ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಎಂಬ ಹೆಮ್ಮಾರಿ ತನ್ನ ಅಟ್ಟಹಾಸವನ್ನು ಮೆರೆಯುತ್ತಿದ್ದು, ಜನ ತತ್ತರಿಸಿ ಹೋಗಿದ್ದಾರೆ. ಭಾರತದಲ್ಲಿ ಕೊರೊನಾ ಸೋಂಕು ದಾಖಲೆ ಬರೆದಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 10 ಲಕ್ಷದ ಗಡಿ ದಾಟಿದೆ. ಗುರುವಾರ ಒಂದೇ ದಿನ 34,956 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 10,03,832ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 687 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇನ್ನೂ 3,42,473 ಸಕ್ರೀಯ ಪ್ರಕರಣಗಳಿದ್ದು, …
Read More »ಆಸ್ಪತ್ರೆಯ ಬಾತ್ರೂಮ್ ಕಿಟಕಿಯಲ್ಲಿ ನೇಣುಬಿಗಿದುಕೊಂಡು ರೋಗಿ ಆತ್ಮಹತ್ಯೆ
ನವದೆಹಲಿ: ಇಲ್ಲಿನ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಬ್ಬ ಆತ್ಮಹತ್ಯೆಗೆ ಶರಣಾದ ದುರಂತ ಘಟನೆ ನಡೆದಿದೆ. ಆತ್ಮಹತ್ಯೆಗೊಳಗಾದ ರೋಗಿಯನ್ನು ರಾಜ್ಮನಿ ಸತ್ತರ್ ಎಂದು ಗುರುತಿಸಲಾಗಿದೆ. ಈತ ಆಸ್ಪತ್ರೆಯ ಬಾತ್ ರೂಮಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹಲವು ದಿನಗಳಿಂದ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು. ಈ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದು ಈ ನಿರ್ಧಾರ ಕೈಗೊಂಡಿರಬಹುದು ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಸ್ಥಳದಲ್ಲಿ ಯಾವುದೇ ರೀತಿಯ ಡೆತ್ ನೋಟ್ ಪತ್ತೆಯಾಗಿಲ್ಲ. ಸಾಂದರ್ಭಿಕ ಚಿತ್ರ ಆಸ್ಪತ್ರೆ ಸಿಬ್ಬಂದಿ …
Read More »ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು…………………
ಮೈಸೂರು: ಕತ್ತು ಕೊಯ್ದುಕೊಂಡು ಯುವ ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಂಜನಗೂಡು ತಾಲೂಕಿನ ದುಗ್ಗಹಳ್ಳಿ ಗ್ರಾಮದಲ್ಲಿ ನಡೆದಿದೆ. ಇವರಿಬ್ಬರು ಜುಲೈ 9 ರಂದು ಆತ್ಮತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸರ್ಕಾರಿ ಪದವಿ ಪೂರ್ವ ಕಾಲೇಜೊಂದರಲ್ಲಿ ಇಬ್ಬರು ವ್ಯಾಸಂಗ ಮಾಡುತ್ತಿದ್ದು, ಕಾಮರ್ಸ್ ವಿಭಾಗದಲ್ಲಿ ಕ್ಲಾಸ್ಮೇಟ್ಸ್ ಆಗಿದ್ದರು. ಕಾಲೇಜಿನಲ್ಲೇ ಇಬ್ಬರ ಮಧ್ಯೆ ಪ್ರೇಮಾಂಕುರವಾಗಿದೆ. ಆದರೆ ಇಬ್ಬರ ಮದುವೆಗೆ ಜಾತಿ ಅಡ್ಡಿಯಾಗಿತ್ತು. ಅಲ್ಲದೆ ಇವರಿಬ್ಬರು ಅಪ್ರಾಪ್ತರು ಅನ್ನೋ ಹಿನ್ನೆಲೆ ಕೂಡ ಇತ್ತು. …
Read More »‘ಮಹಾ’ ಪೊಲೀಸರಿಗೆ 25 ಸಾವಿರ ಫೇಸ್ಶೀಲ್ಡ್ ನೀಡಿದ ನಟ ಸೋನು ಸೂದ್
ಮುಂಬೈ: ಕೊರೊನಾ ಮಹಾಮಾರಿ ದೇಶವನ್ನು ಒಕ್ಕರಿಸಿದ ಬಳಿಕ ದಿನಬೆಳಗಾದರೆ ಸಾಕು ಅನೇಕ ಮಾನವೀಯ ಕಾರ್ಯಗಳು ಬೆಳಕಿಗೆ ಬರುತ್ತಲೇ ಇವೆ. ಅಂತೆಯೇ ಬಾಲಿವುಡ್ ನಟ ಸೋನು ಸೂದ್ ಕೂಡ ಲಾಕ್ಡೌನ್ ಸಂಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡುತ್ತಲೇ ಬಂದಿದ್ದಾರೆ. ಇತ್ತೀಚೆಗಷ್ಟೇ ಕೊರೊನಾ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಆರ್ಥಿಕ ನೆರವು ನೀಡಿದ್ದ ನಟ ಇದೀಗ ಮಹಾರಾಷ್ಟ್ರ ಪೊಲೀಸರ ಸಹಾಯಕ್ಕೆ ನಿಂತಿದ್ದಾರೆ. ಹೌದು. ಮಹಾರಾಷ್ಟ್ರ ಪೊಲೀಸರಿಗೆ ಸುಮಾರು 25 ಸಾವಿರ ಫೇಸ್ ಶೀಲ್ಡ್ ನೀಡುವ ಮೂಲಕ ಸೋನು …
Read More »ಬೆಂಗ್ಳೂರಿನಲ್ಲಿ ಕೊರೊನಾಗೆ 507 ಮಂದಿ ಬಲಿ- ಸಾವಿನ ಸಂಖ್ಯೆ ಹೆಚ್ಚಾಗಲು ಕಾರಣ ತಿಳಿಸಿದ ವೈದ್ಯರು
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಮರಣ ನರ್ತನಕ್ಕೆ ಗುರುವಾರ 70 ಮಂದಿ ಬಲಿಯಾಗಿದ್ದು, ಬೆಂಗಳೂರಿನಲ್ಲಿ ಕೊರೊನಾಗೆ ಸಾವನ್ನಪ್ಪಿದ್ದವರ ಸಂಖ್ಯೆ 507ಕ್ಕೆ ಏರಿಕೆ ಆಗಿದೆ. ಬೆಂಗಳೂರಿನಲ್ಲಿ ಕೊರೊನಾಗೆ ದಿನೇ ದಿನೇ ಅಧಿಕ ಜನರು ಬಲಿಯಾಗುತ್ತಿದ್ದಾರೆ. ಕೊರೊನಾ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲಿಕೊಳ್ಳಲು ವಿಳಂಬವಾಗುತ್ತಿರುವುದರಿಂದ ಕೆಲವರು ಸಾಯುತ್ತಿದ್ದಾರೆ. ಇನ್ನೂ ಕೆಲವರು ಈಗಾಗಲೇ ಕಿಡ್ನಿ ಸಮಸ್ಯೆ, ಹೈಪರ್ ಟೆನ್ಶನ್, ಶುಗರ್, ಕ್ಯಾನ್ಸರ್ನಂತಹ ಕಾಯಿಲೆ ಬಳಲುತ್ತಿರುತ್ತಾರೆ. ಅಂತವಹರಿಗೆ ಕೊರೊನಾ ತಗುಲಿದ್ದು, ಬೇರೆ ಕಾಯಿಲೆ ಉಲ್ಬಣಗೊಂಡು ಮೃತಪಡುತ್ತಿದ್ದಾರೆ ಎಂದು …
Read More »ದೇಶದಲ್ಲಿ ಈವರೆಗೆ ಕೊರೋನಾಗೆ ಬಲಿಯಾಗಿದ್ದಾರೆ 99 ವೈದ್ಯರು..!
ನವದೆಹಲಿ,ಜು.16- ದೇಶದಲ್ಲಿ ಇಲ್ಲಿಯವರೆಗೆ 99 ವೈದ್ಯರು ಕೋವಿಡ್-19 ರೋಗದಿಂದ ಮೃತಪಟ್ಟಿದ್ದಾರೆ ಎಂದು ಇಂಡಿಯಲ್ ಮೆಡಿಕಲ್ ಅಸೋಸಿಯೇಷನ್ (ಐಎಂಎ) ಹೇಳಿದ್ದು, ಆರೋಗ್ಯ ಕಾರ್ಯಕರ್ತರು ಹೆಚ್ಚಿನ ಮುಂಜಾಗ್ರತೆ ವಹಿಸಲು ಸೂಚಿಸಿದೆ. ಐಎಂಎ ರಾಷ್ಟ್ರೀಯ ಕೋವಿಡ್ ಅಂಕಿಅಂಶಗಳ ಪ್ರಕಾರ ಇಲ್ಲಿಯವರೆಗೆ 1,302 ವೈದ್ಯರಿಗೆ ಕೊರೊನಾವೈರಸ್ ಸೋಂಕು ತಗುಲಿದೆ. ಇದರಲ್ಲಿ 99 ಮಂದಿ ಮೃತಪಟ್ಟಿದ್ದಾರೆ. ಸಾವಿಗೀಡಾದವರಲ್ಲಿ 73 ಮಂದಿ 50 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದಾರೆ. 35-50 ವಯಸ್ಸಿನ ನಡುವೆ ಇರುವ 19 ಮಂದಿ ಮತ್ತು 35 ವಯಸ್ಸಿಗಿಂತ …
Read More »ಯಾವ ರೈತ ಫೋಟೋಶೂಟ್ ಮಾಡಿಸುತ್ತಾನೆ?’- ಸಲ್ಲು ಪೋಸ್ಟ್ಗೆ ನೆಟ್ಟಿಗರು ಟಾಂಗ್
ಮುಂಬೈ: ರೈತ ಪರವಾಗಿ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಫೋಟೋ ಹಾಕಿದ್ದ ಸಲ್ಮಾನ್ ಖಾನ್ ಈಗ ಅದೇ ಫೋಟೋದಿಂದ ಈಗ ಟ್ರೋಲ್ಗೆ ಒಳಗಾಗಿದ್ದಾರೆ. ಕೊರೊನಾ ಭೀತಿಯಿಂದ ಚಿತ್ರರಂಗದ ಎಲ್ಲ ಚಟುವಟಿಕೆಗಳು ನಿಂತಿದ್ದು, ಸರ್ಕಾರ ಆದೇಶದಂತೆ ಮತ್ತೆ ಆರಂಭಗೊಳ್ಳುತ್ತಿವೆ. ಲಾಕ್ಡೌನ್ ವೇಳೆಯಿಂದಲೂ ತಮ್ಮ ತೋಟದ ಮನೆಯಲ್ಲೇ ಕಾಲಕಳೆಯುತ್ತಿರುವ ಸಲ್ಲು ಇತ್ತೀಚೆಗೆ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ರೈತರ ಪರವಾಗಿ ಫೋಟೋವೊಂದನ್ನು ಹಾಕಿದ್ದರು. ಈಗ ಇದೇ ಫೋಟೋವನ್ನು ಇಟ್ಟುಕೊಂಡು ನೆಟ್ಟೆಗರು ಸಲ್ಲು ಅವರನ್ನು ಟ್ರೋಲ್ ಮಾಡುತ್ತಿದ್ದಾರೆ.ಮಂಗಳವಾರ ತಮ್ಮ ಇನ್ಸ್ಟಾಗ್ರಾಮ್ನಲ್ಲಿ …
Read More »ಕೊರೊನಾ ನಡುವೆ ಚಿಕಿತ್ಸೆ ಸಿಗದೇ ತಿಂಗಳ ಹಸುಗೂಸೊಂದು ಜೀವ ಬಿಟ್ಟಿದೆ.
ಬೆಂಗಳೂರು: ಕೊರೊನಾ ನಡುವೆ ಚಿಕಿತ್ಸೆ ಸಿಗದೇ ತಿಂಗಳ ಹಸುಗೂಸೊಂದು ಜೀವ ಬಿಟ್ಟಿದೆ. ಜುಲೈ 11ರಂದು ಹೃದಯದ ಸಮಸ್ಯೆಗೆ ತುತ್ತಾದ ಒಂದು ತಿಂಗಳ ಮಗುವನ್ನು ಉಳಿಸಿಕೊಳ್ಳಲು ಬೆಂಗಳೂರಿನ ಮಂಜುನಾಥನಗರದ ಪೋಷಕರು ಪಟ್ಟ ಪಾಡು ಅಷ್ಟಿಷ್ಟಲ್ಲ. ಬರೋಬ್ಬರಿ 36 ಗಂಟೆಗಳ ಕಾಲ 200 ಕಿಲೋಮೀಟರ್ ಸುತ್ತಿದ್ರೂ, ಹತ್ತಾರು ಆಸ್ಪತ್ರೆಗಳ ಮೆಟ್ಟಿಲನ್ನು ಹತ್ತಿಳಿದ್ರೂ, ನಿರ್ದಯಿ ಆಸ್ಪತ್ರೆ ಸಿಬ್ಬಂದಿ ಮಗುವನ್ನು ಪರೀಕ್ಷಿಸಿ ಅಡ್ಮಿಟ್ ಮಾಡಿಕೊಂಡಿಲ್ಲ.ಬೆಡ್ ಮತ್ತು ಕೊರೊನಾ ನೆಪ ಹೇಳಿದ ಆಸ್ಪತ್ರೆಗಳು ಮಗುವನ್ನು ಅಡ್ಮಿಟ್ ಮಾಡಿಕೊಳ್ಳಲು …
Read More »ಪೊಲೀಸರಿಗೆ ಸಂಬಂಧಿಸಿದಂತೆ ಪೋಸ್ಟ್ ಹಾಕಿ ಕಿಡಿ ಕಾರಿದ್ದಾರೆ.ಟಗರು ಪುಟ್ಟಿ
ಬೆಂಗಳೂರು: ಟಗರು ಹಾಗೂ ಕೆಂಡಸಂಪಿಗೆ ಸಿನಿಮಾ ಖ್ಯಾತಿಯ ಮನ್ವಿತಾ ಕಾಮತ್ ಸಾಮಾಜಿಕ ಜಾಲತಾಣಗಳಲ್ಲಿ ಆ್ಯಕ್ಟಿವ್ ಆಗಿದ್ದು, ಆಗಾಗ ಸಿನಿಮಾ ಹಾಗೂ ವೈಯಕ್ತಿಕ ವಿಚಾರಗಳ ಕುರಿತು ಪೋಸ್ಟ್ ಹಾಕುತ್ತಿರುತ್ತಾರೆ. ಅದೇ ರೀತಿ ಸಾಮಾಜಿಕ ಆಗುಹೋಗುಗಳ ಕುರಿತು ಸಹ ಅಭಿಪ್ರಾಯ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಪೊಲೀಸರಿಗೆ ಸಂಬಂಧಿಸಿದಂತೆ ಪೋಸ್ಟ್ ಹಾಕಿ ಕಿಡಿ ಕಾರಿದ್ದಾರೆ. ಕೊರೊನಾದಿಂದಾಗಿ ಇಡೀ ಪ್ರಪಂಚವೇ ನಲುಗಿದೆ. ಹಲವರು ನಿರುದ್ಯೋಗಿಗಳಾಗಿದ್ದಾರೆ. ಲಾಕ್ಡೌನ್ ಎಫೆಕ್ಟ್ ಸಿನಿಮಾ ರಂಗಕ್ಕೂ ತಟ್ಟಿದೆ. ಭಾರತದಾದ್ಯಂತ ಚಿತ್ರೀಕರಣವೇ ಸ್ಥಗಿತವಾಗಿದೆ. ಇತ್ತೀಚೆಗೆ …
Read More »ಚಂದನವನದ ಪದ್ಮಾವತಿಯ ಹೊಸ ಲುಕ್……….
ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ಅಜ್ಞಾತದಲ್ಲಿರುವ ಚಂದನವನದ ಪದ್ಮಾವತಿ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿದ್ದಾರೆ. ರಮ್ಯಾ ಅಜ್ಞಾತದಲ್ಲಿದ್ದರೂ ಅಭಿಮಾನಿಗಳು ಮಾತ್ರ ಅವರ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಆದ್ರೆ ಸ್ಯಾಂಡಲ್ವುಡ್ ಕ್ವೀನ್ ದರ್ಶನಕ್ಕಾಗಿ ಎಷ್ಟೋ ಅಭಿಮಾನಿಗಳು ಕಾಯುತ್ತಿದ್ದರು. ಇದೀಗ ಇನ್ಸ್ಟಾಗ್ರಾಂ ಸ್ಟೇಟಸ್ ಡಿಫೆರೆಂಟ್ ಆಗಿ ಪೌಟ್ ಮಾಡಿ ಸೆಲ್ಫಿ ಕ್ಲಿಕ್ಕಿಸಿಕೊಂಡಿರುವ ಫೋಟೋಗಳನ್ನು ರಮ್ಯಾ ಪೋಸ್ಟ್ ಮಾಡಿಕೊಂಡಿದ್ದಾರೆ ಒಟ್ಟು 10 ವಿಭಿನ್ನವಾಗಿ ಪೋಸ್ ನೀಡಿರುವ ರಮ್ಯಾ ಫೋಟೋಗಳು ಸೋಶಿಯಲ್ …
Read More »
Laxmi News 24×7