ಬೆಂಗಳೂರು, ಏ.28- ರಾಜ್ಯದಲ್ಲಿ ಲಾಕೌಡ್‍ನ್ ಆದಾಗಿನಿಂದಲೂ ಜಯ ಕರ್ನಾಟಕ ಸಂಘಟನೆಯು ಸತತವಾಗಿ ಅದರಲ್ಲೂ ನಗರದಾದ್ಯಂತ ಪ್ರತಿ ನಿತ್ಯ ಎರಡು ಲಕ್ಷ ಜನರಿಗೆ ಊಟ, ದಿನಸಿ ಸಾಮಾನು, ಕುಡಿಯುವ ನೀರಿನ ಬಾಟಲ್ ಪೂರೈಕೆ ಮಾಡುವಲ್ಲಿ ತೊಡಗಿಕೊಂಡಿದೆ. ರೈತರಿಂದ ತರಕಾರಿಗಳನ್ನು ಖರೀದಿ ಮಾಡಿ ನಗರದ ಹಲವು ಕಡೆಗಳಲ್ಲಿ ಬಡವರಿಗೆ, ನಿರಾಶ್ರಿತರಿಗೆ ಸಂಘಟನೆ ವಿತರಣೆ ಮಾಡುತ್ತಲೇ ಬಂದಿದೆ. ತರಕಾರಿ ಜತೆಗೆ ದಿನಸಿ ಪದಾರ್ಥಗಳನ್ನು ನಗರದ ಅಂಜನಾಪುರ, ಕೋಣನಕುಂಟೆ, ವಸಂತಪುರ ಕೊತನೂರು, ಗಣಪತಿಪುರ, ಜರಗನಹಳ್ಳಿ, ಕಾಶಿನಗರ, …
Read More »ಸುದೀಪ್ ಓರ್ವ ಅತ್ಯುತ್ತಮ ನಿರ್ದೇಶಕ: ಅನು ಪ್ರಭಾಕರ್
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಓರ್ವ ಉತ್ತಮ ನಿರ್ದೇಶಕ ಎಂದು ನಟಿ ಅನು ಪ್ರಭಾಕರ್ ಮುಖರ್ಜಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಟ ಸುದೀಪ್ ಅನೇಕ ವರ್ಷಗಳ ಹಿಂದೆ ‘ನಂ.73 ಶಾಂತಿ ನಿವಾಸ’ ಸಿನಿಮಾವನ್ನು ನಿರ್ದೇಶಿಸಿ ಯಶಸ್ವಿಕಂಡಿದ್ದರು. ಅಂದಿಗೆ ಈ ಸಿನಿಮಾ ಸೂಪರ್ ಹಿಟ್ ಆಗಿತ್ತು. ಇತ್ತೀಚೆಗೆ ‘ನಂ.73 ಶಾಂತಿ ನಿವಾಸ’ ಸಿನಿಮಾ ಕಿರುತೆರೆಯಲ್ಲಿ ಪ್ರಸಾರವಾಗಿತ್ತು. ಈ ಚಿತ್ರವನ್ನು ನೋಡಿದ ಅಭಿಮಾನಿಯೊಬ್ಬರು ಅನು ಪ್ರಭಾಕರ್‌ಗೆ ಟ್ವೀಟ್ ಮಾಡಿ, ನಿಮ್ಮ ಅಭಿನಯ ಅದ್ಭುತವಾಗಿದೆ …
Read More »ಕ್ವಾರಂಟೈನ್ ನಲ್ಲಿರುವರ ಬೇಡಿಕೆ ಕೇಳಿ ಬಿಬಿಎಂಪಿ ಸಿಬ್ಬಂದಿ ರೋಸಿ ಹೋಗಿದ್ದಾರೆ..
ಬೆಂಗಳೂರು: ಕ್ವಾರಂಟೈನ್ ನಲ್ಲಿರುವ ಹೊಂಗಸಂದ್ರದ ಬಿಹಾರಿಗಳು ಸಿಕ್ಕಾಪಟ್ಟೆ ಬೇಡಿಕೆ ಇಡುತ್ತಿದ್ದು, ಇವರ ಬೇಡಿಕೆ ಕೇಳಿ ಬಿಬಿಎಂಪಿ ಸಿಬ್ಬಂದಿ ರೋಸಿ ಹೋಗಿದ್ದಾರೆ. ಹೊಂಗಸಂದ್ರ- ಎಲೆಕ್ಟ್ರಾನಿಕ್ ಸಿಟಿ ಮಧ್ಯ ಭಾಗದಲ್ಲಿ ಬರುವ ಮಣಿಪಾಲ್ ಕೌಂಟಿ ಹೋಟೆಲ್ ನಲ್ಲಿ ಬಿಹಾರಿ ಮೂಲದ ವ್ಯಕ್ತಿಗಳನ್ನು ಕ್ವಾರಂಟೈನ್ ಮಾಡಲಾಗಿದೆ. ಈಗ ಟಿವಿ ಹಾಕಿಸಿ ಊಟ ಬೇರೆ ಕೊಡಿ ಎಂದು ಬಿಹಾರಿಗಳು ದಿನಕ್ಕೊಂದು ಬೇಡಿಕೆ ಇಟ್ಟಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಈ ಬೇಡಿಕೆಗೆ ರೋಸಿ ಹೋದ ಬಿಬಿಎಂಪಿ …
Read More »ಶಿವಮೊಗ್ಗ:ಪುರೋಹಿತರು ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಶಿವಮೊಗ್ಗ: ಕೊರೊನಾ ಲಾಕ್‍ಡೌನ್‍ನಿಂದ ಜನರು ತುಂಬಾ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಮಧ್ಯೆ ರೋಗಿಗಳಿಗೆ ರಕ್ತದಾನ ಮಾಡುವವರ ಕೊರತೆ ಸಹ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕೇವಲ ಪ್ರಾರ್ಥನೆ, ಆರಾಧನೆ, ಪೂಜೆ ಪುನಸ್ಕಾರಕ್ಕೆ ಸೀಮಿತವಾಗಿದ್ದ ಪುರೋಹಿತರು ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಲಾಕ್‍ಡೌನ್ ಸಂದರ್ಭದಲ್ಲಿ ಎಲ್ಲಾ ರಕ್ತನಿಧಿ ಕೇಂದ್ರಗಳಲ್ಲಿ ರಕ್ತದ ಶೇಖರಣೆ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಇರುವ ರೋಗಿಗಳಿಗೆ ರಕ್ತ ಪೂರೈಕೆ ಮಾಡಲು ಕಷ್ಟವಾಗುತ್ತಿದೆ. ಕೊರೊನಾ ಸಮಸ್ಯೆ ಹೊರತುಪಡಿಸಿ, ಇತರೆ ರೋಗಿಗಳಿಗೆ ರಕ್ತದ …
Read More »ಸಾಸ್ತಾನ ಟೋಲ್ ಸಿಬ್ಬಂದಿ ಜೊತೆ ಮಂಡ್ಯದ ಸೋಂಕಿತ ಮಾತು – 6 ಮಂದಿ ಕ್ವಾರಂಟೈನ್
ಉಡುಪಿ: ಮುಂಬೈನಿಂದ ಹೊರಟ ಖರ್ಜೂರ ಸಾಗಿಸುವ ಲಾರಿ ಹತ್ತಿ ಮಂಡ್ಯಕ್ಕೆ ಬಂದಿದ್ದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದೆ. ಲಾರಿ ಪಾಸ್ ಆಗಿದ್ದ ಟೋಲ್ ಗೇಟ್‍ನ ಆರು ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಲಾರಿ ಮಹಾರಾಷ್ಟ್ರದಿಂದ ಕರ್ನಾಟಕ ಪ್ರವೇಶಿಸಿದ್ದು, ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಲಾರಿಯ ವಿಡಿಯೋ ಪತ್ತೆಯಾಗಿದೆ. ಲಾರಿ ಒಳಗಿದ್ದ ವ್ಯಕ್ತಿ ತೆಕ್ಕಟ್ಟೆ ಸಮೀಪದ ಶಿವಪ್ರಸಾದ್ ಪೆಟ್ರೋಲ್ ಪಂಪ್ ಬಳಿ ಇಳಿದು ಸ್ನಾನ ಮುಗಿಸಿದ್ದು, ನಂತರ ಅಲ್ಲೇ ತಿಂಡಿ ತಿಂದಿದ್ದಾರೆ. ಆಮೇಲೆ …
Read More »ಲಾಕ್ ಡೌನ್: ಅಬಕಾರಿ ದಾಳಿ-ಕಳ್ಳಬಟ್ಟಿ, 2- ದ್ವಿಚಕ್ರ ವಾಹನ ಸೇರಿದಂತೆ ಒಟ್ಟು 78800 ಸಾವಿರ ಮೌಲ್ಯದ ವಸ್ತು ಜಪ್ತಿ
ಬೈಲ್ ಹೊಂಗಲ್: ಲಾಕ್ ಡೌನ್: ಅಬಕಾರಿ ದಾಳಿ-ಕಳ್ಳಬಟ್ಟಿ, 2- ದ್ವಿಚಕ್ರ ವಾಹನ ಸೇರಿದಂತೆ ಒಟ್ಟು 78800 ಸಾವಿರ ಮೌಲ್ಯದ ವಸ್ತು ಜಪ್ತಿ. ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿರುವುದರಿಂದ ಜಿಲ್ಲೆಯಾದ್ಯಂತ ಕಳ್ಳಭಟ್ಟಿ ಸಾರಾಯಿ ತಯಾರಿಕೆ ಹಾಗೂ ಮಾರಾಟ ಹೆಚ್ಚಾಗುವ ಸಂಭವ ಇರುವುದರಿಂದ ಅಕ್ರಮ ಚಟುವಟಿಕೆಗಳನ್ನು ತಡೆಯಲು ಜಿಲ್ಲಾ ಅಬಕಾರಿ ಇಲಾಖೆಯು ತಂಡಗಳನ್ನು ರಚಿಸಿದ್ದು. ಈ ಸಂದರ್ಭದಲ್ಲಿ ಬೈಲಹೊಂಗಲ ತಾಲೂಕಿನಲ್ಲಿರುವ …
Read More »ಮಗನ ಮದ್ವೆಗೆ ಖರ್ಚು ಮಾಡಬೇಕಿದ್ದ 5.5 ಕೋಟಿ ವೆಚ್ಚದಲ್ಲಿ 2 ಕ್ಷೇತ್ರಕ್ಕೆ ಆಹಾರ ಕಿಟ್ ವಿತರಣೆ: ಎಚ್‍ಡಿಕೆ
ರಾಮನಗರ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕುಟುಂಬಸ್ಥರು ರಾಮನಗರ ಮತ್ತು ಚನ್ನಪಟ್ಟಣ ಜನರಿಗೆ ದಿನಸಿ ಕಿಟ್ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರಾಮನಗರದ ಮಂಜುನಾಥ ಕನ್ವೆನ್ಷನ್ ಹಾಲ್‍ನಲ್ಲಿ ದಿನಸಿ ಕಿಟ್ ವಿತರಣೆ ಮಾಡಲು ಚಾಲನೆ ನೀಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಹೆಚ್.ಡಿ.ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಸೊಸೆ ರೇವತಿ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮೊದಲ ಬಾರಿಗೆ ಕುಟುಂಬದ ಜೊತೆ ನಿಖಿಲ್ ಪತ್ನಿ ರೇವತಿ ಕೂಡ ಆಗಮಿಸಿದ್ದರು. ಸುಮಾರು …
Read More »ಕೊರೊನಾ ಹೋರಾಟಕ್ಕಾಗಿ 18 ವರ್ಷಗಳ ನಂತ್ರ ಮತ್ತೆ ನರ್ಸ್ ಆದ ಮೇಯರ್
ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇದರಿಂದ ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮೇಯರ್ 18 ವರ್ಷಗಳ ನಂತರ ಮತ್ತೆ ನರ್ಸ್ ಆಗಿ ಸೇವೆ ಸಲ್ಲಿಸಲು ಮುಂದಾಗಿದ್ದಾರೆ. ಮೇಯರ್ ಕಿಶೋರಿ ಪೆಡ್ನೇಕರ್ ಅವರು ಕೊರೊನಾ ವಿರುದ್ಧದ ಹೋರಾಟದಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸಲು ಮುಂದಾಗಿದ್ದಾರೆ. ಈ ಮೂಲಕ ವೈದ್ಯಕೀಯ ಸಿಬ್ಬಂದಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಕಿಶೋರಿ ಪೆಡ್ನೇಕರ್ ರಾಜಕೀಯಕ್ಕೆ ಬರುವ ಮೊದಲು ನರ್ಸ್ …
Read More »ಯಾರ ಸಂಪರ್ಕಕ್ಕೆ ಬಾರದೇ ಇದ್ದರೂ ಕೊರೊನಾ ಬಂದಿದ್ದು ಹೇಗೆ ಎನ್ನುವ ಪ್ರಶ್ನೆಗೆ ಆರೋಗ್ಯ ಅಧಿಕಾರಿಗಳಿಗೆ ಕೊನೆಗೆ ಉತ್ತರ ಸಿಕ್ಕಿದೆ.
ಬೆಂಗಳೂರು: ಕರ್ನಾಟಕದಲ್ಲಿ ಇಂದು 8 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ ಯಾರ ಸಂಪರ್ಕಕ್ಕೂ ಸಿಗದ ಪಾದರಾಯನಪುರದ ವ್ಯಕ್ತಿಗೆ ಕೊರೊನಾ ಬಂದಿದೆ. 48 ವರ್ಷದ ವ್ಯಕ್ತಿ(ರೋಗಿ 513) ನಾನು ಲಾಕ್‍ಡೌನ್ ಬಳಿಕ ಮನೆಯಲ್ಲೇ ಇದ್ದೆ ಹೊರಗಡೆ ಹೋಗಿಲ್ಲ ಎಂದು ಉತ್ತರಿಸಿದ್ದಾರೆ. ಅಷ್ಟೇ ಅಲ್ಲದೇ ಪಾಸಿಟಿವ್ ಅಲ್ಲದ ವ್ಯಕ್ತಿಗಳ ಜೊತೆಗೂ ನಾನು ಸಂಪರ್ಕ ಹೊಂದಿಲ್ಲ. ವಿದೇಶಕ್ಕೆ ಹೋಗಿಲ್ಲ. ವಿದೇಶ ಹೋಗಿ ಬಂದವರ ಜೊತೆ ಸಂಪರ್ಕವನ್ನು ಮಾಡಿಲ್ಲ ಎಂದು ಹೇಳಿದ್ದಾರೆ. ಯಾರ ಸಂಪರ್ಕಕ್ಕೆ …
Read More »ಗದಗ್‍ನಲ್ಲಿ ವೃದ್ಧನಿಗೆ ಕೊರೊನಾ- ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ………..
ಗದಗ: ಜಿಲ್ಲೆಯಲ್ಲಿ ಟ್ರಾವೆಲ್ ಹಿಸ್ಟರಿಯೇ ಇಲ್ಲದ 75 ವರ್ಷದ ವೃದ್ಧನಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಸೋಂಕಿತ ವೃದ್ಧನಿಗೆ(ರೋಗಿ-514)ಗೆ ಯಾರ ಸಂಪರ್ಕವೂ ಇರಲಿಲ್ಲ. ಹೆಲ್ತ್ ಇನ್ಸ್ ಪೆಕ್ಟರ್ ಆಗಿ ಕೆಲಸ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಇವರು ನಗರದ ಗಂಜಿಬಸವೇಶ್ವರ ಸರ್ಕಲ್ ಬಳಿ ನಿವಾಸಿಯಾಗಿದ್ದು, ಮನೆಯಲ್ಲಿ ಸೋಂಕಿತ ವ್ಯಕ್ತಿ ಸೇರಿಸಿ ಒಟ್ಟು 9 ಮಂದಿ ಸದಸ್ಯರು ವಾಸವಿದ್ದರು. ಮನೆಯಲ್ಲಿದ್ದ 8 ಜನರ …
Read More »