ಬೆಂಗಳೂರು: ಚಂದನವನದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಖಡಕ್ ಲುಕ್ ಹಾಗೂ ಬೇರ್ ಬಾಡಿ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿವೆ. ಸುದೀಪ್ ಅವರು ಪೈಲ್ವಾನ್ ಸಿನಿಮಾದ ಸಮಯದಲ್ಲಿ ತಮ್ಮ ದೇಹವನ್ನು ದಂಡಿಸಿ ಖಡಕ್ ಬಾಡಿ ಮಾಡಿದ್ದರು. ಈಗ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದ್ದು, ಟ್ವಿಟ್ಟರ್ ನಲ್ಲಿ ಟ್ರೆಂಡ್ ಆಗುತ್ತಿವೆ. ಕಿಚ್ಚನ ಖಡಕ್ ಲುಕ್ ಇರುವ ಈ ಫೋಟೋಗಳನ್ನು ಹಂಚಿಕೊಂಡಿರುವ ನಿರ್ದೇಶಕ ಪವನ್ …
Read More »ಮೂರನೇ ಲಾಕ್ ಡೌನ್ ನಂತರ ಏನು? ಸುಳಿವು ಕೊಟ್ಟ ಗೃಹಸಚಿವ ಬೊಮ್ಮಾಯಿ
ಕೃಷಿ ಮತ್ತು ಆರ್ಥಿಕ ಚಟುವಟಿಕೆಗಳು ಆರಂಭವಾಗಲಿ ಎನ್ನುವ ಕಾರಣಕ್ಕಾಗಿ ಲಾಕ್ ಡೌನ್ ಅನ್ನು ಸಡಿಲಿಕೆ ಮಾಡಲಾಗಿದೆ, ಇದರರ್ಥ ಕೊರೊನಾ ಕಮ್ಮಿಯಾಗಿದೆ ಎಂದಲ್ಲ” ಎಂದು ಬೊಮ್ಮಾಯಿ ಹೇಳಿದ್ದಾರೆ. ಸಾರ್ವಜನಿಕರ ಸಹಕಾರವಿದ್ದರೆ ಮಾತ್ರ ಕೊರೊನಾವನ್ನು ಸಂಪೂರ್ಣ ತೊಲಗಿಸಲು ಸಾಧ್ಯ. ಮೂರನೇ ಲಾಕ್ ಡೌನ್ ಅನ್ನು ಯಶಸ್ವಿಗೊಳಿಸುವ ಸಂಪೂರ್ಣ ಜವಾಬ್ದಾರಿ ಜನರದ್ದು”ಎಂದು ಬೊಮ್ಮಾಯಿ ಪುನರುಚ್ಚಿಸಿದ್ದಾರೆ. ಮೇ ಹದಿನೇಳರ ನಂತರ ಕೊರೊನಾ ನಿಯಂತ್ರಣಕ್ಕೆ ಬರದೇ ಇದ್ದಲ್ಲಿ, ಮುಂದೆ ಕಠಿಣ ಕ್ರಮ ತೆಗೆದುಕೊಳ್ಳುವ ಅನಿವಾರ್ಯತೆ ಸರಕಾರಕ್ಕೆ ಬರಲಿದೆ”ಎಂದು …
Read More »ಪ್ರತ್ಯೇಕ ರಾಯಚೂರು ವಿವಿ ಕನಸು ನನಸು; ಹೊಸ ವಿವಿ ವ್ಯಾಪ್ತಿಗೆ ಯಾದಗಿರಿ, ರಾಯಚೂರಿನ 187 ಕಾಲೇಜುಗಳು
ರಾಯಚೂರು(ಮೇ 08): ರಾಯಚೂರು ಜಿಲ್ಲೆಯ ಪ್ರಗತಿಪರರು, ವಿದ್ಯಾರ್ಥಿಗಳ ಹೋರಾಟದ ಫಲವಾಗಿ ರಾಯಚೂರು ವಿಶ್ವವಿದ್ಯಾಲಯ ಆರಂಭಕ್ಕೆ ಸಿದ್ದತೆ ನಡೆದಿದೆ. ಕೊನೆಗೂ ರಾಜ್ಯಪಾಲರು ವಿವಿ ಆರಂಭಕ್ಕೆ ತಿದ್ದುಪಡಿ ಕಾಯ್ದೆಗೆ ಅಂಕಿತ ಹಾಕಿದ್ದು ರಾಜ್ಯ ಸರಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ. ಇದರಿಂದ ರಾಯಚೂರು ಜನತೆ ಹರ್ಷಗೊಂಡಿದ್ದಾರೆ. ಗುಲಬುರ್ಗಾ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿರುವ ರಾಯಚೂರು ಹಾಗು ಯಾದಗಿರಿ ಜಿಲ್ಲೆಯ 187 ಕಾಲೇಜುಗಳು ಈಗ ಸ್ಥಾಪನೆಯಾಗಲಿರುವ ರಾಯಚೂರು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಬರಲಿವೆ. ಕಲಬುರಗಿ, ಬೀದರ್, ರಾಯಚೂರು ಹಾಗು ಯಾದಗಿರಿ …
Read More »ಪತ್ರಕರ್ತರಿಗೆ ಯಾಕೆ ಜೀವ ವಿಮೆ ಘೋಷಿಸಿಲ್ಲ?: ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ನಲ್ಲಿ PIL ಸಲ್ಲಿಕೆ
ಬೆಂಗಳೂರು: ಮಾರಕ ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿರುವ ವೈದ್ಯರು, ಪೊಲೀಸರು ಮತ್ತು ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಪೌರ ಕಾರ್ಮಿಕರಿಗೆ 30 ಲಕ್ಷ ರೂ. ಜೀವ ವಿಮೆ ಸೌಲಭ್ಯವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಘೋಷಿಸಿದೆ. ಈ ಮೂಲಕ ಕೊರೋನಾ ವಿರುದ್ಧದ ಸಮರದಲ್ಲಿ ಸಾವನ್ನಪ್ಪುವ ವಾರಿಯರ್ಸ್ಗೆ 30 ಲಕ್ಷ ರೂ. ನೀಡುವುದಾಗಿ ಭರವಸೆ ನೀಡಲಾಗಿದೆ. ಆದರೀಗ, ವೈದ್ಯರು, ಪೊಲೀಸರು, ಪೌರ ಕಾರ್ಮಿಕರು ಮತ್ತು ಅಂಗನವಾಡಿ ಕಾರ್ಯಕರ್ತರಂತೆಯೇ ತಮ್ಮ ಪ್ರಾಣವನ್ನು …
Read More »2021ರ ಮಾರ್ಚ್ ವೇಳೆಗೆ ಎತ್ತಿನಹೊಳೆ ಕಾಮಗಾರಿ ಮೊದಲ ಹಂತಕ್ಕೆ ಚಾಲನೆ; ಸಚಿವ ರಮೇಶ್ ಜಾರಕಿಹೊಳಿ
ಶಾಸಕರಾದ ಎಚ್.ಕೆ. ಕುಮಾರಸ್ವಾಮಿ ಹಾಗೂ ಕೆ.ಎಂ. ಶಿವಲಿಂಗೇಗೌಡ ಅವರು ಯೋಜನೆ ಬಗ್ಗೆ ಸಚಿವರಿಗೆ ಮಾಹಿತಿ ನೀಡಿ ತುರ್ತಾಗಿ ಕಾಮಗಾರಿಗಳು ಪೂರ್ಣವಾಗಬೇಕು. ಭೂಮಿ ಕಳೆದುಕೊಂಡವರಿಗೆ ತ್ವರಿತವಾಗಿ ಪರಿಹಾರ ವಿತರಣೆಯಾಗಬೇಕು ಹಾಗೂ ಮೊದಲ ಹಂತದ ಯೋಜನೆ ಆದಷ್ಟು ಬೇಗ ಮುಗಿಯಬೇಕು ಎಂದು ಮನವಿ ಮಾಡಿದರು. ಹಾಸನ: ಜಲ ಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳೆ ಅವರು ಇಂದು ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನಲ್ಲಿ ನಡೆಯುತ್ತಿರುವ ಎತ್ತಿನ ಹೊಳೆ ಯೋಜನೆ ಕಾಮಗಾರಿ ಪರಿಶೀಲನೆ ನಡೆಸಿದರು. ಸಕಲೇಶಪುರ ತಾಲ್ಲೂಕಿನ …
Read More »ಶಿವಾಜಿನಗರ ನಾಲ್ವರಲ್ಲಿ ಕೊರೋನಾ ಸೋಂಕು; ಬೆಂಗಳೂರಿನ ಬಹುತೇಕ ಕಡೆ ಅಡ್ಡಾಡಿರುವ ಸೋಂಕಿತರು
ಬೆಂಗಳೂರು: ಹೌಸ್ ಕೀಪಿಂಗ್ ಜೊತೆ ವಾಸವಿದ್ದ ಶಿವಾಜಿನಗರ ನಾಲ್ವರು ವ್ಯಾಪಾರಿಗಳಲ್ಲಿ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಕೊರೋನಾ ಸೋಂಕಿತ ಹೌಸ್ ಕೀಪಿಂಗ್ ವ್ಯಕ್ತಿ ಜತೆ ಒಟ್ಟು ಏಳು ಜನ ಇದ್ದರು. ಇವರಲ್ಲಿ ನಾಲ್ಕು ಜನರಲ್ಲಿ ಪಾಸಿಟಿವ್ ಕಂಡುಬಂದಿದೆ. 13 ಜನರಲ್ಲಿ 5 ಮಂದಿಗೂ ಕೊರೋನಾ ಸೋಂಕು ತಗುಲಿದೆ. ಉಳಿದ 9 ಜನರ ಫಲಿತಾಂಶ ನಾಳೆ ಬರಲಿದೆ. ಇದೀಗ ಕೊರೋನಾ ಪಾಸಿಟಿವ್ ವರದಿ ಬಂದ ನಾಲ್ವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. 19, 22, 25 …
Read More »ರಾಜ್ಯದ ಉಚಿತ ಬಸ್ ವ್ಯವಸ್ಥೆ ಅವಧೀ ಮುಗಿದಿದೆ.ಒಂದು ವಾರದಲ್ಲಿ ಬೆಂಗಳೂರಿನಿಂದ ಊರುಗಳತ್ತ ತೆರಳಿದ 1,08,300 ಕಾರ್ಮಿಕರು
ದೇಶಾದ್ಯಂತ ಮೇ 17ರವರೆಗೆ ಲಾಕ್ ಡೌನ್ ಮುಂದುವರಿಸಲಾಗಿದೆ. ಕೆಲ ರಿಯಾಯಿತಿಗಳನ್ನು ನೀಡಲಾಗಿದ್ದು, ರಾಜ್ಯದೊಳಗಿನ ಕಾರ್ಮಿಕರು ತಮ್ಮ ತಮ್ಮ ಮನೆಗಳಿಗೆ ಸೇರಲಾರಂಭಿಸಿದ್ದಾರೆ. ಆದರೆ, ರಾಜ್ಯದಲ್ಲಿ ಸಿಲುಕಿಕೊಂಡಿರುವ ಹೊರ ರಾಜ್ಯದ ಕಾರ್ಮಿಕರು ಗೋಳು ಕೇಳುವವರೇ ಇಲ್ಲದಂತಾಗಿದೆ. ಬೆಂಗಳೂರು(ಮೇ.08): ಕೇಂದ್ರ ಗೃಹ ಸಚಿವಾಲಯದ ಅಧಿಕೃತ ಆದೇಶ ಮೇರೆಗೆ ಒಂದು ವಾರದಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 1,08,300 ಕಾರ್ಮಿಕರನ್ನು ಕೆಎಸ್ಆರ್ಟಿ ಬಸ್ಗಳಲ್ಲಿ ಸ್ಥಳಾಂತರ ಮಾಡಲಾಗಿದೆ. ಸುಮಾರು 3610 ಬಸ್ಗಳಲ್ಲಿ ವಲಸೆ ಕಾರ್ಮಿಕರು …
Read More »ಪಾದಾರಾಯನಪುರದಲ್ಲಿ 35 ವರ್ಷದ ಮಹಿಳೆ ಮತ್ತು 23 ವರ್ಷದ ಯುವಕನಿಗೆ ಡೆಡ್ಲಿ ವೈರಸ್ ದೃಢ
ಬೆಂಗಳೂರು: ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿ ಗುರುವಾರ ಒಂದೇ ದಿನ ಏಳು ಮಂದಿಗೆ ಕಿಲ್ಲರ್ ಕೊರೊನಾ ದೃಢವಾಗಿದೆ. ಶಿವಾಜಿನಗರದಲ್ಲಿ ನಾಲ್ವರಿಗೆ, ಪಾದರಾಯನಪುರದಲ್ಲಿ ಇಬ್ಬರಿಗೆ ಮತ್ತು ಯಶವಂತಪುರದಲ್ಲೂ ಓರ್ವರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ ಪಾದರಾಯನಪುರದಲ್ಲಿ ಮತ್ತೆ ಕೊರೊನಾ ರಣಕೇಕೆ ಹಾಕುತ್ತಿದೆ. ಪಾದಾರಾಯನಪುರದಲ್ಲಿ 35 ವರ್ಷದ ಮಹಿಳೆ ಮತ್ತು 23 ವರ್ಷದ ಯುವಕನಿಗೆ ಡೆಡ್ಲಿ ವೈರಸ್ ದೃಢವಾಗಿದೆ. ಬೇರೆ ಬೇರೆ ಮನೆಗಳಲ್ಲಿ ಇದ್ದ …
Read More »ಹೊರ ರಾಜ್ಯದಿಂದ ಬೆಂಗ್ಳೂರಿಗೆ ಬರುವವರಿಗೆ 14 ದಿನ ಹೋಂ ಕ್ವಾರಂಟೈನ್ ಫಿಕ್ಸ್
ಬೆಂಗಳೂರು: ಹೊರರಾಜ್ಯಗಳಿಂದ ಬೆಂಗಳೂರಿಗೆ ಸಾಕಷ್ಟು ಮಂದಿ ಬರುತ್ತಿರುವ ಹಿನ್ನೆಲೆ ಅವರಿಂದ ನಗರದಲ್ಲಿ ಕೊರೊನಾ ಸೋಂಕು ಹರಡಬಾರದು ಎಂದು ಬೆಂಗಳೂರು ಜಿಲ್ಲಾಡಳಿತ ಹೊಸ ಪ್ಲಾನ್ ಮಾಡಿದೆ. ಹೊರ ರಾಜ್ಯದಿಂದ ಸಿಲಿಕಾನ್ ಸಿಟಿಗೆ ಬರುವವರಿಗೆ ಕಡ್ಡಾಯವಾಗಿ ಕೈಗೆ ಸ್ಟಾಂಪಿಂಗ್ ಮಾಡಲಾಗುತ್ತದೆ. ಅವರು 14 ದಿನ ಕಡ್ಡಾಯವಾಗಿ ಹೋಂ ಕ್ವಾರಂಟೈನ್ ಇರಲೇಬೇಕು ಎಂದು ಜಿಲ್ಲಾಡಳಿತ ತಿಳಿಸಿದೆ. ಹೊರ ರಾಜ್ಯದವರಿಂದ ನಗರದಲ್ಲಿ ಮತ್ತಷ್ಟು ಆತಂಕ ಸೃಷ್ಟಿಯಾಗಬಾರದು ಎಂಬ ಕಾರಣಕ್ಕೆ ಅತ್ತಿಬೆಲೆ ಚೆಕ್ ಪೋಸ್ಟ್ ನಲ್ಲಿ ಅಧಿಕಾರಿಗಳು …
Read More »ಕುಂಬಾರರಿಗೂ ವಿಶೇಷ ಪರಿಹಾರ ನೆರವು ನೀಡಲು ಸಿಎಂಗೆ ಮನವಿ…………
ಮಂಗಳೂರು: ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೊಳಗಾದ ಕುಂಬಾರಿಕೆ ವೃತ್ತಿ ಮಾಡುವವರಿಗೂ ಐದು ಸಾವಿರ ರೂಪಾಯಿಗಳ ವಿಶೇಷ ಪರಿಹಾರ ನೆರವು ನೀಡಬೇಕೆಂದು ಕರ್ನಾಟಕ ರಾಜ್ಯ ಕುಲಾಲ್ ಕುಂಬಾರ ಯುವವೇದಿಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದೆ. ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿ ಇರುವವರ ನೆರವಿಗೆ 1,610 ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ಪರಿಹಾರ ಘೋಷಿಸುವ ಮೂಲಕ ಹೆಚ್ಚಿನ ನೆರವು ನೀಡಿರುವ ತಮ್ಮ ನಡೆ ಸ್ವಾಗತಾರ್ಹ. ಆದರೆ ರಾಜ್ಯಾದ್ಯಂತ ಸಂಕಷ್ಟಕ್ಕೆ ಸಿಲುಕಿರುವ ಇನ್ನೂ …
Read More »