ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಬಿಗ್ ರಿಲೀಫ್ ಸಿಕ್ಕಿದ್ದು ನಾಳೆಯಿಂದ ಸಬ್ ರಿಜಿಸ್ಟ್ರಾರ್ ಕಚೇರಿ ತೆರೆಯಲು ಅನುಮತಿ ಸಿಗಲಿದೆ. ಕ್ರಷರ್ ವ್ಯವಹಾರ ಓಪನ್ ಮಾಡಲು ಅನುಮತಿ ನೀಡಲಾಗಿದೆ. ಸಬ್‍ರಿಜಿಸ್ಟ್ರಾರ್ ಚೇರಿಗೆ ಬರುವ ಮುನ್ನ ಕಚೇರಿಗೆ ಕರೆ ಮಾಡಿ ಅಧಿಕಾರಿಗಳಿಗೆ ಸಮಯ ಕೇಳಿ ಬರಬೇಕಾಗುತ್ತದೆ.ಕಚೇರಿಗೆ ಬರುವವವರು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯ ಎಂದು ಕಂದಾಯ ಸಚಿವ ಅಶೋಕ್ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಈಗಾಗಲೇ ಅಗತ್ಯ ಸೇವೆ ಜೊತೆ ಆರ್ಥಿಕ …
Read More »ಆಶಾ ಕಾರ್ಯಕರ್ತೆಗೆ ಕೊಲೆ ಬೆದರಿಕೆ- ಇಬ್ಬರ ಬಂಧನ…….
ಉಡುಪಿ: ಜಿಲ್ಲೆಯಲ್ಲಿ ಮತ್ತೊಮ್ಮೆ ಕೊರೊನಾ ವಾರಿಯರ್ಸ್ ಮೇಲೆ ಬೆದರಿಕೆ ಪ್ರಕರಣ ಮರುಕಳಿಸಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಆಶಾ ಕಾರ್ಯಕರ್ತೆಯನ್ನ ಬೆದರಿಸಿದ ಘಟನೆ ನಡೆದಿದೆ. ಕೊರೊನಾ ಲಾಕ್‍ಡೌನ್ ನಡುವೆ ಬೆಂಗಳೂರಿಂದ ಬಂದಿರುವ ಯುವಕ ಸಂದೀಪ್ ಮೇಸ್ತ ಎಂಬಾತನಿಗೆ ಆಶಾ ಕಾರ್ಯಕರ್ತೆ ಲಕ್ಷ್ಮೀ ಹೋಂ ಕ್ವಾರಂಟೈನ್ ವಿಧಿಸಿದ್ದರು. ಆದರೆ ಸಂದೀಪ್ ಕ್ವಾರಂಟೈನ್ ಉಲ್ಲಂಘಿಸಿ ಬೇಕಾಬಿಟ್ಟಿ ಓಡಾಡುತ್ತಿದ್ದ. ಹೀಗಾಗಿ ಸಂದೀಪ್ ನನ್ನ ಮನೆಯಲ್ಲಿರುವಂತೆ ಸೂಚನೆ ನೀಡಿದ್ದೇ ತಡ ಸಂದೀಪ್ ಹಾಗೂ ಆತನ ಗೆಳೆಯ …
Read More »ಲಾಕ್‍ಡೌನ್ ನಿರ್ಧಾರ ರಾಜ್ಯಗಳಿಗೆ ಬಿಟ್ಟರೆ ಬಿಎಸ್‍ವೈ ಪ್ಲಾನ್ ಏನು?
ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ಹಿನ್ನೆಲೆ ಮೇ 3ರವರೆಗೆ ದೇಶಾದ್ಯಂತ ಲಾಕ್‍ಡೌನ್ ಘೋಷಿಸಲಾಗಿದೆ. ಆ ಬಳಿಕ ಕೇಂದ್ರ ಸರ್ಕಾರವು ಲಾಕ್‍ಡೌನ್ ನಿರ್ಧಾರವನ್ನು ರಾಜ್ಯಗಳಿಗೆ ಬಿಟ್ಟರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮುಂದಿನ ನಡೆ ಏನು ಎಂಬ ಚರ್ಚೆ ಶುರುವಾಗಿದೆ. ಈ ನಿಟ್ಟಿನಲ್ಲಿ ಸಿಎಂ ಯಡಿಯೂರಪ್ಪ ಅವರು ಎಲ್ಲಾ ಜಿಲ್ಲಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದ್ದಾರೆ. ಜಿಲ್ಲಾಧಿಕಾರಿಗಳು ಕೂಡ ಕೆಲವು ಸಲಹೆಗಳನ್ನು ನೀಡಿದ್ದಾರೆ. ಅದರ ಆಧಾರದ ಮೇಲೆ ಸಿಎಂ ನಿರ್ಧಾರ …
Read More »ಕಳ್ಳಬಟ್ಟಿ ಅಡ್ಡೆಗಳ ಮೇಲೆ ದಾಳಿ- ಸಾವಿರ ಲೀಟರ್ ಕಳ್ಳಬಟ್ಟಿ ನಾಶ……….
ಬಾಗಲಕೋಟೆ: ಒಂದೇ ದಿನ 3 ವಿವಿಧ ಕಳ್ಳಬಟ್ಟಿ ಅಡ್ಡೆಗಳ ಮೇಲೆ ಜಿಲ್ಲಾ ಅಬಕಾರಿ, ಪೊಲೀಸ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ 1 ಸಾವಿರ ಲೀಟರ್ ಗೂ ಅಧಿಕ ಕಳ್ಳಬಟ್ಟಿ ನಾಶಪಡಿಸಿದ್ದಾರೆ. ತಾಲೂಕಿನ ನಾಯನೇಗಲಿ, ಸೀತಿಮನಿ ತಾಂಡಾದಲ್ಲಿನ ಅಡ್ಡೆಗಳ ಮೇಲೆ ದಾಳಿ ವೇಳೆ 800 ಲೀಟರ್ ಬೆಲ್ಲದ ಕೊಳೆ, ಬೀಳಗಿ ತಾಲೂಕಿನ ಬಿಸನಾಳ ಗ್ರಾಮದ ಅರಣ್ಯ ಪ್ರದೇಶದಲ್ಲಿ ಸುಮಾರು 200 ಲೀಟರ್ ಬೆಲ್ಲದ ಕೊಳೆ ಪತ್ತೆಯಾಗಿದೆ. ಒಟ್ಟು …
Read More »ಕೊರೊನಾ ತಡೆಗೆ ಮೋದಿ ‘ತ್ರಿ’ ಸೂತ್ರ- ಕರ್ನಾಟಕದ 6 ಜಿಲ್ಲೆಗಳು ರೆಡ್ ಝೋನ್
ಬೆಂಗಳೂರು: ಪ್ರಧಾನಿ ಮೋದಿ ಕೊರೊನಾ ತಡೆಗೆ ತ್ರಿ ಝೋನ್ ಮಂತ್ರವನ್ನು ಇಂದೂ ಕೂಡ ಪಠಿಸಿದ್ದಾರೆ. ಸೋಂಕಿನ ತೀವ್ರತೆಯ ಆಧಾರದ ಮೇಲೆ ಝೋನ್‍ಗಳನ್ನು ವಿಂಗಡಿಸಲಾಗಿದ್ದು, ಅಲ್ಲಿನ ಪರಿಸ್ಥಿತಿಗಳಿಗೆ ಅನುಗುಣವಾಗಿ ಪ್ರಣಾಳಿಕೆ ರೂಪಿಸಿ ಎಂದು ರಾಜ್ಯ ಸರ್ಕಾರಗಳಿಗೆ ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ. ಮೋದಿ ಸಲಹೆ ಅನ್ವಯ ಬೆಂಗಳೂರು, ಮೈಸೂರು, ಕಲಬುರಗಿ ಸೇರಿದಂತೆ, ರೆಡ್ ಜೋನ್ ಜಿಲ್ಲೆಗಳಲ್ಲಿ ಕೊರೊನಾ ಲಾಕ್‍ಡೌನ್ ಮುಂದುವರೆಯುವ ಸಾಧ್ಯತೆಗಳಿವೆ ಹೆಚ್ಚಿವೆ. ಒಂದಿಷ್ಟು ಮಾನದಂಡಗಳನ್ನು ಇಟ್ಟುಕೊಂಡು ಇವತ್ತು ಕೊರೊನಾಗೆ ಸಂಬಂಧಿಸಿದಂತೆ …
Read More »ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಸಿಎಂಗೆ ಎಚ್‍ಡಿಡಿ ಪತ್ರ
ಬೆಂಗಳೂರು: ಲಾಕ್‍ಡೌನ್‍ನಿಂದಾಗಿ ಮಾರುಕಟ್ಟೆಗಳಿಗೆ ಫಸಲು ಸಾಗಿಸಲಾರದೇ, ಖರೀದಿದಾರರು ಸಿಗದೇ ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಸಿಎಂ ಯಡಿಯೂರಪ್ಪಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ. 2 ಪುಟಗಳ ಪತ್ರ ಬರೆದಿರುವ ಎಚ್‍ಡಿಡಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದ ರೈತರು ಕೂಡ ಈಗ ಬೀದಿಗೆ ಬೀಳುವಂತಾಗಿದೆ. ಹಣ್ಣು, ತರಕಾರಿ, ಹೂವು ಬೆಳೆಗಾರರ ನೆರವಿಗೆ ಬರಬೇಕು. ಕೃಷಿ, ತೋಟಗಾರಿಕೆ ಅಧಿಕಾರಿಗಳಿಂದ ಸಮೀಕ್ಷೆ ನಡೆಸಿ ನಷ್ಟ …
Read More »ಒಂದೇ ದಿನ ನಾಲ್ಕು ಬಾಲ್ಯ ವಿವಾಹ ತಡೆದ ಅಧಿಕಾರಿಗಳು………
ಬಳ್ಳಾರಿ: ಲಾಕ್‍ಡೌನ್ ನಡುವೆಯೂ ಅಕ್ಷಯ ತೃತಿಯ ನಿಮಿತ್ತ ಗಣಿ ಜಿಲ್ಲೆ ಬಳ್ಳಾರಿಯಲ್ಲಿ ನಾಲ್ಕು ಜೋಡಿ ಬಾಲ್ಯವಿವಾಹ ಪ್ರಕರಣಗಳು ಪತ್ತೆ ಯಾಗಿವೆ. ಕೂಡ್ಲಿಗಿ ತಾಲೂಕು, ಬಳ್ಳಾರಿ ನಗರ, ಸಂಡೂರು ತಾಲೂಕು ಹಾಗೂ ಬಳ್ಳಾರಿ ತಾಲೂಕಿನಲ್ಲಿ ನಡೆಯುತ್ತಿದ್ದ ಎರಡು ನಿಶ್ಚಿತಾರ್ಥ ಹಾಗೂ ಎರಡು ಬಾಲ್ಯವಿವಾಹಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ತಡೆದಿದ್ದಾರೆ. ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಮೂಲದ 17 ವರ್ಷದ ಯುವತಿಗೆ ಬೆಳಗ್ಗೆ 5 ಗಂಟೆಗೆ ತರಾತುರಿಯಲ್ಲಿ ನಿಶ್ಚಿತಾರ್ಥ …
Read More »ಸರ್ಕಾರದ ಖಜಾನೆ ಖಾಲಿ ಮುಖ್ಯಮಂತ್ರಿಗಳಿಗೆ ಮದ್ಯದಂಗಡಿಗಳನ್ನ ತೆರೆಯುವ ಒಲವಿದೆ:ಅಬಕಾರಿ ಸಚಿವ ಎಚ್.ನಾಗೇಶ್
ಕೋಲಾರ: ಸರ್ಕಾರದ ಖಜಾನೆ ಖಾಲಿಯಾಗಿದ್ದು, ಮುಖ್ಯಮಂತ್ರಿಗಳಿಗೆ ಮದ್ಯದಂಗಡಿಗಳನ್ನ ತೆರೆಯುವ ಒಲವಿದೆ ಎಂದು ಕೋಲಾರದಲ್ಲಿ ಅಬಕಾರಿ ಸಚಿವ ಎಚ್.ನಾಗೇಶ್ ಹೇಳಿದ್ದಾರೆ. ಕೋಲಾರದ ಜಿಲ್ಲಾಪಂಚಾಯತಿ ಬಳಿ ಮಾತನಾಡಿದ ಸಚಿವ ನಾಗೇಶ್ ಅವರು, ಮೇ 3ರ ನಂತರ ಮದ್ಯದಂಗಡಿಗಳನ್ನ ತೆರೆಯುವ ಮುನ್ಸೂಚನೆಯನ್ನು ನೀಡಿದರು. ಕೊರೊನಾ ಕಾರಣದಿಂದ ಸರ್ಕಾರಿ ಅಧಿಕಾರಗಳ ವೇತನ ನೀಡುವುದು ಸೇರಿದಂತೆ ಯೋಜನೆಗಳಿಗೆ ಹಣ ನೀಡಲು ಸರ್ಕಾರಕ್ಕೆ ತುಂಬಾ ಹೊರೆಯಾಗಿದೆ. ಸರ್ಕಾರದ ಖಜಾನೆ ಖಾಲಿಯಾಗಿರುವ ಕಾರಣ ಮುಖ್ಯಮಂತ್ರಿಗಳು ಮದ್ಯದಂಗಡಿಗಳನ್ನು ತೆರೆಯುವ ಒಲವನ್ನು ಹೊಂದಿದ್ದಾರೆ. …
Read More »ಸೋಂಕಿತನ ಸಂಪರ್ಕದಲ್ಲಿದ್ದ ವ್ಯಕ್ತಿಯ ವರದಿ ನೆಗೆಟಿವ್ ಯಾದಗಿರಿ ಸೇಫ್
ಯಾದಗಿರಿ: ಸದ್ಯ ಗ್ರೀನ್ ಝೋನ್ ನಲ್ಲಿರುವ ಯಾದಗಿರಿ ಸೇಫ್ ಆಗಿದೆ. ರೋಗಿ ನಂ.413 ಜೊತೆ ಪ್ರಥಮ ಸಂಪರ್ಕದಲ್ಲಿದ್ದ ವ್ಯಕ್ತಿಯ ವರದಿ ಕೊರೊನಾ ನೆಗೆಟಿವ್ ಬಂದಿದ್ದು, ಇದರಿಂದ ಯಾದಗಿರಿ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ. ರೋಗಿ ನಂ.413 ಕನ್ನಡಕದ ಅಂಗಡಿ ಹೊಂದಿದ್ದು, ಯಾದಗಿರಿಯೊಂದಿಗೆ ನಿಕಟ ವ್ಯವಹಾರ ಸಂಪರ್ಕ ಹೊಂದಿದ್ದ. ವ್ಯಾಪಾರಕ್ಕಾಗಿ ಕಲಬುರಗಿಯಿಂದ ಯಾದಗಿರಿಗೆ ಸಂಚಾರ ಮಾಡಿದ್ದ. ಈ ವೇಳೆ ಕೊರೊನಾ ಸೋಂಕು ತಗುಲಿದ್ದ ರೋಗಿ ನಂ.413 ಜೊತೆ ಯಾದಗಿರಿ ವ್ಯಕ್ತಿ ಹತ್ತಿರದ ಒಡನಾಟ …
Read More »ಇಂದು ಜಿಲ್ಲೆಯಲ್ಲಿ ಆರು ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ ಎಂದು ಕಲಬುರಗಿ ಜಿಲ್ಲಾಡಳಿತ ತಿಳಿಸಿದೆ.
ಕಲಬುರಗಿ: ಇಂದು ಜಿಲ್ಲೆಯಲ್ಲಿ ಆರು ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ ಎಂದು ಕಲಬುರಗಿ ಜಿಲ್ಲಾಡಳಿತ ತಿಳಿಸಿದೆ. ಸಂಜೆ ಆಳಂದ ನಿವಾಸಿ 54 ವರ್ಷದ ವ್ಯಕ್ತಿ ಕೊರೊನಾದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯಕೀಯ ಸಚಿವ ಸುಧಾಕರ್ ದೃಢಪಡಿಸಿದ್ದರು. ಇದೀಗ ಕಲಬುರಗಿ ಜಿಲ್ಲೆಯಲ್ಲಿ ಮತ್ತೆ 6 ಮಂದಿಗೆ ಕೊರೊನಾ ತಗುಲಿರೋದು ದೃಢಪಟ್ಟಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಸೋಂಕಿತರ ವಿವರವನ್ನು ಜಿಲ್ಲಾಡಳಿತ ಪ್ರಕಟಿಸಿಲ್ಲ. ಕಲಬುರಗಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 44ಕ್ಕೆ ಏರಿಕೆಯಾಗಿದೆ. ಇಂದು ಬೆಳಗ್ಗೆ ಬಿಡುಗಡೆಯಾದ …
Read More »