ಡ್ರಗ್ಸ್ ಮುಕ್ತ ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರ್ ಕಾರ್ಯಕ್ಕೆ ಕನ್ನಡ ಚಿತ್ರರಂಗದ ನಟರು ಸಾಥ್ ನೀಡಿದ್ದು ಕಳೆದ ತಿಂಗಳು ಮಾದಕ ದ್ರವ್ಯ ವಸ್ತುಗಳ ವಿರುದ್ಧದ ಜಾಗೃತಿಯನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ ಸಾಥ್ ನೀಡಿದ್ದರು ಇಂದು ಹು-ಧಾ ಪೊಲೀಸ್ ಕಮಿಷನರಗೆ ರಿಯಲ್ ಸ್ಟಾರ್ ಉಪೇಂದ್ರ ಅವರು ಸಾಥ್ ನೀಡಿದ್ದಾರೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಆಗಿ ನೇಮಕ ಆದಾಗಿನಿಂದ ಎನ್.ಶಶಿಕುಮಾರ್ ಅವರು ಗಾಂಜಾ , ಡ್ರಗ್ಸ್ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಂಡು …
Read More »ಬಾಲಮಂದಿರದಲ್ಲಿ ಅಮಾನವೀಯ ಕೃತ್ಯ ಬಯಲು
ಡಿಸೆಂಬರ್ 04: ನೊಂದ, ಸಂತ್ರಸ್ತ ಮತ್ತು ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿಯರಿಗೆ ಆತ್ಮಸ್ಥೈರ್ಯ ತುಂಬಿ ಅವರ ಬಾಳಿಗೆ ಬೆಳಕಾಗಬೇಕಾದ ಸರ್ಕಾರಿ ಬಾಲಕಿಯರ ಮಂದಿರವೊಂದು (Government Girls Bala Mandira) ಭೂ ಲೋಕದ ನರಕವಾಗಿದ್ದು, ಅಲ್ಲಿರುವ ಮಕ್ಕಳಿಗೆ ಅಲ್ಲಿಯ ಅಧೀಕ್ಷಕಿ ರಾಕ್ಷಸಿಯಂತೆ ನಡೆದುಕೊಳ್ಳುತ್ತಿರುವ ಪ್ರಕರಣ ಬಯಲಾಗಿದೆ. ಬಾಲಮಂದಿರದಲ್ಲಿ ಅಮಾನವೀಯ ಕೃತ್ಯ ಬಯಲು ನಗರದ ಬಿಬಿ ರಸ್ತೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧೀನದಲ್ಲಿ ಸರ್ಕಾರಿ ಬಾಲಕಿಯರ ಮಂದಿರವೊಂದಿದೆ. ಇದೆ ಬಾಲಕಿಯರ ಮಂದಿರ ಈಗ …
Read More »ಅಕ್ರಮ ಮದ್ಯ ಮಾರಾಟ ಮತ್ತು ಗಾಂಜಾ ಹಾವಳಿ: ಎಸ್ಪಿಯವರಿಗೆ ಮನವಿ ಸಲ್ಲಿಸಿದ ಬಿಜೆಪಿ
ಗಾಂಜಾ ಮತ್ತು ಅಕ್ರಮ ಮದ್ಯ ಮಾರಾಟ ಹಾವಳಿ: ಎಸ್ಪಿಯವರಿಗೆ ಮನವಿ ಸಲ್ಲಿಸಿದ ಬಿಜೆಪಿ ಭಾರತೀಯ ಜನತಾ ಪಾರ್ಟಿ ವಾಣಿಜ್ಯ ಮತ್ತು ವ್ಯಾಪಾರ ಪ್ರಕೋಸ್ಟ ವತಿಯಿಂದ ವಿಜಯಪುರ ಜಿಲ್ಲೆಯಲ್ಲಿ ಅಕ್ರಮವಾಗಿ ನಡೆಯುತ್ತಿರುವ ಗಾಂಜಾ ಮತ್ತು ಮದ್ಯ ಮಾರಾಟದ ಹಾವಳಿ ತಡೆಗಟ್ಟಲು ಕ್ರಮ ವಹಿಸಿ ಎಂದು ಮನವಿ ಸಲ್ಲಿಸಿದರು. ಸಮಾಜಕ್ಕೆ ಮಾರಕವಾದ ಅಕ್ರಮ ಗಾಂಜಾ ಮತ್ತು ಮಧ್ಯ ಮಾರಾಟ ಹಾವಳಿಯನ್ನು ತಡೆಗಟ್ಟಲು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಇವರಿಗೆ ಮನವಿ …
Read More »ದೆಹಲಿಯಲ್ಲಿ ಯತ್ನಾಳ್‌ಗೆ ಬಿಜೆಪಿ ಹೈಕಮಾಂಡ್ ಕಿವಿಮಾತು: ಪಾಠಕ್ ಶಿಸ್ತಿನ ಪಾಠ
ಡಿಸೆಂಬರ್ 5: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ಬಂಡಾಯ ಸಾರಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ದೆಹಲಿಯಲ್ಲಿ ಹೈಕಮಾಂಡ್ ನಾಯಕರು ಶಿಸ್ತಿನ ಪಾಠ ಮಾಡಿದ್ದಾರೆ. ಕೇಂದ್ರ ಶಿಸ್ತು ಸಮಿತಿ ಕೊಟ್ಟ ನೋಟಿಸ್ಗೆ 6 ಪುಟಗಳ ಉತ್ತರ ನೀಡಿರುವ ಯತ್ನಾಳ್, ಖುದ್ದು ಹಾಜರಾಗಿ ಲಿಖಿತ ಮಾತ್ರವಲ್ಲದೇ ಮೌಖಿಕವಾಗಿಯೂ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಬಂಡಾಯಕ್ಕೆ 6 ಪುಟಗಳ ಸುದೀರ್ಘ ಉತ್ತರ …
Read More »ಸುಭಾಷ್ ನಗರದಲ್ಲಿ ರಸ್ತೆಯ ಅಭಿವೃದ್ಧಿ ಕಾರ್ಯಕ್ಕೆ ಶಾಸಕ ಆಸೀಫ್ ಸೇಠ್ ಚಾಲನೆಯನ್ನು ನೀಡಿದರು.
ಬೆಳಗಾವಿಯ ಸುಭಾಷ್ ನಗರದಲ್ಲಿ ರಸ್ತೆಯ ಅಭಿವೃದ್ಧಿ ಕಾರ್ಯಕ್ಕೆ ಶಾಸಕ ಆಸೀಫ್ ಸೇಠ್ ಚಾಲನೆಯನ್ನು ನೀಡಿದರು. ಬುಧವಾರದಂದು ಬೆಳಗಾವಿಯ ಸುಭಾಷ ನಗರದಲ್ಲಿ ರಸ್ತೆಯ ಅಭಿವೃದ್ಧಿ ಕಾರ್ಯಕ್ಕೆ ಶಾಸಕ ಆಸೀಫ್ ಸೇಠ್ ಅವರು ಚಾಲನೆಯನ್ನ ನೀಡಿದರು. ಲೋಕೋಪಯೋಗಿ ಇಲಾಖೆಯ 25 ಲಕ್ಷ ರೂಪಾಯಿ ಅನುದಾನದಲ್ಲಿ ಈ ಕಾಮಗಾರಿಯನ್ನ ಕೈಗೊಳ್ಳಲಾಗಿದೆ. ಈ ಕುರಿತು ಇನ್ ನ್ಯೂಜಗೆ ಮಾಹಿತಿಯನ್ನು ನೀಡಿದ ಶಾಸಕರು, ಲೋಕೋಪಯೋಗಿ ಇಲಾಖೆ, ಅಲ್ಪಸಂಖ್ಯಾತರ ಅನುದಾನ, ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ವಿವಿಧ ಕಾಮಗಾರಿಕರಣ ಆರಂಭಿಸಲಾಗಿದೆ. …
Read More »ದೇವೇಗೌಡರ ತವರು ಜಿಲ್ಲೆಯಲ್ಲಿ ಜೆಡಿಎಸ್-ಬಿಜೆಪಿಗೆ ಟಕ್ಕರ್ ಕೊಡಲು ತಂತ್ರ
ಬೆಂಗಳೂರು, ಡಿಸೆಂಬರ್ 5: ಉಪಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿರುವ ಕಾಂಗ್ರೆಸ್ ಈಗ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ತವರು ಜಿಲ್ಲೆ ಹಾಸನದಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಈ ಮೂಲಕ ಜೆಡಿಎಸ್-ಬಿಜೆಪಿ ಎರಡಕ್ಕೂ ಟಕ್ಕರ್ ಕೊಡಲು ‘ಕೈ’ ತಂತ್ರ ಹೂಡಿದ್ದು, ಎಲ್ಲರ ಚಿತ್ತ ಅತ್ತ ನೆಟ್ಟಿದೆ. ಸಿಎಂ ಸಿದ್ದರಾಮಯ್ಯ ತಂಡ ವರ್ಸಸ್ ಡಿಸಿಎಂ ಡಿಕೆ ಶಿವಕುಮಾರ್ ತಂಡದ ನಡುವಣ ಮುಸುಕಿನ ಗುದ್ದಾಟದ ಮಧ್ಯೆ ಹಾಸನದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಕ್ಷಣಗಣನೆ ಶುರುವಾಗಿದೆ. ಅರಸೀಕೆರೆ …
Read More »ವಿಕಲ ಚೇತನರು ದೇವರ ಮಕ್ಕಳು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…!
ಬೆಂಗಳೂರು : ವಿಕಲ ಚೇತನರಾದರೂ ಸಂಗೀತ ಕ್ಷೇತ್ರದಲ್ಲಿ ಪಂಚಾಕ್ಷರಿ ಗವಾಯಿಗಳು, ಪುಟ್ಟರಾಜ ಗವಾಯಿಗಳು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿ ನಮಗೆಲ್ಲಾ ಮಾದರಿಯಾಗಿದ್ದಾರೆ. ವಿಕಲ ಚೇತನರು ಅಂದರೆ ದೇವರ ಮಕ್ಕಳಿದ್ದಂತೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಕಂಠೀರವ ಒಳಾಂಗಣ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ವಿಶ್ವ ವಿಕಲಚೇತನರ ದಿನಾಚರಣೆಯಲ್ಲಿ ಮಾತನಾಡಿದ ಅವರು …
Read More »ಭಗವದ್ಗೀತೆ ಜಿಲ್ಲಾಮಟ್ಟದ ಸ್ಫರ್ಧೆಗಳು ಸಂಪನ್ನ…
ಬೆಳಗಾವಿ : ಭಗವದ್ಗೀತೆ ಅಭಿಯಾನದ ಜಿಲ್ಲಾ ಮಟ್ಟದ ಸ್ಫರ್ಧೆಗಳು ಮಂಗಳವಾರ ಆನಗೋಳದ ಸಂತಮೀರಾ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಭಗವದ್ಗೀತೆ ಅಭಿಯಾನ ಸಮಿತಿಯ ಕಾರ್ಯಾಧ್ಯಕ್ಷರೂ, ಸಂತ ಮೀರಾ ಶಾಲೆಯ ಅಧ್ಯಕ್ಷರೂ ಆಗಿರುವ ಪರಮೇಶ್ವರ ಹೆಗಡೆ ಮತ್ತು ಸಮಿತಿ ಕಾರ್ಯದರ್ಶಿ, ಹಿರಿಯ ಪತ್ರಕರ್ತ ಎಂ.ಕೆ.ಹೆಗಡೆ ಸ್ಫರ್ಧಾ ಕಾರ್ಯಕ್ರಮಗಳನ್ನು ಉದ್ಘಾಟಿಸಿದರು. ಜಿಲ್ಲೆಯ ವಿವಿಧ ಭಾಗಗಳಿಂದ ಬಂದಿದ್ದ ವಿದ್ಯಾರ್ಥಿಗಳು ಭಗವದ್ಗೀತೆಯ ವಿವಿಧ ವಿಭಾಗಗಳ ಸ್ಫರ್ಧೆಯಲ್ಲಿ ಭಾಗವಹಿಸಿದ್ದರು. ಕಿಶೋರ ಮತ್ತು ಪ್ರೌಢ ಎನ್ನುವ ಎರಡು ವಿಭಾಗಗಳಲ್ಲಿ, ಭಾಷಣ …
Read More »ಮುಡಾ ಹಗರಣರಾತ್ರೋರಾತ್ರಿ 48 ಸೈಟ್ಗಳು ರದ್ದು
ಬೆಂಗಳೂರು: ಮುಡಾ ಹಗರಣದ ವಿಚಾರದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮುಡಾ ಕ್ಲೀನ್ಗೆ ಮೊದಲ ಹೆಜ್ಜೆ ಇಟ್ಟಿರುವ ಸಿಎಂ ಸಿದ್ದರಾಮಯ್ಯ ರಾತ್ರೋರಾತ್ರಿ 48 ಸೈಟ್ಗಳನ್ನು ರದ್ದು ಮಾಡಿದ್ದಾರೆ. ಹಿಂದಿನ ಮುಡಾ ಆಯುಕ್ತ ದಿನೇಶ್ ಕುಮಾರ್ ಎಲ್ಲಾ ಕಾನೂನುಗಳನ್ನು ಗಾಳಿಗೆ ತೂರಿ 48 ಜನರಿಗೆ ಕೋಟ್ಯಾಂತರ ರೂ. ಬೆಲೆ ಬಾಳುವ ಸೈಟ್ ಗಳನ್ನು 5-6 ಲಕ್ಷಕ್ಕೆ ಹಂಚಿದ್ದರು. ಅದನ್ನು ಇದೀಗ ರದ್ದುಪಡಿಸಲಾಗಿದೆ. ಅಸ್ತಿತ್ವವೇ ಇಲ್ಲದೆ ಸಹಕಾರ ಸಂಘದ ಹೆಸರಿನಲ್ಲಿ ಸೈಟ್ಗಳನ್ನು ದಿನೇಶ್ ಕುಮಾರ್ …
Read More »ರಾಜ್ಯಪಾಲರಿಗೆ ಕಡತ ರವಾನಿಸಿದ ಸರ್ಕಾರ ಬಿಎಸ್ವೈಗೆ ಢವಢವ ಶುರು
ಬೆಂಗಳೂರು, ಭ್ರಷ್ಟಾಚಾರ ದೂರಿನ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕೆಂದು ರಾಜ್ಯ ಸರ್ಕಾರ, ರಾಜ್ಯಪಾಲರಿಗೆ ಮನವಿ ಮಾಡಿದೆ. ಈ ಹಿಂದೆ ಸಚಿವ ಸಂಪುಟದಲ್ಲಿ ತೆಗೆದುಕೊಂಡ ತೀರ್ಮಾನದಂತೆ ಬಿಡಿಎ ಹೌಸಿಂಗ್ ನಿರ್ಮಾಣ ಪ್ರಕರಣದಲ್ಲಿ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಇಂದು(ಡಿಸೆಂಬರ್ 03) ಸರ್ಕಾರ, ರಾಜ್ಯಪಾಲರಿಗೆ ಕಡತ ರವಾನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಏನಾಗುತ್ತೋ ಏನೋ ಎಂದು ಬಿಎಸ್ವೈಗೆ ಢವಢವ ಶುರುವಾಗಿದೆ. ಬಿಡಿಎ ಹೌಸಿಂಗ್ ನಿರ್ಮಾಣ …
Read More »