ಚಿಕ್ಕಮಗಳೂರು: ಜಿಲ್ಲೆಯ ಕಡೂರಿನ ಮಾಜಿ ಶಾಸಕ ವೈ.ಎಸ್.ವಿ. ದತ್ತ ಲಾಕ್‍ಡೌನ್ ಹಿನ್ನೆಲೆ ಮೇಷ್ಟ್ರಾಗಿ ಮಕ್ಕಳಿಗೆ ಪಾಠ ಮಾಡುತ್ತಿದ್ದಾರೆ. ಎಸ್.ಎಸ್.ಎಲ್.ಸಿ. ಮಕ್ಕಳಿಗೆ ಫೇಸ್ ಬುಕ್ ಲೈವ್‍ನಲ್ಲಿ ಪ್ರತಿ ದಿನ ಸಂಜೆ 7.30 ರಿಂದ 8.30ರವೆಗೆ ಪಾಠ ಮಾಡುತ್ತಿದ್ದಾರೆ. ಒಂದು ವಾರ ಗಣಿತ, ಮತ್ತೊಂದು ವಾರ ಭೌತಶಾಸ್ತ್ರ ಪಾಠ ಮಾಡಲು ಮುಂದಾಗಿದ್ದಾರೆ. ಈಗಾಗಲೇ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ದಿನಗಣನೆ ಆರಂಭವಾಗಿದೆ. ಜೂನ್ ಮೊದಲ ವಾರದಲ್ಲಿ ಪರೀಕ್ಷೆ ನಡೆಯಬಹುದು ಎಂದು ಹೇಳಲಾಗುತ್ತಿದೆ. ಪರೀಕ್ಷೆ ನಡೆಸಲು ಸರ್ಕಾರ …
Read More »ವರದಿಗಾರ ಹನುಮಂತು ಕುಟುಂಬಕ್ಕೆ ವೆಬಿನಾರ್ ಹಣ – ಸುರಾನಾ ಕಾಲೇಜು ತೀರ್ಮಾನ
ಬೆಂಗಳೂರು: ಸುರಾನಾ ಪೀಣ್ಯಾ ಕ್ಯಾಂಪಸ್ ಅಲ್ಲಿ ವೆಬಿನಾರ್ ಅನ್ನು ಆಯೋಜನೆ ಮಾಡಲಾಗಿದೆ. ಕಾಲೇಜಿನ ವಿದ್ಯಾರ್ಥಿಗಳಿಗೆ ಅನ್‍ಲೈನ್ ಕ್ಲಾಸ್ ಮಾಡಲು ತೀರ್ಮಾನಿಸಿ ಇದನ್ನು ಶುರು ಮಾಡಿದ್ದೇವೆ ಎಂದು ಕಾಲೇಜಿನ ಪ್ರಾಂಶುಪಾಲೆ ರಮ್ಯಾ ಅವರು ಹೇಳಿದ್ದಾರೆ. ಕೇವಲ ಉಪನ್ಯಾಸಕರಿಂದ ಕ್ಲಾಸ್ ಮಾಡುವುದಕ್ಕಿಂತ ಅತಿಥಿ ಉಪನ್ಯಾಸಕರಿಂದ ಆನ್‍ಲೈನ್ ಕ್ಲಾಸ್ ಮಾಡಿಸಲು ಶುರು ಮಾಡಿದ್ದೇವೆ. ವಿದ್ಯಾರ್ಥಿಗಳಿಗೆ ಕ್ಲಾಸಿನ ಬಗ್ಗೆ ಗಂಭೀರತೆ ಇರಲಿ ಎಂದು 100, 200 ರೂಪಾಯಿ ಎಂದು ಫೀಸ್ ಕೂಡ ಮಾಡಿದ್ದೇವೆ. ಈ ಹಣವನ್ನು …
Read More »ವಿಶ್ರಾಂತಿಗಾಗಿ ತಂಗಿದ್ದ ವೇಳೆ ನನ್ನ ವಸ್ತ್ರಗಳನ್ನು ಕಳಚಿ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ.: ಗುರುಸ್ವಾಮಿ ಸ್ಪಷ್ಟನೆ
ಹುಬ್ಬಳ್ಳಿ: ಶಬರಿ ನಗರದ ಅಯ್ಯಪ್ಪ ಸ್ವಾಮೀಜಿ ಮಠದ ಪೀಠಾದೀಶನ ಬೆತ್ತಲೆ ಪುರಾಣದ ವಿಡಿಯೋ ಸ್ಥಳೀಯ ಮಟ್ಟದಲ್ಲಿ ಸಾಕಷ್ಟು ವೈರಲ್ ಆಗಿತ್ತು. ಅಲ್ಲದೇ ಮೋಹನ್ ಗುರು ಸ್ವಾಮೀಜಿ ಅವತಾರ ಕಂಡು ಸಾರ್ವಜನಿಕರು ಆಕ್ರೋಶ ಹೊರಹಾಕಿ, ಆತನನ್ನು ಮಠದಿಂದ ಹೊರ ಕಳುಹಿಸಬೇಕೆಂಬ ಕೂಗು ಕೇಳಿ ಬಂದಿತ್ತು. ಸದ್ಯ ವಿಡಿಯೋ ಕುರಿತು ಸ್ಪಷ್ಟನೆ ನೀಡಿರುವ ಅಯ್ಯಪ್ಪ ಸ್ವಾಮೀಜಿ ಮಠದ ಪೀಠಾದೀಶ ಮೋಹನ ಗುರುಸ್ವಾಮಿ, ಕುಸುಗಲ್ ರಸ್ತೆಯಲ್ಲಿರುವ ಸಿದ್ದಾರೂಡ ಮಠದಲ್ಲಿ ವಿಶ್ರಾಂತಿಗಾಗಿ ತಂಗಿದ್ದ ವೇಳೆ ನನ್ನ …
Read More »ಮದ್ಯದ ಅಮಲಿನಲ್ಲಿ ತಮ್ಮನ ಕೈ ಕಟ್ ಮಾಡಿದ ಅಣ್ಣ….
ಚಿಕ್ಕಬಳ್ಳಾಪುರ: ಮದ್ಯದ ಅಮಲಿನಲ್ಲಿ ಸಹೋದರರ ನಡುವೆ ಜಗಳ ನಡೆದಿದ್ದು, ಕೋಪದ ಕೈಗೆ ಬುದ್ಧಿ ಕೊಟ್ಟ ಅಣ್ಣ, ತಮ್ಮನ ಕೈಯನ್ನೇ ತುಂಡರಿಸಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ರಮಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿಗಳಾದ 38 ವರ್ಷದ ಕೃಷ್ಣಪ್ಪ ಹಾಗೂ ತಮ್ಮ 33 ವರ್ಷದ ಹನುಮಂತರಾಯಪ್ಪ ಇಬ್ಬರು ಸಹೋದರರು. ಇಂದು ಮದ್ಯ ಸೇವಿಸಿ ಬಳಿಕ ಇಬ್ಬರು ಮನೆಯಲ್ಲಿ ಊಟ ಮಾಡಿದ್ದಾರೆ. ಈ ವೇಳೆ ಇಬ್ಬರ ನಡುವೆ ತಟ್ಟೆ ತೊಳೆಯುವ ವಿಚಾರಕ್ಕೆ ಜಗಳ …
Read More »ಮಂಗಮ್ಮನಪಾಳ್ಯದ ಕಾರ್ಮಿಕನ ಪುತ್ರಿಯ ಕೋವಿಡ್-19 ವರದಿ ನೆಗೆಟಿವ್ ಬಂದಿದೆ.
ಬೆಂಗಳೂರು: ಮಂಗಮ್ಮನಪಾಳ್ಯದ ಕಾರ್ಮಿಕನ ಪುತ್ರಿಯ ಕೋವಿಡ್-19 ವರದಿ ನೆಗೆಟಿವ್ ಬಂದಿದೆ. ಮಂಗಮ್ಮನಪಾಳ್ಯದ ಕೂಲಿ ಕಾರ್ಮಿಕನಿ(ರೋಗಿ ನಂಬರ್ 654)ಗೆ ಸೋಂಕು ತಗುಲಿರೋದು ದೃಢವಾಗ್ತಿದ್ದಂತೆ ಆತನ ಕುಟುಂಬಸ್ಥರನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗಿತ್ತು. ಕಾರ್ಮಿಕನ ಪುತ್ರ ಮತ್ತು ಪತ್ನಿಗೆ ಸೋಂಕು ತಗುಲಿದೆ. ಆದ್ರೆ ಅವರ ಜೊತೆಯಲ್ಲಿದ್ದ ಪುತ್ರಿಯ ವರದಿ ನೆಗೆಟಿವ್ ಬಂದಿದೆ. ಕಾರ್ಮಿಕನ ಪುತ್ರ ನಗರದಲ್ಲಿ ಡೆಲಿವರಿ ಬಾಯ್ (ರೋಗಿ ನಂಬರ್ 678) ಆಗಿ ಕೆಲಸ ಮಾಡಿಕೊಂಡಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಇದೀಗ …
Read More »ಚಿಕನ್ ಗುನ್ಯಾ ಸೋಂಕು ಅಂತ ಖಾಸಗಿ ಆಸ್ಪತ್ರೆಗೆ ಬಂದಿದ್ದ ಮಹಿಳೆಗೆ ಕೊರೊನಾ ಪಾಸಿಟಿವ್
ಬೆಂಗಳೂರು: ಚಿಕನ್ ಗುನ್ಯಾ ಸೋಂಕು ಅಂತ ಖಾಸಗಿ ಆಸ್ಪತ್ರೆಗೆ ಬಂದಿದ್ದ ಮಹಿಳೆ ಕೊರೊನಾ ಪಾಸಿಟಿವ್ ಬಂದಿರುವ ಘಟನೆ ಯಶವಂತಪುರದಲ್ಲಿ ನಡೆದಿದೆ. 49 ವರ್ಷದ ಮಹಿಳೆಗೆ ಕೊರೊನಾ ಸೋಂಕು ದೃಢಪಡುತ್ತಿದ್ದಂತೆ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದೆ. ಜೊತೆಗೆ ಆಸ್ಪತ್ರೆಯಿಂದ ಇತರೆ ರೋಗಿಗಳನ್ನ ಸ್ಥಳಾಂತರಗೊಳಿಸಲಾಗಿದೆ. ಸೋಂಕಿತ ಮಹಿಳೆಯು ಮೂಲತಃ ಪಶ್ಚಿಮ ಬಂಗಾಳದವರಾಗಿದ್ದು, ಯಶವಂತಪುರದ ಸುಬೇದಾರ್ ಪಾಳ್ಯದಲ್ಲಿರುವ ಮಗನ ಮನೆಗೆ ಮಾರ್ಚ್ 12ರಂದು ಬಂದಿದ್ದರು. ಅವರಿಗೆ ಏಪ್ರಿಲ್ 30ರಂದು ಜ್ಚರ ಕಾಣಿಸಿಕೊಂಡಿತ್ತು. ಹೀಗಾಗಿ ಚಿಕನ್ …
Read More »ಹೊರ ರಾಜ್ಯದಲ್ಲಿರುವ ಕನ್ನಡಿಗರು ರಾಜ್ಯಕ್ಕೆ ಬರಬಹುದು – ಷರತ್ತುಗಳು ಅನ್ವಯ
ಬೆಂಗಳೂರು: ಹೊರ ರಾಜ್ಯದಲ್ಲಿರುವ ಕನ್ನಡಿಗರು ಇನ್ನು ಮುಂದೆ ಕರ್ನಾಟಕಕ್ಕೆ ಬರಬಹುದು. ಲಾಕ್‍ಡೌನ್ ಘೋಷಣೆಗೂ ಮುನ್ನ ನೆರೆ ರಾಜ್ಯಕ್ಕೆ ಹೋಗಿರುವ ಕನ್ನಡಿಗರು ಪಾಸ್ ಪಡೆಯುವ ಮೂಲಕ ಮರಳಿ ಕರ್ನಾಟಕಕ್ಕೆ ಬರಬಹುದು. ರಾಜ್ಯಕ್ಕೆ ಬರುವ ಕನ್ನಡಿಗರು ಸೇವಾ ಸಿಂಧು ವೆಬ್‍ಸೈಟ್‍ಗೆ ತೆರಳಿ ವಿವರಗಳನ್ನು ನೀಡಬೇಕಾಗುತ್ತದೆ. ಈ ಎಲ್ಲ ವಿವರಗಳು ಸರಿಯಾಗಿದ್ದರೆ ಇ ಪಾಸ್ ಡೌನ್‍ಲೋಡ್ ಮಾಡಬಹುದು. ಇ ಪಾಸ್ ಸಿಕ್ಕಿದ ದಿನದಿಂದ ಒಂದು ವಾರದ ವರೆಗೆ ಮಾತ್ರ ಈ ಪಾಸ್ ಉರ್ಜಿತದಲ್ಲಿರುತ್ತದೆ. ಸ್ವಂತ …
Read More »ಶ್ರಮಿಕ ವರ್ಗಕ್ಕೆ B.S.Y. ನೆರವು……..
ಬೆಂಗಳೂರು: ಕೊರೊನಾ ಲಾಕ್‍ಡೌನ್ ಆಗಿ 47 ದಿನಗಳು ಕಳೆದಿವೆ. ಲಾಕ್‍ಡೌನ್ ಅವಧಿಯಲ್ಲಿ ಅತೀ ಹೆಚ್ಚು ಸಂಕಷ್ಟಕ್ಕೆ ತುತ್ತಾದವರು ಆಯಾ ದಿನದ ಕೆಲಸವನ್ನೇ ನಂಬಿ ಜೀವನ ನಡೆಸುತ್ತಾ ಬಂದಿವರೇ ಆಗಿದ್ದಾರೆ. ವೃತ್ತಿನಿರತ ಕ್ಷೌರಿಕರು, ಅಗಸರು, ರೈತರು, ಆಟೋ ಟ್ಯಾಕ್ಸಿ ಚಾಲಕರು, ಹೂ, ಹಣ್ಣು ಬೆಳೆಗಾರರು ಸಾಕಷ್ಟು ಕಷ್ಟ ನಷ್ಟಗಳನ್ನು ಉಂಡಿದ್ದರು. ಉದ್ಯಮ ವಲಯವೂ ಸ್ತಬ್ಧ ಆಗಿ ಉದ್ಯಮಿಗಳು ಕಂಗಾಲಾಗಿದ್ದರು. ಇದೀಗ ಈ ವರ್ಗದವರ ನೆರವಿಗೆ ರಾಜ್ಯ ಸರ್ಕಾರ ಧಾವಿಸಿದೆ. 1,610 ಕೋಟಿ …
Read More »ಕಲಬುರಗಿ ನಗರದಲ್ಲಿ ತಾಯಿ-ಮಗು ಸೇರಿದಂತೆ ಮತ್ತೆ ಮೂವರು ರೋಗಿಗಳು ಕೊರೊನಾ ಸೋಂಕಿನಿಂದ ಗುಣಮುಖ
ಕಲಬುರಗಿ: ಕಲಬುರಗಿ ನಗರದಲ್ಲಿ ತಾಯಿ-ಮಗು ಸೇರಿದಂತೆ ಮತ್ತೆ ಮೂವರು ರೋಗಿಗಳು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಬುಧವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ನಗರದ ಮೋಮಿನಪುರ ಪ್ರದೇಶದ 26 ವರ್ಷದ ಮಹಿಳೆ (ರೋಗಿ ಸಂಖ್ಯೆ-425) ಹಾಗೂ ಇವರ ನಾಲ್ಕು ತಿಂಗಳ ಗಂಡು ಮಗು (ರೋಗಿ ಸಂಖ್ಯೆ-424) ಹಾಗೂ ಮಾಣಿಕೇಶ್ವರಿ ನಗರದ 46 ವರ್ಷದ ಮಹಿಳೆ (ರೋಗಿ ಸಂಖ್ಯೆ-421) ಗುಣಮುಖರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ಅವರು ತಿಳಿಸಿದ್ದಾರೆ. ಈ ಮೂವರಿಗೂ ಏ.22ರಂದು ಕೊರೊನಾ ಸೋಂಕು …
Read More »ಹಣ ಕೊಡ್ಲಿಲ್ಲ ಅಂತ ಮಾಲೀಕನ ಟಿಪ್ಪರ್ ಎಗರಿಸಿದ ಭೂಪ………
ಚಿಕ್ಕಮಗಳೂರು: ಹೆಂಡತಿ-ಮಕ್ಕಳಿಗೆ ಹಣ ಬೇಕು. ನಿಮ್ಮ ಕಾಲಿಗೆ ಬೀಳ್ತೀನಿ ಅಂದ್ರು ಮಾಲೀಕ ಹಣ ಕೊಡಲಿಲ್ಲ ಅಂತ ಹೇಳದೆ-ಕೇಳದೆ ಎಣ್ಣೆ ಏಟಲ್ಲಿ 14 ಚಕ್ರದ ಟಿಪ್ಪರ್ ಲಾರಿಯನ್ನ ತೆಗೆದುಕೊಂಡು ಊರಿಗೆ ಹೋಗಲು ಯತ್ನಿಸಿದ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ. ಮಂಗಳೂರು ಮೂಲದ ರಂಗಪ್ಪ ಎಂಬವನು ಕಡೂರು ತಾಲೂಕಿನಲ್ಲಿ ಪ್ರಭಾಕರ್ ಅವರ ಬಳಿ ಕೆಲಸ ಮಾಡುತ್ತಿದ್ದ. ಕೊರೊನಾ ವೈರಸ್ ಆತಂಕದಿಂದ ಇಡೀ ದೇಶವೇ ಲಾಕ್‍ಡೌನ್ ಆದಮೇಲೆ ಡ್ರೈವರ್ ರಂಗಪ್ಪ ಒಂದೂವರೆ ತಿಂಗಳು …
Read More »