಪತ್ನಿ ಅಂಭಿಕಾ …
Read More »ರವೀಂದ್ರ ಜಡೇಜಾ ಮತ್ತೊಮ್ಮೆ ತಾನೊಬ್ಬ ಅತ್ಯುತ್ತಮ ಫೀಲ್ಡರ್ ಎಂಬುದನ್ನು ತೋರಿಸಿಕೊಟ್ಟಿದ್ದಾರೆ.
ಆಕ್ಲೆಂಡ್: ಟೀಂ ಇಂಡಿಯಾದ ಸ್ಪಿನ್ನರ್ ರವೀಂದ್ರ ಜಡೇಜಾ ಮತ್ತೊಮ್ಮೆ ತಾನೊಬ್ಬ ಅತ್ಯುತ್ತಮ ಫೀಲ್ಡರ್ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. 175 ರನ್ ಗಳಿಗೆ 4 ವಿಕೆಟ್ ಕಳೆದುಕೊಂಡಿದ್ದ ನ್ಯೂಜಿಲೆಂಡಿಗೆ ಜಡೇಜಾ ಫೀಲ್ಡಿಂಗ್ ಮೂಲಕ ಶಾಕ್ ನೀಡಿದ್ದರು. ನವದೀಪ್ ಸೈನಿ ಎಸೆದ 35ನೇ ಓವರಿನ ಎರಡನೇ ಎಸೆತದಲ್ಲಿ ರಾಸ್ ಟೇಲರ್ ಒಂಟಿ ರನ್ ಪಡೆಯಲು ಯತ್ನಿಸಿದರು. ಬ್ಯಾಕ್‍ವರ್ಡ್ ಪಾಯಿಂಟ್ ನತ್ತ ಬರುತ್ತಿದ್ದಂತೆ ಅಲ್ಲಿಂದ ಜಡೇಜಾ ಎಡಗೈಯಲ್ಲಿ ಬಾಲ್ ಹಿಡಿದು ನೇರವಾಗಿ ಸ್ಟ್ರೈಕ್ ನಲ್ಲಿದ್ದ ವಿಕೆಟಿಗೆ ಥ್ರೋ …
Read More »ಇಟಗಿ ಮತ್ತು ಬೋಗೂರ ಗ್ರಾಮದ ಮಧ್ಯದ ಸೇತುವೆ ಬಳಿ ಈ ಭೀಕರ ಅಪಘಾತ
ಬೆಳಗಾವಿ: ಸೇತುವೆ ಮೇಲಿಂದ ಟ್ರ್ಯಾಕ್ಟರ್ ಬಿದ್ದು ಏಳು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಇಟಗಿ ಗ್ರಾಮದಲ್ಲಿ ನಡೆದಿದೆ. ಶೇಖಪ್ಪಾ ಕೆದಾರಿ (38), ಗುಲಾಬೀ ಹುಣಸಿಕಟ್ಟಿ (35), ಶಾಂತವ್ವಾ ಅಳಗೋಡಿ (65), ಶಾಂತವ್ವಾ (63), ನೀಲವ್ವಾ ಮುತ್ನಾಳ್, ಅಶೋಕ್ ಕೇದಾರಿ ಮತ್ತು ತಂಗೆವ್ವ ಹುಣಸಿಕಟ್ಟಿ ಮೃತ ದುರ್ದೈವಿಗಳು. ಮೃತರೆಲ್ಲರೂ ಬೋಗೂರ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಇಟಗಿ ಮತ್ತು ಬೋಗೂರ ಗ್ರಾಮದ ಮಧ್ಯದ ಸೇತುವೆ ಬಳಿ ಈ ಭೀಕರ …
Read More »ಆಡಂಬರ, ಅಬ್ಬರ ಇಲ್ಲದ ಹಿತವಾದ ಪ್ರೇಮ್ ಕಹಾನಿ ‘ದಿಯಾ’
6-5=2 ಹಾರಾರ್ ಚಿತ್ರದ ಸೂಪರ್ ಸಕ್ಸಸ್ ನಿರ್ದೇಶಕ ಅಶೋಕ್ ಕೆ.ಎಸ್ ಈ ಬಾರಿ ‘ದಿಯಾ’ ಚಿತ್ರದ ಮೂಲಕ ಟ್ರಾಯಂಗಲ್ ಲವ್ ಸ್ಟೋರಿ ಹೇಳ ಹೊರಟಿದ್ದಾರೆ. ಇಲ್ಲೂ ಹಾರಾರ್ ಎಳೆ ಇದ್ದು ಪ್ರೇಕ್ಷಕರಿಗೆ ಥ್ರಿಲ್ ನೀಡೋದ್ರಲ್ಲಿ ಮತ್ತೊಮ್ಮೆ ಗೆದ್ದಿದ್ದಾರೆ. ಹೊಸತಂಡ ಕಟ್ಟಿಕೊಂಡು ಹೊಸ ಕಥೆ ಹೇಳ ಹೊರಟಿರೋ ದಿಯಾ ಚಿತ್ರ ಇಂದು ಬಿಡುಗಡೆಯಾಗಿ ಪ್ರೇಕ್ಷಕರಿಂದ ಪಾಸಿಟಿವ್ ರೆಸ್ಪಾನ್ಸ್ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಸಂಪೂರ್ಣ ಹೊಸತನದಿಂದ ಕೂಡಿರೋ ರೋಮ್ಯಾಂಟಿಕ್ ಪ್ರೇಮ್ ಕಹಾನಿ ದಿಯಾ ಚಿತ್ರದಲ್ಲಿದೆ. …
Read More »: ರಾಜ್ಯದಲ್ಲಿನ ಕೊರೊನಾ ಭೀತಿ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಕೊರೋನಾ ರೋಗಿಗಳಿಗಾಗಿ ಪ್ರತ್ಯೇಕ ವಾರ್ಡ್
ರಾಯಚೂರು: ರಾಜ್ಯದಲ್ಲಿನ ಕೊರೊನಾ ಭೀತಿ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಕೊರೋನಾ ರೋಗಿಗಳಿಗಾಗಿ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ. ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಐದು ಬೆಡ್‍ಗಳ ಪ್ರತ್ಯೇಕ ವಾರ್ಡ ಆರಂಭಿಸಲಾಗಿದೆ. ಐಸಿಯು ಮಾದರಿಯಲ್ಲಿ ಕೊರೊನಾ ವಾರ್ಡ್ ಸಿದ್ಧವಾಗಿದ್ದು, ಮುನ್ನೆಚ್ಚರಿಕೆಯಾಗಿ ಅಗತ್ಯ ವೈದ್ಯರು ಹಾಗು ಸಿಬ್ಬಂದಿ ನಿಯೋಜನೆ ಮಾಡಲಾಗಿ ಚಿಕಿತ್ಸೆಗೆ ಅಗತ್ಯ ಔಷಧಿ, ಆಕ್ಸಿಜನ್, ಮಾಸ್ಕ್, ಗೌನ್ ಸೇರಿದಂತೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ರೋಗಿಗಳು ದಾಖಲಾದರೆ ಅವರಿಗೆ ವೆಂಟಿಲೇಟರ್ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಯಚೂರಿನಲ್ಲಿ ಇಲ್ಲಿಯವರೆಗೂ ಯಾವ …
Read More »ನೂತನ 10 ಸಚಿವರೂ ಕೂಡ ಸಿದ್ದರಾಮಯ್ಯ ಬೆಂಬಲಿಗರು. ಹೀಗಾಗಿ ಅವರನ್ನು ಒಳ್ಳೆಯ ಕೆಲಸ ಮಾಡಿ ಎಂದು ಬೆನ್ನು ತಟ್ಟಿ
ಚಾಮರಾಜನಗರ: ಮಾಜಿ ಸಿಎಂ ಸಿದ್ದರಾಮಯ್ಯ ಪ್ರಬುದ್ಧರು. ಅನರ್ಹರು ಜನತಾ ನ್ಯಾಯಾಲಯದಲ್ಲಿ ಗೆದ್ದು ಅರ್ಹರಾಗಿದ್ದಾರೆ. ನೂತನ 10 ಸಚಿವರೂ ಕೂಡ ಸಿದ್ದರಾಮಯ್ಯ ಬೆಂಬಲಿಗರು. ಹೀಗಾಗಿ ಅವರನ್ನು ಒಳ್ಳೆಯ ಕೆಲಸ ಮಾಡಿ ಎಂದು ಬೆನ್ನು ತಟ್ಟಿ ಪ್ರೋತ್ಸಾಹಿಸಬೇಕು ಎಂದು ಬಿಎಸ್‍ಪಿ ಉಚ್ಛಾಟಿತ ಶಾಸಕ ಎನ್ ಮಹೇಶ್ ಸಲಹೆ ನೀಡಿದ್ದಾರೆ. ಚಾಮರಾಜನಗರದ ಯಳಂದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹರು ಯಾವುದೇ ಪಕ್ಷಕ್ಕೆ ಹೋಗಿ ಮಂತ್ರಿಯಾದರೂ ಆವರು ಅನರ್ಹರೇ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಮಹೇಶ್, …
Read More »ಮೋದಿ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಕೋರಿದ್ದಾರೆ. ಚುನಾವಣೆ ಪ್ರಜಾಪ್ರಭುತ್ವದ ಉತ್ಸವ
ನವದೆಹಲಿ, ಫೆ.8-ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಷ್ಟ್ರದ ರಾಜಧಾನಿ ದೆಹಲಿ ಜನತೆಗೆ ಮನವಿ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಕೋರಿದ್ದಾರೆ. ಚುನಾವಣೆ ಪ್ರಜಾಪ್ರಭುತ್ವದ ಉತ್ಸವ. ಈ ಜನತಂತ್ರ ಹಬ್ಬದಲ್ಲಿ ಎಲ್ಲರೂ ಉತ್ಸಾಹದಿಂದ ಮತ ಚಲಾಯಿಸುವಂತೆ ಅವರು ಟ್ವೀಟರ್‍ನಲ್ಲಿ ಮನವಿ ಮಾಡಿದ್ದಾರೆ. ದೇಶದ ಯಾವುದೇ ರಾಜ್ಯಗಳ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆ ಸಂದರ್ಭಗಳಲ್ಲಿ ಮೋದಿ ಮತದಾರರಿಗೆ ಈ ರೀತಿಯ ಮನವಿ ಮಾಡುವುದು ಪರಿಪಾಠ. ಅಂತೆಯೇ ದೆಹಲಿ …
Read More »ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ 3ನೇ ಬಾರಿ ಗೆಲುವಿನೊಂದಿಗೆ ಹ್ಯಾಟ್ರಿಕ್ ವಿಜಯ ಸಾಧಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ವಿಶ್ವಾಸ
ನವದೆಹಲಿ, ಫೆ.8-ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ 3ನೇ ಬಾರಿ ಗೆಲುವಿನೊಂದಿಗೆ ಹ್ಯಾಟ್ರಿಕ್ ವಿಜಯ ಸಾಧಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಿ.ಆರ್.ಲೈನ್‍ನಲ್ಲಿ ಇಂದು ತಮ್ಮ ಪತ್ನಿ ಸುನೀತಾ ಮತ್ತು ಪ್ರಥಮ ಬಾರಿ ಮತ ಚಲಾಯಿಸಲು ಅರ್ಹತೆ ಪಡೆದಿರುವ ಪುತ್ರ ಪುಳಕಿತ್ ಅವರೊಂದಿಗೆ ಹಕ್ಕು ಚಲಾಯಿಸಿದ ನಂತರ ಕೇಜ್ರಿವಾಲ್ ಸುದ್ದಿಗಾರರೊಂದಿಗೆ ಮಾತನಾಡಿದರು. ನಮ್ಮ ಉತ್ತಮ ಆಡಳಿತವನ್ನು ಮೆಚ್ಚಿ ದೆಹಲಿ ಜನತೆ …
Read More »-ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯನವರ ಒಳಜಗಳದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಫುಟ್‍ಪಾತ್ ಸ್ಥಿತಿಗೆ ಬಂದಿವೆ
ಬೆಂಗಳೂರು.ಫೆ.8-ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯನವರ ಒಳಜಗಳದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಫುಟ್‍ಪಾತ್ ಸ್ಥಿತಿಗೆ ಬಂದಿವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಲೇವಡಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಕುಮಾರಸ್ವಾಮಿ ಹೇಳುತ್ತಾರೆ. ಕುಮಾರಸ್ವಾಮಿ ಮತ್ತೆ ಸಿಎಂ ಆಗುವುದೇ ಇಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಇಬ್ಬರ ಜಗಳದಲ್ಲಿ ಎರಡೂ ಪಕ್ಷಗಳು ಬೀದಿಗೆ ಬಿದ್ದಿವೆ ಎಂದು ವ್ಯಂಗ್ಯವಾಡಿದರು. ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಹೇಳುತ್ತಿರುವುದು ನೂರಕ್ಕೆ ನೂರರಷ್ಟು ಸತ್ಯ. ಏಕೆಂದರೆ …
Read More »ಸೋಮವಾರ ಖಾತೆಗಳನ್ನು ಹಂಚಿಕೆ ಇಂದಿಲ್ಲಿ :BSY
ಬೆಂಗಳೂರು,ಫೆ.8- ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿರುವ ನೂತನ 10 ಮಂದಿ ಶಾಸಕರಿಗೆ ಸೋಮವಾರ ಖಾತೆಗಳನ್ನು ಹಂಚಿಕೆ ಮಾಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಘೋಷಿಸಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಸಚಿವರಿಗೆ ಯಾವ ಖಾತೆಗಳನ್ನು ನೀಡಬೇಕೆಂಬ ಪಟ್ಟಿ ಸಿದ್ದವಾಗಿದೆ. ಸೋಮವಾರ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡುವುದಾಗಿ ಹೇಳಿದರು. ಇಂದು ಶನಿವಾರ ರಜಾದಿನವಾಗಿದ್ದರಿಂದ ಪಟ್ಟಿಯನ್ನು ಪ್ರಕಟಿಸಲು ಸಾಧ್ಯವಾಗಿಲ್ಲ. ಸೋಮವಾರ ಖಾತೆಗಳ ಹಂಚಿಕೆಯಾಗಲಿದೆ. ಈ ಬಗ್ಗೆ ಯಾವುದೇ ರೀತಿಯ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದರು. ಇಂದೇ …
Read More »