ಬೀಜಿಂಗ್: ಕೋವಿಡ್ 19 ಮೂಲ ನೆಲೆ ವುಹಾನ್ ನಗರದಲ್ಲಿ ಮತ್ತೆ ಐದು ಮಂದಿಯಲ್ಲಿ ಸೊಂಕು ಕಾಣಿಸಿಕೊಂಡಿದೆ. ಒಂದೇ ಕಾಂಪೌಂಡಿನ 5 ಮಂದಿಯಲ್ಲಿ ಸೋಂಕು ಕಾಣಿಸಿದ ಹಿನ್ನೆಲೆಯಲ್ಲಿ ಆ ಜಾಗವನ್ನು ಕ್ಲಸ್ಟರ್ ಎಂದು ಗುರುತಿಸಲಾಗಿದೆ. ಒಂದು ತಿಂಗಳ ಹಿಂದೆ ವುಹಾನ್ ನಗರದಲ್ಲಿ ಲಾಕೌಡೌನ್ ತೆರೆಯಲಾಗಿತ್ತು. ಈಗ ಮತ್ತೆ 5 ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಕ್ಲಸ್ಟರ್ ರಚಿಸಲಾಗಿದೆ. ಈ ಹಿಂದೆ ಏಪ್ರಿಲ್ 3 ರಂದು ವುಹಾನ್ ನಗರದಲ್ಲಿ ಕೊನೆಯದಾಗಿ ಸೋಂಕು ಕಾಣಿಸಿಕೊಂಡಿತ್ತು. ಆದಾದ ಬಳಿಕ …
Read More »ಕೋವಿಡ್-೧೯: ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಸಭೆ……..
ಕೋವಿಡ್-೧೯: ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಸಭೆ ಗಡಿ ಪ್ರವೇಶಿಸುವ ಜನರನ್ನು ಅವರ ಜಿಲ್ಲೆಗಳಿಗೆ ಕಳುಹಿಸಲು ನಿರ್ದೇಶನ ಬೆಳಗಾವಿ,-ನೆರೆಯ ರಾಜ್ಯದಿಂದ ಬೆಳಗಾವಿ ಜಿಲ್ಲೆಗೆ ಆಗಮಿಸುವ ಜನರನ್ನು ತಪಾಸಣೆ ನಡೆಸಿದ ಬಳಿಕ ಅವರನ್ನು ಸಂಬಂಧಿಸಿದ ಜಿಲ್ಲೆಗಳಲ್ಲಿ ಕ್ವಾರಂಟೈನ್ ಮಾಡುವ ಅಗತ್ಯವಿದೆ ಎಂದು ಈಗಾಗಲೇ ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತರಲಾಗಿದೆ. ಆದ್ದರಿಂದ ಗಡಿ ಜಿಲ್ಲೆ ಬೆಳಗಾವಿಗೆ ಆಗಮಿಸುವ ಇತರೆ ಜಿಲ್ಲೆಯ ಜನರನ್ನು ಆಯಾ ಜಿಲ್ಲೆಯ ನೋಡಲ್ ಅಧಿಕಾರಿಗಳ ಮೂಲಕ ಕಳಿಸಿಕೊಡಬೇಕು ಎಂದು …
Read More »ಮಾಜಿ ಸಂಸದ ರಾಜಾರಂಗಪ್ಪ ನಾಯಕ ಇನ್ನಿಲ್ಲ……………
ರಾಯಚೂರು: ಜಿಲ್ಲೆಯ ಮಾಜಿ ಸಂಸದ ರಾಜಾರಂಗಪ್ಪ ನಾಯಕ(61)ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಂಸದರು ಯಾದಗಿರಿ ಜಿಲ್ಲೆಯ ಸುರಪುರದ ವಸಂತಮಹಲ್ ನಲ್ಲಿ ಭಾನುವಾರ ರಾತ್ರಿ ವಿಧಿವಶರಾಗಿದ್ದಾರೆ. 1996 ರಲ್ಲಿ ಜೆಡಿಎಸ್ ಪಕ್ಷದಿಂದ ರಾಯಚೂರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದ ಇವರು ನಂತರ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಸ್ವಗ್ರಾಮ ಸುರಪುರ ತಾಲೂಕಿನ ಮುಷ್ಠಳ್ಳಿ ಗ್ರಾಮದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಮೃತರ ಅಂತ್ಯಕ್ರಿಯೆ ನೆರವೇರಲಿದೆ.
Read More »ಅಣ್ಣನನ್ನು ಕೊಂದು ಹುಣಸೆಮರಕ್ಕೆ ನೇತು ಹಾಕಿದ ತಮ್ಮ……..
ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ತಮ್ಮನೊಬ್ಬ ತನ್ನ ಸ್ವಂತ ಅಣ್ಣನನ್ನು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಮಾವನೂರಿನಲ್ಲಿ ನಡೆದಿದೆ. ಅಣ್ಣ ಮಂಜುನಾಥ ಸುಳ್ಳದ ಕೊಲೆಯಾದ ವ್ಯಕ್ತಿ. ಆರೋಪಿಯನ್ನು ಕಲ್ಮೇಶ ಸುಳ್ಳದ ಎಂದು ಗುರುತಿಸಲಾಗಿದೆ. ಮೇ 9ರಂದು ಪಾನಮತ್ತನಾಗಿ ಮನೆಗೆ ಬಂದಿದ್ದ ಮಂಜುನಾಥ, ಆಸ್ತಿ ಮತ್ತು ಮನೆಯಲ್ಲಿ ತನಗೆ ಪಾಲು ಕೊಡುವಂತೆ ತಾಯಿ ಶಿವಲಿಂಗವ್ವ ಜೊತೆ ಜಗಳವಾಡಿ ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವಿಚಾರ ತಿಳಿದು ಕೆರಳಿದ ತಮ್ಮ ಕಲ್ಮೇಶ ಅಣ್ಣನ …
Read More »ಎಣ್ಣೆ ಪಾರ್ಟಿಗೆ ಸೈಡ್ಸ್ ತರಲಿಲ್ಲ ಎಂದು ಸಿಟ್ಟಿಗೆದ್ದ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೇ ಬರ್ಬರವಾಗಿ ಕೊಲೆ
ಚೆನ್ನೈ:ಎಣ್ಣೆ ಪಾರ್ಟಿಗೆ ಸೈಡ್ಸ್ ತರಲಿಲ್ಲ ಎಂದು ಸಿಟ್ಟಿಗೆದ್ದ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಕೊಲೆ ಮಾಡಿದ ಆರೋಪಿಯನ್ನು ವಾಸು(38) ಎಂದು ಗುರುತಿಸಲಾಗಿದ್ದು, ವಿನಯಗಂ(43) ಕೊಲೆಯಾದ ದುರ್ದೈವಿಯಾಗಿದ್ದಾನೆ. ತಮಿಳುನಾಡಿನ ಚೆಂಗಲ್ಪಟ್ಟುವಿನ ಗುಡುವಾಂಚೇರಿ ಪಟ್ಟಣದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ. ವಾಸು ಹಾಗೂ ವಿನಯಗಂ ಇಬ್ಬರೂ ಆತ್ಮೀಯ ಸ್ನೇಹಿತರಾಗಿದ್ದು, ಹೂವು ಮಾರುವುದು, ಕ್ಯಾಬ್ ಓಡಿಸುವುದು ಹಾಗೂ ರಿಯಲ್ ಎಸ್ಟೇಟ್ ಬ್ರೋಕರ್ಸ್ ಆಗಿದ್ದರು. ಲಾಕ್‍ಡೌನ್ ಸಡಿಲಿಕೆ …
Read More »ಗೋವಾದಿಂದ ಬಂದಿಳಿದ 200ಕ್ಕೂ ಅಧಿಕ ಕೂಲಿ ಕಾರ್ಮಿಕರು……….
ಗದಗ: ಗೋವಾ ರಾಜ್ಯಕ್ಕೆ ದುಡಿಯಲು ಹೋಗಿದ್ದ ಜಿಲ್ಲೆಯ ಸುಮಾರು 200ಕ್ಕೂ ಅಧಿಕ ಕೂಲಿ ಕಾರ್ಮಿಕರು ಮತ್ತೆ ತಾಯಿನಾಡಿಗೆ ವಾಪಸ್ ಬಂದಿದ್ದಾರೆ. ಜಿಲ್ಲೆಯ ನಾಗಾವಿತಾಂಡ, ಬೆಳಧಡಿ, ಅಡವಿಸೋಮಾಪುರ ತಾಂಡ, ಕಳಸಾಪೂರ ತಾಂಡ ಸೇರಿದಂತೆ ಅನೇಕ ಗ್ರಾಮಗಳ ಜನರು ಗೋವಾ ರಾಜ್ಯಕ್ಕೆ ವಲಸೆ ಹೋಗಿದ್ದರು. ಲಾಕ್‍ಡೌನ್ ಸಂದರ್ಭದಲ್ಲಿ ಇವರಿಗೆಲ್ಲಾ ಸ್ವ ಗ್ರಾಮಗಳಿಗೆ ಬರಲು ಸಾಧ್ಯವಾಗಿರಲಿಲ್ಲ. ಸದ್ಯ ಲಾಕ್‍ಡೌನ್ ಸಡಿಲಿಕೆ ನಂತರ ಗೋವಾ ಸರ್ಕಾರ ಇವರ ಮನವಿಗೆ ಸ್ಪಂದಿಸಿ ಕದಂಬ ಬಸ್ ಮೂಲಕ ಗದುಗಿಗೆ ಕಳುಹಿಸಿದ್ದಾರೆ. …
Read More »ನೆಗೆಟಿವ್ ಬಂದಿದ್ದ ತಬ್ಲಿಘಿಗೆ ಮತ್ತೆ ಪಾಸಿಟಿವ್………..
ಬೆಂಗಳೂರು: ಇಂದು 10 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 858ಕ್ಕೆ ಏರಿಕೆಯಾಗಿದೆ. ಬೆಳಗ್ಗೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ, ದಾವಣಗೆರೆ 3, ಬೀದರ್ 2, ಬಾಗಲಕೋಟೆ 2, ಕಲಬುರಗಿ 1, ಹಾವೇರಿ 1 ಮತ್ತು ವಿಜಯಪುರದಲ್ಲಿ 1 ಹೊಸ ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿದೆ. ಸೋಂಕಿತರ ವಿವರ: 1. ರೋಗಿ-849: ಕಲಬುರಗಿಯ 38 ವರ್ಷದ ಪುರುಷ. ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. …
Read More »ಇ-ಪಾಸ್ ಪಡೆದ ಅಂತರ್ ರಾಜ್ಯ ಪ್ರಯಾಣಿಕರಿಗೆ ಬಸ್ ವ್ಯವಸ್ಥೆ – ಕೆಎಸ್ಆರ್ಟಿಸಿ ಸಂಸ್ಥೆ
ಬೆಂಗಳೂರು: ದೇಶದಲ್ಲಿ ಕೊರೋನಾ ವೈರಸ್‌ನ ಅಟ್ಟಹಾಸ ಮುಂದುವರೆದಿದೆ. ಹೀಗಾಗಿ ಈ ಸೋಂಕು ನಿಯಂತ್ರಣಕ್ಕೆ ಜಾರಿಗೊಳಿಸಿದ್ದ ಲಾಕ್‌ಡೌನ್ ವಿಸ್ತರಣೆಯಾಗಿದೆ. ಎರಡು ಹಂತದ ಲಾಕ್‌ಡೌನ್‌ಗಳನ್ನು ಬಹಳ ಕಟ್ಟುನಿಟ್ಟಾಗಿ ಜಾರಿಗೆ ತಂದಿದ್ದ ಕೇಂದ್ರ ಸರ್ಕಾರ ಮೂರನೇ ಹಂತದ ಲಾಕ್‌ಡೌನ್ ಸಡಿಲಗೊಳಿಸಿ ಹಲವು ಕ್ಷೇತ್ರಗಳಿಗೆ ವಿನಾಯಿತಿ ನೀಡಿದೆ. ಇದರಲ್ಲಿ ಅಂತರ್ ರಾಜ್ಯ ಪ್ರಯಾಣವೂ ಒಂದು. ಹೌದು, ಅಂತರ್ ರಾಜ್ಯ ಪ್ರಯಾಣಕ್ಕಾಗಿ ಜನ ಸರ್ಕಾರದಿಂದ ಇ- ಪಾಸ್ ಪಡೆಯಬೇಕಾದ ಅಗತ್ಯ ಇದೆ. ಯಾವುದೇ ಮುನ್ಸೂಚನೆ ಇಲ್ಲದೇ ದೇಶವ್ಯಾಪಿ …
Read More »ಲಾಕ್‍ಡೌನ್ ಎಫೆಕ್ಟ್- ಶ್ರೀಮನ್ನಾರಾಯಣನ ಹೊಸ ಅವತಾರ
ಬೆಂಗಳೂರು: ಲಾಕ್‍ಡೌನ್ ಹಿನ್ನೆಲೆ ಸಿನಿಮಾ ರಂಗ ಸಂಪೂರ್ಣ ಸ್ತಬ್ಧವಾಗಿದ್ದು, ನಟ, ನಟಿಯರು ಸಹ ತಮ್ಮದೇ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಹಲವರು ಬೇಜಾರಲ್ಲಿ ಸಮಯ ಕಳೆದರೆ, ಇನ್ನೂ ಹಲವರು ತಮ್ಮ ಮುಂದಿನ ಪ್ರಾಜೆಕ್ಟ್‍ಗೆ ಸಿದ್ಧತೆ ನಡೆಸಿದ್ದಾರೆ, ಇನ್ನೂ ಹಲವರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿದ್ದಾರೆ. ಹೀಗೆ ಎಲ್ಲ ತಾರೆಯರು ತಮ್ಮದೇ ಲೋಕದಲ್ಲಿ ಬ್ಯುಸಿಯಾಗಿದ್ದಾರೆ. ನಟ ರಕ್ಷಿತ್ ಶೆಟ್ಟಿ ಸಹ ತಮ್ಮದೇ ಕಾರ್ಯದಲ್ಲಿ ತೊಡಗಿದ್ದು, ತಮ್ಮ ಹೊಸ ಅವತಾರದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಹಿಂದೆ ತಮ್ಮ …
Read More »1,000 ಕಿ.ಮೀ ಸೈಕಲ್ ಪ್ರಯಾಣ- ತಿಂಡಿ ತಿನ್ನಲು ಕುಳಿತಾಗ ಕಾರು ಡಿಕ್ಕಿಯಾಗಿ ಸಾವು
ಲಕ್ನೋ: ಕೊರೊನಾ ಲಾಕ್‍ಡೌನ್ ಪರಿಣಾಮ ಸಾವಿರಾರು ಕಾರ್ಮಿಕರು ನಡೆದುಕೊಂಡು, ಸೈಕಲ್ ಮೂಲಕ ತಮ್ಮ ತಮ್ಮ ಗ್ರಾಮಗಳಿಗೆ ಮರಳುತ್ತಿದ್ದಾರೆ. ಇದೇ ರೀತಿ ಕಾರ್ಮಿಕನೊಬ್ಬ ಸೈಕಲ್ ಮೂಲಕ ತನ್ನೂರಿಕೆ ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ಸಘೀರ್ ಅನ್ಸಾರಿ (26). ದೆಹಲಿಯಿಂದ ಬಿಹಾರದ ತನ್ನ ಚಂಪಾರನ್ ಗ್ರಾಮಕ್ಕೆ ಅನ್ಸಾರಿ ಹೋಗುತ್ತಿದ್ದರು. ಆದರೆ ಲಕ್ನೋದಲ್ಲಿ ತಿಂಡಿ ಮಾಡುತ್ತಿದ್ದಾಗ ಕಾರು ಬಂದು ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಅನ್ಸಾರಿಗೆ ಮದುವೆಯಾಗಿ ಮೂವರು ಮಕ್ಕಳಿದ್ದಾರೆ. ಏನಿದು ಪ್ರಕರಣ? ಕೊರೊನಾ …
Read More »