ಬೆಂಗಳೂರು: ಕೊರೊನಾ ವೈರಸ್ ಲಾಕ್‍ಡೌನ್ ಹಿನ್ನೆಲೆ ಸರ್ಕಾರಿ ನೌಕರರ ಸಂಬಳ ಕಡಿತ ಮಾಡುವುದು, ತಡೆ ಹಿಡಿಯುವ ಕುರಿತು ಸಾಕಷ್ಟು ಚರ್ಚೆ ನಡೆದಿತ್ತು. ಇದೆಲ್ಲದಕ್ಕೂ ಇದೀಗ ತೆರೆ ಬಿದ್ದಿದ್ದು, ಏಪ್ರಿಲ್ ತಿಂಗಳ ಸಂಬಳ ನೀಡಲು ಸರ್ಕಾರ ನಿರ್ಧರಿಸಿದೆ. ಈ ಮೂಲಕ ನೌಕರರ ಪರ ಯಡಿಯೂರಪ್ಪ ಸರ್ಕಾರ ನಿಂತಿದೆ. ಯಾವುದೇ ಕಡಿತ ಮಾಡದೇ ಏಪ್ರಿಲ್ ತಿಂಗಳ ಸಂಬಳ ನೀಡಲು ಸರ್ಕಾರ ನಿರ್ಧಾರ ಕೈಗೊಂಡಿದ್ದು, ಆರ್ಥಿಕ ಹೊರೆ ಆದರೂ ಪರವಾಗಿಲ್ಲ ಸರ್ಕಾರಿ ನೌಕರರಿಗೆ ಸಂಬಳ …
Read More »ಅನಧಿಕೃತ ವೈದ್ಯಕೀಯ ಪಾಸ್ ಬಳಸಿ ತಮಿಳುನಾಡಿಗೆ ಪ್ರಯಾಣಿಸಲು ಯತ್ನಿಸಿ ಚಾಲಕನೊಬ್ಬ ಮೈಸೂರು ಪೊಲೀಸರ ಕೈಗೆ
ಮೈಸೂರು: ಅನಧಿಕೃತ ವೈದ್ಯಕೀಯ ಪಾಸ್ ಬಳಸಿ ತಮಿಳುನಾಡಿಗೆ ಪ್ರಯಾಣಿಸಲು ಯತ್ನಿಸಿ ಚಾಲಕನೊಬ್ಬ ಮೈಸೂರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ನಿರ್ಮಲ್ ಕುಮಾರ್ ಪೊಲೀಸರ ಕೈಗೆ ಸಿಕ್ಕಿಬಿದ್ದ ಚಾಲಕ. ನಿರ್ಮಲ್ ಕುಮಾರ್ ಅನಧಿಕೃತ ಪಾಸ್ ಅಂಟಿಸಿಕೊಂಡು ತಮಿಳುನಾಡಿಗೆ ಪ್ರಯಾಣಿಸುತ್ತಿದ್ದ. ಈ ವೇಳೆ ನಗರದ ಎನ್.ಆರ್ ಠಾಣೆಯ ಪೊಲೀಸರು ಆತನನ್ನು ತಡೆದು ವಿಚಾರಣೆ ಮಾಡಿದ್ದಾರೆ. ನನ್ನ ಸ್ನೇಹಿತ ನನಗೆ ವ್ಯಾಟ್ಸಪ್‍ನಲ್ಲಿ ಕಳುಹಿಸಿದ್ದ ಪಾಸ್ ಅಂಟಿಸಿಕೊಂಡಿದ್ದೇನೆ ಎಂದು ಚಾಲಕ ಹೇಳಿದ್ದ. ಪಾಸ್ ಪರಿಶೀಲನೆ ಮಾಡಿದಾಗ ಅನಧಿಕೃತ …
Read More »ಕೊರೊನಾ ಬಂದ್ಮೇಲೆ ಶಾಸಕರು, ಸಂಸದರು ಕಾಣೆಯಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿಬಿಟ್ಟಿದ್ದ ಯುವಕನನ್ನು ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಕೊರೊನಾ ವೈರಸ್ ಸಂಕಷ್ಟ ಬಂದಾಗಿನಿಂದ ಶಾಸಕರು, ಸಂಸದರು
ರಾಯಚೂರು: ಕೊರೊನಾ ಬಂದ್ಮೇಲೆ ಶಾಸಕರು, ಸಂಸದರು ಕಾಣೆಯಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿಬಿಟ್ಟಿದ್ದ ಯುವಕನನ್ನು ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಕೊರೊನಾ ವೈರಸ್ ಸಂಕಷ್ಟ ಬಂದಾಗಿನಿಂದ ಶಾಸಕರು, ಸಂಸದರು ಕಾಣೆಯಾಗಿದ್ದಾರೆ. ನಿಮಗೆ ಎಲ್ಲಾದರೂ ಕಾಣಿಸಿದರೆ ದಯವಿಟ್ಟು ಕ್ಷೇತ್ರಕ್ಕೆ ಕಳುಹಿಸಿ ಎನ್ನುವ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ಹರಿದಾಡುತ್ತಿವೆ. ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ ಫೋಟೋ ಹಾಕಿ ಹರಿಬಿಟ್ಟ ಪೋಸ್ಟ್ ಹಿನ್ನೆಲೆ ತನಿಖೆ ನಡೆಸಿದ ಪೊಲೀಸರ ಕೈಗೆ ಓರ್ವ ಯುವಕ …
Read More »ಎಣ್ಣೆ ಸಿಗದೆ ಮದ್ಯ ಪ್ರಿಯರು ಕಂಗಾಲಾಗಿದ್ದಾರೆ. ಅವರಿಗೆ ಈಗ ಸರ್ಕಾರ ಗುಡ್‍ನ್ಯೂಸ್ ಕೊಡಲು ಮುಂದಾಗಿದೆ……”
ಬೆಂಗಳೂರು: ಕೊರೊನಾ ವೈರಸ್ ಲಾಕ್‍ಡೌನ್‍ನಿಂದಾಗಿ ಕಳೆದ ಒಂದು ತಿಂಗಳಿನಿಂದ ಎಣ್ಣೆ ಸಿಗದೆ ಮದ್ಯ ಪ್ರಿಯರು ಕಂಗಾಲಾಗಿದ್ದಾರೆ. ಅವರಿಗೆ ಈಗ ಸರ್ಕಾರ ಗುಡ್‍ನ್ಯೂಸ್ ಕೊಡಲು ಮುಂದಾಗಿದೆ ಎಂಬ ಮಾಹಿತಿ ಲಭಿಸಿದೆ. ಒಂದುಕಡೆ ಮದ್ಯ ವ್ಯಾಪಾರಿಗಳು, ಇನ್ನೊಂದುಕಡೆ ಎಣ್ಣೆ ಪ್ರಿಯರ ಒತ್ತಾಯವು ಫಲ ನೀಡುತ್ತಾ? ಮತ್ತೆ ಮದ್ಯ ಮಾರಾಟ ಆರಂಭವಾಗುತ್ತಾ? ಇಷ್ಟು ದಿನ ಲಾಕ್‍ಡೌನ್ ಮುಗಿಯುವವರೆಗೆ ಓಪನ್ ಮಾಡುವ ಪ್ರಶ್ನೆಯೇ ಇಲ್ಲಾ ಎನ್ನುತ್ತಿದ್ದ ಸರ್ಕಾರ ಈಗ ಮದ್ಯದಂಗಡಿ ತೆರೆಯಲು ಮುಂದಾಗುತ್ತಾ ಎನ್ನುವ ಪ್ರಶ್ನೆ …
Read More »ಜನರಿಗೊಂದು ನಿಯಮ, ಸಚಿವರಿಗೊಂದು ನಿಯಮ – ಕೊರೊನಾ ಮಾರ್ಗಸೂಚಿ ಉಲ್ಲಂಘನೆ
ಸೋಂಕಿತ ಕ್ಯಾಮೆರಾಮನ್ ಜೊತೆ ಪ್ರಾಥಮಿಕ ಸಂಪರ್ಕ – ಕ್ವಾರಂಟೈನ್ ಆಗಬೇಕಾದವರು ಸಭೆಯಲ್ಲಿ ಭಾಗಿ – ಸಾಮಾಜಿಕ ಜಾಲತಾಣದಲ್ಲಿ ಡಿಕೆಶಿ ಪ್ರಶ್ನಿಸಿ ಟೀಕೆ ಬೆಂಗಳೂರು: ಕೊರೊನಾ ಕ್ವಾರಂಟೈನ್ ವಿಚಾರದಲ್ಲಿ ಸಚಿವರಿಗೊಂದು ನಿಯಮ ಬೇರೆಯವರಿಗೊಂದು ನಿಯಮವೇ ಹೀಗೊಂದು ಪ್ರಶ್ನೆ ಎದ್ದಿದೆ. ವೈದ್ಯಕೀಯ ಶಿಕ್ಷಣ ಸಚಿವರ ನಡೆಯಿಂದಾಗಿ ಈ ಪ್ರಶ್ನೆ ಸೃಷ್ಟಿಯಾಗಿದೆ. ಹೌದು. ಖಾಸಗಿ ವಾಹಿನಿಯ ಕ್ಯಾಮೆರಾಮೆನ್‍ಗೆ ಸೋಂಕು ದೃಢಪಟ್ಟಿದ್ದು, ಆತನ ಸಂಪರ್ಕಕ್ಕೆ ಸಚಿವರು ಬಂದಿದ್ದು ಅವರು ಕ್ವಾರಂಟೈನ್ ಮಾರ್ಗಸೂಚಿ ಪಾಲಿಸುತ್ತಿಲ್ಲ. ಹೀಗಾಗಿ ಸೋಂಕಿತನ …
Read More »ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3 ರ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಚಿಂತನೆ:ರಮೇಶ ಜಾರಕಿಹೊಳಿ
ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3 ರ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಕೇಂದ್ರದ ಜಲಸಂಪನ್ಮೂಲ ಸಚಿವರ ಜೊತೆಯೂ ಚರ್ಚಿಸಲಾಗಿದೆ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಆಲಮಟ್ಟಿಯ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್‌ಡೌನ್ ಹಿನ್ನಲೆಯಲ್ಲಿ ಈ ಯೋಜನೆಗೆ ಅಲ್ಪ ಅಡೆತಡೆಯಾಗಿದೆ. ಕೃಷ್ಣಾ ನದಿ ನೀರು ಬಳಕೆಗಾಗಿ ಕೇಂದ್ರ ಸರ್ಕಾರದ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದರು. ಕೃಷ್ಣಾ …
Read More »ಗ್ರೀನ್ ಝೋನ್‍ನಲ್ಲಿ ಇದ್ದ ದಾವಣಗೆರೆಗೂ ಕೊರೊನಾ ಮಹಾಮಾರಿ ಎಂಟ್ರಿ,,,,,,,,,,
ದಾವಣಗೆರೆ: ಗ್ರೀನ್ ಝೋನ್‍ನಲ್ಲಿ ಇದ್ದ ದಾವಣಗೆರೆಗೂ ಕೊರೊನಾ ಮಹಾಮಾರಿ ಎಂಟ್ರಿಕೊಟ್ಟಿದೆ. ಜಿಲ್ಲೆಯ ಮಹಿಳೆಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ನಾವು ಗ್ರೀನ್ ಝೋನ್‍ನಲ್ಲಿ ಇದ್ದೇವೆ ಎಂದು ನೆಮ್ಮದಿಯಯಲ್ಲಿದ್ದ ದಾವಣಗೆರೆ ಜಿಲ್ಲೆಯ ಜನತೆ ಭಯದ ವಾತಾವರಣ ನಿರ್ಮಾಣವಾಗಿದೆ. ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ 38 ವರ್ಷದ ಮಹಿಳೆಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಮೊದಲ ಕೊರೊನಾ ಪ್ರಕರಣ ದಾಖಲಾಗಿದೆ. ದಾವಣಗೆರೆ ನಗರದ ಭಾಷಾ ನಗರದ ಸರ್ಕಾರಿ ಪ್ರಾಥಮಿಕ ಆರೋಗ್ಯ …
Read More »ಲಾಕ್‍ಡೌನ್ ಮೀರಿ ಸಾಮೂಹಿಕ ಪ್ರಾರ್ಥನೆ- 15 ಜನರ ಬಂಧನ………..
ಕಲಬುರಗಿ: ಲಾಕ್‍ಡೌನ್ ನಿಯಮ ಮೀರಿ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಿದ್ದವರಿಗೆ ಕಲಬುರಗಿಯ ಪೊಲೀಸರು ಬಿಸಿಮುಟ್ಟಿಸಿದ್ದಾರೆ. ಸೇಡಂ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಮಸೀದಿಯಲ್ಲಿ ಸುಮಾರು 15 ಜನರು ನಮಾಜ್ ಮಾಡುತ್ತಿದ್ದರು. ಈ ಕುರಿತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಲಾಠಿ ರುಚಿ ತೋರಿಸಿ, ಎಲ್ಲ 15 ಮಂದಿಯನ್ನೂ ಬಂಧಿಸಿದ್ದಾರೆ. ಈ ಸಂಬಂಧ ಸೇಡಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ …
Read More »ಮದ್ಯ ಮಾರಾಟದ ಬಗ್ಗೆ ಸಚಿವ ಶ್ರೀರಾಮುಲು ಪ್ರತಿಕ್ರಿಯೆ
ಚಿತ್ರದುರ್ಗ: ರಾಜ್ಯದಲ್ಲಿ ಸರ್ಕಾರದ ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟಾಗಿದ್ದರೂ ಜನರ ಜೀವ ಉಳಿಸುವ ಉದ್ದೇಶದಿಂದ ಮದ್ಯ ಮಾರಾಟ ಆರಂಭಿಸಿಲ್ಲ. ಈ ವಿಚಾರದಲ್ಲಿ ಇಲ್ಲಿ ರಾಜಕಾರಣ ಸಲ್ಲದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ. ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಗೌರಸಮುದ್ರ ಗ್ರಾಮದಲ್ಲಿ ಆಹಾರದ ಕಿಟ್ ವಿತರಿಸಿ ಮಾತನಾಡಿದ ಅವರು, ದೇಶದಲ್ಲಿ ಅಂತಾರಾಷ್ಟ್ರೀಯ ವಿಮಾನಯಾನ ಬಂದ್ ಬಳಿಕ ಸ್ವಲ್ಪ ನಿಟ್ಟುಸಿರು ಬಿಟ್ಟಿದ್ದೆವು. ಆದರೆ ದೆಹಲಿ ನಿಜಾಮುದ್ದೀನ್ ಸಭೆ ಬಳಿಕ ಮತ್ತೆ ಆತಂಕ ಸೃಷ್ಠಿ ಆಯಿತು. …
Read More »ಬಾರ್ ಶೆಟರ್ ತೆಗೆದು ಸಾವಿರಾರು ಬೆಲೆಯ ಮದ್ಯ ಕದ್ದ ಕಳ್ಳರು..! ………
ಹಾಸನ; ನಗರದ ಹೊರವಲಯದ ಕಸ್ತೂರ ಹಳ್ಳಿ ಕ್ರಾಸ್ ಬಳಿಯ ಬೂವನಹಳ್ಳಿ ರಸ್ತೆಯಲ್ಲಿರುವ ಧನಲಕ್ಷ್ಮಿ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಮದ್ಯದ ಬಾಟಲಿಗಳ ಕಳ್ಳತನವಾಗಿದೆ. ನಗರದ ಹೊರ ವಲಯದಲ್ಲಿ ಮದ್ಯದ ಅಂಗಡಿ ಇರುವುದರಿಂದ ಕಳ್ಳರು ಸುಲಭವಾಗಿ ಅಂಗಡಿಯ ಶೆಟರ್ ತೆರೆದು ದಾಸ್ತಾನು ಮಾಡಿದ್ದ ಸಾವಿರಾರು ರೂ ಮದ್ಯವನ್ನು ಕದ್ದೊಯ್ದಿದ್ದಾರೆ. ನಗರದ ಬಹುತೇಕ ಮದ್ಯದಂಗಡಿಗಳ ಕಳ್ಳತನ ಮರುಕಳಿಸುತ್ತಿದ್ದು ಮದ್ಯವ್ಯಸನಿಗಳ ಸಹನೆಯ ಕಟ್ಟೆ ಒಡೆದಿದೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಮದ್ಯ ಮಾರಾಟ ಸ್ಥಗಿತಗೊಂಡಿರುವ ಕಾರಣ …
Read More »