Breaking News

4 ದಿನದಲ್ಲೇ 10 ಸಾವಿರ ಮಂದಿಗೆ ಕೊರೊನಾ………….

ನವದೆಹಲಿ: ದೇಶದಲ್ಲಿ ಮತ್ತೆ ಕಠಿಣ ಲಾಕ್‍ಡೌನ್ ಜಾರಿಯಾಗುತ್ತಾ? ಲಾಕ್‍ಡೌನ್ ಸಡಿಲದ ಬಳಿಕ ಕೊರೊನಾ ಆರ್ಭಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ಪ್ರಶ್ನೆ ಎದ್ದಿದೆ. ಜೂನ್ ಮತ್ತು ಜುಲೈ ತಿಂಗಳಲ್ಲಿ ಕೊರೋನಾ ಸೋಂಕಿನ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಏಮ್ಸ್ ವೈದ್ಯ, ಕೊರೋನಾ ಟಾಸ್ಕ್ ಫೋರ್ಸ್‍ನ ಪ್ರಮುಖ ಡಾ.ರಂದೀಪ್ ಗುಲೇರಿಯಾ ಎಚ್ಚರಿಕೆ ನೀಡಿದ್ದಾರೆ. ರೆಡ್ ಝೋನ್, ಹಾಟ್‍ಸ್ಪಾಟ್‍ಗಳ ಕಡೆ ಹೆಚ್ಚು ಗಮನ ನೀಡಬೇಕು. ಇಟಲಿ, ಅಮೆರಿಕದಂತೆ ಆಗಬಾರದು ಎಂದು ಸರ್ಕಾರಕ್ಕೆ ಎಚ್ಚರಿಕೆ …

Read More »

ಜಾರ್ಖಂಡ್‍ಗೆ ನಡೆದುಕೊಂಡೇ ಹೋಗುತ್ತಿದ್ದ ಕಾರ್ಮಿಕ ಚಿಕ್ಕೋಡಿಯಲ್ಲಿ ಸಾವು

ಚಿಕ್ಕೋಡಿ (ಬೆಳಗಾವಿ): ನಡೆದುಕೊಂಡೇ ಜಾರ್ಖಂಡ್‍ನ ತನ್ನ ಗ್ರಾಮಕ್ಕೆ ಹೋಗುತ್ತಿದ್ದ ಕಾರ್ಮಿಕನೊಬ್ಬ ರಸ್ತೆಯಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ. ಜಾರ್ಖಂಡ್ ಮೂಲದ ಬಾಬಾಲಾಲ್ ಸಿಂಗ್(45) ಮೃತ ದುರ್ದೈವಿ. ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ತಂಡವು ಲಾಕ್‍ಡೌನ್‍ನಿಂದಾಗಿ ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿತ್ತು. ಲಾಕ್‍ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ 13 ಜನರ ಕಾರ್ಮಿಕರು ವಾಹನ ಹಾಗೂ ರೈಲ್ವೆ ವ್ಯವಸ್ಥೆ ಇಲ್ಲದ ಕಾರಣ ಮೇ 5ರಂದು ನಡೆದುಕೊಂಡು ಜಾರ್ಖಂಡ್‍ಗೆ …

Read More »

ಕನ್ನಡಿಗರ ನೆರವಿಗೆ ನಿಂತ ಕೇಂದ್ರ- ವಿಶೇಷ ವಿಮಾನ, ರೈಲು ವ್ಯವಸ್ಥೆ…….

ನವದೆಹಲಿ: ಕೊರೊನಾ ಲಾಕ್‍ಡೌನ್‍ನಿಂದಾಗಿ ಉತ್ತರ ಭಾರತದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ದೆಹಲಿಯಿಂದ ಕರ್ನಾಟಕಕ್ಕೆ ಇನ್ನೆರಡು ದಿನಗಳಲ್ಲಿ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗುವುದು ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಉತ್ತರ ಭಾರತದಲ್ಲಿ ಸಿಲುಕಿರುವ ಕನ್ನಡಿಗರು ರಾಜ್ಯಕ್ಕೆ ಮರಳುವುದಕ್ಕಾಗಿ ವಿಶೇಷ ರೈಲೊಂದನ್ನು ಓಡಿಸಲು ರೈಲ್ವೆ ಇಲಾಖೆಯು ಒಪ್ಪಿಗೆ ನೀಡಿದೆ. ಈ ಸಂಬಂಧ ರೈಲ್ವೆ ಸಚಿವ ಪಿಯುಶ್ ಗೋಯಲ್ …

Read More »

ಗಂಭೀರ ಸ್ಥಿತಿಯಲ್ಲಿರುವ ಕೊರೊನಾ ಸೋಂಕಿತ ರೋಗಿಗಳ ನೆರವಿಗಾಗಿ ಜೀವ ರಕ್ಷಕ ಸಾಧನವೊಂದನ್ನು ಮಂಗಳೂರಿನ ವೈದ್ಯರ ತಂಡ ಅವಿಷ್ಕಾರಿಸಿದೆ.

ಮಂಗಳೂರು: ಗಂಭೀರ ಸ್ಥಿತಿಯಲ್ಲಿರುವ ಕೊರೊನಾ ಸೋಂಕಿತ ರೋಗಿಗಳ ನೆರವಿಗಾಗಿ ಜೀವ ರಕ್ಷಕ ಸಾಧನವೊಂದನ್ನು ಮಂಗಳೂರಿನ ವೈದ್ಯರ ತಂಡ ಅವಿಷ್ಕಾರಿಸಿದೆ. ನಗರದ ಮಂಗಳಾ ಹಾಸ್ಪಿಟಲ್‍ನ ಮೆಡಿಕಲ್ ಡೈರೆಕ್ಟರ್ ಡಾ.ಗಣಪತಿ ಅವರ ತಂಡ ಆಕ್ಸಿಜನ್ ಬಬ್ಬಲ್ ಹೆಲ್ಮೆಟ್‍ನ್ನು ರೆಡಿ ಮಾಡಿದೆ. ವೆಂಟಿಲೇಟರ್ ಅಳವಡಿಸಿ ಕೃತಕ ಉಸಿರಾಟ ನೀಡಬೇಕಾದ ರೋಗಿಗಳಿಗೆ ಈ ಸಾಧನ ಬಹಳಷ್ಟು ಉಪಯೋಗಕಾರಿಯಾಗಲಿದೆ. ಕೊರೊನಾ ಸೋಂಕಿನಿಂದ ರೋಗಿಯ ಆರೋಗ್ಯ ಸ್ಥಿತಿ ಗಂಭೀರ ಆಗಿ ಉಸಿರಾಟ ಸಮಸ್ಯೆ ಎದುರಾದಾಗ ಕೃತಕ ಉಸಿರಾಟದ ವ್ಯವಸ್ಧೆ …

Read More »

ಮೆಣಸಿನಕಾಯಿ ವ್ಯಾಪಾರಿಗೆ ಕೊರೊನಾ – ಕಂಟೈನ್ಮೆಂಟ್ ಮುಕ್ತವಾಗಿದ್ದ ಪ್ರದೇಶದಲ್ಲಿ ಮತ್ತೆ ಆತಂಕ

ಧಾರವಾಡ: ಜಿಲ್ಲೆಯ ಹೊಸಯಲ್ಲಾಪುರ ಪ್ರದೇಶ ಅದೇನು ಪಾಪಾ ಮಾಡಿದೇಯೋ ಗೊತ್ತಿಲ್ಲ. ಧಾರವಾಡ ಜಿಲ್ಲೆಯ ಮೊದಲ ಪಾಸಿಟಿವ್ ಪ್ರಕರಣ ಇದೇ ಏರಿಯಾದಲ್ಲಿ ಪತ್ತೆಯಾಗಿತ್ತು. ಈ ಕಾರಣಕ್ಕೆ ಒಂದು ತಿಂಗಳ ಕಾಲ ಸಂಪೂರ್ಣ ಬಂದ್ ಆಗಿ ಹೋಗಿದ್ದ ಈ ಪ್ರದೇಶವನ್ನು ವಾರದ ಹಿಂದಷ್ಟೇ ಕಂಟೋನ್ಮೆಂಟ್ ಝೋನಿನಿಂದ ಮುಕ್ತಗೊಳಿಸಿ, ಸಾಮಾನ್ಯ ವಲಯವನ್ನಾಗಿ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಆದರೆ ಗುರುವಾರ ಇದೇ ಏರಿಯಾದ ಕೋಳಿಕೆರೆಯ 35 ವರ್ಷದ ಮೆಣಸಿನಕಾಯಿ ವ್ಯಾಪಾರಿಯಲ್ಲಿ ಕೊರೊನಾ ಸೋಂಕು ದೃಢಪಟ್ಟ …

Read More »

ಅಬಕಾರಿ ಸುಂಕ ಏರಿಕೆ – ಮದ್ಯ ಮಾರಾಟ ಇಳಿಕೆ……

ಬೆಂಗಳೂರು: ಸಿಎಂ ಯಡಿಯೂರಪ್ಪ ಮದ್ಯದ ಮೇಲೆ ಶೇ.17 ಅಬಕಾರಿ ಸುಂಕ ವಿಧಿಸಿದ ಬೆನ್ನಲ್ಲೇ ಬುಧವಾರಕ್ಕೆ ಹೋಲಿಸಿದ್ದಲ್ಲಿ ಮದ್ಯ ಮಾರಾಟ ಇಳಿಕೆಯಾಗಿದೆ. ಬುಧವಾರ ಒಟ್ಟು 230 ಕೋಟಿ ರೂ. ಮೌಲ್ಯದ ಮದ್ಯ ಮಾರಾಟವಾಗಿದ್ದರೆ ಗುರುವಾರ ಒಟ್ಟು 165 ಕೋಟಿ ರೂ. ಮದ್ಯ ಮಾರಾಟವಾಗಿದೆ ಎಂದು ಕೆಎಸ್‍ಬಿಸಿಎಲ್ (ಕರ್ನಾಟಕ ಪಾನೀಯ ನಿಯಮ) ತಿಳಿಸಿದೆ. ಇಂದು 152 ಕೋಟಿ ರೂ. ಮೌಲ್ಯದ 27.56 ಲಕ್ಷ ಲೀಟರ್ ಇಂಡಿಯನ್ ಮೇಡ್ ಲಿಕ್ಕರ್(ಐಎಂಎಲ್), 13 ಕೋಟಿ ಮೌಲ್ಯದ …

Read More »

ಒಂದೂವರೆ ತಿಂಗಳ ಬಳಿಕ ಎಣ್ಣೆ ಸಿಕ್ಕ ಖುಷಿಗೆ ಮದ್ಯವ್ಯಸನಿಗಳು ಜಗತ್ತನ್ನೇ ಮರೆತು, ಮೈಮರೆತು ಎಣ್ಣೆಯ ನಶೆಯಲ್ಲಿ ತೇಲುತ್ತಿದ್ದಾರೆ.

ಚಿಕ್ಕಮಗಳೂರು: ಒಂದೂವರೆ ತಿಂಗಳ ಬಳಿಕ ಎಣ್ಣೆ ಸಿಕ್ಕ ಖುಷಿಗೆ ಮದ್ಯವ್ಯಸನಿಗಳು ಜಗತ್ತನ್ನೇ ಮರೆತು, ಮೈಮರೆತು ಎಣ್ಣೆಯ ನಶೆಯಲ್ಲಿ ತೇಲುತ್ತಿದ್ದಾರೆ. ಹೊಟ್ಟೆ ತುಂಬಾ ಕುಡಿದು ಎಲ್ಲೆಂದರಲ್ಲಿ ಬಿದ್ದರೂ ಕುಡುಕರಿಗೆ ಇನ್ನೂ ಸಮಾಧಾನ ಆಗಿಲ್ಲ ಅನಿಸುತ್ತಿದೆ. ಯಾಕಂದ್ರೆ ಮದ್ಯ ಪ್ರಿಯರು ಫುಲ್ ಟೈಟಾಗಿ ಮೈಮೇಲೆ ಜ್ಞಾನ ಇಲ್ಲದಂತೆ ಎದ್ದು-ಬಿದ್ದೋ ತೇಲ್ತಿರೋ ಘಟನೆ ಜಿಲ್ಲೆಯ ವಿವಿಧ ಭಾಗದಲ್ಲಿ ಇನ್ನೂ ನಿಂತಿಲ್ಲ. ಫುಲ್ ಟೈಟಾಗಿ ರಸ್ತೆ ಮಧ್ಯೆ ಪ್ರಜ್ಞೆ ತಪ್ಪಿ ಮಲಗುತ್ತಿರುವ ಸನ್ನಿವೇಶಗಳು ಕಡಿಮೆಯಾಗಿಲ್ಲ. ಕೊರೊನಾ …

Read More »

15 ರಜೆ ಮುಗಿಸಿ ಕೆಲಸಕ್ಕೆ ಬಂದ ಮಹಿಳೆ – 2ನೇ ದಿನವೇ ಅನುಮಾನಾಸ್ಪದವಾಗಿ ಸಾವು

ಬೆಂಗಳೂರು: ಕಾರ್ಖಾನೆಯಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ. ಇಂಡ್ಲವಾಡಿ ರಸ್ತೆಯ ಸ್ಟ್ರೈಡ್ಸ್ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಇಂಡ್ಲವಾಡಿ ಮೂಲದ ಮಂಜುಳಾ (26) ಮೃತ ಮಹಿಳೆ. ಮೃತ ಮಂಜುಳಾ ಎಂದಿನಂತೆ ಬೆಳಗ್ಗೆ ಕೆಲಸಕ್ಕೆ ಬಂದಿದ್ದು, ನಂತರ ಸಾವನ್ನಪ್ಪಿದ್ದಾಳೆಂದು ಸಹೋದ್ಯೋಗಿಗಳು ತಿಳಿಸಿದ್ದಾರೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಹದಿನೈದು ದಿನ ವಿತರಣೆ ಪಾಳಿಯಂತೆ ರಜೆಯಲ್ಲಿದ್ದು, ಬುಧವಾರ ಕೆಲಸಕ್ಕೆ ಹಾಜರಾಗಿದ್ದಳು. ಎಂದಿನಂತೆ …

Read More »

ಇಂದು 12 ಮಂದಿಗೆ ಕೊರೊನಾ- ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 705ಕ್ಕೆ ಏರಿಕೆ

– ಬಾಗಕೋಟೆಯ ರೋಗಿ-607ರಿಂದ ಮೂವರಿಗೆ ಕೊರೊನಾ – ದಾವಣಗೆರೆಯಲ್ಲಿ ಕೊರೊನಾಗೆ ಮತ್ತೊಂದು ಸಾವು – ಬೆಳಗಾವಿಯ 13ರ ಬಾಲಕಿಗೆ ಸೋಂಕು ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ರಾಜ್ಯದಲ್ಲಿ ನಿಯಂತ್ರಣಕ್ಕೆ ಸಿಗುವಂತೆ ಕಾಣುತ್ತಿಲ್ಲ. ಇಂದು 12 ಮಂದಿಗೆ ಕೊರೊನಾ ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 705ಕ್ಕೆ ಏರಿಕೆಯಾಗಿದೆ. ದಾವಣಗೆರೆಯ 55 ವರ್ಷದ ಮಹಿಳೆ (ರೋಗಿ-694) ಕೊರೊನಾಗೆ ಇಂದು ಸಾವನ್ನಪ್ಪಿದ್ದು, ರಾಜ್ಯದಲ್ಲಿ ಸಾವಿನ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ದಾವಣಗೆರೆಯಲ್ಲಿ ಈವರೆಗೂ ಕೊರೊನಾದಿಂದ ನಾಲ್ವರು …

Read More »

ರಾಹುಲ್ ಗಾಂಧಿ ಬಟಾಟೆಯಲ್ಲಿ ಚಿನ್ನ ತೆಗೆದಂತೆ ಸಿದ್ದರಾಮಯ್ಯ ಹೂವಿನಲ್ಲಿ ಚಿನ್ನ ತೆಗೆಯಲು ಹೊರಟಿದ್ದಾರೆ’

ಮಂಗಳೂರು: ಕೊರೊನಾ ವಿಶೇಷ ಪ್ಯಾಕೇಜ್ ಘೋಷಣೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಟೀಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೂವಿನ ಬೆಳೆಗೆ ಎಕರೆಗೆ 50 ಲಕ್ಷ ಎಲ್ಲಿ ಖರ್ಚು ಮಾಡಲಾಗುತ್ತೆ ಎಂಬ ಬಗ್ಗೆ ಸಿದ್ದರಾಮಯ್ಯ ಅಧ್ಯಯನ ಮಾಡಲಿ, ಸಿದ್ದರಾಮಯ್ಯನವರು ಯೋಚನೆ ಮಾಡಿ ಮಾತಾಡೋದು ಒಳ್ಳೆಯದು. ರಾಹುಲ್ ಗಾಂಧಿ ಬಟಾಟೆಯಲ್ಲಿ ಚಿನ್ನ ತೆಗೆದ ರೀತಿಯಲ್ಲಿ, ಸಿದ್ದರಾಮಯ್ಯ ಹೂವಿನಲ್ಲಿ ಚಿನ್ನ ತೆಗೆಯಲು ಹೊರಟಿದ್ದಾರೆ …

Read More »