Breaking News

ಹಾವೇರಿ:ನಮ್ಮನ್ನ ನಮ್ಮ ನಮ್ಮ ಊರಿಗೆ ತಲುಪಿಸಿ……

ಹಾವೇರಿ: ಜಿಲ್ಲೆಯಿಂದ ಕೆಲಸ ಅರಸಿಕೊಂಡು ಕೇರಳ ರಾಜ್ಯದ ಕಣ್ಣೂರು ಜಿಲ್ಲೆಗೆ ದುಡಿಯಲು ಹೋಗಿದ್ದ 40ಕ್ಕೂ ಅಧಿಕ ಕಾರ್ಮಿಕರು ಊರಿಗೆ ಬರಲಾಗದೆ ಪರದಾಡ್ತಿದ್ದಾರೆ. ಕಣ್ಣೂರು ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ವಾಸವಾಗಿರೋ ಕಾರ್ಮಿಕರು ಲಾಕ್ ಡೌನ್ ನಂತರ ರಾಜ್ಯಗಳ ಗಡಿ ಬಂದ್ ಆಗಿದ್ದರಿಂದ ಊರಿಗೆ ಬರಲು ಪರದಾಡ್ತಿದ್ದಾರೆ. ಅಲ್ಲದೆ ಲಾಕ್ ಡೌನ್ ನಂತರ ಕೆಲಸವೂ ಇಲ್ಲದೆ ಇದ್ದ ಹಣವೂ ಖರ್ಚಾಗಿದೆ. ಊಟಕ್ಕೆ ಬೇಕಾದ ಪದಾರ್ಥಗಳು ಖಾಲಿ ಆಗಿವೆ. ಹೀಗಾಗಿ ನಮ್ಮನ್ನ ನಮ್ಮ ನಮ್ಮ …

Read More »

ಬೆಳಗಾವಿ ಜಿಲ್ಲೆ ಕೊಂಚ ನಿರಾಳವಾಗಿದೆ…….

ಬೆಳಗಾವಿ: ಕೊರೊನಾ ಸೋಂಕು ಸಂಬಂಧ ಸೋಮವಾರ ಸಂಜೆ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಜಿಲ್ಲೆಗೆ ಕೊಂಚ ನಿರಾಳವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು ಯಾವುದೇ ವರದಿ ಬೆಳಕಿಗೆ ಬಂದಿಲ್ಲ. ಆದ್ರೆ ರಾಜ್ಯಾದ್ಯಂತ ಒಟ್ಟು 9 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ. ರಾಜ್ಯದಲ್ಲಿ ಈವರೆಗೂ 512 ಜನರಿಗೆ ಸೋಂಕು ತಗುಲಿದೆ. ಬೆಳಗಾವಿ ಜಿಲ್ಲೆಯಲ್ಲಿ 54 ಜನರು ಸೋ‌ಂಕು ತೊಗಲಿದ್ದ, ಚಿಕಿತ್ಸೆ ಮುಂದುವರೆದಿದೆ.

Read More »

ಒಟ್ಟಾರೆಯಾಗಿ ಬೆಳಗಾವಿ ಜಿಲ್ಲಾದ್ಯಂತ ಇಲ್ಲಿಯವರೆಗೆ ಒಟ್ಟು 794 ದಾಳಿ…….

ಬೆಳಗಾವಿ: ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕನ್ನು ತಡೆಗಟ್ಟುವ ಮತ್ತು ಹರಡುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಹೊರಡಿಸಿರುವುದರಿಂದ ಜಿಲ್ಲೆಯಾದ್ಯಂತ ಕಳ್ಳಭಟ್ಟ ಸಾರಾಯಿ ತಯಾರಿಕೆ ಹಾಗೂ ಮಾರಾಟ ಹೆಚ್ಚಾಗುವ ಸಂಭವ ಇರುವುದರಿಂದ ಅಕ್ರಮ ಚಟುವಟಿಕೆಗಳು ನಡೆಯದಂತೆ ಅಬಕಾರಿ ತಂಡಗಳನ್ನು ರಚಿಸಿರುತ್ತದೆ.  ದಿನಾಂಕ 24-03-2020 ರಿಂದ ಇಲ್ಲಿಯವರೆಗೆ ಅಕ್ರಮ ಕೇಂದ್ರಗಳಲ್ಲಿ ನಿರಂತರವಾಗಿ ಅಬಕಾರಿ ದಾಳಿ, ಹಗಲು- ರಾತ್ರಿ ಗಸ್ತು, ರಸ್ತೆಗಾವಲು ನಡೆಸಿ,ವಾಹನಗಳನ್ನು ತಪಾಸಣೆ ನಡೆಸಿ, ಕ್ರಮ ಕೈಗೊಳ್ಳಲಾಗಿರುತ್ತದೆ.  ಒಟ್ಟಾರೆಯಾಗಿ ಬೆಳಗಾವಿ ಜಿಲ್ಲಾದ್ಯಂತ ಇಲ್ಲಿಯವರೆಗೆ ಒಟ್ಟು …

Read More »

ಯೋಧನನ್ನು ಮಾಸ್ಕ್ ಧರಿಸಿಲ್ಲ ಎಂಬ ಕಾರಣಕ್ಕೆ ಬಂಧಿಸಿರುವುದು ಖಂಡನೀಯ:ಸಚಿವರ ಕಿಡಿ

ಬೆಳಗಾವಿ: ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ತನ್ನ ಮನೆ ಮುಂದೆ ವಾಹನ ತೊಳೆಯುತ್ತಿದ್ದ ಯೋಧನನ್ನು ಮಾಸ್ಕ್ ಧರಿಸಿಲ್ಲ ಎಂಬ ಕಾರಣಕ್ಕೆ ಬಂಧಿಸಿರುವುದು ಖಂಡನೀಯ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಯೋಧನೊಂದಿಗೆ ಪೊಲೀಸರು ಅನುಚಿತವಾಗಿ ವರ್ತಿಸಿದ್ದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಒಬ್ಬ ಯೋಧ ಎನ್ನುವುದನ್ನೂ ಗಮನಿಸದೇ ಸಾರ್ವಜನಿಕವಾಗಿ ಹಿಂಸಿಸಿ, ಒಬ್ಬ ಕೈದಿಯಂತೆ ಕೈಗೆ ಕೋಳ ತೊಡಿಸಿ ಬಂಧಿಸಿರುವುದನ್ನು ಯಾವುದೇ ಕಾರಣಕ್ಕೂ ಸಮರ್ಥನೆ ಮಾಡಲು ಸಾಧ್ಯವಿಲ್ಲ ಎಂದು ಸಚಿವರು ಕಿಡಿ ಕಾರಿದ್ರು. …

Read More »

ಬಿಡುವಿದ್ದಾಗ ಮಾಸ್ಕ್ ತಯಾರಿಸಿ ಗ್ರಾಮೀಣ ಜನರಿಗೆ ವಿತರಿಸ್ತಿದ್ದಾರೆ ಅಂಗನವಾಡಿ ಶಿಕ್ಷಕಿಯರು

ಮಡಿಕೇರಿ: ಕೊರೊನಾ ವೈರಸ್ ನಿಯಂತ್ರಿಸಲು ಸರ್ಕಾರ ಇನ್ನಿಲ್ಲದ ಕಸರತ್ತು ನಡೆಸಿದ್ದು, ಇದರ ಭಾಗವಾಗಿ ಆಶಾ ಕಾರ್ಯಕರ್ತೆಯರು ಸಹ ಟೆಸ್ಟಿಂಗ್ ಕಾರ್ಯದಲ್ಲಿ ತೊಡಗಿದ್ದಾರೆ. ಆದರೆ ಇಲ್ಲೊಂದಿಷ್ಟು ಅಂಗನವಾಡಿ ಕಾರ್ಯಕರ್ತರು ತಮ್ಮದೇಯಾದ ಕೊಡುಗೆ ನೀಡುತ್ತಿದ್ದಾರೆ. ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಬಾಡಗ ಗ್ರಾಮದ ಅಂಗನವಾಡಿ ಶಿಕ್ಷಕಿ ಜಯಂತಿ ಸೇರಿದಂತೆ ನಾಲ್ಕೈದು ಅಂಗನವಾಡಿಗಳ ಶಿಕ್ಷಕಿಯರು ಕೊರೊನಾ ನಿಯಂತ್ರಣಕ್ಕೆ ಸಹಾಯ ಮಾಡುತ್ತಿದ್ದು, ಮಾಸ್ಕ್ ಹೊಲೆದು ಗ್ರಾಮೀಣ ಭಾಗದ ಜನರಿಗೆ ಉಚಿತವಾಗಿ ವಿತರಣೆ ಮಾಡುತ್ತಿದ್ದಾರೆ. ಬಿಡುವಿನ ವೇಳೆಯಲ್ಲಿ …

Read More »

ನರ ರೋಗದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆಗೆ ಕೊರೊನಾ ಪಾಸಿಟಿವ್……..

ಮಂಗಳೂರು: ಕೊರೊನಾ ಸೋಂಕಿತ ವೃದ್ಧೆಯ ಸಾವಿನ ಬಳಿಕ ಕೊರೊನಾ ಹಾಟ್‍ಸ್ಪಾಟ್ ಆಗಿ ಬದಲಾಗಿರುವ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಮತ್ತೆ ಇಬ್ಬರಿಗೆ ಕೊರೊನಾ ಸೋಂಕು ತಗಲಿದೆ. ವೃದ್ಧೆಯ ಪಕ್ಕದ ಬೆಡ್ ನಲ್ಲಿದ್ದ 80 ವರ್ಷದ ತಾಯಿ ಮತ್ತು ಆಕೆಯ ಆರೈಕೆಗೆ ಬಂದಿದ್ದ 45 ವರ್ಷದ ಮಗನಿಗೆ ಸೋಂಕು ಕಾಣಿಸಿಕೊಂಡಿದೆ. ಇವರು ಮಂಗಳೂರಿನ ಶಕ್ತಿನಗರದ ನಿವಾಸಿಗಳಾಗಿದ್ದು, ಆ ಏರಿಯಾವನ್ನು ಕಂಪ್ಲೀಟ್ ಸೀಲ್‍ಡೌನ್ ಮಾಡಲಾಗಿದೆ. ನರ ರೋಗದ ಸಮಸ್ಯೆಯಿಂದ ಬಳಲುತ್ತಿದ್ದ ತಾಯಿಯನ್ನು ಫಸ್ಟ್ …

Read More »

ಕೊರೋನಾದಿಂದ ಬಚಾವಾದ ಚೀನಾ, ವಿಶ್ವದಾದ್ಯಂತ ನಿಲ್ಲದ ಮರಣಮೃದಂಗ..!

ವಾಷ್ಟಿಂಗ್ಟನ್/ಬೀಜಿಂಗ್, ಏ.27- ಇಡೀ ವಿಶ್ವಕ್ಕೆ ಕಿಲ್ಲರ್ ಕೊರೊನಾವನ್ನು ಕೊಡುಗೆಯಾಗಿ ನೀಡಿ ಎರಡು ಲಕ್ಷಕ್ಕೂ ಅಧಿಕ ಸಾವಿಗೆ ಕಾರಣವಾದ ಚೀನಾ ಈಗ ಕೋವಿಡ್-19 ವೈರಾಸ್‍ನಿಂದ ಬಚಾವ್ ಆಗಿದೆ. ಆದರೆ ಡೆಡ್ಲಿ ಕೊರೊನಾ ಇಡೀ ಜಗತ್ತಿಗೆ ಕಾಡುತ್ತಿರುವ ಮಹಾಮಾರಿಯಾಗಿ ಪರಿಣಮಿಸಿದೆ. ಕೊರೊನಾ ವೈರಾಣುವಿನ ಉಗಮ ಬಿಂದು ವುಹಾನ್ ನಗರಿ ಸೋಂಕಿನಿಂದ ಸಂಪೂರ್ಣ ಮುಕ್ತವಾಗಿದ್ದು, ಅಲ್ಲಿ ಕಟ್ಟಕಡೆಯ ಸೋಂಕಿನ ಸಂಪೂರ್ಣ ಗುಣಮುಖನಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಆದರೆ ಪ್ರಪಂಚದ 250ಕ್ಕೂ ಹೆಚ್ಚು ದೇಶಗಳು .ಈ ಹೆಮ್ಮಾರಿಯ …

Read More »

ಕೊರೊನಾದಿಂದ ಕಂಗೆಟ್ಟ ವಲಯಗಳಿಗೆ 6 ತಿಂಗಳು ಜಿಎಸ್‍ಟಿ ರಿಲೀಫ್..?!

ನವದೆಹಲಿ, ಏ.27-ಕೊರೊನಾದಿಂದ ದೇಶದಲ್ಲಿ ಸಾವು ಮತ್ತು ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಇನ್ನೊಂದೆಡ ಆರ್ಥಿಕ ಚಟುವಟಿಕೆಗೆ ಭಾರೀ ಹೊಡೆತ ಬಿದ್ದಿದೆ. ಇದರಿಂದ ಎಲ್ಲಾ ಕ್ಷೇತ್ರಗಳು ಕಂಗೆಟ್ಟಿವೆ. ಪ್ರಸ್ತುತ ಆರ್ಥಿಕ ಸಂಕಷ್ಟ ಸ್ಥಿತಿಯನ್ನು ಮನಗಂಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೆಲವು ವಲಯಗಳಿಗೆ ಆರು ತಿಂಗಳ ಮಟ್ಟಿಗೆ ಸರಕುಗಳು ಮತ್ತು ಸೇವಾ ತೆರಿಗೆಗಳು (ಜಿಎಸ್‍ಟಿ) ವಿನಾಯಿತಿ ನೀಡುವ ಬಗ್ಗೆ ಗಂಭೀರ ಚಿಂತನೆ ನಡೆದಿದೆ. ಹೋಟೆಲ್, ರೆಸ್ಟೋರೆಂಟ್‍ಗಳು, ರಿಯಲ್ ಎಸ್ಟೇಟ್‍ಗಳು, ಏರ್‍ಲೈನ್ಸ್ …

Read More »

ಸ್ಯಾನಿಟೈಸರ್ ಜೊತೆಗೆ ಕೆಮ್ಮಿನ ಔಷಧಿ ಮಿಶ್ರಣ ಮಾಡಿ ಕುಡಿದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡ: ಸ್ಯಾನಿಟೈಸರ್ ಜೊತೆಗೆ ಕೆಮ್ಮಿನ ಔಷಧಿ ಮಿಶ್ರಣ ಮಾಡಿ ಕುಡಿದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಹೊಯ್ಸಳ ನಗರದಲ್ಲಿ ಈ ಘಟನೆ ನಡೆದಿದ್ದು, ಸುದೀಪ್ ಕೈರಾನ್ ಸಾವನ್ನಪ್ಪಿದ ವಿದ್ಯಾರ್ಥಿ. ಉತ್ತರ ಕನ್ನಡ ಜಿಲ್ಲೆಯ ಮೂಲದವನಾದ ಸುದೀಪ್, ಕರ್ನಾಟಕ ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾಗಿದ್ದನು. ವಿದ್ಯಾಭ್ಯಾಸಕ್ಕಾಗಿ ಧಾರವಾಡದ ಹೊಯ್ಸಳ ನಗರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದನು. ಲಾಕ್‍ಡೌನ್ ಪರಿಣಾಮ ಮದ್ಯ ಸಿಗದ ಹಿನ್ನೆಲೆಯಲ್ಲಿ ಸ್ಯಾನಿಟೈಸರ್ ಜೊತೆ …

Read More »

ಸಂಚಾರಿ ಮಾರಾಟ ಮಳಿಗೆಗೆ ಪಾಲಿಕೆ ಆಯುಕ್ತ ಸುರೇಶ್ ಇಟ್ನಾಳ್ ಪಾಲಿಕೆ ಆವರಣದಲ್ಲಿ ಚಾಲನೆ ನೀಡಿದರು.

ಹುಬ್ಬಳ್ಳಿ: ಲಾಕ್‍ಡೌನ್ ಹಾಗೂ ರಂಜಾನ್ ಹಿನ್ನೆಲೆಯಲ್ಲಿ ಜನರಿಗೆ ಅನುಕೂಲವಾಗಲಿ ಎಂದು ಮಿಟ್ ಆನ್ ಮಿಲ್ಸ್ (ಮಾಂಸ ಮತ್ತು ಮಾಂಸದಿಂದ ತಯಾರಿಸಿದ ಖಾದ್ಯ ಪದಾರ್ಥಗಳ) ಸಂಚಾರಿ ಮಾರಾಟ ಮಳಿಗೆಗೆ ಪಾಲಿಕೆ ಆಯುಕ್ತ ಸುರೇಶ್ ಇಟ್ನಾಳ್ ಪಾಲಿಕೆ ಆವರಣದಲ್ಲಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಕೊರೊನಾ ಭೀತಿ ಹಿನ್ನೆಲೆಯಲ್ಲಿ ಲಾಕ್‍ಡೌನ್ ಜಾರಿಯಲ್ಲಿದ್ದು, ಈ ವೇಳೆಯಲ್ಲಿ ಜನರು ಮನೆಯಿಂದ ಹೊರಬರದಂತೆ ಆದೇಶ ಹೊರಡಿಸಲಾಗಿದೆ. ಅಲ್ಲದೆ ಇದು ರಂಜಾನ್ ತಿಂಗಳ ಹಿನ್ನೆಲೆಯಲ್ಲಿ ಜನರ ಮಾಂಸಕ್ಕೆ …

Read More »